ಗೋವಿಂದರಾಜು ಎಂ. ಕಲ್ಲೂರು ಅವರಿಗೆ ಡಾ. ಪ್ರಹ್ಲಾದ ಅಗಸನಕಟ್ಟೆ ವಿದ್ಯಾರ್ಥಿ ಕಥಾ ಪ್ರಶಸ್ತಿ

 2021 ನೇ ಸಾಲಿನ ಡಾ. ಪ್ರಹ್ಲಾದ ಅಗಸನಕಟ್ಟೆ ವಿದ್ಯಾರ್ಥಿ/ನಿ ಕಥಾ ಪ್ರಶಸ್ತಿಯು ಗೋವಿಂದರಾಜು ಎಂ. ಕಲ್ಲೂರು ಅವರ 'ನಕ್ಷತ್ರಕ್ಕಂಟಿದ ಮುಟ್ಟಿನ ನೆತ್ತರು' ಎಂಬ ಕಥೆಯ ಹಸ್ತಪ್ರತಿಗೆ ದೊರೆತಿದೆ. ಹಿರಿಯ ಬರಹಗಾರರೂ ಕಥೆಗಾರರೂ ಆದ ಚೆನ್ನಪ್ಪ ಅಂಗಡಿ ಮತ್ತು ಸಿ.ಎಂ ಮುನಿಸ್ವಾಮಿ ಅವರು ಅಂತಿಮ ಸುತ್ತಿನ ಆಯ್ಕೆ ತೀರ್ಪುಗಾರರಾಗಿದ್ದರು.

ಗೋವಿಂದರಾಜು ಎಂ. ಕಲ್ಲೂರು ಅವರಿಗೆ ಡಾ. ಪ್ರಹ್ಲಾದ ಅಗಸನಕಟ್ಟೆ ವಿದ್ಯಾರ್ಥಿ ಕಥಾ ಪ್ರಶಸ್ತಿ
ಡಾ. ಪ್ರಹ್ಲಾದ ಅಗಸನಕಟ್ಟೆ ಸ್ಮರಣಾರ್ಥ ವಿದ್ಯಾರ್ಥಿ(ನಿ) ಕಥಾಸ್ಪರ್ಧೆಯಲ್ಲಿ ಬಹುಮಾನ ಪಡೆದ ಗೋವಿಂದರಾಜ ಎಂ. ಕಲ್ಲೂರು
Follow us
ಶ್ರೀದೇವಿ ಕಳಸದ
|

Updated on:May 15, 2021 | 5:11 PM

ಹುಬ್ಬಳ್ಳಿ : 2021 ನೇ ಸಾಲಿನ ಡಾ. ಪ್ರಹ್ಲಾದ ಅಗಸನಕಟ್ಟೆ ವಿದ್ಯಾರ್ಥಿ/ನಿ ಕಥಾ ಪ್ರಶಸ್ತಿಯು ಗೋವಿಂದರಾಜು ಎಂ. ಕಲ್ಲೂರು ಅವರ ‘ನಕ್ಷತ್ರಕ್ಕಂಟಿದ ಮುಟ್ಟಿನ ನೆತ್ತರು’ ಎಂಬ ಕಥೆಯ ಹಸ್ತಪ್ರತಿಗೆ ದೊರೆತಿದೆ. ಹಿರಿಯ ಬರಹಗಾರರೂ ಕಥೆಗಾರರೂ ಆದ ಚೆನ್ನಪ್ಪ ಅಂಗಡಿ ಮತ್ತು ಸಿ.ಎಂ ಮುನಿಸ್ವಾಮಿ ಅವರು ಅಂತಿಮ ಸುತ್ತಿನ ಆಯ್ಕೆ ತೀರ್ಪುಗಾರರಾಗಿದ್ದರು. ಈ ಪುರಸ್ಕಾರವು ಐದು ಸಾವಿರ ನಗದು ಹಾಗೂ ಪ್ರಶಸ್ತಿ ಪಲಕವನ್ನು ಒಳಗೊಂಡಿದೆ. ಅಕ್ಷರ ಸಾಹಿತ್ಯ ವೇದಿಕೆ, ಹುಬ್ಬಳ್ಳಿ ಹಾಗೂ ವಿಜಯಾ ಅಗಸನಕಟ್ಟೆ ಸಹಯೋಗದಲ್ಲಿ ನಡೆವ ಸತತ ನಾಲ್ಕನೇ ವರ್ಷದ ಸ್ಪರ್ಧೆಯಿದಾಗಿದ್ದು, ಪ್ರಶಸ್ತಿ ಪ್ರದಾನ ಸಮಾರಂಭವನ್ನು ಕೊರೊನಾ ನಂತರದ ಸುರಕ್ಷಿತ ದಿನಗಳಲ್ಲಿ ನೆರವೇರಿಸಲಾಗುವುದು ಎಂದು ಅಕ್ಷರ ಸಾಹಿತ್ಯ ವೇದಿಕೆ, ಹುಬ್ಬಳ್ಳಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಡಾ. ಪ್ರಹ್ಲಾದ ಅಗಸನಕಟ್ಟೆ ವಿದ್ಯಾರ್ಥಿ/ನಿ ಕಥಾ ಪ್ರಶಸ್ತಿ-2021, ಪಡೆದ ಗೋವಿಂದರಾಜು ಎಂ. ಕಲ್ಲೂರು, ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಕಲ್ಲೂರಿನವರು. ಸದ್ಯ ತುಮಕೂರು ವಿಶ್ವವಿದ್ಯಾನಿಲಯದ ಕನ್ನಡ ವಿಭಾಗದ ಪ್ರೊ.ನಿತ್ಯಾನಂದ ಬಿ. ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ‘ನಾಡು-ನುಡಿಯ ರೂಪ : ಡಾ. ರಾಜಕುಮಾರ್ ಸಿನೆಮಾ’ ಎಂಬ ವಿಷಯದ ಕುರಿತು ಸಂಶೋಧನೆ ನಡೆಸುತ್ತಿದ್ದಾರೆ. ದಿ. ಮೀನಾಕುಮಾರಿ ಕಥಾ ಪ್ರಶಸ್ತಿ, ಕ್ರೈಸ್ಟ್ ಯುನಿವರ್ಸಿಟಿ, ಈ-ಹೊತ್ತಿಗೆ ಕಥಾ ಸ್ಪರ್ಧೆಗಳಲ್ಲಿ ಬಹುಮಾನ, ಬೇಂದ್ರೆ ಕವನ ಕೂಟದಿಂದ ಕವನ, ಲೇಖನ ಸ್ಪರ್ಧೆಗಳಲ್ಲಿ ಬಹುಮಾನ ಲಭಿಸಿದೆ. ಹೊಸಮನುಷ್ಯ, ಪ್ರಜಾವಾಣಿ, ಸಮಾಜಮುಖಿ, ಸಂವಾದ, ಸಂಗಾತ ಪತ್ರಿಕೆಗಳಲ್ಲಿ ಬರಹಗಳು ಪ್ರಕಟಗೊಂಡಿವೆ.

ಇದನ್ನೂ ಓದಿ : ಕೇಂದ್ರ ಸಾಹಿತ್ಯ ಅಕಾಡೆಮಿ ಯುವ ಪುರಸ್ಕಾರ: ಪ್ರಾಮಾಣಿಕ ಅಭಿವ್ಯಕ್ತಿಯೇ ಸೃಜನಶೀಲತೆ: ಸ್ವಾಮಿ ಪೊನ್ನಾಚಿ

Published On - 5:08 pm, Sat, 15 May 21