AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಮೇಶ್​ ಜಾರಕಿಹೊಳಿ ರಾಜೀನಾಮೆಗೆ ‘ಕೈ’​ ಕಾರ್ಯಕರ್ತರ ಪಟ್ಟು; ರಾಸಲೀಲೆ ವಿಡಿಯೋ ಹೈಕಮಾಂಡ್​ಗೆ ರವಾನೆ

ತಕ್ಷಣ ರಮೇಶ್ ಜಾರಕಿಹೊಳಿ ರಾಜೀನಾಮೆ ಪಡೆಯಬೇಕು. ಸಚಿವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಸಿಎಂ, ಸಚಿವರು, ಸಂಸದರ ಮನೆಗಳಿಗೆ ಮುತ್ತಿಗೆ ಹಾಕುವುದಾಗಿ ಹೆಚ್.ಪಿ.ಗಿರೀಶ್​ ಎಚ್ಚರಿಕೆ ಕೊಟ್ಟಿದ್ದಾರೆ.

ರಮೇಶ್​ ಜಾರಕಿಹೊಳಿ ರಾಜೀನಾಮೆಗೆ ‘ಕೈ’​ ಕಾರ್ಯಕರ್ತರ ಪಟ್ಟು; ರಾಸಲೀಲೆ ವಿಡಿಯೋ ಹೈಕಮಾಂಡ್​ಗೆ ರವಾನೆ
ರಮೇಶ್​ ಜಾರಕಿಹೊಳಿ ರಾಜೀನಾಮೆಗೆ ‘ಕೈ’​ ಕಾರ್ಯಕರ್ತರ ಪಟ್ಟು
KUSHAL V
|

Updated on:Mar 02, 2021 | 8:08 PM

Share

ಬೆಂಗಳೂರು: ಸಚಿವ ರಮೇಶ್ ಜಾರಕಿಹೊಳಿ ಸೆಕ್ಸ್​​ ವಿಡಿಯೋ ಬಯಲಾಗುತ್ತಿದ್ದಂತೆ ಸಂಪುಟದಿಂದ ರಮೇಶ್​ರನ್ನು ವಜಾಗೊಳಿಸುವಂತೆ ಆಗ್ರಹಿಸಿ ನಗರದಲ್ಲಿ ಯೂತ್​ ಕಾಂಗ್ರೆಸ್​ನಿಂದ ಪ್ರತಿಭಟನೆ ನಡೆಯಿತು. ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಧರಣಿ ನಡೆಸಿದರು. ಇತ್ತ, ಶಿವಮೊಗ್ಗದ ಗೋಪಿ ವೃತ್ತದಲ್ಲಿ ಜಿಲ್ಲಾ ಕಾಂಗ್ರೆಸ್​ನಿಂದ ಧರಣಿ ನಡೆಯಿತು. ‘ಕೈ’ ಕಾರ್ಯಕರ್ತರ ಧರಣಿ ಹಿನ್ನೆಲೆಯಲ್ಲಿ ಸಂಚಾರ ವ್ಯತ್ಯಯ ಉಂಟಾಯಿತು.

ರಮೇಶ್ ಜಾರಕಿಹೊಳಿಯನ್ನು ಸಂಪುಟದಿಂದ ಕೈಬಿಡಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪಗೆ ಶಿವಮೊಗ್ಗ ಜಿಲ್ಲಾ ಯುವ ಘಟಕದ ಅಧ್ಯಕ್ಷ ಹೆಚ್.ಪಿ.ಗಿರೀಶ್​ ಆಗ್ರಹಿಸಿದ್ದಾರೆ. ತಕ್ಷಣ ರಮೇಶ್ ಜಾರಕಿಹೊಳಿ ರಾಜೀನಾಮೆ ಪಡೆಯಬೇಕು. ಸಚಿವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಸಿಎಂ, ಸಚಿವರು, ಸಂಸದರ ಮನೆಗಳಿಗೆ ಮುತ್ತಿಗೆ ಹಾಕುವುದಾಗಿ ಹೆಚ್.ಪಿ.ಗಿರೀಶ್​ ಎಚ್ಚರಿಕೆ ಕೊಟ್ಟಿದ್ದಾರೆ.

ಅತ್ತ, ರಮೇಶ್ ಜಾರಕಿಹೊಳಿ ರಾಸಲೀಲೆ ವಿಡಿಯೋ ಬಯಲಾಗುತ್ತಿದ್ದಂತೆ ಸಚಿವರ ರಾಸಲೀಲೆ ವಿಡಿಯೋ ಬಗ್ಗೆ ಟ್ವೀಟ್ ಮಾಡಿ ಕರ್ನಾಟಕ ಕಾಂಗ್ರೆಸ್​ ಘಟಕ ಪ್ರಶ್ನೆ ಹಾಕಿದೆ. ಡಿಯರ್ @BJP4Karnataka ನಿಮ್ಮವರೇ ನಿಮಗೆ #BlackmailJanataParty ಹೆಸರು ಕೊಟ್ಟಿದ್ದು ಇದಕ್ಕೇನಾ? ಎಂದು ಕರ್ನಾಟಕ ಕಾಂಗ್ರೆಸ್​ ಘಟಕ ಟ್ವೀಟ್​ ಮಾಡಿ ಪ್ರಶ್ನಿಸಿದೆ.

ಈ ನಡುವೆ, ರಮೇಶ್ ರಾಸಲೀಲೆ ವಿಡಿಯೋ ಬಗ್ಗೆ ಮಾಹಿತಿ ಪಡೆದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿವರ ಪಡೆದ ಬಳಿಕ ಸಿದ್ದರಾಮಯ್ಯ ನಿವಾಸಕ್ಕೆ ತೆರಳಿದ್ದಾರೆ. ಸಿಡಿ ಬಗ್ಗೆ ಕಚೇರಿಯಲ್ಲಿ ಮಾಹಿತಿ ಪಡೆದ ಡಿ.ಕೆ.ಶಿವಕುಮಾರ್ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯರನ್ನು ಭೇಟಿಯಾಗಿದ್ದಾರೆ. ಇತ್ತ, ಸಿದ್ದರಾಮಯ್ಯ ನಿವಾಸಕ್ಕೆ ಆಗಮಿಸಿದ ಎಂ.ಬಿ.ಪಾಟೀಲ್ ಸಹ ಆಗಮಿಸಿದ್ದಾರೆ.

​ಪ್ರಭಾವಿ ಸಚಿವರೊಬ್ಬರ ಮೂಲಕ ದೆಹಲಿಗೆ ರಮೇಶ್​ ರಾಸಲೀಲೆ ಸಿಡಿ ರವಾನೆ ರಮೇಶ್ ಜಾರಕಿಹೊಳಿ ರಾಸಲೀಲೆ ವಿಡಿಯೋ ಬಯಲಾಗಕ್ಕೂ ಮೊದಲೇ ಹೈಕಮಾಂಡ್​ಗೆ ತಲುಪಿದೆ. ರಮೇಶ್ ಜಾರಕಿಹೊಳಿ‌ ರಾಸಲೀಲೆ ಸಿಡಿ ಹೈಕಮಾಂಡ್​ ಕೈ ಸೇರಿದೆ. ಪ್ರಭಾವಿ ಸಚಿವರೊಬ್ಬರ ಮೂಲಕ ದೆಹಲಿಗೆ ಸಿಡಿ ರವಾನೆಯಾಗಿದೆ.

‘ಸಚಿವ ರಮೇಶ್ ರಾಸಲೀಲೆ‌ ಸಿಡಿ ಬಗ್ಗೆ ನನಗೇನೂ ಗೊತ್ತಿಲ್ಲ’ ಸಚಿವ ರಮೇಶ್ ರಾಸಲೀಲೆ‌ ಸಿಡಿ ಬಗ್ಗೆ ನನಗೇನೂ ಗೊತ್ತಿಲ್ಲ ಎಂದು ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಈ ಬಗ್ಗೆ ನಂತರ ಪ್ರತಿಕ್ರಿಯೆ ನೀಡ್ತೇನೆಂದ ಸಚಿವ ಸುಧಾಕರ್ ಸುಮ್ಮನಾದರು.

ಮಾಹಿತಿ ಪಡೆದ ಸಿಎಂ ಬಿಎಸ್​ವೈ ಸಚಿವ ರಮೇಶ್ ಜಾರಕಿಹೊಳಿ ಸೆಕ್ಸ್​​ ವಿಡಿಯೋ ಮಾಧ್ಯಮದಲ್ಲಿ ಪ್ರಸಾರವಾಗುತ್ತಿದ್ದಂತೆ ಸುದ್ದಿ ಮತ್ತು ಪೊಲೀಸ್ ಕಮಿಷನರ್​ಗೆ ನೀಡಿದ ದೂರಿನ ಬಗ್ಗೆ ಸಿಎಂ ಬಿಎಸ್​ವೈ ಮಾಹಿತಿ ಪಡೆದಿದ್ದಾರೆ. ಇದಲ್ಲದೆ, ರಾಜೀನಾಮೆ ನೀಡುವಂತೆ ಸಿಎಂ BSY ಸೂಚಿಸುವ ಸಾಧ್ಯತೆ ಹೆಚ್ಚಾಗಿದೆ. ಹೈಕಮಾಂಡ್​ ಮಾಹಿತಿ ಪಡೆದು ಯಡಿಯೂರಪ್ಪ ಕ್ರಮಕ್ಕೆ ಸೂಚಿಸುವ ಸಾಧ್ಯತೆಯಿದೆ.

ಪೊಲೀಸರಿಂದ ದೂರುದಾರ ದಿನೇಶ್ ಕಲ್ಲಹಳ್ಳಿ ವಿಚಾರಣೆ ಅತ್ತ, ದಿನೇಶ್ ಕಲ್ಲಹಳ್ಳಿಯಿಂದ ಕಬ್ಬನ್ ಪಾರ್ಕ್ ಪೊಲೀಸರು ದೂರು ಸ್ವೀಕರಿಸಿದ್ದಾರೆ. ದೂರು ಸ್ವೀಕರಿಸಿದ ಬಳಿಕ ಇನ್​ಸ್ಪೆಕ್ಟರ್​ ಮಾರುತಿ ಹಾಗೂ ಎಸಿಪಿ ಯತಿರಾಜ್ ದಿನೇಶ್​ರಿಂದ ಪ್ರಾಥಮಿಕ ಮಾಹಿತಿ ಪಡೆದರು

ಯುವತಿ ನಿಮಗೆ ಹೇಗೆ ಪರಿಚಯ? ನಿಮಗ್ಯಾಕೆ ಹೇಳಿದ್ರು? ಪೊಲೀಸರಿಂದ ದೂರುದಾರ ದಿನೇಶ್ ಕಲ್ಲಹಳ್ಳಿ ವಿಚಾರಣೆ ನಡೆದಿದೆ. ನೀವು ದೂರು ನೀಡಲು ಕಾರಣ ಏನು ಅಂತಾ ವಿಚಾರಣೆ ನಡೆದಿದೆ. ಸಂತ್ರಸ್ತ ಯುವತಿ ದೂರು ಕೊಡಬಹುದಾ ಅಂತಾ ದಿನೇಶ್​ ಪ್ರಶ್ನೆಗೆ ನಿಮಗೆ ಎಷ್ಟು ವರ್ಷದಿಂದ ಯುವತಿ ಗೊತ್ತೆಂದು ಪೊಲೀಸರು ಪ್ರಶ್ನೆ ಮಾಡಿದ್ದಾರೆ ಎಂದು ಹೇಳಲಾಗಿದೆ.

ಇನ್ನು ಸಚಿವರ ಕುಟುಂಬಸ್ಥರು ಗೋಕಾಕ್‌ಗೆ ತೆರಳಿರುವ ಮಾಹಿತಿ ಲಭ್ಯವಾಗಿದೆ. ನಾಲ್ಕು ದಿನಗಳ ಹಿಂದೆ ಕುಟುಂಬಸ್ಥರು ಗೋಕಾಕ್‌ಗೆ ತೆರಳಿದ್ದಾರೆ.

ಇದನ್ನೂ ಓದಿ: ರಾಜ್ಯ ರಾಜಕೀಯದಲ್ಲಿ ‘ಸಿಡಿ’ದ ರಾಸಲೀಲೆ ಕರ್ಮಕಾಂಡ: ರಮೇಶ್ ಜಾರಕಿಹೊಳಿ ಹಸಿಬಿಸಿ ದೃಶ್ಯ ರಿಲೀಸ್​

ಇದನ್ನೂ ಓದಿ: ಸಿಡಿ ಬಾಂಬ್ ಸಿಡಿಯುತ್ತಿದ್ದಂತೆ ‘ಸಾಹುಕಾರ್​’ ನಾಪತ್ತೆ.. ರಮೇಶ್ ಜಾರಕಿಹೊಳಿ ಸ್ವಕ್ಷೇತ್ರದಲ್ಲಿ ಪವರ್​ ಕಟ್​

Published On - 7:49 pm, Tue, 2 March 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ