ಕೆರೆಯಲ್ಲಿ ಈಜಲು ಹೋಗಿದ್ದ ಬೆಂಗಳೂರಿನ ಇಬ್ಬರು ಯುವಕರು ನೀರು ಪಾಲು

ಕೆರೆಯಲ್ಲಿ ಈಜಲು ಹೋಗಿದ್ದ ಬೆಂಗಳೂರಿನ ಇಬ್ಬರು ಯುವಕರು ನೀರು ಪಾಲು

ಕೋಲಾರ:​ ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರು ಪಾಲಾಗಿರುವ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಅತ್ತಿಗಿರಿಕೊಪ್ಪ ಕೆರೆಯಲ್ಲಿ ನಡೆದಿದೆ.

ಬೆಂಗಳೂರು ಮೂಲದ ಅಶ್ವಕ್​ ಅಹಮದ್​(17), ಅಜಾಮುದ್ದೀನ್​ ಶರೀಪ್​ (18) ಮೃತ ಯುವಕರಾಗಿದ್ದಾರೆ. ಬಂಗಾರಪೇಟೆ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕಾಗಮಿಸಿದ ಬಂಗಾರಪೇಟೆ ಪೊಲೀಸರು ಸ್ಥಳ ಪರಿಶೀಲನೆ ಮಾಡಿದ್ದಾರೆ.

ಸ್ಥಳದಲ್ಲಿರುವ ಅಗ್ನಿಶಾಮಕ ಸಿಬ್ಬಂದಿ ಈಗಾಗಲೇ ಓರ್ವನ ಶವ ಪತ್ತೆ ಮಾಡಿದ್ದು, ಮತ್ತೊಬ್ಬನ ಶವಕ್ಕಾಗಿ ಹುಡುಕಾಟ ಮುಂದುವರೆದಿದೆ.

Click on your DTH Provider to Add TV9 Kannada