ಗಾಂಜಾ ಮತ್ತಿನಲ್ಲಿದ್ದ ಯುವಕರು ಗಲ್ಲಿಗಲ್ಲಿಯಲ್ಲಿ ಎಲ್ಲೆಂದರಲ್ಲಿ ಕಾರು ನುಗ್ಗಿಸಿ ಎಸ್ಕೇಪ್
ಬೆಂಗಳೂರು: ಬೆಂಗಳೂರಿನಲ್ಲಿ ಸೀಜ್ ಆದ ಗಾಂಜಾ ಪ್ರಕರಣ ದಿನೇ ದಿನೇ ಕಾವೇರುತ್ತಿದೆ. ಹೀಗಾಗಿ ಬೆಂಗಳೂರು ಪೊಲೀಸರು ಅವರವರ ಠಾಣಾ ವ್ಯಾಪ್ತಿಯಲ್ಲಿ ರಾತ್ರೋ ರಾತ್ರಿ ಕಾರ್ಯಾಚರಣೆ ಶುರುಮಾಡಿದ್ದಾರೆ. ಬೆಂಗಳೂರಿನ ಬಿಟಿಎಂ ಲೇಔಟ್ ಪೊಲೀಸರು ರಾತ್ರೋ ರಾತ್ರಿ ಕಾರ್ಯಾಚರಣೆ ನಡೆಸಿದ್ದು, ಕಾರಿನಲ್ಲಿ ಗಾಂಜಾ ಸೇವಿಸುತ್ತಿದ್ದ ಯುವಕರನ್ನು ಹಿಡಿಯುವ ಪ್ರಯತ್ನ ಮಾಡಿದ್ದಾರೆ. ಆದರೆ ಯುವಕರು ಪೊಲೀಸರನ್ನೇ ಯಾಮರಿಸಿ ತಪ್ಪಿಸಿಕೊಂಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬಿಟಿಎಂ ಲೇಔಟ್ ನಲ್ಲಿ ಯುವಕರು ಗಾಂಜಾ ಸೇವಿಸುತ್ತಿದ್ದಾರೆ ಎಂಬ ಮಾಹಿತಿ ಪೊಲೀಸರಿಗೆ ತಲುಪಿದೆ. ಕೂಡಲೇ ಕಾರ್ಯಾಚರಣೆಗಿಳಿದ ಪೊಲೀಸರು […]

ಬೆಂಗಳೂರು: ಬೆಂಗಳೂರಿನಲ್ಲಿ ಸೀಜ್ ಆದ ಗಾಂಜಾ ಪ್ರಕರಣ ದಿನೇ ದಿನೇ ಕಾವೇರುತ್ತಿದೆ. ಹೀಗಾಗಿ ಬೆಂಗಳೂರು ಪೊಲೀಸರು ಅವರವರ ಠಾಣಾ ವ್ಯಾಪ್ತಿಯಲ್ಲಿ ರಾತ್ರೋ ರಾತ್ರಿ ಕಾರ್ಯಾಚರಣೆ ಶುರುಮಾಡಿದ್ದಾರೆ.

ಬೆಂಗಳೂರಿನ ಬಿಟಿಎಂ ಲೇಔಟ್ ಪೊಲೀಸರು ರಾತ್ರೋ ರಾತ್ರಿ ಕಾರ್ಯಾಚರಣೆ ನಡೆಸಿದ್ದು, ಕಾರಿನಲ್ಲಿ ಗಾಂಜಾ ಸೇವಿಸುತ್ತಿದ್ದ ಯುವಕರನ್ನು ಹಿಡಿಯುವ ಪ್ರಯತ್ನ ಮಾಡಿದ್ದಾರೆ. ಆದರೆ ಯುವಕರು ಪೊಲೀಸರನ್ನೇ ಯಾಮರಿಸಿ ತಪ್ಪಿಸಿಕೊಂಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಬಿಟಿಎಂ ಲೇಔಟ್ ನಲ್ಲಿ ಯುವಕರು ಗಾಂಜಾ ಸೇವಿಸುತ್ತಿದ್ದಾರೆ ಎಂಬ ಮಾಹಿತಿ ಪೊಲೀಸರಿಗೆ ತಲುಪಿದೆ. ಕೂಡಲೇ ಕಾರ್ಯಾಚರಣೆಗಿಳಿದ ಪೊಲೀಸರು ಯುವಕರನ್ನು ಬಂಧಿಸಲು ಸ್ಥಳಕ್ಕೆ ತೆರಳಿದ್ದಾರೆ. ಪೊಲೀಸರನ್ನು ಕಂಡು ಎಚ್ಚೆತ್ತುಕೊಂಡ ಯುವಕರು ಕಾರಿನಲ್ಲಿ ಪರಾರಿಯಾಗಿದ್ದಾರೆ.
ಪರಾರಿಯಾದ ಯುವಕರನ್ನು ಪೊಲೀಸರು ಬೈಕ್‌ನಲ್ಲಿ ಹಿಂಬಾಲಿಸಿದ್ದಾರೆ. ಆದರೆ ಚಾಲಾಕಿ ಯುವಕರು ಪೊಲೀಸರಿಗೇ ಚಳ್ಳೆಹಣ್ಣು ತಿನ್ನಿಸಿ ಗಲ್ಲಿಯೊಳಗೆ ಕಾರ್ ನುಗ್ಗಿಸಿ ಪೊಲೀಸರ ಕೈಯಿಂದ ಎಸ್ಕೇಪ್ ಆಗಿದ್ದಾರೆ.




