ಪ್ರಶಾಂತ್ ಸಂಬರಗಿ ವಿರುದ್ಧ ದೂರು ದಾಖಲಿಸಿದ ಶಾಸಕ ಜಮೀರ್
ಬೆಂಗಳೂರು: ಸ್ಯಾಂಡಲ್ವುಡ್ ಡ್ರಗ್ಸ್ ನಂಟು ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟಿ ಸಂಜನಾ ಮೇಲೆ ಮುರಿದುಕೊಂಡು ಬಿದ್ದಿರುವ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ವಿರುದ್ಧ ದೂರು ದಾಖಲಾಗಿದೆ. ಚಾಮರಾಜಪೇಟೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್, ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ವಿರುದ್ಧ ಚಾಮರಾಜಪೇಟೆ ಠಾಣೆಗೆ ದೂರು ನೀಡಿದ್ದಾರೆ. ದೂರಿನನ್ವಯ ಠಾಣೆ ಪೊಲೀಸರು ಪ್ರಶಾಂತ್ ಸಂಬರಗಿ ವಿರುದ್ಧ ಎನ್.ಸಿ.ಆರ್ ದಾಖಲಿಸಿಕೊಂಡಿದ್ದಾರೆ. ಮಾನನಷ್ಟ ಮೊಕದ್ದಮೆ: ಸ್ಯಾಂಡಲ್ವುಡ್ ಡ್ರಗ್ಸ್ ನಂಟು ಪ್ರಕರಣದಲ್ಲಿ ಪ್ರಶಾಂತ್ ಸಂಬರಗಿ ಅನಗತ್ಯವಾಗಿ ನನ್ನ ಹೆಸರನ್ನು ತಂದಿದ್ದಾರೆ. ಆಧಾರರಹಿತವಾಗಿ […]

ಬೆಂಗಳೂರು: ಸ್ಯಾಂಡಲ್ವುಡ್ ಡ್ರಗ್ಸ್ ನಂಟು ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟಿ ಸಂಜನಾ ಮೇಲೆ ಮುರಿದುಕೊಂಡು ಬಿದ್ದಿರುವ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ವಿರುದ್ಧ ದೂರು ದಾಖಲಾಗಿದೆ.
ಚಾಮರಾಜಪೇಟೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್, ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ವಿರುದ್ಧ ಚಾಮರಾಜಪೇಟೆ ಠಾಣೆಗೆ ದೂರು ನೀಡಿದ್ದಾರೆ. ದೂರಿನನ್ವಯ ಠಾಣೆ ಪೊಲೀಸರು ಪ್ರಶಾಂತ್ ಸಂಬರಗಿ ವಿರುದ್ಧ ಎನ್.ಸಿ.ಆರ್ ದಾಖಲಿಸಿಕೊಂಡಿದ್ದಾರೆ.
ಮಾನನಷ್ಟ ಮೊಕದ್ದಮೆ: ಸ್ಯಾಂಡಲ್ವುಡ್ ಡ್ರಗ್ಸ್ ನಂಟು ಪ್ರಕರಣದಲ್ಲಿ ಪ್ರಶಾಂತ್ ಸಂಬರಗಿ ಅನಗತ್ಯವಾಗಿ ನನ್ನ ಹೆಸರನ್ನು ತಂದಿದ್ದಾರೆ. ಆಧಾರರಹಿತವಾಗಿ ನನ್ನ ಮೇಲೆ ಆರೋಪಗಳನ್ನು ಹೊರಿಸಿದ್ದಾರೆ. ಇದರಿಂದ ನನ್ನ ಮಾನಹಾನಿ ಆಗಿದೆ. ಹಾಗಾಗಿ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುತ್ತಿದ್ದೇನೆ. ಅದನ್ವಯ ಪ್ರಶಾಂತ್ ಸಂಬರಗಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಅವರು ಮನವಿ ಮಾಡಿದ್ದಾರೆ.