ಕೊರೊನಾ ಆಸ್ಪತ್ರೆಗೆ ತೆರಳುವಾಗ ಮಾರ್ಗಮಧ್ಯೆ ಯುವ Photographer​ ಸಾವು, ಯಾವೂರು?

ನೆಲಮಂಗಲ: ಒಂದು ವಾರದಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವ ಫೋಟೋಗ್ರಾಫರ್​ನನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೇರೊಂದು ಆಸ್ಪತ್ರೆಗೆ ಕಳುಹಿಸುವಾಗ ಌಂಬುಲೆನ್ಸ್​ನಲ್ಲಿ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಅರಿಶಿನಕುಂಟೆ ನಿವಾಸಿ 33 ವರ್ಷದ ಫೋಟೋಗ್ರಾಫರ್​ ರಘು 1 ವಾರದಿಂದ ಎಂ.ಎಸ್. ಪಾಳ್ಯದ ನಾಗಪ್ಪ ಹಗ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನಲ್ಲಿಯೇ ಮತ್ತೊಂದು ಆಸ್ಪತ್ರೆಗೆ ಚಿಕಿತ್ಸೆಗೆಂದು ಕಳುಹಿಸುವ ನೆಪ ಮಾಡಿ, ಌಂಬುಲೆನ್ಸ್​ನಲ್ಲಿ ಕರೆದೊಯ್ಯುವಾಗ ಮಾರ್ಗ ಮಧ್ಯೆ ಆತ ಕೊನೆಯುಸಿರೆಳೆದಿದ್ದಾರೆ ಎಂದು […]

ಕೊರೊನಾ ಆಸ್ಪತ್ರೆಗೆ ತೆರಳುವಾಗ ಮಾರ್ಗಮಧ್ಯೆ ಯುವ Photographer​ ಸಾವು, ಯಾವೂರು?
ಸಾಧು ಶ್ರೀನಾಥ್​

Updated on: Sep 03, 2020 | 9:19 AM

ನೆಲಮಂಗಲ: ಒಂದು ವಾರದಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವ ಫೋಟೋಗ್ರಾಫರ್​ನನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೇರೊಂದು ಆಸ್ಪತ್ರೆಗೆ ಕಳುಹಿಸುವಾಗ ಌಂಬುಲೆನ್ಸ್​ನಲ್ಲಿ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಅರಿಶಿನಕುಂಟೆ ನಿವಾಸಿ 33 ವರ್ಷದ ಫೋಟೋಗ್ರಾಫರ್​ ರಘು 1 ವಾರದಿಂದ ಎಂ.ಎಸ್. ಪಾಳ್ಯದ ನಾಗಪ್ಪ ಹಗ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನಲ್ಲಿಯೇ ಮತ್ತೊಂದು ಆಸ್ಪತ್ರೆಗೆ ಚಿಕಿತ್ಸೆಗೆಂದು ಕಳುಹಿಸುವ ನೆಪ ಮಾಡಿ, ಌಂಬುಲೆನ್ಸ್​ನಲ್ಲಿ ಕರೆದೊಯ್ಯುವಾಗ ಮಾರ್ಗ ಮಧ್ಯೆ ಆತ ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಪೂರ್ಣ ಪ್ರಮಾಣದ ವೆಂಟಿಲೇಶನ್ ಬಿಲ್ ಪಾವತಿಸಿಕೊಂಡು ಅಂಬ್ಯೂಲನ್ಸ್ ನಲ್ಲಿ ರೋಗಿಯನ್ನು ಹೊರಕ್ಕೆ ಕಳುಹಿಸಿದ್ದಾರೆ. ಆದ್ರೆ ಮಾರ್ಗ ಮಧ್ಯದಲ್ಲಿ ವ್ಯಕ್ತಿ ಸಾವಿಗೀಡಾದರೆಂದು ರಸ್ತೆಯಲ್ಲೆ ಆ್ಯಂಬುಲೆನ್ಸ್ ನಿಂತಿದೆ. ನಾಗಪ್ಪ ಹಗ್ಲಿ ಆಸ್ಪತ್ರೆ ವಿರುದ್ದ ಪೋಷಕರು ಕಿಡಿಕಾರಿದ್ದಾರೆ. ಮೃತ ಪೋಟೋಗ್ರಾಫರ್ ರಘು ಶವವಿರುವ ಆ್ಯಂಬುಲೆನ್ಸ್ ಬಳಿ 30ಕ್ಕೂ ಹೆಚ್ಚು ಪೋಟೋಗ್ರಾಫರ್ ಗಳು ಜಮಾಯಿಸಿದ್ದಾರೆ. ವಿದ್ಯಾರಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us