ನಾಡಹಬ್ಬಕ್ಕೆ ಶುಭ ಕೋರಿದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌

  • TV9 Web Team
  • Published On - 7:58 AM, 17 Oct 2020
ನಾಡಹಬ್ಬಕ್ಕೆ ಶುಭ ಕೋರಿದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವ-2020 ಇಂದಿನಿಂದ ಪ್ರಾರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಸಾಮಾಜಿಕ ಜಾಲತಾಣಗಳಲ್ಲಿ ದಸರಾ ಹಬ್ಬಕ್ಕೆ ಶುಭ ಕೋರಿದ್ದಾರೆ.

ಶರನ್ನವರಾತ್ರಿ ಶುಭ ಪರ್ವದ ಹಾರ್ದಿಕ ಶುಭಾಶಯಗಳು. ಜಗನ್ಮಾತೆಯಾದ ಶ್ರೀ ಚಾಮುಂಡೇಶ್ವರಿ ದೇವಿಯು ನಮಗೆದುರಾಗಿರುವ ಎಲ್ಲ ಸಂಕಷ್ಟಗಳನ್ನು ಉಪಶಮನ ಮಾಡಿ ಎಲ್ಲರಿಗೆ ಸನ್ಮಂಗಳವನ್ನುಂಟು ಮಾಡಲೆಂದು ಪ್ರಾರ್ಥಿಸುತ್ತೇನೆ ಎಂದು ತಮ್ಮ ಪೋಸ್ಟ್​ನಲ್ಲಿ ಬರೆದುಕೊಂಡಿದ್ದಾರೆ.