Fat: ಹೊಟ್ಟೆಯಲ್ಲಿ ಕೊಬ್ಬಿನ ಶೇಖರಣೆ ಹೆಚ್ಚಾಗಲು ಇವುಗಳೇ ಕಾರಣ!

ಹೆಚ್ಚುವರಿ ಕೊಬ್ಬು ದೇಹದ ತೂಕ ಹೆಚ್ಚಳಕ್ಕೆ ಕಾರಣವಾಗುತ್ತದೆ. ಹಾಗಿರುವಾಗ ದಿನನಿತ್ಯದ ಯಾವ ಅಭ್ಯಾಸಗಳು ಹೆಚ್ಚುವರಿ ಕೊಬ್ಬು ಶೇಖರಣೆಗೆ ಕಾರಣ ಎಂಬ ಮಾಹಿತಿ ಈ ಕೆಳಗಿನಂತಿದೆ.

Fat: ಹೊಟ್ಟೆಯಲ್ಲಿ ಕೊಬ್ಬಿನ ಶೇಖರಣೆ ಹೆಚ್ಚಾಗಲು ಇವುಗಳೇ ಕಾರಣ!
ಸಂಗ್ರಹ ಚಿತ್ರ
Follow us
TV9 Web
| Updated By: shruti hegde

Updated on: Nov 01, 2021 | 10:12 AM

ಆಹಾರ ವಿಧಾನ ಮತ್ತು ಜೀವನ ಶೈಲಿಯಲ್ಲಿನ ಕೆಲವು ಬದಲಾವಣೆಗಳು ನಿಮ್ಮ ದೇಹದ ತೂಕದ ಮೇಲೆ ಪರಿಣಾಮವನ್ನು ಬೀರುತ್ತದೆ. ಜೊತೆಗೆ ನೀವು ಸೇವಿಸುವ ಆಹಾರದ ಗುಣಮಟ್ಟದ ಮೇರೆಗೆ ನಿಮ್ಮ ದೇಹದ ತೂಕ ಹೆಚ್ಚಳ ಕಂಡು ಬರುತ್ತದೆ. ಉತ್ತಮ ಪೋಷಕಾಂಶಯುಕ್ತ ಆಹಾರವು ನಿಮ್ಮನ್ನು ಸದೃಢವಾಗಿರುವಂತೆ ಮತ್ತು ಶಕ್ತಿಯನ್ನು ತುಂಬಲು ಸಹಾಯ ಮಾಡುತ್ತದೆ. ನಿಮ್ಮ ದಿನನಿತ್ಯದ ಈ ಕೆಲವು ಅಭ್ಯಾಸಗಳು ದೇಹದ ತೂಕ ಹೆಚ್ಚಳಕ್ಕೆ ಕಾರಣವಾಗುತ್ತದೆ. ಹಾಗಿರುವಾಗ ಹೊಟ್ಟೆಯ ಕೊಬ್ಬು ಹೆಚ್ಚಳಕ್ಕೆ ಮುಖ್ಯವಾದ ಕಾರಣಗಳು ಯಾವುವು ಎಂಬುದನ್ನು ತಿಳಿಯೋಣ.

ಹೊಟ್ಟೆಯ ಕೊಬ್ಬಿನ ಹೆಚ್ಚಳಕ್ಕೆ ಕಾರಣವಾಗುವ ಅಂಶಗಳು ಹೀಗಿವೆ ಟ್ರಾನ್ಸ್ ಫ್ಯಾಟ್ ಕೊಬ್ಬುಗಳು ದೇಹಕ್ಕೆ ಮುಖ್ಯ. ಆದರೆ ಅತಿಯಾದ ಕೊಬ್ಬು ದೇಹದ ತೂಕ ಹೆಚ್ಚಳಕ್ಕೆ ಕಾರಣವಾಗುತ್ತದೆ. ಜೊತೆಗೆ ಅನಾರೋಗ್ಯವನ್ನು ಉಂಟು ಮಾಡುತ್ತದೆ. ಇದು ಹೃದಯರಕ್ತನಾಳಕ್ಕೆ ಸಂಬಂಧಿತ ಸಮಸ್ಯೆಗಳು, ಮಧುಮೇಹ, ಕ್ಯಾನ್ಸರ್ ಮತ್ತು ಇತರ ದೀರ್ಘಕಾಲದ ಆರೋಗ್ಯ ಸಮಸ್ಯೆಗೆ ಕಾರಣವಾಗುತ್ತದೆ.

ಆಲ್ಕೋಹಾಲ್ ಆಲ್ಕೋಹಾಲ್ ಮತ್ತು ಧೂಮಪಾನ ಆರೋಗ್ಯಕ್ಕೆ ಹಾನಿಕಾರಕ ಎಂಬ ವಿಷಯ ಗೊತ್ತೇ ಇದೆ. ಕೆಲವು ಅಧ್ಯಯನಗಳ ಪ್ರಕಾರ ನಿಮ್ಮ ಹೊಟ್ಟೆಯಲ್ಲಿ ಹೆಚ್ಚುವರಿ ಬೊಜ್ಜು ಕಾಣಿಸಿಕೊಳ್ಳಲು ಕಾರಣ ಮದ್ಯಪಾನ ಸೇವನೆ. ಅವು ದೇಹದಲ್ಲಿ ಕೇವಲ ಕ್ಯಾಲೊರಿಗಳನ್ನು ಮಾತ್ರ ಸಂಗ್ರಹಿಸುತ್ತವೆ. ಇದರಿಂದ ದೇಹಕ್ಕೆ ಯಾವುದೇ ಪೋಷಕಾಂಶಗಳು ಸಿಗುವುದಿಲ್ಲ. ಇದು ಮುಖ್ಯವಾಗಿ ದೇಹದಲ್ಲಿ ಹೆಚ್ಚುವರಿ ಕೊಬ್ಬಿನ ಶೇಖರಣೆಗೆ ಕಾರಣವಾಗುತ್ತದೆ.

ಕುಳಿತುಕೊಳ್ಳುವ ರೀತಿ ಅನಾರೋಗ್ಯಕರ ಜೀವನ ಶೈಲಿಯಲ್ಲಿ ಹೊಟ್ಟೆಯ ಕೊಬ್ಬು ಸಹ ಒಂದು ಕಾರಣ. ದೈಹಿಕ ವ್ಯಾಯಾಮದ ಮೂಲಕ ಕೊಬ್ಬನ್ನು ಕರಗಿಸಬಹುದು. ಜೊತೆಗೆ ಉತ್ತಮ ದೇಹದ ಆಕಾರ ಪಡೆಯಲು ಮತ್ತು ಫಿಟ್ ಆಗಿರಲು ಸಹಾಯ ಮಾಡುತ್ತದೆ.

ಅತಿಯಾದ ಸಿಹಿ ಸೇವನೆ ನೀವು ಸೇವಿಸುವ ಆಹಾರವು ಹೆಚ್ಚುವರಿ ಹೊಟ್ಟೆಯ ಕೊಬ್ಬಿನ ಶೇಖರಣೆಗೆ ಕಾರಣವಾಗಬಹುದು. ಹಾಗಾಗಿ ಆಹಾರ ಪದ್ಧತಿಯಲ್ಲಿನ ಕೆಲವು ಬದಲಾವಣೆಗಳು ನಿಮ್ಮ ಕೊಬ್ಬು ಕರಗಿಸಲು ಸಹಾಯ ಮಾಡುತ್ತದೆ. ಎಣ್ಣೆಯಲ್ಲಿ ಕರಿದ ಪದಾರ್ಥಗಳು, ಹೆಚ್ಚಿನ ಫ್ಯಾಟ್ ಹೊಂದಿರುವ ಆಹಾರ ವ್ಯವಸ್ಥೆ ನಿಮ್ಮ ಹೊಟ್ಟೆಯ ಕೊಬ್ಬಿಗೆ ಮುಖ್ಯವಾದ ಕಾರಣವಾಗಿರುತ್ತದೆ. ಅದರಲ್ಲಿಯೂ ಸಿಹಿ ಪದಾರ್ಥಗಳನ್ನು ನಿಯಮಿತವಾಗಿ ಸೇವಿಸಿ.

ನಿದ್ರೆ ಮತ್ತು ಒತ್ತಡದ ಕೊರತೆ ದೇಹಕ್ಕೆ ಸುಸ್ತು, ಆಯಾಸ ಎಲ್ಲವೂ ಬೇಕು. ಒತ್ತಡ ಮತ್ತು ಆತಂಕವು ದೇಹದಲ್ಲಿ ಕಾರ್ಟಿಸೋಲ್ ಹಾರ್ಮೋನ್​ಗೆ ಕಾರಣವಾಗುತ್ತದೆ. ಇದು ಚಯಾಪಚಯವನ್ನು ನಿಧಾನಗೊಳಿಸುತ್ತದೆ. ಕಡಿಮೆಯಾದ ಚಯಾಪಚಯವು ತೂಕ ಮತ್ತು ಹೊಟ್ಟೆಯ ಕೊಬ್ಬನ್ನು ಕಳೆದುಕೊಳ್ಳಲು ಕಷ್ಟವಾಗುತ್ತದೆ.

ಇದನ್ನೂ ಓದಿ:

Health Benefits: ಕಟಿ ಚಕ್ರಾಸನ ಮಾಡುವುದು ಹೇಗೆ? ಹೊಟ್ಟೆಯಲ್ಲಿನ ಕೊಬ್ಬು ಕರಗಿಸಲು 15 ನಿಮಿಷಗಳ ಕಾಲ ಈ ಯೋಗಾಸನ ಮಾಡಿ

Health Tips: ಜ್ಞಾಪಕ ಶಕ್ತಿ ಕಡಿಮೆಯಾಗುತ್ತಿದೆಯೇ? ಆಹಾರ ಕ್ರಮದ ಬಗ್ಗೆ ಇರಲಿ ಎಚ್ಚರ

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ