AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೋಗೀಶ್​ ಗೌಡ ಹತ್ಯೆ ಪ್ರಕರಣ: ₹2 ಕೋಟಿ ರಹಸ್ಯ ಭೇದಿಸಲು ಮೃತನ ಪತ್ನಿಗೆ CBI ಬುಲಾವ್​

ಹುಬ್ಬಳ್ಳಿ: ಧಾರವಾಡ ಜಿ.ಪಂ ಸದಸ್ಯ ಯೋಗೀಶ್​ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು CBI ಅಧಿಕಾರಿಗಳು ಯೋಗೀಶ್​ ಗೌಡ ಪತ್ನಿ ಮಲ್ಲಮ್ಮಗೆ ವಿಚಾರಣೆಗೆ ಬರುವಂತೆ ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಮಲ್ಲಮ್ಮ ಇಂದು ವಿಚಾರಣೆಗೆ ಹಾಜರಾದರು. ನಗರದ ಸಿ.ಎ.ಆರ್​ ಮೈದಾನದಲ್ಲಿ CBI ತಂಡದಿಂದ ವಿಚಾರಣೆ ನಡೆಸಲಾಗುತ್ತಿದ್ದು ಮಲ್ಲಮ್ಮರ ಕಾಂಗ್ರೆಸ್ ಪಕ್ಷ ಸೇರ್ಪಡೆಯ ರಹಸ್ಯವನ್ನು ಅಧಿಕಾರಿಗಳು ಕೆದಕುತ್ತಿರುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಏನಿದು 2 ಕೋಟಿ ರೂ. ರಹಸ್ಯ? ಬಿಜೆಪಿ ಸದಸ್ಯ ಯೋಗೀಶ್​ ಗೌಡ ಹತ್ಯೆ ನಂತರ ಅವರ ಪತ್ನಿ […]

ಯೋಗೀಶ್​ ಗೌಡ ಹತ್ಯೆ ಪ್ರಕರಣ: ₹2 ಕೋಟಿ ರಹಸ್ಯ ಭೇದಿಸಲು ಮೃತನ ಪತ್ನಿಗೆ CBI ಬುಲಾವ್​
KUSHAL V
| Edited By: |

Updated on:Nov 30, 2020 | 5:18 PM

Share

ಹುಬ್ಬಳ್ಳಿ: ಧಾರವಾಡ ಜಿ.ಪಂ ಸದಸ್ಯ ಯೋಗೀಶ್​ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು CBI ಅಧಿಕಾರಿಗಳು ಯೋಗೀಶ್​ ಗೌಡ ಪತ್ನಿ ಮಲ್ಲಮ್ಮಗೆ ವಿಚಾರಣೆಗೆ ಬರುವಂತೆ ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಮಲ್ಲಮ್ಮ ಇಂದು ವಿಚಾರಣೆಗೆ ಹಾಜರಾದರು. ನಗರದ ಸಿ.ಎ.ಆರ್​ ಮೈದಾನದಲ್ಲಿ CBI ತಂಡದಿಂದ ವಿಚಾರಣೆ ನಡೆಸಲಾಗುತ್ತಿದ್ದು ಮಲ್ಲಮ್ಮರ ಕಾಂಗ್ರೆಸ್ ಪಕ್ಷ ಸೇರ್ಪಡೆಯ ರಹಸ್ಯವನ್ನು ಅಧಿಕಾರಿಗಳು ಕೆದಕುತ್ತಿರುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

ಏನಿದು 2 ಕೋಟಿ ರೂ. ರಹಸ್ಯ? ಬಿಜೆಪಿ ಸದಸ್ಯ ಯೋಗೀಶ್​ ಗೌಡ ಹತ್ಯೆ ನಂತರ ಅವರ ಪತ್ನಿ ಮಲ್ಲಮ್ಮ ಕಾಂಗ್ರೆಸ್​ಗೆ ಸೇರ್ಪಡೆಯಾಗಿದ್ದರು. ಈ ವೇಳೆ ಕಾಂಗ್ರೆಸ್​​ಗೆ ಸೇರ್ಪಡೆಯಾಗಲು ಮಲ್ಲಮ್ಮರಿಗೆ 2 ಕೋಟಿ ರೂಪಾಯಿ ಹಣ ನೀಡಲಾಗಿತ್ತು ಎಂಬ ಆರೋಪ ಕೇಳಿಬಂದಿದೆ. ಮಾಜಿ ಸಚಿವ ವಿನಯ್ ಕುಲಕರ್ಣಿಯ ಕಾಲೇಜು ಸಹಪಾಠಿ ಹಾಗೂ ಸದ್ಯ KAS ಅಧಿಕಾರಿಯಾಗಿರುವ ಸೋಮಲಿಂಗ ನ್ಯಾಮಗೌಡ ಮೂಲಕ 2 ಕೋಟಿ ಹಣ ಸಂದಾಯವಾಗಿದೆ ಎಂದು ಆರೋಪಿಸಲಾಗಿದೆ.

ಹಾಗಾಗಿ, ವಿನಯ್ ಕುಲಕರ್ಣಿ ಸಚಿವರಾಗಿದ್ದಾಗ ಅವರ ಆಪ್ತ ಕಾರ್ಯದರ್ಶಿಯಾಗಿದ್ದ KAS ಅಧಿಕಾರಿ ಸೋಮಲಿಂಗ ನ್ಯಾಮಗೌಡರನ್ನು ತನಿಖಾಧಿಕಾರಿ ರಾಕೇಶ್ ರಂಜನ್ ನೇತೃತ್ವದಲ್ಲಿ ವಿಚಾರಣೆಗೆ ಒಳಪಡಿಸಲಾಯಿತು. ಇದಲ್ಲದೆ, ಮಲ್ಲಮ್ಮಳನ್ನ ಕಾಂಗ್ರೆಸ್‌ಗೆ ಕರೆತರಲು ಪಕ್ಷದ ಮುಖಂಡ ನಾಗರಾಜ್ ಗೌರಿ ಸಹಾಯ ಮಾಡಿದ್ದನು ಎಂದು ಹೇಳಲಾಗಿದೆ. ಹಾಗಾಗಿ, ನಾಗರಾಜ್​ ಗೌರಿಯನ್ನು ಸಹ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದರು.

Published On - 5:57 pm, Sun, 8 November 20

Follow Us
KUSHAL V
KUSHAL V
ಕೆಪಿಎಸ್‌ಸಿ ಅಕ್ರಮ: 70 ಆರ್‌ಟಿಓ ಇನ್ಸ್‌ಪೆಕ್ಟರ್‌ ಹೆಚ್ಚುವರಿ ಆಯ್ಕೆಗೆ ತಡೆ
ಕೆಪಿಎಸ್‌ಸಿ ಅಕ್ರಮ: 70 ಆರ್‌ಟಿಓ ಇನ್ಸ್‌ಪೆಕ್ಟರ್‌ ಹೆಚ್ಚುವರಿ ಆಯ್ಕೆಗೆ ತಡೆ
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು