AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Power Nap: ಮಧ್ಯಾಹ್ನದ ನಿದ್ದೆ ಒಳ್ಳೆಯದೋ ಕೆಟ್ಟದ್ದೋ? ತಜ್ಞರ ಅಭಿಪ್ರಾಯ ಇಲ್ಲಿದೆ 

ಹಗಲಿನಲ್ಲಿ ಹೆಚ್ಚು ಹೊತ್ತು ಮಲಗುವುದರಿಂದ  ಹೃದ್ರೋಗ ಮತ್ತು ಖಿನ್ನತೆಯಂತಹ ಸಮಸ್ಯೆಗಳು ಬಾಧಿಸುವ ಅಪಾಯ ಹೆಚ್ಚಿದೆ ಎಂದು  ತಜ್ಞರು ಹೇಳುತ್ತಾರೆ. ಹಗಲಿನಲ್ಲಿ ಹೆಚ್ಚು ಹೊತ್ತು ಮಲಗುತ್ತಿದ್ದೀರಿ ಎಂದರೆ ನೀವು ರಾತ್ರಿಯಲ್ಲಿ ಸಾಕಷ್ಟು ನಿದ್ರೆ ಪಡೆಯುತ್ತಿಲ್ಲ ಎಂದರ್ಥ.  ಇದು ಅನೇಕ ದೀರ್ಘಕಾಲದ ಕಾಯಿಲೆಗಳನ್ನು ಹೆಚ್ಚಿಸುತ್ತದೆ. ಆದ್ದರಿಂದ ರಾತ್ರಿಯಲ್ಲಿ ಸಾಕಷ್ಟು ನಿದ್ರೆ ಪಡೆಯಿರಿ. ತಜ್ಞರ ಪ್ರಕಾರ ಮದ್ಯಾಹ್ನ ಅರ್ಧ ಗಂಟೆಗಿಂತ ಹೆಚ್ಚು ನಿದ್ದೆ ಮಾಡುವುದು ಒಳ್ಳೆಯದಲ್ಲ. ಹಗಲಿನಲ್ಲಿ ಹೆಚ್ಚು ಹೊತ್ತು ನಿದ್ರೆ ಮಾಡುವುದರಿಂದ ನಿದ್ರೆಯ ಚಕ್ರಕ್ಕೆ ತೊಂದರೆಯಾಗಬಹುದು.

Power Nap: ಮಧ್ಯಾಹ್ನದ ನಿದ್ದೆ ಒಳ್ಳೆಯದೋ ಕೆಟ್ಟದ್ದೋ? ತಜ್ಞರ ಅಭಿಪ್ರಾಯ ಇಲ್ಲಿದೆ 
ಮಾಲಾಶ್ರೀ ಅಂಚನ್​
| Edited By: |

Updated on: Apr 03, 2024 | 2:54 PM

Share

ಮಧ್ಯಾಹ್ನ ಊಟದ ನಂತರ ನಿದ್ದೆ ಬರುವುದು ಸಹಜ. ಆರೋಗ್ಯ ತಜ್ಞರ ಪ್ರಕಾರ ನಾವು ಮಧ್ಯಾಹ್ನ ಆಹಾರ ಸೇವಿಸಿದಾಗ, ಜೀರ್ಣಾಂಗ ವ್ಯವಸ್ಥೆಯಲ್ಲಿ ರಕ್ತ ಪರಿಚಲನೆ ಹೆಚ್ಚಾಗುತ್ತದೆ. ಈ ಕಾರಣದಿಂದಾಗಿ, ಮೆದುಳಿಗೆ ರಕ್ತ ಪೂರೈಕೆಯು ಕಡಿಮೆಯಾಗಬಹುದು. ಈ ಕಾರಣದಿಂದಾಗಿ ನಿದ್ರೆ ಮತ್ತು ಆಯಾಸವಾದಂತೆ ಭಾಸವಾಗುತ್ತದೆ. ಆಹಾರವನ್ನು ತಿಂದ  ನಂತರ ದೇಹದಲ್ಲಿ ಗ್ಲೂಕೋಸ್ ಪ್ರಮಾಣ ಹೆಚ್ಚುತ್ತದೆ. ಇದರಿಂದ ಒಬ್ಬ ವ್ಯಕ್ತಿಯು ಹೆಚ್ಚು ನಿದ್ರೆ ಮಾಡುತ್ತಾನೆ.  ಅಲ್ಲದೆ ಕೆಲವರು ರಾತ್ರಿಯಲ್ಲಿ ಸಾಕಷ್ಟು ನಿದ್ರೆ ಪಡೆಯಲು ಸಾಧ್ಯವಾಗಿದ್ದಾಗ ಅಥವಾ ದಣಿದಿರುವಾಗ ಹಗಲು ಹೊತ್ತಿನಲ್ಲಿ ಕೆಲವು ನಿಮಿಷಗಳ ಕಾಲ ಕಿರು ನಿದ್ರೆ ಮಾಡುತ್ತಾರೆ. ಆರೋಗ್ಯದ ದೃಷ್ಟಿಯಿಂದ ಮಧ್ಯಾಹ್ನ ಮಲಗುವುದು ಸರಿಯೇ? ಅದು ಆರೋಗ್ಯದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂಬುದನ್ನು ತಿಳಿದುಕೊಳ್ಳಿ.

ಮಧ್ಯಾಹ್ನ ಮಲಗುವುದು ಒಳ್ಳೆಯದೇ ಅಥವಾ ಕೆಟ್ಟದ್ದೆ?

ನ್ಯಾಷನಲ್ ಸ್ಲೀಪ್ ಫೌಂಡೇಶನ್ ಪ್ರಕಾರ, ಅಮೇರಿಕಾರದಲ್ಲಿ ಸುಮಾರು ಮೂರನೇ ಒಂದು ಭಾಗದಷ್ಟು ವಯಸ್ಕರರು ಮಧ್ಯಾಹ್ನದ ವೇಳೆ ನಿದ್ರೆ ಮಾಡುತ್ತಾರೆ. ಮನಸ್ಥಿತಿಯನ್ನು ಸುಧಾರಿಸಲು, ದಿನವಿಡೀ ಕ್ರಿಯಾಶೀಲವಾಗಿರಲು, ಆಯಾಸವನ್ನು ಕಡಿಮೆ ಮಾಡಲು ಕಿರು ನಿದ್ರೆಯು ಸಹಾಯ ಮಾಡುತ್ತದೆ ಎಂದು ಕೆಲವು ಅಧ್ಯಯನಗಳು ಹೇಳಿವೆ. ಆದರೆ ಹಗಲಿನಲ್ಲಿ ಹೆಚ್ಚು ಹೊತ್ತು ಮಲಗಿದರೆ ಅದು ಆರೋಗ್ಯದ ಮೇಲೆ ನರಕಾತ್ಮಕ ಪರಿಣಾಮವನ್ನು ಉಂಟುಮಾಡಬಹುದು.

ಹಗಲಿನಲ್ಲಿ ಮಲಗುವುದರಿಂದ ಉಂಟಾಗುವ ಪರಿಣಾಮ:

ಹಾರ್ವರ್ಡ್ ಹೆಲ್ತ್ ವರದಿ ಹೇಳುವಂತೆ ಹಗಲಿನಲ್ಲಿ ಒಂದು ಸಣ್ಣ ನಿದ್ದೆ ಜ್ಞಾನಪಶಕ್ತಿಯನ್ನು ಸುಧಾರಿಸಲು ಸಹಾಯ ಮಾಡುತ್ತದೆ ಮತ್ತು ಇದು ದೇಹವನ್ನು ಸಕ್ರಿಯವಾಗಿರಿಸುತ್ತದೆ. ಹಾಗಿದ್ದರೂ ಹಗಲಿನಲ್ಲಿ ಹೆಚ್ಚು ಹೊತ್ತು ಮಲಗುವುದರಿಂದ ದೀರ್ಘಾವಧಿಯಲ್ಲಿ ಅನೇಕ ನಕರಾತ್ಮಕ ಪರಿಣಾಮಗಳನ್ನು ಉಂಟುಮಾಡಬಹುದು ಎನ್ನುತ್ತಾರೆ ಸಂಶೋಧಕರು.  ಮಧ್ಯಾಹ್ನ ಹೆಚ್ಚು ಮಲಗುವುದರಿಂದ ನಿದ್ರೆಯ ಜಡತ್ವ ಉಂಟಾಗುತ್ತದೆ. ನಿದ್ರೆಯ ಜಡತ್ವದಿಂದ ಒಬ್ಬ ವ್ಯಕ್ತಿಯ ಆಲೋಚನೆ ಮತ್ತು ಅರ್ಥಮಾಡಿಕೊಳ್ಳುವ ಸಾಮರ್ಥ್ಯ ಕಡಿಮೆಯಾಗುತ್ತದೆ.

ಹಾಗದೆ ಹಗಲು ಹೊತ್ತಿನಲ್ಲಿ ಮಲಗಬೇಕೇ ಅಥವಾ ಬೇಡವೇ?

ಹಗಲಿನಲ್ಲಿ ಹೆಚ್ಚು ಹೊತ್ತು ಮಲಗುವುದರಿಂದ  ಹೃದ್ರೋಗ ಮತ್ತು ಖಿನ್ನತೆಯಂತಹ ಸಮಸ್ಯೆಗಳು ಬಾಧಿಸುವ ಅಪಾಯ ಹೆಚ್ಚಿದೆ ಎಂದು  ತಜ್ಞರು ಹೇಳುತ್ತಾರೆ. ಹಗಲಿನಲ್ಲಿ ಹೆಚ್ಚು ಹೊತ್ತು ಮಲಗುತ್ತಿದ್ದೀರಿ ಎಂದರೆ ನೀವು ರಾತ್ರಿಯಲ್ಲಿ ಸಾಕಷ್ಟು ನಿದ್ರೆ ಪಡೆಯುತ್ತಿಲ್ಲ ಎಂದರ್ಥ.  ಇದು ಅನೇಕ ದೀರ್ಘಕಾಲದ ಕಾಯಿಲೆಗಳನ್ನು ಹೆಚ್ಚಿಸುತ್ತದೆ. ಆದ್ದರಿಂದ ರಾತ್ರಿಯಲ್ಲಿ ಸಾಕಷ್ಟು ನಿದ್ರೆ ಪಡೆಯಿರಿ. ತಜ್ಞರ ಪ್ರಕಾರ ಮದ್ಯಾಹ್ನ ಅರ್ಧ ಗಂಟೆಗಿಂತ ಹೆಚ್ಚು ನಿದ್ದೆ ಮಾಡುವುದು ಒಳ್ಳೆಯದಲ್ಲ. ಹಗಲಿನಲ್ಲಿ ಹೆಚ್ಚು ಹೊತ್ತು ನಿದ್ರೆ ಮಾಡುವುದರಿಂದ ನಿದ್ರೆಯ ಚಕ್ರಕ್ಕೆ ತೊಂದರೆಯಾಗಬಹುದು.

ಇದನ್ನೂ ಓದಿ: ಹಗಲಿನಲ್ಲಿ ಮಾಡುವ ಸಣ್ಣ ನಿದ್ರೆಯಿಂದ ಆರೋಗ್ಯಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

ಹಗಲಿನಲ್ಲಿ ಮಲಗುವುದರಿಂದ ಯಾರಿಗೆ ಲಾಭ:

ವಿದ್ಯಾರ್ಥಿಗಳಿಗೆ: ವಿದ್ಯಾರ್ಥಿಗಳಿಗೆ ನಿರಂತರ ಅಧ್ಯಯನದಿಂದ ಸುಸ್ತಾಗುತ್ತದೆ. ಮಧ್ಯಾಹ್ನ ಒಂದು ಸಣ್ಣ ನಿದ್ರೆ ಅವರ ಮೆದುಳಿಗೆ ವಿಶ್ರಾಂತಿ ನೀಡಲು ಸಹಾಯ ಮಾಡುತ್ತದೆ.

ವಯಸ್ಸಾದವರಿಗೆ: ವಯಸ್ಸಾದವರು ತಮ್ಮ ದೇಹಕ್ಕೆ ವಿಶ್ರಾಂತಿಯನ್ನು ನೀಡಲು ಹಗಲಿನಲ್ಲಿ ಸ್ವಲ್ಪ ಸಮಯ ಮಲಗಬಹುದು.

ಕಾರ್ಮಿಕರು: ಕಠಿಣ ಮತ್ತು ಭಾರವಾದ ವಸ್ತುಗಳನ್ನು ಎತ್ತುವಂತ ಕೆಲಸ ಮಾಡುವವರು ಮಧ್ಯಾಹ್ನ ಕಿರು ನಿದ್ರೆ ಮಾಡಬಹುದು. ಇದರಿಂದ ಅವರ ಆಯಾಸ ಕಡಿಮೆಯಾಗುತ್ತದೆ ಮತ್ತು ದೇಹವು ಮತ್ತೆ ಹೆಚ್ಚು ಕ್ರಿಯಾಶೀಲವಾಗಲು ಸಾಧ್ಯವಾಗುತ್ತದೆ.

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?