AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೋಗೀಶ್ ಗೌಡ ಹತ್ಯೆ ಪ್ರಕರಣ: ಚಂದ್ರಶೇಖರ ಇಂಡಿ ಶಕುನಿ ಎಂದ ಬಸವರಾಜ ಮುತ್ತಗಿ

ನಾನು ಮತ್ತು ವಿನಯ್ ಕುಲಕರ್ಣಿ ಒಟ್ಟಾಗಿ ಊಟ ಮಾಡಿದ್ದೇವೆ. ಅವರು ಊಟದಲ್ಲಿ ವಿಷವನ್ನು ಹಾಕಿದ್ದರೂ ನಾನು ತಿನ್ನುತ್ತಿದ್ದೆ ಎಂದು ತಮ್ಮ ಮತ್ತು ವಿನಯ್ ಕುಲಕರ್ಣಿ ನಡುವಿನ ಸಂಬಂಧದ ಬಗ್ಗೆ ವಿವರಣೆ ನೀಡಿದ್ದಾರೆ.

ಯೋಗೀಶ್ ಗೌಡ ಹತ್ಯೆ ಪ್ರಕರಣ: ಚಂದ್ರಶೇಖರ ಇಂಡಿ ಶಕುನಿ ಎಂದ ಬಸವರಾಜ ಮುತ್ತಗಿ
ವಿನಯ್​ ಕುಲಕರ್ಣಿ(ಎಡ); ಬಸವರಾಜ್ ಮುತ್ತಗಿ (ಬಲ)
TV9 Web
| Edited By: |

Updated on:Apr 07, 2022 | 10:39 AM

Share

ಧಾರವಾಡ: ವಿನಯ್ ಕುಲಕರ್ಣಿ ಸೋದರಮಾವ ಚಂದ್ರಶೇಖರ ಇಂಡಿ ವಿರುದ್ಧ ಯೋಗೀಶ್ ಗೌಡ ಹತ್ಯೆ ಪ್ರಕರಣದ ಆರೋಪಿ ಬಸವರಾಜ ಮುತ್ತಗಿ ಕಿಡಿಕಾರಿದ್ದಾರೆ. ಚಂದ್ರಶೇಖರ ಇಂಡಿ ಶಕುನಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾನು ಮತ್ತು ವಿನಯ್ ಕುಲಕರ್ಣಿ ಒಟ್ಟಾಗಿ ಊಟ ಮಾಡಿದ್ದೇವೆ. ಅವರು ಊಟದಲ್ಲಿ ವಿಷವನ್ನು ಹಾಕಿದ್ದರೂ ನಾನು ತಿನ್ನುತ್ತಿದ್ದೆ ಎಂದು ತಮ್ಮ ಮತ್ತು ವಿನಯ್ ಕುಲಕರ್ಣಿ ನಡುವಿನ ಸಂಬಂಧದ ಬಗ್ಗೆ ವಿವರಣೆ ನೀಡಿದ್ದಾರೆ.

ಅಂದಿನ ಜಿಲ್ಲಾ ಪಂಚಾಯತಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ CBI ತನಿಖೆ ನಡೆಯುತ್ತಿದೆ. ಪ್ರಕರಣದ ಆರೋಪಿಯಾದ ಬಸವರಾಜ ಮುತ್ತಗಿ ಹತ್ಯೆಗೆ ಸುಪಾರಿ ನೀಡಿರುವ ಬಗ್ಗೆ ಇಂದು ವಿಚಾರಣೆ ನಡೆದಿದೆ.

ನಾವು ಭಾವನೆಗಳ ಜೊತೆ ಜೀವನ ಮಾಡುವಂತಹವರು. ಆದ್ರೆ ಚಂದ್ರಶೇಖರ ಇಂಡಿ ಮಹಾಭಾರತದ ಶಕುನಿ ಇದ್ದಂತೆ. ಅವರ ಬಗ್ಗೆ ಇದಕ್ಕಿಂತ ಹೆಚ್ಚಾಗಿ ನಾನು ಏನೂ ಹೇಳುವುದಿಲ್ಲ ಎಂದು ಇಂಡಿ ವಿರುದ್ಧ ಗರಂ ಆಗಿದ್ದಾರೆ. ನನ್ನ ಕೊಲೆಗೆ ಸುಪಾರಿ ನೀಡಿರುವ ವಿಷಯವನ್ನು ಜೀರ್ಣಿಸಿಕೊಳ್ಳಲು ಆಗುತ್ತಿಲ್ಲ. ಈ ಬಗ್ಗೆ ವಿಚಾರಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚು ಮಾತನಾಡುವುದಿಲ್ಲ ಎಂದು ಹೇಳಿದ್ದಾರೆ.

ಸಾಕ್ಷಿ ಮುಚ್ಚಿ ಹಾಕುವುದಕ್ಕೆ ಮುತ್ತಗಿಯ ಕೊಲೆಗೆ ಸ್ಕೆಚ್ ನಡೆಸಲಾಗಿತ್ತು ಎಂಬ ಮಾಹಿತಿ ಈ ಹಿಂದೆ ತಿಳಿದುಬಂದಿತ್ತು. ಪ್ರಕರಣದ ಪ್ರಮುಖ ಆರೋಪಿ ಬಸವರಾಜ್ ಮುತ್ತಗಿ, ಯೋಗೀಶ್ ಗೌಡ ಹತ್ಯೆಯ ಸುಪಾರಿ ಬಗ್ಗೆ ಮಾಹಿತಿ ಹೊಂದಿದ್ದಾರೆ ಎಂದು ಹೇಳಲಾಗಿತ್ತು. ಹಾಗಾಗಿ, ಮುತ್ತಗಿ ಹತ್ಯೆಯಾದ್ರೆ ಕೇಸ್ ಮುಚ್ಚಿಹಾಕಬಹುದೆಂಬ ಪ್ಲಾನ್ ನಡೆದಿತ್ತು ಎಂದು ಹೇಳಲಾಗಿದೆ.

ಯೋಗೀಶ್ ಹತ್ಯೆ: ಪ್ರಕರಣದಲ್ಲಿ ಇನ್ಸ್​ಪೆಕ್ಟರ್​ ಟಿಂಗರಿಕರ್ ಪಾತ್ರವೇನು? ರೋಚಕ ಕತೆ ಇಲ್ಲಿದೆ

Published On - 7:04 pm, Wed, 16 December 20

Follow Us
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ