International Tiger Day 2023: ಕರ್ನಾಟಕದಲ್ಲಿ ಹುಲಿಗಳ ಸಂಖ್ಯೆ 435ಕ್ಕೆ ಏರಿಕೆ: ಸಮೀಕ್ಷೆ

ಪ್ರತಿ ವರ್ಷ ಜುಲೈ 29 ರಂದು ಅಂತರಾಷ್ಟ್ರೀಯ ಹುಲಿ ದಿನವನ್ನು ಆಚರಿಸಲಾಗುತ್ತದೆ. ಈ ವಿಶೇಷ ದಿನದ ಅಂಗವಾಗಿ ಅರಣ್ಯ ಸಚಿವ ಈಶ್ವರ ಖಂಡ್ರೆ ಗುರುವಾರ (ಜು.27) ಕರ್ನಾಟಕದ ಒಟ್ಟು ಹುಲಿಗಳ ಅಂಕಿಅಂಶಗಳನ್ನು ಬಿಡುಗಡೆ ಮಾಡಿದ್ದಾರೆ.

International Tiger Day 2023: ಕರ್ನಾಟಕದಲ್ಲಿ ಹುಲಿಗಳ ಸಂಖ್ಯೆ 435ಕ್ಕೆ ಏರಿಕೆ: ಸಮೀಕ್ಷೆ
International Tiger Day 2023Image Credit source: Unsplash
Follow us
|

Updated on:Jul 29, 2023 | 12:59 PM

2018-22ರ ಸಮೀಕ್ಷೆಯ ಅಂಕಿ ಅಂಶಗಳ ಪ್ರಕಾರ, ಕರ್ನಾಟಕದ ಐದು ಹುಲಿ ಸಂರಕ್ಷಿತ ಪ್ರದೇಶಗಳ ಪೈಕಿ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶವು ಅತಿ ಹೆಚ್ಚು ಅಂದರೆ 149 ಹುಲಿಗಳಿದ್ದು, ನಂತರದ ಸ್ಥಾನದಲ್ಲಿ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ 143 ಹುಲಿಗಳಿವೆ ಎಂದು ವರದಿ ಮಾಡಿದೆ. ಇದರಿಂದ ಒಟ್ಟಾರೆಯಾಗಿ ಕರ್ನಾಟಕದಲ್ಲಿ 2022 ರ ಹೊತ್ತಿಗೆ ಹುಲಿಗಳ ಸಂಖ್ಯೆ 435 ಕ್ಕೆ ಏರಿದೆ ಎಂದು ಸಮೀಕ್ಷೆ ಬಹಿರಂಗ ಪಡಿಸಿದೆ. ಕರ್ನಾಟಕ ಅರಣ್ಯ ಇಲಾಖೆ ಪ್ರಕಾರ, 2018ಕ್ಕೆ ಹೋಲಿಸಿದರೆ 2022ರ ಹೊತ್ತಿಗೆ ಟ್ರ್ಯಾಪ್ ಕ್ಯಾಮೆರಾ ವಿಧಾನದ ಗಣತಿಯ ಪ್ರಕಾರ ರಾಜ್ಯದ ಹುಲಿಗಳ ಸಂಖ್ಯೆ 404 ರಿಂದ 435 ಕ್ಕೆ ಏರಿಕೆಯಾಗಿದೆ.

ಪ್ರತಿ ವರ್ಷ ಜುಲೈ 29 ರಂದು ಅಂತರಾಷ್ಟ್ರೀಯ ಹುಲಿ ದಿನವನ್ನು ಆಚರಿಸಲಾಗುತ್ತದೆ. ಈ ವಿಶೇಷ ದಿನದ ಅಂಗವಾಗಿ ಅರಣ್ಯ ಸಚಿವ ಈಶ್ವರ ಖಂಡ್ರೆ ಗುರುವಾರ (ಜು.27)ರಂದು ಅಖಿಲ ಭಾರತ ಹುಲಿ ಅಂದಾಜು (ಎಐಟಿಇ) 2022ರ ಅಂಕಿಅಂಶಗಳನ್ನು ಬಿಡುಗಡೆ ಮಾಡಿದ್ದಾರೆ. ಅಂತರಾಷ್ಟ್ರೀಯ ಹುಲಿ ದಿನಾಚರಣೆಗೂ ಮುನ್ನ ರಾಜ್ಯದ 31 ಜಿಲ್ಲೆಗಳಲ್ಲಿ ಅರಣ್ಯ ಇಲಾಖೆಯು ಎಲ್ಲಾ 37 ಅರಣ್ಯ ವಿಭಾಗಗಳಲ್ಲಿ ಹುಲಿ ಅಂದಾಜು ಕಾರ್ಯವನ್ನು ನಡೆಸಿತ್ತು.

ಇದನ್ನೂ ಓದಿ: International Tiger Day 2023: ಅಂತರಾಷ್ಟ್ರೀಯ ಹುಲಿ ದಿನವನ್ನು ಏಕೆ ಆಚರಿಸಲಾಗುತ್ತದೆ? ಇಲ್ಲಿದೆ ಮಾಹಿತಿ

ಆದಾಗ್ಯೂ, ಶನಿವಾರದಂದು ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಮತ್ತು ಭಾರತೀಯ ವನ್ಯಜೀವಿ ಸಂಸ್ಥೆಯು ಅಖಿಲ ಭಾರತ ಹುಲಿ ಗಣತಿ ವರದಿಯನ್ನು ಬಿಡುಗಡೆ ಮಾಡಿದಾಗ ನಿಖರವಾದ ಅಂಕಿ ಅಂಶ ತಿಳಿದುಬಂದಿದೆ. 2018 ರಲ್ಲಿ ಕರ್ನಾಟಕವು 524 ಹುಲಿಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದರೆ, ಮಧ್ಯಪ್ರದೇಶವು 526 ನೊಂದಿಗೆ ಅಗ್ರ ಸ್ಥಾನವನ್ನು ಪಡೆದುಕೊಂಡಿದೆ. ಅಂಕಿಅಂಶಗಳ ಪ್ರಕಾರ, ರಾಜ್ಯದ ಐದು ಹುಲಿ ಸಂರಕ್ಷಿತ ಪ್ರದೇಶಗಳ ಪೈಕಿ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಅತಿ ಹೆಚ್ಚು ಹುಲಿಗಳ ಸಂಖ್ಯೆ 149, ನಂತರದ ಸ್ಥಾನದಲ್ಲಿ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ (ಬಿಟಿಆರ್) 143 ಹುಲಿಗಳನ್ನು ಹೊಂದಿದೆ. ಜೊತೆಗೆ ಬಿಳಿಗಿರ ರಂಗ ದೇವಾಲಯ (ಬಿಆರ್‌ಟಿ) ಹುಲಿ ಸಂರಕ್ಷಿತ ಪ್ರದೇಶದಲ್ಲಿ 39 ಹುಲಿಗಳು, ಭದ್ರಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ 26 ಮತ್ತು ಕಾಳಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ 19 ಹುಲಿಗಳು ವರದಿಯಾಗಿವೆ.

ಜೀವನಶೈಲಿಗೆ  ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 12:58 pm, Sat, 29 July 23

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್