ವ್ಯವಹಾರ ವಿಚಾರಕ್ಕೆ ಶುರುವಾದ ಗಲಾಟೆ ಸಾವಿನಲ್ಲಿ ಅಂತ್ಯ, ಎಲ್ಲಿ?

| Updated By: ಸಾಧು ಶ್ರೀನಾಥ್​

Updated on: Jul 07, 2020 | 12:47 PM

ಉಡುಪಿ: ವ್ಯವಹಾರ ವಿಚಾರದಲ್ಲಿ ಶುರುವಾದ ಜಗಳದಲ್ಲಿ ಯುವಕನೊಬ್ಬನಿಗೆ ಚಾಕುವಿನಿಂದ ಇರಿದು ಕೊಲೆಮಾಡಿರುವ ಘಟನೆ ಪಟ್ಟಣದ ಲಕ್ಷ್ಮೀನಗರದಲ್ಲಿ ನಡೆದಿದೆ. ಕೊಲೆಯಾದ ಯುವಕ 28 ವರ್ಷದ ಯೋಗೀಶ್​ ಎಂದು ತಿಳಿದುಬಂದಿದೆ. ಯೋಗೀಶ್ ಮೀನುಗಾರಿಕಾ ವೃತ್ತಿಯಲ್ಲಿ ತೊಡಗಿದ್ದರು. ನಿನ್ನೆ ತಡರಾತ್ರಿ ನಡೆದ ಘಟನೆಯಲ್ಲಿ ಐವರು ಜನರ ಗುಂಪೊಂದು ಯೋಗೀಶ್ ಜೊತೆಗೆ ವ್ಯವಹಾರದ ವಿಚಾರವಾಗಿ ಗಲಾಟೆ ಆರಂಭಿಸಿತ್ತಂತೆ. ಈ ಮಧ್ಯೆ ಈ ಐವರು ಯುವಕನಿಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ಕೂಡಲೇ ಸ್ಥಳೀಯರು ಯೋಗೀಶ್​ನನ್ನ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಿಸದೆ […]

ವ್ಯವಹಾರ ವಿಚಾರಕ್ಕೆ ಶುರುವಾದ ಗಲಾಟೆ ಸಾವಿನಲ್ಲಿ ಅಂತ್ಯ, ಎಲ್ಲಿ?
Follow us on

ಉಡುಪಿ: ವ್ಯವಹಾರ ವಿಚಾರದಲ್ಲಿ ಶುರುವಾದ ಜಗಳದಲ್ಲಿ ಯುವಕನೊಬ್ಬನಿಗೆ ಚಾಕುವಿನಿಂದ ಇರಿದು ಕೊಲೆಮಾಡಿರುವ ಘಟನೆ ಪಟ್ಟಣದ ಲಕ್ಷ್ಮೀನಗರದಲ್ಲಿ ನಡೆದಿದೆ. ಕೊಲೆಯಾದ ಯುವಕ 28 ವರ್ಷದ ಯೋಗೀಶ್​ ಎಂದು ತಿಳಿದುಬಂದಿದೆ. ಯೋಗೀಶ್ ಮೀನುಗಾರಿಕಾ ವೃತ್ತಿಯಲ್ಲಿ ತೊಡಗಿದ್ದರು.

ನಿನ್ನೆ ತಡರಾತ್ರಿ ನಡೆದ ಘಟನೆಯಲ್ಲಿ ಐವರು ಜನರ ಗುಂಪೊಂದು ಯೋಗೀಶ್ ಜೊತೆಗೆ ವ್ಯವಹಾರದ ವಿಚಾರವಾಗಿ ಗಲಾಟೆ ಆರಂಭಿಸಿತ್ತಂತೆ. ಈ ಮಧ್ಯೆ ಈ ಐವರು ಯುವಕನಿಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ಕೂಡಲೇ ಸ್ಥಳೀಯರು ಯೋಗೀಶ್​ನನ್ನ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಿದ್ದರು.

ಆದರೆ, ಚಿಕಿತ್ಸೆ ಫಲಿಸದೆ ಯೋಗೀಶ್​ ಇಂದು ಸಾವನ್ನಪ್ಪಿದ್ದಾರೆ. ಇನ್ನು ಘಟನೆ ಸಂಬಂಧಪಟ್ಟಂತೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲು ಪೊಲೀಸರು ಮುಂದಾಗಿದ್ದಾರೆ.