ಗಣೇಶೋತ್ಸವದಲ್ಲಿ ಕಾಂತಾರಾ ಚಿತ್ರದ ಪಂಜುರ್ಲಿ ನೃತ್ಯ ಪ್ರದರ್ಶಿಸಿ ಎಲ್ಲರ ಮೆಚ್ಚುಗೆ ಗಳಿಸಿದ ಯುವಕ

| Updated By: ಸಾಧು ಶ್ರೀನಾಥ್​

Updated on: Sep 23, 2023 | 6:31 PM

ಕನ್ನಡ ಚಿತ್ರರಂಗದಲ್ಲಿ ದಾಖಲೆ ಸೃಷ್ಟಿಸಿರುವ ಕಾಂತಾರಾ ಚಿತ್ರದ ಹವಾ ಇನ್ನೂ ಕಡಿಮೆಯಾಗಿಲ್ಲ. ಪಂಜುರ್ಲಿ ದೈವದಂತೆ ಅವತಾರ ಧರಿಸಿ ನಿತಿನ್ ಸಾರ್ವಜನಿಕ ವೇದಿಕೆಯಲ್ಲಿ ನೃತ್ಯ ಮಾಡಿದ್ದು, ಸದ್ಯ ಈ ದೃಶ್ಯ ಸೋಷಿಯಲ್ ಮೀಡಿಯಾಗಳಲ್ಲಿ ಸಾಕಷ್ಟು ವೈರಲ್ ಆಗಿದೆ.

ಕಾರವಾರ, ಸೆಪ್ಟೆಂಬರ್​ 23: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲ್ಲೂಕಿನ ತಲಾಂದ್ ಗ್ರಾಮದಲ್ಲಿ ನಡೆದ ಗಣೇಶೋತ್ಸವ ಕಾರ್ಯಕ್ರಮದಲ್ಲಿ (Ganesha Chaturthi) ಯುವಕನೋರ್ವ ಕಾಂತಾರಾ (Kantara) ಚಿತ್ರದ ಪಂಜುರ್ಲಿ ನೃತ್ಯವನ್ನ (Panjurli dance) ಪ್ರದರ್ಶಿಸಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದಾನೆ. ಗ್ರಾಮದ ಸಾರ್ವಜನಿಕ ಗಣೇಶೋತ್ಸವ ಸಮಿತಿ ಆಯೋಜಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಯುವಕ ನಿತಿನ್ ನಾಯ್ಕ ಪಂಜುರ್ಲಿ ನೃತ್ಯದ ಮೂಲಕ ಎಲ್ಲರ ಗಮನ ಸೆಳೆದಿದ್ದಾನೆ.

ಕನ್ನಡ ಚಿತ್ರರಂಗದಲ್ಲಿ ದಾಖಲೆ ಸೃಷ್ಟಿಸಿರುವ ಕಾಂತಾರಾ ಚಿತ್ರದ ಹವಾ ಇನ್ನೂ ಕಡಿಮೆಯಾಗಿಲ್ಲ. ಪಂಜುರ್ಲಿ ದೈವದಂತೆ ಅವತಾರ ಧರಿಸಿ ನಿತಿನ್ ಸಾರ್ವಜನಿಕ ವೇದಿಕೆಯಲ್ಲಿ ನೃತ್ಯ ಮಾಡಿದ್ದು, ಸದ್ಯ ಈ ದೃಶ್ಯ ಸೋಷಿಯಲ್ ಮೀಡಿಯಾಗಳಲ್ಲಿ ಸಾಕಷ್ಟು ವೈರಲ್ ಆಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ