AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yoga Asanas: ಉತ್ತಮ ಆರೋಗ್ಯಕ್ಕೆ ಈ 5 ಆಸನಗಳೇ ಮದ್ದು!

ಜಡ ಜೀವನಶೈಲಿಯನ್ನು ನಡೆಸುವವರು ಪ್ರತಿದಿನ ಯೋಗಾಭ್ಯಾಸ ಮಾಡಬೇಕು. ಇದು ದೇಹವನ್ನು ಆರೋಗ್ಯಕರವಾಗಿಸುವುದಲ್ಲದೆ ಮನಸ್ಸಿಗೆ ಶಾಂತಿ ಮತ್ತು ಸಂತೋಷ ನೀಡಲು ಸಹಾಯ ಮಾಡುತ್ತದೆ, ಎಂದು ತಜ್ಞರು ಹೇಳುತ್ತಾರೆ. ಹಾಗಾಗಿ "ಕೇವಲ 30 ನಿಮಿಷಗಳಾದರೂ ಯೋಗ ಮಾಡುವುದಕ್ಕೆ ಸಮಯ ನೀಡಬೇಕು" ಎಂದು ಸೆಲೆಬ್ರಿಟಿ ಯೋಗ ಮತ್ತು ಸಮಗ್ರ ಸ್ವಾಸ್ಥ್ಯ ತಜ್ಞ ಅಂಶುಕಾ ಪರ್ವಾನಿ ತಮ್ಮ ಇನ್ಸ್ಟಾ ಖಾತೆಯಲ್ಲಿ ವಿವರವಾಗಿ ಹಂಚಿಕೊಂಡಿದ್ದಾರೆ.

Yoga Asanas: ಉತ್ತಮ ಆರೋಗ್ಯಕ್ಕೆ ಈ 5 ಆಸನಗಳೇ ಮದ್ದು!
5 Yoga Asanas you must practice
ಪ್ರೀತಿ ಭಟ್​, ಗುಣವಂತೆ
| Edited By: |

Updated on: May 08, 2024 | 6:03 PM

Share

ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಲು ನಿಯಮಿತ ಯೋಗಾಭ್ಯಾಸ ಮಾಡುವುದು ಅಗತ್ಯ. ವಿಶೇಷವಾಗಿ ಜಡ ಜೀವನಶೈಲಿಯನ್ನು ನಡೆಸುವವರು ಪ್ರತಿದಿನ ಯೋಗಾಭ್ಯಾಸ ಮಾಡಬೇಕು. ಇದು ದೇಹವನ್ನು ಆರೋಗ್ಯಕರವಾಗಿಸುವುದಲ್ಲದೆ ಮನಸ್ಸಿಗೆ ಶಾಂತತೆ ಮತ್ತು ಸಂತೋಷ ನೀಡಲು ಸಹಾಯ ಮಾಡುತ್ತದೆ ಎಂದು ತಜ್ಞರು ಹೇಳುತ್ತಾರೆ. “ಯೋಗ ಕೇವಲ ಒಂದು ಗಂಟೆಯ ತಾಲೀಮು ಅಲ್ಲ, ಅದು ಒಂದು ರೀತಿಯ ಜೀವನಶೈಲಿ. ನಮ್ಮಲ್ಲಿ ಹೆಚ್ಚಿನವರು ತಮ್ಮ ಯೋಗಕ್ಷೇಮ ಮತ್ತು ಆರೋಗ್ಯ ಕಾಪಾಡಿಕೊಳ್ಳಲು ಸಮಯವಿಲ್ಲದ ಕಾರ್ಯನಿರತ ಜೀವನವನ್ನು ನಡೆಸುತ್ತಿದ್ದಾರೆ. ಆದರೆ, ಇಂತಹ ಜೀವನಶೈಲಿಗೆ ಆದ್ಯತೆ ನೀಡದೆಯೇ ಕೇವಲ 30 ನಿಮಿಷಗಳಾದರೂ ಸಹ ಯೋಗ ಮಾಡುವುದಕ್ಕೆ ಸಮಯ ನೀಡಬೇಕು” ಎಂದು ಸೆಲೆಬ್ರಿಟಿ ಯೋಗ ಮತ್ತು ಸಮಗ್ರ ಸ್ವಾಸ್ಥ್ಯ ತಜ್ಞ ಅಂಶುಕಾ ಪರ್ವಾನಿ ತಮ್ಮ ಇನ್ಸ್ಟಾ ಖಾತೆಯಲ್ಲಿ ವಿವರವಾಗಿ ಹಂಚಿಕೊಂಡಿದ್ದಾರೆ.

ಇಡೀ ದೇಹದ ಸ್ನಾಯುಗಳನ್ನು ಬಲಪಡಿಸಲು ಸಹಾಯ ಮಾಡುವ ಕೆಲವು ಆಸನಗಳು ಇಲ್ಲಿವೆ:

  1. ಮಾರ್ಜಾಲ ಆಸನ: ಇದು ಬೆನ್ನುಮೂಳೆ ಮತ್ತು ಕುತ್ತಿಗೆ ಭಾಗಕ್ಕೆ ಬಲ ನೀಡುತ್ತದೆ. ಈ ಭಂಗಿ ಒತ್ತಡವನ್ನು ನಿವಾರಿಸಲು ಸಹಾಯ ಮಾಡುತ್ತದೆ ಮತ್ತು ಮನಸ್ಸನ್ನು ಶಾಂತವಾಗಿಸುತ್ತದೆ.
  2. ಅಧೋ ಮುಖ ಶ್ವಾನಾಸನ: ಈ ಭಂಗಿಯು ತೋಳುಗಳು, ಭುಜಗಳು ಮತ್ತು ಬೆನ್ನಿನ ಸ್ನಾಯುಗಳನ್ನು ಬಲಪಡಿಸುತ್ತದೆ, ಜೊತೆಗೆ ಕೈಗಳು, ಮಣಿಕಟ್ಟು ಮತ್ತು ಬೆರಳುಗಳನ್ನು ಕೂಡ ಬಲಪಡಿಸುತ್ತದೆ.
  3. ಭುಜಂಗಾಸನ: ಎದೆ, ಭುಜಗಳು ಮತ್ತು ಕಿಬ್ಬೊಟ್ಟೆಯ ಪ್ರದೇಶದ ಸ್ನಾಯುಗಳನ್ನು ಹಿಗ್ಗಿಸುತ್ತದೆ ಮತ್ತು ಬಲಪಡಿಸುತ್ತದೆ. ಕೆಳ ಬೆನ್ನಿನಲ್ಲಿ ನೋವಿದ್ದರೆ ಅದನ್ನು ಕಡಿಮೆ ಮಾಡುತ್ತದೆ.
  4. ಮಲಾಸನ: ಸೊಂಟದ ನೋವನ್ನು ಕಡಿಮೆ ಮಾಡುತ್ತದೆ, ಮಲಬ್ಧತೆಯ ಸಮಸ್ಯೆ ಇದ್ದಲ್ಲಿ ಅದನ್ನು ನಿವಾರಣೆ ಮಾಡುತ್ತದೆ. ಗ್ಯಾಸ್ ಸಮಸ್ಯೆ ಇದ್ದರೂ ಕೂಡ ನಿವಾರಣೆಯಾಗುತ್ತದೆ. ಮಲಾಸನವು ಮಹಿಳೆಯರಿಗೆ ತುಂಬಾ ಪ್ರಯೋಜನಕಾರಿಯಾಗಿದೆ.
  5. ಸೇತುವೆಯ ಭಂಗಿ: ಇದು ಬೆನ್ನುಮೂಳೆಯ ಸ್ನಾಯುಗಳನ್ನು ಬಲಪಡಿಸುತ್ತದೆ ಮತ್ತು ಮೇಲಿನ ಬೆನ್ನು ಮತ್ತು ಕುತ್ತಿಗೆ ನೋವನ್ನು ನಿವಾರಿಸಲು ಸಹಾಯ ಮಾಡುತ್ತದೆ.

ಈ ಬಗ್ಗೆ ನಿಮ್ಮ ವೈದ್ಯರನ್ನು ಸಂಪರ್ಕಿಸಿ ಸಲಹೆ ಪಡೆದುಕೊಂಡು ಆರೋಗ್ಯಕ್ಕೆ ಆದ್ಯತೆ ನೀಡುವ ಅಭ್ಯಾಸವನ್ನು ರೂಢಿಸಿಕೊಳ್ಳಿ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು