ಹೊಳೆನರಸೀಪುರ ಪೆದ್ದನಹಳ್ಳಿ ಬಳಿ ರೈಲ್ವೆ ಹಳಿಗೆ ತಲೆಕೊಟ್ಟು ಯುವಕನ ಆತ್ಮಹತ್ಯೆ

ಹೊಳೆನರಸೀಪುರ ತಾಲೂಕಿನ ಇರಿತಳಲು ಗ್ರಾಮದ ಸದಾ (28) ಆತ್ಮಹತ್ಯೆ ಮಾಡಿಕೊಂಡಿದ್ದು, ರೈಲ್ವೆ ಹಳಿ ಬಳಿ ಬೈಕ್ ನಿಲ್ಲಿಸಿ ರೈಲಿಗೆ ತಲೆಕೊಟ್ಟಿದ್ದಾರೆ.

  • TV9 Web Team
  • Published On - 18:04 PM, 7 Jan 2021
ಹೊಳೆನರಸೀಪುರ ಪೆದ್ದನಹಳ್ಳಿ ಬಳಿ ರೈಲ್ವೆ ಹಳಿಗೆ ತಲೆಕೊಟ್ಟು ಯುವಕನ ಆತ್ಮಹತ್ಯೆ
ಆತ್ಮಹತ್ಯೆ ಮಾಡಿಕೊಂಡ ಯುವಕನ ಬೈಕ್ ಹಾಗೂ ರೈಲು ಹಳಿ

ಹಾಸನ : ರೈಲಿಗೆ ತಲೆ ಕೊಟ್ಟು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೊಳೆನರಸೀಪುರ ತಾಲ್ಲೂಕಿನ ಪೆದ್ದನಹಳ್ಳಿ ಬಳಿ ನಡೆದಿದೆ.

ಹೊಳೆನರಸೀಪುರ ತಾಲೂಕಿನ ಇರಿತಳಲು ಗ್ರಾಮದ ಸದಾ (28) ಆತ್ಮಹತ್ಯೆ ಮಾಡಿಕೊಂಡಿದ್ದು, ರೈಲ್ವೆ ಹಳಿ ಬಳಿ ಬೈಕ್ ನಿಲ್ಲಿಸಿ ರೈಲಿಗೆ ತಲೆಕೊಟ್ಟಿದ್ದಾರೆ. ಚಿಕ್ಕಮಗಳೂರಿನ ಖಾಸಗಿ ಫೈನಾನ್ಸ್​ನಲ್ಲಿ ಕೆಲಸ ಮಾಡುತ್ತಿದ್ದ ಸದಾ ಮನೆಗೆ ಹೋಗುತ್ತೇನೆಂದು ಚಿಕ್ಕಮಗಳೂರಿನಿಂದ ಬಂದಿದ್ದು, ರೈಲ್ವೆ ಹಳಿ ಮೇಲೆ ದೇಹದಿಂದ ತಲೆ ಬೇರ್ಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಸದ್ಯ ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ದುಷ್ಟ ಅಳಿಯನಿಂದಾಗಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ