ಮೊದಲ ಖಾತೆ ತೆರೆದ ಬಿಜೆಪಿ: ಯಲ್ಲಾಪುರ ಹೆಬ್ಬಾರ್​ಗೆ ಗೆಲುವು

ಉತ್ತರ ಕನ್ನಡ: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆ ಮತ ಎಣಿಕೆಯಲ್ಲಿ ಯಲ್ಲಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಿವರಾಮ್ ಹೆಬ್ಬಾರ್ ಗೆಲುವಿನ ನಗೆ ಬೀರಿದ್ದಾರೆ. ಮೈತ್ರಿ ಸರ್ಕಾರದ ಅವಧಿಯಲ್ಲಿ ಶಿವರಾಮ್ ಹೆಬ್ಬಾರ್ ರಾಜೀನಾಮೆ ನೀಡಿದ್ದರು. ಬಿಜೆಪಿಯಿಂದ ಅಖಾಡಕ್ಕಿಳಿದಿದ್ದ ಶಿವರಾಮ್ ಹೆಬ್ಬಾರ್ 31,408 ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಶಿವರಾಮ್ ಹೆಬ್ಬಾರ್‌ 80,442 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ ನಾಯ್ಕಗೆ 49,034 ಮತ ಪಡೆದಿದ್ರೆ, ಜೆಡಿಎಸ್ ಅಭ್ಯರ್ಥಿ ಚೈತ್ರಾಗೌಡಗೆ ಕೇವಲ 1,235 ಮತಗಳು ಬಿದ್ದಿವೆ.

ಮೊದಲ ಖಾತೆ ತೆರೆದ ಬಿಜೆಪಿ: ಯಲ್ಲಾಪುರ ಹೆಬ್ಬಾರ್​ಗೆ ಗೆಲುವು
ಸಾಧು ಶ್ರೀನಾಥ್​

Updated on: Dec 09, 2019 | 3:31 PM

ಉತ್ತರ ಕನ್ನಡ: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆ ಮತ ಎಣಿಕೆಯಲ್ಲಿ ಯಲ್ಲಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಿವರಾಮ್ ಹೆಬ್ಬಾರ್ ಗೆಲುವಿನ ನಗೆ ಬೀರಿದ್ದಾರೆ. ಮೈತ್ರಿ ಸರ್ಕಾರದ ಅವಧಿಯಲ್ಲಿ ಶಿವರಾಮ್ ಹೆಬ್ಬಾರ್ ರಾಜೀನಾಮೆ ನೀಡಿದ್ದರು. ಬಿಜೆಪಿಯಿಂದ ಅಖಾಡಕ್ಕಿಳಿದಿದ್ದ ಶಿವರಾಮ್ ಹೆಬ್ಬಾರ್ 31,408 ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ಶಿವರಾಮ್ ಹೆಬ್ಬಾರ್‌ 80,442 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ ನಾಯ್ಕಗೆ 49,034 ಮತ ಪಡೆದಿದ್ರೆ, ಜೆಡಿಎಸ್ ಅಭ್ಯರ್ಥಿ ಚೈತ್ರಾಗೌಡಗೆ ಕೇವಲ 1,235 ಮತಗಳು ಬಿದ್ದಿವೆ.

Published On - 10:27 am, Mon, 9 December 19

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us