
ಬೆಂಗಳೂರು: ಜಿಲ್ಲೆಯ ಆನೇಕಲ್ ತಾಲೂಕಿನ ಶೆಟ್ಟಿಹಳ್ಳಿಯ ವೇರ್‌ಹೌಸ್ ಬಳಿ ಯುವಕನ ಬರ್ಬರ ಕೊಲೆಯಾಗಿರುವ ಘಟನೆ ನಡೆದಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ 25 ವರ್ಷದ V.Y. ವಿನುತ್ ಎಂಬಾತನನ್ನು ಹತ್ಯೆ ಮಾಡಲಾಗಿದೆ.
ಕೆಲಸಕ್ಕೆ ತೆರಳುತ್ತಿದ್ದ ವೇಳೆ ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ ಎಸಗಲಾಗಿದ್ದು ಹಳೇ ದ್ವೇಷದ ಹಿನ್ನೆಲೆಯಲ್ಲಿ ವಿನುತ್ ಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಅತ್ತಿಬೆಲೆ ಠಾಣೆ ಪೊಲೀಸರ ಭೇಟಿ ಕೊಟ್ಟು ಪರಿಶೀಲನೆ ನಡೆಸಿದರು. ವಿನುತ್ ಬೆಸ್ತಮಾನಹಳ್ಳಿ ನಿವಾಸಿ ಎಂದು ಹೇಳಲಾಗಿದೆ. ಜಾಕಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.
Published On - 12:09 pm, Fri, 30 October 20