ಊಟ ಕೊಡ್ರಪ್ಪಾ, ಹೊಡೀಬೇಡಿ: ಜೊಮ್ಯಾಟೋಗೆ ಪಾಠ ಹೇಳಿದ ನೆಟ್ಟಿಗರು

ಜೊಮ್ಯಾಟೊ ವಿವಾದ ದೊಡ್ಡ ಮಟ್ಟದಲ್ಲಿ ಚರ್ಚೆಗೆ ಕಾರಣವಾಗಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಟ್ವೀಟ್​ಗಳು ಕೂಡ ಹರಿದಾಡಿವೆ.

ಊಟ ಕೊಡ್ರಪ್ಪಾ, ಹೊಡೀಬೇಡಿ: ಜೊಮ್ಯಾಟೋಗೆ ಪಾಠ ಹೇಳಿದ ನೆಟ್ಟಿಗರು
ಸಾಂದರ್ಭಿಕ ಚಿತ್ರ
Follow us
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Mar 10, 2021 | 8:36 PM

ಘಟನೆ ಎಷ್ಟೇ ಗಂಭೀರವಾಗಿರಲಿ ಅಥವಾ ಎಷ್ಟೇ ಹಾಸ್ಯಾಸ್ಪದವಾಗಿರಲಿ. ಸಾಮಾಜಿಕ ಜಾಲತಾಣದಲ್ಲಿ ಮೀಮ್​ಗಳಂತೂ ಹರಿದಾಡೇ ಹರಿದಾಡುತ್ತವೆ. ಬೆಂಗಳೂರಿನಲ್ಲಿ ನಡೆದ ಜೊಮ್ಯಾಟೊ ವಿವಾದ ಕೂಡ ಅಷ್ಟೇ. ಡೆಲಿವರಿ ಬಾಯ್​ ಹೊಡೆದ ರಭಸಕ್ಕೆ ಹುಡುಗಿಯ ಮೂಗಲ್ಲಿ ರಕ್ತ ಸೋರುತ್ತಿತ್ತು. ಈ ಬಗ್ಗೆ ಕೆಲವರು ವಿಷಾದ ವ್ಯಕ್ತಪಡಿಸಿದರೆ, ಇನ್ನೂ ಕೆಲವರು ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್​ ಮಾಡಿದ್ದಾರೆ. ಇನ್ನೂ ಕೆಲವರು ಊಟ ಕೊಡ್ರಪ್ಪಾ, ಹೊಡೀಬೇಡಿ ಎಂದು ಜೊಮ್ಯಾಟೊಗೆ ಪಾಠ ಮಾಡಿದ್ದಾರೆ.

ಬೆಂಗಳೂರಿನ ಹಿತೇಶಾ ಚಂದ್ರಾಣಿ ಎಂಬ ಯುವತಿ ಒಂಟಿಯಾಗಿ ಮನೆಯಲ್ಲಿ ನೆಲೆಸಿದ್ದು, ಹಸಿವಾದಾಗ ಮಧ್ಯಾಹ್ನ 3.30ರ ಸುಮಾರಿಗೆ ಜೊಮ್ಯಾಟೋ ಆ್ಯಪ್​ ಮೂಲಕ ಊಟ ತರಿಸಿಕೊಳ್ಳಲು ಬುಕ್​ ಮಾಡಿದ್ದರು. ಆ್ಯಪ್​ನಲ್ಲಿ ತೋರಿಸಿದ ಸಮಯದ ಪ್ರಕಾರ ಊಟ ಮಧ್ಯಾಹ್ನ 4:30ಕ್ಕೆ ಬರಬೇಕಿತ್ತು. ಆದರೆ, ಊಟ ಬರೋದು ವಿಳಂಬವಾಗಿತ್ತು. ಈ ವಿಚಾರಕ್ಕೆ ಇಬ್ಬರ ನಡುವೆ ಜಗಳ ನಡೆದಿದೆ. ನಂತರ ಡೆಲಿವರಿ ಬಾಯ್​ ಮುಷ್ಠಿಯಿಂದ ಯುವತಿಯ ಮುಖಕ್ಕೆ ಬಲವಾಗಿ ಗುದ್ದಿ ಓಡಿ ಹೋಗಿದ್ದಾನೆ. ಈ ವಿಚಾರ ದೊಡ್ಡ ಮಟ್ಟದಲ್ಲಿ ಚರ್ಚೆಗೆ ಕಾರಣವಾಗಿದೆ. ಈಗ ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಸಾಕಷ್ಟು ಟ್ವೀಟ್​ಗಳು ಹರಿದಾಡಿವೆ.

ಈ ಬಗ್ಗೆ ರಾಜು ಎನ್ನುವ ವ್ಯಕ್ತಿ ಟ್ವೀಟ್​ ಒಂದನ್ನು ಮಾಡಿದ್ದಾರೆ. ಜೊಮ್ಯಾಟೊದವರು ಮೊದಲು ನಿಮ್ಮ ಡೆಲಿವರಿ ಬಾಯ್​ಗಳಿಗೆ ಮಹಿಳೆಯರಿಗೆ ಗೌರವ ನೀಡುವುದನ್ನು ಕಲಿಸಿ. ಆಹಾರ ನೀಡಿ, ಹೊಡೆತವನ್ನಲ್ಲ ಎಂದು ಬರೆದುಕೊಂಡಿದ್ದಾರೆ. ಇನ್ನೂ ಒಂದಿಷ್ಟು ಜನರು ತಮಗೆ ತೋಚಿದಂತೆ ಈ ಪ್ರಕರಣಕ್ಕೆ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: ಮಹಿಳೆ ಮೇಲೆ ಹಲ್ಲೆಗೈದಿದ್ದ ಜೊಮ್ಯಾಟೊ ಫುಡ್ ಡೆಲಿವರಿ ಬಾಯ್ ಕಾಮರಾಜು ಅರೆಸ್ಟ್​

ನಿಗದಿತ ಸಮಯಕ್ಕೆ ಬಾರದ ಊಟ; ಪ್ರಶ್ನಿಸಿದ್ದಕ್ಕೆ ಯುವತಿಯ ಮೂಗು ಮುರಿದ ಜೊಮ್ಯಾಟೋ ಡೆಲಿವರಿ ಬಾಯ್​

ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ