ಎಲ್ಲಿದೆ ಕನಿಷ್ಠ ಬೆಂಬಲ ಬೆಲೆ ಎಂದು ಅಂಕಿ-ಅಂಶಗಳ ಜತೆಗೆ ಸರ್ಕಾರದ ವಿರುದ್ಧ ಯೋಗೇಂದ್ರ ಯಾದವ್ ಕಿಡಿ

Minimum Support Price (MSP): ರೈತರಿಗೆ ಕನಿಷ್ಠ ಬೆಂಬಲ ಸಿಗುತ್ತಿದೆಯೇ ಎಂದು ಪ್ರತ್ಯಕ್ಷವಾಗಿ ಪರಾಂಬರಿಸಿ ಅದರ ಫಲಿತಾಂಶವನ್ನು ಬೆಂಗಳೂರಿನಲ್ಲಿ ಇಂದು ಪತ್ರಿಕಾಗೋಷ್ಠಿ ನಡೆಸಿ ಅಂಕಿ- ಅಂಶಗಳ ಸಹಿತ ತೆರೆದಿಟ್ಟರು ಯೋಗೇಂದ್ರ ಯಾದವ್.

ಎಲ್ಲಿದೆ ಕನಿಷ್ಠ ಬೆಂಬಲ ಬೆಲೆ ಎಂದು ಅಂಕಿ-ಅಂಶಗಳ ಜತೆಗೆ ಸರ್ಕಾರದ ವಿರುದ್ಧ ಯೋಗೇಂದ್ರ ಯಾದವ್ ಕಿಡಿ
ಸಾಂದರ್ಭಿಕ ಚಿತ್ರ
Follow us
Srinivas Mata
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Mar 07, 2021 | 9:44 PM

ಬೆಂಗಳೂರು: ದೇಶದ ರೈತರು ಕನಿಷ್ಠ ಬೆಂಬಲ ಬೆಲೆಯನ್ನು ಎಲ್ಲೂ ಸಂಪೂರ್ಣವಾಗಿ ಪಡೆದುಕೊಳ್ಳುತ್ತಿಲ್ಲ ಎಂಬುದನ್ನು ಮಾರುಕಟ್ಟೆಯಲ್ಲೇ ಸಾಕ್ಷಾತ್ ತೋರಿಸುವ ಮೂಲಕ ಸಾಬೀತುಪಡಿಸುವ ಆಂದೋಲನಕ್ಕೆ ಕಲಬುರ್ಗಿಯಿಂದ ಚಾಲನೆ ನೀಡಿದ ಸಂಯುಕ್ತ ಕಿಸಾನ್ ಮೋರ್ಚಾದ ಸಂಚಾಲನಾ ಸಮಿತಿಯ ಯೋಗೇಂದ್ರ ಯಾದವ್, ‘ಎಂಎಸ್‍ಪಿ (ಕನಿಷ್ಠ ಬೆಂಬಲ ಬೆಲೆ) ಎಲ್ಲಿದೆ ತೋರಿಸಿ, ಎಂಎಸ್‍ಪಿ ಕೊಡಿಸಿ’ ಎಂದು ಸರ್ಕಾರವನ್ನು ಇಂದು ಕೇಳಿದರು. ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಎರಡು ದಿನಗಳಿಂದ ಕರ್ನಾಟಕ ಮಾರುಕಟ್ಟೆಗಳಲ್ಲಿ ತಮಗೆ ಕಂಡಿದ್ದನ್ನು ತಿಳಿಸಿದರು.

ಕಲಬುರ್ಗಿ ಹಾಗೂ ಬಳ್ಳಾರಿಯ ಎಪಿಎಂಸಿಗಳಲ್ಲಿ ಮಾರ್ಚ್ 5, 6ರಂದು ಸ್ವತಃ ಯಾದವ್ ಭೇಟಿ ನೀಡಿದ್ದರು. ಈ ವೇಳೆ ಸಂಯುಕ್ತ ಹೋರಾಟ ಕರ್ನಾಟಕದ ಇತರ ಮುಖಂಡರೂ ಇದ್ದರು. ಸರ್ಕಾರವು ಅಧಿಕೃತವಾಗಿ ಘೋಷಿಸಿದ ಕನಿಷ್ಠ ಬೆಂಬಲ ಬೆಲೆಯನ್ನು ಈ ಮಾರುಕಟ್ಟೆಗಳಲ್ಲಿ ರೈತರು ಪಡೆದುಕೊಂಡ ಬೆಲೆಗೆ ಹೋಲಿಸಿ, ಅಂಕಿ-ಅಂಶಗಳನ್ನು ಮುಂದಿಟ್ಟರು.

ಎಲ್ಲಿದೆ ಕನಿಷ್ಠ ಬೆಂಬಲ ಬೆಲೆ? ಎಂಎಸ್​ಪಿ ಇತ್ತು, ಇದೆ ಮತ್ತು ಮುಂದೆಯೂ ಇರುತ್ತದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸಂಸತ್ತಿನಲ್ಲಿ ಹೇಳಿದ್ದರು. ಆದರೆ ಅದನ್ನು ವಾಸ್ತವದಲ್ಲಿ ಸಾಬೀತು ಮಾಡುವ ಸಲುವಾಗಿಯೇ ಈ ಅಭಿಯಾನ ಕೈಗೊಳ್ಳಲಾಗಿದೆ ಎಂದು ಯೋಗೇಂದ್ರ ಯಾದವ್ ತಿಳಿಸಿದರು. ಬಳ್ಳಾರಿ ಎಪಿಎಂಸಿಯಲ್ಲಿ ಮೆಕ್ಕೆಜೋಳ, ಜೋಳ, ಹೆಸರುಕಾಳು, ತೊಗರಿ ಸೇರಿದಂತೆ ಯಾವುದಕ್ಕೂ ಕನಿಷ್ಠ ಬೆಂಬಲ ಬೆಲೆ ಸಿಕ್ಕಿಲ್ಲ. ಕಲಬುರ್ಗಿಯಲ್ಲಿ ಸದ್ಯಕ್ಕೆ ತೊಗರಿ ಕಾಳಿಗೆ ಸ್ವಲ್ಪ ಹೆಚ್ಚಿನ ಬೆಲೆ ಸಿಗುತ್ತಿದೆ ಎನ್ನುವುದನ್ನು ಬಿಟ್ಟರೆ ಉಳಿದಂತೆ ಯಾವುದೇ ಬೆಳೆಗೂ ಸರ್ಕಾರ ಘೋಷಿಸಿದ ಕನಿಷ್ಠ ಬೆಂಬಲ ಬೆಲೆ ದಕ್ಕಿಲ್ಲ ಎಂದು ಅವರು ಹೇಳಿದರು.

ಇದು ಕೇವಲ ಕರ್ನಾಟಕದ ಸ್ಥಿತಿಯಲ್ಲ, ಇಡೀ ದೇಶದಲ್ಲಿ ರೈತರಿಗೆ ಕನಿಷ್ಠ ಬೆಂಬಲ ಬೆಲೆ ದಕ್ಕಿಲ್ಲ ಎಂದು ಆರೋಪಿಸಿದ ಅವರು, ಪರಿಸ್ಥಿತಿ ಹೀಗಿದೆ. ಕನಿಷ್ಠ ಬೆಂಬಲ ಬೆಲೆ ಇದೆ, ಮುಂದೆಯೂ ಇರುತ್ತದೆ ಎಂಬ ಮಾತನ್ನು ಹೇಗೆ ನಂಬುವುದು? ಹಾಗಾಗಿಯೇ ಕನಿಷ್ಠ ಬೆಂಬಲ ಬೆಲೆಯು ಕಾನೂನಾಗಬೇಕು ಎಂದು ನಾವು ಒತ್ತಾಯಿಸುತ್ತಿದ್ದೇವೆ ಎಂದರು.

ಸರ್ಕಾರದ ಹೇಳಿಕೆ ಪೊಳ್ಳಾಗಿದೆ ಇನ್ನು ಕೃಷಿ ಆರ್ಥಿಕ ತಜ್ಞ ಪ್ರಕಾಶ್ ಕಮ್ಮರಡಿ, ಕಳೆದ ಮೇ ತಿಂಗಳಿನಿಂದ ಇಲ್ಲಿಯವರೆಗೆ ರಾಜ್ಯದ ಎಪಿಎಂಸಿಗಳಲ್ಲಿ ಕೃಷಿ ಉತ್ಪನ್ನಗಳ ವಹಿವಾಟು ಹೇಗೆ ಕಡಿಮೆಯಾಗಿದೆ ಎಂಬ ಅಂಕಿ-ಅಂಶಗಳನ್ನು ತೆರೆದಿಟ್ಟರು. ಎಪಿಎಂಸಿ ಬೈಪಾಸ್ ಕಾಯ್ದೆಯಿಂದ ಎಪಿಎಂಸಿಗಳಿಗೆ ಏನೂ ತೊಂದರೆ ಆಗುವುದಿಲ್ಲ ಎಂಬ ಸರ್ಕಾರದ ಹೇಳಿಕೆ ಪೊಳ್ಳಾಗಿದೆ ಎಂದು ಆರೋಪಿಸಿದರು. ನಿಯಂತ್ರಣ ಹೊಂದಿರುವ ಮಾರುಕಟ್ಟೆಯಾದ ಎಪಿಎಂಸಿಗಳು ಮುಚ್ಚಿಹೋದರೆ ಇನ್ನು ಯಾವ ನಿಯಂತ್ರಣವೂ ಇಲ್ಲದ ಖಾಸಗಿ ಮಾರುಕಟ್ಟೆ ಮಾತ್ರ ಉಳಿದಾಗ ಯಾವ ಸ್ಥಿತಿ ಏರ್ಪಡಬಹುದು ಎಂಬುದನ್ನು ಊಹಿಸಬಹುದು ಎಂದು ಹೇಳಿದರು.

ಸರ್ಕಾರವು ಬೆಂಬಲ ಬೆಲೆ ಘೋಷಿಸಿರುವ ಬೆಳೆಗಳ ಪೈಕಿ 13 ಬೆಳೆಗಳು ಕರ್ನಾಟಕದಲ್ಲಿ ಇದ್ದು, ಆ ಬೆಲೆಯನ್ನು ಕರ್ನಾಟಕದ ರೈತರು ಎಪಿಎಂಸಿಗಳಲ್ಲಿ ಅಧಿಕೃತವಾಗಿ ಪಡೆದುಕೊಂಡಿರುವುದಕ್ಕೆ ಹೋಲಿಸಿದರೆ 3000 ಕೋಟಿ ರೂಪಾಯಿಗೂ ಹೆಚ್ಚು ನಷ್ಟವನ್ನು ಅನುಭವಿಸಿದ್ದಾರೆ. ಸ್ವಾಮಿನಾಥನ್ ಆಯೋಗದಲ್ಲಿ ಶಿಫಾರಸು ಮಾಡಿರುವುದಕ್ಕೂ ಬಿಜೆಪಿಯು ತನ್ನ ಪ್ರಣಾಳಿಕೆಯಲ್ಲಿ ಹೇಳಿದ್ದ ಕನಿಷ್ಠ ಬೆಂಬಲ ಬೆಲೆಗೆ ಹೋಲಿಸಿದರೆ ರೈತರು ಇಪ್ಪತ್ತು ಸಾವಿರ ರೂಪಾಯಿಗೂ ಹೆಚ್ಚು ನಷ್ಟವನ್ನು ಹೊರಬೇಕಾಗಿ ಬಂದಿದೆ ಎಂದು ಅಂಕಿ- ಅಂಶಗಳನ್ನು ಪತ್ರಿಕಾಗೋಷ್ಠಿಯಲ್ಲಿ ಇಡಲಾಯಿತು.

ಇನ್ನು ಈ ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ರೈತಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ, ಕರ್ನಾಟಕ ರಾಜ್ಯ ರೈತಸಂಘ ಹಸಿರುಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಮಾತನಾಡಿದರು. ಪಂಜಾಬ್​ನ ಪ್ರಜಾತಾಂತ್ರಿಕ ರೈತ ಸಂಘದ ಸತ್ನಾಮ್ ಸಿಂಗ್, ಹರಿಯಾಣದ ಜೈಕಿಸಾನ್ ಆಂದೋಲನದ ದೀಪಕ್ ಲಂಬಾ, ರೈತನಾಯಕ ಚಾಮರಸ ಪಾಟೀಲ್, ಜನಾಂದೋಲನಗಳ ಮಹಾಮೈತ್ರಿಯ ಎಸ್.ಆರ್.ಹಿರೇಮಠ ಮತ್ತಿತರರಿದ್ದರು.

ಇದನ್ನೂ ಓದಿ: ಕರ್ನಾಟಕ ಬಜೆಟ್ 2021ರಲ್ಲಿ ಕೃಷಿ ಕ್ಷೇತ್ರದ ನಿರೀಕ್ಷೆ ಬಗ್ಗೆ ಪ್ರಕಾಶ್ ಕಮ್ಮರಡಿ ಹೇಳೋದೇನು?

ಇದನ್ನೂ ಓದಿ: ಕರ್ನಾಟಕ ಬಜೆಟ್ 2021: ಗ್ರಾಹಕರು ಖರೀದಿಸುವ ಮೊತ್ತದ ಶೇ 90ರಷ್ಟು ಹಣ ರೈತರ ಕೈ ಸೇರಲಿ- RS ದೇಶಪಾಂಡೆ

Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್