AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ambedkar Jayanti 2024: ಇಂದಿಗೂ ದೇಶದಲ್ಲಿರುವ ಜಾತಿ ತಾರತಮ್ಯ ಹೋಗಲಾಡಿಸಲು ಮತ್ತೆ ಭೀಮ ರಾವ್ ಬರಬೇಕು

ಭಾರತದಲ್ಲಿ ಬೇರೂರಿದ್ದ ಜಾತಿ ವ್ಯವಸ್ಥೆಯ ವಿರುದ್ಧ ಧ್ವನಿ ಎತ್ತಿದ ಅಂಬೇಡ್ಕರ್ ಮಹಾನ್ ಚೇತನ್. ಭಾರತದ ಸಂವಿಧಾನದ ಪಿತಾಮಹರೆನಿಸಿಕೊಂಡ ಡಾ. ಭೀಮರಾವ್ ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯನ್ನು ಭಾರತದಾದ್ಯಂತ ಏಪ್ರಿಲ್ 14 ರಂದು ಆಚರಿಸಲಾಗುತ್ತದೆ. ಹಾಗಾದ್ರೆ ಈ ಜಯಂತಿಯ ಹಿಂದಿನ ಇತಿಹಾಸ ಹಾಗೂ ಮಹತ್ವದ ಬಗೆಗಿನ ಮಾಹಿತಿಯು ಇಲ್ಲಿದೆ.

Ambedkar Jayanti 2024: ಇಂದಿಗೂ ದೇಶದಲ್ಲಿರುವ ಜಾತಿ ತಾರತಮ್ಯ ಹೋಗಲಾಡಿಸಲು ಮತ್ತೆ ಭೀಮ ರಾವ್ ಬರಬೇಕು
ಸಾಯಿನಂದಾ
| Edited By: |

Updated on: Apr 13, 2024 | 3:14 PM

Share

ಜಾತಿ ವ್ಯವಸ್ಥೆ ಆಳವಾಗಿ ಬೇರೂರಿದ್ದ ಕಾಲಘಟ್ಟದಲ್ಲಿ ಸಾಕಷ್ಟು ನೋವು ಅವಮಾನಗಳನ್ನು ಎದುರಿಸಿ ಜಾತಿ ವ್ಯವಸ್ಥೆಯ ಭೂತವನ್ನು ಬಡಿದೋಡಿಸಿದವರೇ ಈ ಭೀಮ ರಾವ್. ಸಮಾಜಕ್ಕೆ ಅಂಟಿದ ಮೇಲು-ಕೀಳಿನ ತಾರತಮ್ಯವನ್ನು ಕತ್ತಿಯನ್ನು ಹಿಡಿದು ಯುದ್ಧ ಮಾಡುವುದರಿಂದ ಹೋಗಲಾಡಿಸಲು ಸಾಧ್ಯವೇ ಇಲ್ಲ. ಶಿಕ್ಷಣದಿಂದ ಮಾತ್ರ ಸಾಧ್ಯ ಎನ್ನುವುದನ್ನು ಜಗತ್ತಿಗೆ ತೋರಿಸಿಕೊಟ್ಟ ಧೀಮಂತ ವ್ಯಕ್ತಿ. ಸಮಾನತೆಯ ಮಂತ್ರವನ್ನು ಸಾರಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರು ಸಾಮಾಜಿಕ ಸುಧಾರಕ, ಶಿಕ್ಷಣ ತಜ್ಞ, ನ್ಯಾಯಶಾಸ್ತ್ರಜ್ಞ, ಅರ್ಥಶಾಸ್ತ್ರಜ್ಞ, ರಾಜಕಾರಣಿ ಮತ್ತು ಕಾನೂನು ತಜ್ಞರಾಗಿ ಚಿರಪರಿಚಿತರಾದವರು. ಭಾರತೀಯ ಸಂವಿಧಾನದ ಕರಡು ಸಮಿತಿಯ ಅಧ್ಯಕ್ಷರಾಗಿದ್ದ ಅಂಬೇಡ್ಕರ್ ದೇಶಕ್ಕೆ ನೀಡಿದ ಕೊಡುಗೆಗಳು ಅಗಾಧವಾದದ್ದು.

ಅಂಬೇಡ್ಕರ್ ಜಯಂತಿಯ ಇತಿಹಾಸ

ಡಾ. ಬಿ ಆರ್ ಅಂಬೇಡ್ಕರ್ ಅವರು ಏಪ್ರಿಲ್ 14, 1891 ರಂದು ಜನಿಸಿದರು. ಸಮಾಜಕ್ಕೆ ನೀಡಿದ ಕೊಡುಗೆಗೆ ಗೌರವ ಸಲ್ಲಿಸಲು ಪ್ರತಿ ವರ್ಷ ಏಪ್ರಿಲ್ 14 ರಂದು ಅಂಬೇಡ್ಕರ್ ಜಯಂತಿ, ಭೀಮ ಜಯಂತಿ ಅಥವಾ ಸಮಾನತೆ ದಿನ ಎಂದು ಆಚರಿಸಿಕೊಂಡು ಬರಲಾಗುತ್ತಿದೆ. 2015 ರಿಂದ ಈ ದಿನವನ್ನು ಭಾರತದಾದ್ಯಂತ ಸಾರ್ವಜನಿಕ ರಜಾದಿನವಾಗಿ ಆಚರಿಸಿಕೊಂಡು ಬರಲಾಗುತ್ತಿದೆ.

ಇದನ್ನೂ ಓದಿ: ತಿನ್ನುವ ಮೊದಲು ನೆನೆಸಿಡಬೇಕಾದ 5 ಆಹಾರಗಳಿವು

ಅಂಬೇಡ್ಕರ್ ಜಯಂತಿಯ ಮಹತ್ವ

ಸ್ವಾತಂತ್ರ ಬಂದು ಅದೆಷ್ಟೋ ವರ್ಷಗಳು ಉರುಳಿದರೂ ಇಂದಿಗೂ ಕೂಡ ಜಾತಿ ಆಧಾರಿತ ತಾರತಮ್ಯಗಳು ಅಂತ್ಯಗೊಂಡಿಲ್ಲ. ಆದರೆ ಅಂದು ಇದ್ದ ಜಾತಿ ತಾರತಮ್ಯವು ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ ಎನ್ನಬಹುದು. ಇದಕ್ಕೆ ಮೂಲ ಕಾರಣರೇ ಡಾ. ಬಿ ಆರ್ ಅಂಬೇಡ್ಕರ್. ದೇಶದ ಪ್ರತಿಯೊಬ್ಬ ನಾಗರಿಕರಿಗೂ ಸಮಾನ ಹಕ್ಕುಗಳನ್ನು ಒದಗಿಸುವ ಸಂವಿಧಾನವನ್ನು ಅವರು ರಚಿಸಿಕೊಟ್ಟ ಧೀಮಂತ ವ್ಯಕ್ತಿಯನ್ನು ನೆನಪಿಸಿಕೊಳ್ಳಲೇ ಬೇಕು. ಹೀಗಾಗಿ ದೇಶದ ಜನರಿಗೆ ಇವರು ನೀಡಿದ ಕೊಡುಗೆಗಳನ್ನು ಸ್ಮರಿಸುವ ಕೆಲಸವನ್ನು ಜನ್ಮ ದಿನದಂದು ಮಾಡಲಾಗುತ್ತದೆ. ದೇಶದ ಹಲವೆಡೆ ಅಂಬೇಡ್ಕರ್ ಜಯಂತಿಯನ್ನು ಅದ್ದೂರಿಯಾಗಿ ಆಚರಿಸುವುದಲ್ಲದೇ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತವೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ