ಖಾಸಗಿ ಆಸ್ಪತ್ರೆಯಲ್ಲಿ ಬೆಡ್ ಸಿಗದೆ ಮಾಜಿ ಶಾಸಕ ಕೊರೊನಾಗೆ ಬಲಿ: YSV ದತ್ತಾ ಆರೋಪ
ಶಿವಮೊಗ್ಗ: ಖಾಸಗಿ ಆಸ್ಪತ್ರೆಯಲ್ಲಿ ಸರಿಯಾದ ಸಮಯಕ್ಕೆ ಬೆಡ್ ಹಾಗೂ ವೆಂಟಿಲೇಟರ್ ಲಭ್ಯವಾಗದ ಕಾರಣ ಮಾಜಿ ಶಾಸಕ ಅಪ್ಪಾಜಿಗೌಡ ಕೊರೊನಾ ಸೋಂಕಿನಿಂದ ಮೃತಪಟ್ಟರು ಎಂದು ಜೆಡಿಎಸ್ ವಕ್ತಾರ ವೈಎಸ್ವಿ ದತ್ತ ಆರೋಪ ಮಾಡಿದ್ದಾರೆ. ಸರ್ಕಾರಿ ವ್ಯವಸ್ಥೆ ನಗೆಪಾಟಲಿಗೆ ಈಡಾಗಿದೆ ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಮಾಜಿ ಶಾಸಕರಾಗಿದ್ದ ಅಪ್ಪಾಜಿಗೌಡರವರು ಇತ್ತೀಚೆಗೆ ಕೊರೊನಾ ಸೋಂಕಿಗೆ ಬಲಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ವೈಎಸ್ ವಿ ದತ್ತ, ಅಪ್ಪಾಜಿಗೌಡರ ಅಕಾಲಿಕ ಮರಣ ಸಾಕಷ್ಟು ನೋವು ತಂದಿದೆ, ಅಪ್ಪಾಜಿಗೌಡರ ಸಾವಿಗೆ ರಾಜ್ಯ ಸರ್ಕಾರ ಹಾಗೂ […]

ಶಿವಮೊಗ್ಗ: ಖಾಸಗಿ ಆಸ್ಪತ್ರೆಯಲ್ಲಿ ಸರಿಯಾದ ಸಮಯಕ್ಕೆ ಬೆಡ್ ಹಾಗೂ ವೆಂಟಿಲೇಟರ್ ಲಭ್ಯವಾಗದ ಕಾರಣ ಮಾಜಿ ಶಾಸಕ ಅಪ್ಪಾಜಿಗೌಡ ಕೊರೊನಾ ಸೋಂಕಿನಿಂದ ಮೃತಪಟ್ಟರು ಎಂದು ಜೆಡಿಎಸ್ ವಕ್ತಾರ ವೈಎಸ್ವಿ ದತ್ತ ಆರೋಪ ಮಾಡಿದ್ದಾರೆ.
ಸರ್ಕಾರಿ ವ್ಯವಸ್ಥೆ ನಗೆಪಾಟಲಿಗೆ ಈಡಾಗಿದೆ ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಮಾಜಿ ಶಾಸಕರಾಗಿದ್ದ ಅಪ್ಪಾಜಿಗೌಡರವರು ಇತ್ತೀಚೆಗೆ ಕೊರೊನಾ ಸೋಂಕಿಗೆ ಬಲಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ವೈಎಸ್ ವಿ ದತ್ತ, ಅಪ್ಪಾಜಿಗೌಡರ ಅಕಾಲಿಕ ಮರಣ ಸಾಕಷ್ಟು ನೋವು ತಂದಿದೆ, ಅಪ್ಪಾಜಿಗೌಡರ ಸಾವಿಗೆ ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತದ ನಿರ್ಲಕ್ಷ್ಯವೇ ಕಾರಣವೆಂದಿದ್ದಾರೆ.
ಕೊರೊನಾ ಸೋಂಕು ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಒಬ್ಬ ಮಾಜಿ ಶಾಸಕನಿಗೆ ಖಾಸಗಿ ಆಸ್ಪತ್ರೆಯಲ್ಲಿ ಬೆಡ್ ಹಾಗೂ ವೆಂಟಿಲೇಟರ್ ಸಿಕ್ಕಿಲ್ಲ, ಹಾಗಾಗಿ ಕೊರೊನಾ ಸೋಂಕು ನಿಯಂತ್ರಿಸುವಲ್ಲಿ ಸರ್ಕಾರಿ ವ್ಯವಸ್ಥೆ ನಗೆಪಾಟಲಿಗೆ ಈಡಾಗಿದೆ ಎಂದು ಶಿವಮೊಗ್ಗದಲ್ಲಿ ಜೆಡಿಎಸ್ ವಕ್ತಾರ ವೈಎಸ್ವಿ ದತ್ತಾ ಹೇಳಿದ್ದಾರೆ.
ಇದನ್ನೂ ಓದಿ: ಭದ್ರಾವತಿ ಮಾಜಿ ಶಾಸಕ ಅಪ್ಪಾಜಿ ಗೌಡ ಕೊರೊನಾಗೆ ಬಲಿ