Air Pollution: ಶ್ವಾಸಕೋಶವನ್ನು ಮಾಲಿನ್ಯದಿಂದ ರಕ್ಷಿಸಲು ಈ 7 ಆಹಾರ ಪದಾರ್ಥಗಳನ್ನು ಸೇವಿಸಿ

ಶ್ವಾಸಕೋಶವನ್ನು ರಕ್ಷಿಸಲು ಮತ್ತು ಉಸಿರಾಟದ ಸಮಸ್ಯೆಯಿಂದ ಹೊರಬರಲು ನಿಮ್ಮ ಆಹಾರದಲ್ಲಿ ಪೌಷ್ಟಿಕಾಂಶ ಭರಿತ ಪದಾರ್ಥಗಳನ್ನು ಸೇರಿಸುವುದು ಉತ್ತಮ.

Air Pollution: ಶ್ವಾಸಕೋಶವನ್ನು ಮಾಲಿನ್ಯದಿಂದ ರಕ್ಷಿಸಲು ಈ 7 ಆಹಾರ ಪದಾರ್ಥಗಳನ್ನು ಸೇವಿಸಿ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಆಯೇಷಾ ಬಾನು

Updated on: Nov 29, 2021 | 8:35 AM

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಾಲಿನ್ಯದಿಂದಾಗಿ ಜನರು ಉಸಿರಾಡಲು ತೊಂದರೆ ಅನುಭವಿಸುತ್ತಿದ್ದಾರೆ. ಇದು ಕೇವಲ ದೆಹಲಿಗೆ ಮಾತ್ರ ಸೀಮಿತವಾಗಿಲ್ಲ. ಇನ್ನಿತರ ಪ್ರದೇಶಗಳಲ್ಲೂ ವಾಯು ಮಾಲಿನ್ಯದಂತಹ (Air pollution) ಸಮಸ್ಯೆ ಇದೆ. ದೀರ್ಘಕಾಲದ ಬ್ರಾಂಕೈಟಿಸ್‌ನಿಂದ ಬಳತ್ತಿರುವವರು, ಹೃದ್ರೋಗ ಸಮಸ್ಯೆ ಮತ್ತು ಮಧುಮೇಹದ ಇರುವವರು ಎಚ್ಚರಿಕೆ ವಹಿಸಬೇಕು. ಇಂತಹ ಪರಿಸ್ಥಿತಿಯಲ್ಲಿ ಶ್ವಾಸಕೋಶವನ್ನು ರಕ್ಷಿಸಲು ಮತ್ತು ಉಸಿರಾಟದ ಸಮಸ್ಯೆಯಿಂದ ಹೊರಬರಲು ನಿಮ್ಮ ಆಹಾರದಲ್ಲಿ ಪೌಷ್ಟಿಕಾಂಶ ಭರಿತ ಪದಾರ್ಥಗಳನ್ನು ಸೇರಿಸುವುದು ಉತ್ತಮ.

ಶ್ವಾಸಕೋಶವನ್ನು ಮಾಲಿನ್ಯದಿಂದ ರಕ್ಷಿಸಲು ಈ 7 ಆಹಾರ ಪದಾರ್ಥಗಳನ್ನು ಸೇವಿಸಿ ಬೆಲ್ಲ ಆಯುರ್ವೇದದಲ್ಲಿ ಬೆಲ್ಲದ ಸೇವನೆಯು ಶ್ವಾಸಕೋಶಕ್ಕೆ ಸಂಬಂಧಿಸಿದ ಕಾಯಿಲೆಗಳಲ್ಲಿ ಬಹಳ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಇದು ಉಸಿರಾಟದ ತೊಂದರೆಗಳನ್ನು ತಡೆಯಲು ಸಹಾಯ ಮಾಡುತ್ತದೆ. ಬೆಲ್ಲವು ಶ್ವಾಸನಾಳದ ಸ್ನಾಯುಗಳು ವಿಶ್ರಾಂತಿ ಪಡೆಯಲು ಸಹಾಯ ಮಾಡುತ್ತದೆ. ಉಸಿರಾಟವನ್ನು ಸುಲಭಗೊಳಿಸುತ್ತದೆ ಮತ್ತು ಶ್ವಾಸಕೋಶದಲ್ಲಿ ಗಾಳಿಯ ಹರಿವನ್ನು ಹೆಚ್ಚಿಸುತ್ತದೆ.

ಮೀನು ಮೀನು ಕೊಬ್ಬಿನಲ್ಲಿ ಸಮೃದ್ಧವಾಗಿವೆ ಮತ್ತು ಒಮೆಗಾ -3 ಕೊಬ್ಬಿನಾಮ್ಲಗಳ ಅತ್ಯುತ್ತಮ ಮೂಲವಾಗಿದೆ. ಇದು ಶ್ವಾಸಕೋಶವನ್ನು ಆರೋಗ್ಯವಾಗಿಡಲು ಸಹಾಯ ಮಾಡುತ್ತದೆ. ಇವುಗಳನ್ನು ಪಾಲಿ-ಅನ್‌ಸ್ಯಾಚುರೇಟೆಡ್ ಕೊಬ್ಬಿನಾಮ್ಲಗಳು ಎಂದೂ ಕರೆಯುತ್ತಾರೆ. ಇದು ಆಂಟಿಕಾರ್ಸಿನೋಜೆನಿಕ್ ಮತ್ತು ಆಂಟಿಆಕ್ಸಿಡೇಟಿವ್ ಗುಣಲಕ್ಷಣಗಳಿಂದ ಸಮೃದ್ಧವಾಗಿದೆ. ಈ ಎಲ್ಲಾ ಗುಣಲಕ್ಷಣಗಳು ಶ್ವಾಸಕೋಶದ ಕಾಯಿಲೆಗಳು ಮತ್ತು ವಾಯು ಮಾಲಿನ್ಯದ ಹಾನಿಕಾರಕ ಪರಿಣಾಮಗಳಿಂದ ರಕ್ಷಿಸುತ್ತವೆ.

ಸೇಬು ಅಧ್ಯಯನದ ಪ್ರಕಾರ, ನಿಯಮಿತವಾಗಿ ಸೇಬು ತಿನ್ನುವುದು ಶ್ವಾಸಕೋಶವನ್ನು ಆರೋಗ್ಯಕರವಾಗಿರಿಸುತ್ತದೆ. ಸೇಬು ತಿನ್ನುವುದರಿಂದ ಶ್ವಾಸಕೋಶದ ಕೆಲಸ ಮಾಡುವ ಸಾಮರ್ಥ್ಯ ಹೆಚ್ಚುತ್ತದೆ. ಆಸ್ತಮಾ ಮತ್ತು ಶ್ವಾಸಕೋಶದ ಕ್ಯಾನ್ಸರ್ ಸಾಧ್ಯತೆಗಳನ್ನು ಇದು ಕಡಿಮೆ ಮಾಡುತ್ತದೆ.

ವಾಲ್ನಟ್ ಇದು ಒಮೆಗಾ -3 ಕೊಬ್ಬಿನಾಮ್ಲಗಳ ಮತ್ತೊಂದು ಶ್ರೀಮಂತ ಮೂಲವಾಗಿದೆ. ವಾಲ್ನಟ್​ನ ನಿಯಮಿತ ಸೇವನೆಯು ಆಸ್ತಮಾ ಮತ್ತು ಇತರ ಉಸಿರಾಟದ ಸಮಸ್ಯೆಯ ವಿರುದ್ಧ ಹೋರಾಡಲು ಸಹಾಯಕವಾಗಿದೆ.

ಬೀಟ್ರೂಟ್ ಇದು ಶ್ವಾಸಕೋಶದ ಕಾರ್ಯನಿರ್ವಹಣೆಗೆ ಪ್ರಯೋಜನಕಾರಿಯಾದ ನೈಟ್ರೇಟ್ ಅಂಶಗಳನ್ನು ಒಳಗೊಂಡಿದೆ. ತಜ್ಞರ ಪ್ರಕಾರ, ನೈಟ್ರೇಟ್‌ಗಳು ರಕ್ತನಾಳಗಳನ್ನು ವಿಶ್ರಾಂತಿ ಪಡೆಯಲು, ರಕ್ತದೊತ್ತಡವನ್ನು ಕಡಿಮೆ ಮಾಡಲು ಮತ್ತು ಆಮ್ಲಜನಕದ ಹೀರಿಕೊಳ್ಳುವಿಕೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಇದರ ಜೊತೆಗೆ, ಬೀಟ್ರೂಟ್​ನಲ್ಲಿ ಮೆಗ್ನೀಸಿಯಮ್, ಪೊಟ್ಯಾಸಿಯಮ್, ವಿಟಮಿನ್ ಸಿ ಮತ್ತು ಕ್ಯಾರೊಟಿನಾಯ್ಡ್ ಆಂಟಿಆಕ್ಸಿಡೆಂಟ್​ಗಳು ಸಮೃದ್ಧವಾಗಿವೆ. ಇದು ಶ್ವಾಸಕೋಶದ ಆರೋಗ್ಯಕ್ಕೆ ಅವಶ್ಯಕವಾಗಿದೆ.

ಬೆಳ್ಳುಳ್ಳಿ ಇದರಲ್ಲಿ ಅಲಿಸಿನ್ ಸಮೃದ್ಧವಾಗಿದೆ. ಇದು ಉರಿಯೂತದ ವಿರುದ್ಧ ಹೋರಾಡುವ ಗುಣಲಕ್ಷಣಗಳನ್ನು ಹೊಂದಿದೆ. ಬೆಳ್ಳುಳ್ಳಿ ಸ್ವತಂತ್ರ ರಾಡಿಕಲ್​ಗಳಿಂದ ಉಂಟಾಗುವ ಹಾನಿಯನ್ನು ಕಡಿಮೆ ಮಾಡುತ್ತದೆ. ಬೆಳ್ಳುಳ್ಳಿಯ ನಿಯಮಿತ ಸೇವನೆಯು ಸೋಂಕು ಮತ್ತು ಉರಿಯೂತದ ಅಪಾಯವನ್ನು ಕಡಿಮೆ ಮಾಡುತ್ತದೆ. ಇದು ಅಸ್ತಮಾ ಅಥವಾ ಬ್ರಾಂಕೈಟಿಸ್‌ನಂತಹ ಉಸಿರಾಟದ ಅಸ್ವಸ್ಥತೆಗಳಿಂದ ದೂರ ಇಡುತ್ತದೆ.

ಅರಿಶಿಣ ಅರಿಶಿಣದಲ್ಲಿ ಕರ್ಕ್ಯುಮಿನ್ ಎಂಬ ಅಂಶವಿದೆ. ಇದು ಉರಿಯೂತದ ಗುಣಲಕ್ಷಣಗಳನ್ನು ಹೊಂದಿದೆ. ಇದು ಸೋಂಕು ಮತ್ತು ರೋಗಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಇದರ ಸೇವನೆಯು ಶ್ವಾಸಕೋಶದ ಕಾರ್ಯ ಸಾಮರ್ಥ್ಯವನ್ನು ಸುಧಾರಿಸುತ್ತದೆ. ನೀವು ಹಾಲಿಗೆ ಅರಿಶಿಣ ಬೆರೆಸಿ ಸೇವಿಸಬಹುದು.

ಇದನ್ನೂ ಓದಿ: ಶುಂಠಿ ನೀರು ಕುಡಿಯುವ ಅಭ್ಯಾಸ ಇದೆಯೇ? ಆರೋಗ್ಯಕರ ಬದಲಾವಣೆಯ ಬಗ್ಗೆ ತಿಳಿಯಿರಿ

Health Tips: ನಿದ್ರೆಯಿಂದ ಖಿನ್ನತೆ ಹೆಚ್ಚಾಗುತ್ತಾ?; ನಿದ್ರೆಗೂ ಮಾನಸಿಕ ಆರೋಗ್ಯಕ್ಕೂ ಇರುವ ನಂಟೇನು?

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ