AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಗ್ಯಕರ ಜೀವನ ನಿಮ್ಮದಾಗಲು ಬೆಳಗಿನ ದಿನಚರಿಯಲ್ಲಿ ಈ ಅಭ್ಯಾಸಗಳನ್ನು ರೂಢಿಸಿಕೊಳ್ಳಿ

ಆರೋಗ್ಯಕರವಾದ ಜೀವನವನ್ನು ನಡೆಸಬೇಕು ಎಂಬ ಆಸೆ ಎಲ್ಲರಿಗೂ ಇರುತ್ತದೆ. ಆದರೆ ಕೆಲವೇ ಕೆಲವು ಜನ ಮಾತ್ರ ಈ ಗುರಿಯನ್ನು ಸಾಧಿಸುತ್ತಾರೆ. ಇದೇ ರೀತಿ ನೀವು ಕೂಡ ಆರೋಗ್ಯವಾಗಿರಲು ಮತ್ತು ದೀರ್ಘಕಾಲ ಬದುಕಲು ಬಯಸಿದರೆ, ನಿಮ್ಮ ಅಭ್ಯಾಸಗಳಲ್ಲಿ ಕೆಲವು ಬದಲಾವಣೆಗಳನ್ನು ಮಾಡಿ, ಅದರಲ್ಲೂ ಬೆಳಗಿನ ದಿನಚರಿಯಲ್ಲಿ ಈ ಕೆಲವೊಂದು ಅಭ್ಯಾಸಗಳನ್ನು ತಪ್ಪದೇ ಪಾಲಿಸಿ. ಉತ್ತಮ ಆರೋಗ್ಯಕ್ಕೆ ಬೆಳಗಿನ ದಿನಚರಿಯಲ್ಲಿ ಏನೆಲ್ಲ ಪಾಲಿಸಬೇಕು ಎಂಬುದರ ಸಂಕ್ಷಿಪ್ತ ಮಾಹಿತಿ ಇಲ್ಲಿದೆ.

ಆರೋಗ್ಯಕರ ಜೀವನ ನಿಮ್ಮದಾಗಲು ಬೆಳಗಿನ ದಿನಚರಿಯಲ್ಲಿ ಈ ಅಭ್ಯಾಸಗಳನ್ನು ರೂಢಿಸಿಕೊಳ್ಳಿ
ಸಾಂದರ್ಭಿಕ ಚಿತ್ರ Image Credit source: Getty Images
ಮಾಲಾಶ್ರೀ ಅಂಚನ್​
|

Updated on: Jun 20, 2026 | 9:34 AM

Share

ಯಾವುದೇ ರೋಗ ರುಜಿನಗಳಿಲ್ಲದೆ ಆರೋಗ್ಯಕರ ಜೀವನ (healthy life) ನಡೆಸಬೇಕು, ಫಿಟ್‌ ಆಂಡ್‌ ಫೈನ್‌ ಆಗಿರಬೇಕು ಎಂಬ ಆಸೆ ಎಲ್ಲರಿಗೂ ಇದ್ದೇ ಇರುತ್ತದೆ. ಆದರೆ ಇಂದಿನ ಬ್ಯುಸಿ ಜೀವನದಲ್ಲಿ ಅನೇಕರಿಗೆ ಇದನ್ನು ಸಾಧಿಸಲು ಸಾಧ್ಯವಾಗುತ್ತಿಲ್ಲ. ಯಾವಾಗಲೂ ಗಡಿಬಿಡಿಯಲ್ಲೇ ಇರುತ್ತಾರೆ. ಇದು ಖಂಡಿತವಾಗಿಯೂ ಒತ್ತಡವನ್ನು ಉಂಟು ಮಾಡುತ್ತದೆ. ಈ ಒತ್ತಡ ದೈಹಿಕ ಮತ್ತು ಮಾನಸಿಕ ಆರೋಗ್ಯ ಎರಡರ ಮೇಲೂ ಪರಿಣಾಮವನ್ನು ಬೀರುತ್ತದೆ. ಹೀಗಿರುವಾಗ ಜೀವನಶೈಲಿಯಲ್ಲಿ ಕೆಲವೊಂದು ಬದಲಾವಣೆಗಳನ್ನು ಮಾಡುವ ಮೂಲಕ ಆರೋಗ್ಯಕರ ಜೀವನವನ್ನು ನಡೆಸಬಹುದು. ಮುಖ್ಯವಾಗಿ ಬೆಳಗಿನ ದಿನಚರಿಯಲ್ಲಿ ಈ ಕೆಲವೊಂದು ಅಭ್ಯಾಸಗಳನ್ನು ಪಾಲಿಸಿ. ಇವುಗಳನ್ನು ಅಳವಡಿಸಿಕೊಳ್ಳುವುದರಿಂದ ನಿಮ್ಮ ಜೀವನವು ಗಮನಾರ್ಹವಾಗಿ ಬದಲಾಗುತ್ತದೆ. ಬೆಳಗಿನ ದಿನಚರಿಯಲ್ಲಿ ಪಾಲಿಸಲೇಬೇಕಾದ ಆ ಅಭ್ಯಾಸಗಳು ಯಾವುವು ಎಂಬ ಸಂಕ್ಷಿಪ್ತ ಮಾಹಿತಿ ಇಲ್ಲಿದೆ.

ಆರೋಗ್ಯಕರ ಜೀವನಕ್ಕಾಗಿ ಬೆಳಗಿನ ದಿನಚರಿಯಲ್ಲಿ ಪಾಲಿಸಬೇಕಾದ ಅಭ್ಯಾಸಗಳಿವು:

ಬೆಳಿಗ್ಗೆ ಬೇಗ ಎದ್ದೇಳಿ: ಬೆಳಿಗ್ಗೆ ಬೇಗನೆ ಏಳುವುದು ಕೇವಲ ಅಭ್ಯಾಸವಲ್ಲ, ಬದಲಾಗಿ ಆರೋಗ್ಯಕರ ದಿನಚರಿಯ ಆರಂಭವಾಗಿದೆ. ಇದು ನಿಮ್ಮ ದೇಹವು ಅದರ ನೈಸರ್ಗಿಕ ಸಿರ್ಕಾಡಿಯನ್ ಲಯಕ್ಕೆ ಅನುಗುಣವಾಗಿ ಕಾರ್ಯನಿರ್ವಹಿಸಲು ಅನುವು ಮಾಡಿಕೊಡುತ್ತದೆ. ಬೆಳಿಗ್ಗೆ ಬೇಗನೆ ಏಳುವುದರಿಂದ ದೇಹವು ಶಕ್ತಿಯಿಂದ ತುಂಬಿರುತ್ತದೆ ಮತ್ತು ನಿಮ್ಮ ಗಮನವೂ ಸ್ಪಷ್ಟವಾಗಿರುತ್ತದೆ, ಆತುರವಿಲ್ಲದೆ ನಿಮ್ಮ ದಿನವನ್ನು ಯೋಜಿಸಲು ಸಮಯ ಸಿಗುತ್ತದೆ, ಇದು ಮಾನಸಿಕ ಒತ್ತಡವನ್ನೂ ಕಡಿಮೆ ಮಾಡುತ್ತದೆ.

ನಿಮ್ಮ ಫೋನ್ ಪರಿಶೀಲಿಸಬೇಡಿ: ಫೋನ್‌ಗಳು ನಮ್ಮ ಜೀವನದ ಅವಿಭಾಜ್ಯ ಅಂಗವಾಗಿವೆ. ಹಾಗಾಗಿ ಅನೇಕರು ಬೆಳಗ್ಗೆ ಎದ್ದ ತಕ್ಷಣವೇ ಫೋನ್‌ ನೋಡಲು ಆರಂಭಿಸುತ್ತಾರೆ. ಈ ಅಭ್ಯಾಸವು ನಮ್ಮ ಮಾನಸಿಕ ಆರೋಗ್ಯಕ್ಕೆ ಹಾನಿಕಾರಕವಾಗಿದೆ. ಇದು ಒತ್ತಡ ಮತ್ತು ನಕಾರಾತ್ಮಕ ಆಲೋಚನೆಗಳಿಗೆ ಕಾರಣವಾಗಬಹುದು. ಆದ್ದರಿಂದ, ಬೆಳಿಗ್ಗೆ ಎದ್ದ ತಕ್ಷಣ ಫೋನ್ ಅನ್ನು ಪರಿಶೀಲಿಸುವ ಬದಲು, ಧ್ಯಾನ ಮಾಡಿ ಅಥವಾ ಸಂಗೀತವನ್ನು ಕೇಳಿ.

ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯಿರಿ: ಬೆಳಿಗ್ಗೆ ಎದ್ದ ನಂತರ ಖಾಲಿ ಹೊಟ್ಟೆಯಲ್ಲಿ ಒಂದು ಗ್ಲಾಸ್‌ ಉಗುರು ಬೆಚ್ಚಗಿನ ನೀರು ಕುಡಿಯುವುದರಿಂದ ದೇಹವು ಒಳಗಿನಿಂದ ಸಕ್ರಿಯಗೊಳ್ಳುತ್ತದೆ.  ಬೆಳಿಗ್ಗೆ ಒಂದು ಲೋಟ ನೀರು ರಾತ್ರಿಯ ನಿರ್ಜಲೀಕರಣವನ್ನು ನಿವಾರಿಸುತ್ತದೆ, ಜೀರ್ಣಕ್ರಿಯೆ ವ್ಯವಸ್ಥೆಯನ್ನು ಸುಧಾರಿಸುತ್ತದೆ, ಚಯಾಪಚಯ ಕ್ರಿಯೆಯನ್ನು ವೇಗಗೊಳಿಸುತ್ತದೆ. ಜೊತೆಗೆ ಇದು ದೇಹದಿಂದ ವಿಷವನ್ನು ತೆಗೆದುಹಾಕುತ್ತದೆ. ಈ ಅಭ್ಯಾಸ ಚರ್ಮ ಮತ್ತು ಮೂತ್ರಪಿಂಡದ ಆರೋಗ್ಯಕ್ಕೂ ಪ್ರಯೋಜನಕಾರಿ. ಹಾಗಾಗಿ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವ ಅಭ್ಯಾಸ ಬೆಳೆಸಿಕೊಳ್ಳಿ.

ಇದನ್ನೂ ಓದಿ: ಬೆಳಗ್ಗೆ ಬೇಗ ಏಳುವುದರಿಂದ ನೀವು ಎಲ್ಲಾ ಪ್ರಯೋಜನಗಳನ್ನು ಪಡೆಯಬಹುದು

ಲಘು ವ್ಯಾಯಾಮ ಅಥವಾ ಯೋಗ ಮಾಡಿ: ಬೆಳಗಿನ ವ್ಯಾಯಾಮವು ದೇಹಕ್ಕೆ ಇಡೀ ದಿನಕ್ಕೆ ಶಕ್ತಿಯನ್ನು ನೀಡುತ್ತದೆ. ಯೋಗ, ಸ್ಟ್ರೆಚಿಂಗ್, ವಾಕಿಂಗ್ ಅಥವಾ ಲಘು ವ್ಯಾಯಾಮವು ರಕ್ತ ಪರಿಚಲನೆ ಸುಧಾರಿಸುತ್ತದೆ. ಇದರಿಂದಾಗಿ ನಿಮ್ಮ ಸ್ನಾಯುಗಳು ಸಕ್ರಿಯವಾಗುತ್ತವೆ. ಇದು ದೈಹಿಕ ಸದೃಢತೆಯನ್ನು ಹೆಚ್ಚಿಸುವುದಲ್ಲದೆ, ಮಾನಸಿಕ ಆರೋಗ್ಯವನ್ನೂ ಸುಧಾರಿಸುತ್ತದೆ.

ಧ್ಯಾನ ಮಾಡಿ: ಬೆಳಿಗ್ಗೆ ಕೆಲವು ನಿಮಿಷಗಳ ಕಾಲ ಧ್ಯಾನ ಮಾಡುವುದರಿಂದ ಮನಸ್ಸು ಶಾಂತವಾಗಿರುತ್ತದೆ. ಈ ಅಭ್ಯಾಸವು ಮಾನಸಿಕ ಒತ್ತಡವನ್ನು ಕಡಿಮೆ ಮಾಡುತ್ತದೆ. ಧ್ಯಾನದ ಅಭ್ಯಾಸವು ದಿನವಿಡೀ ಸಕಾರಾತ್ಮಕ ಚಿಂತನೆಯನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಅಲ್ಲದೆ  ನಿಯಮಿತ ಧ್ಯಾನವು ಭಾವನಾತ್ಮಕ ಸಮತೋಲನವನ್ನು ಸುಧಾರಿಸುತ್ತದೆ.

ಆರೋಗ್ಯಕರ ಉಪಹಾರ ಸೇವಿಸಿ: ಬೆಳಗಿನ ಉಪಾಹಾರವು ನಿಮ್ಮ ದೇಹಕ್ಕೆ ಇಡೀ ದಿನಕ್ಕೆ ಶಕ್ತಿಯನ್ನು ನೀಡುತ್ತದೆ. ಹಾಗಾಗಿ ನಿಮ್ಮ ಉಪಾಹಾರದಲ್ಲಿ ಪ್ರೋಟೀನ್, ಫೈಬರ್ ಮತ್ತು ವಿಟಮಿನ್ ಗಳು ಸಮೃದ್ಧವಾಗಿರುವ ಆಹಾರಗಳನ್ನು ಸೇರಿಸಿ. ಆರೋಗ್ಯಕರ ಉಪಹಾರ ಸೇವಿಸುವುದರಿಂದ ಅತಿಯಾಗಿ ತಿನ್ನುವುದನ್ನು ತಡೆಯಬಹುದು. ಅಲ್ಲದೆ ಆರೋಗ್ಯಕರ ಉಪಹಾರ ಸೇವಿಸುವುದರಿಂದ ತೂಕವೂ ನಿಯಂತ್ರಣದಲ್ಲಿರುತ್ತದೆ, ಆರೋಗ್ಯವೂ ಚೆನ್ನಾಗಿರುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?