Tea Side Effects: ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಚಹಾ ಸೇವನೆ ಮಾಡುತ್ತಿದ್ದೀರಾ? ಈ ಅಭ್ಯಾಸ ಆರೋಗ್ಯಕ್ಕೆ ಕೆಟ್ಟದು 

ಹೆಚ್ಚಿನವರಿಗೆ ಬೆಳಗ್ಗೆ ಎದ್ದ ತಕ್ಷಣ ಒಂದು ಕಪ್ ಚಹಾ ಇರಲೇಬೇಕು. ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವನೆ ಮಾಡುವ ಆ ಒಂದು ಕಪ್ ಚಹಾ ನಮ್ಮನ್ನು ದಿನವಿಡೀ ಸಕ್ರಿಯರನ್ನಾಗಿರಿಸುತ್ತದೆ ನಿಜ. ಆದರೆ ಖಾಲಿ ಹೊಟ್ಟೆಯಲ್ಲಿ ಚಹಾ ಸೇವನೆ ಮಾಡುವುದರಿಂದ ಹಲವಾರು ಆರೋಗ್ಯ ಸಂಬಂಧಿ ಸಮಸ್ಯೆಗಳು ಉಂಟಾಗಬಹುದು. ನೀವು ಕೂಡಾ ಖಾಲಿ ಹೊಟ್ಟೆಯಲ್ಲಿ ಚಹಾ ಸೇವನೆ ಮಾಡುತ್ತಿದ್ದರೆ, ಈ ಅಭ್ಯಾಸದಿಂದ ಉಂಟಾಗಬಹುದಾದ ಕೆಟ್ಟ ಪರಿಣಾಮಗಳ ಬಗ್ಗೆ ತಿಳಿಯಿರಿ.

Tea Side Effects: ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಚಹಾ ಸೇವನೆ ಮಾಡುತ್ತಿದ್ದೀರಾ? ಈ ಅಭ್ಯಾಸ ಆರೋಗ್ಯಕ್ಕೆ ಕೆಟ್ಟದು 
ಸಾಂದರ್ಭಿಕ ಚಿತ್ರ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Oct 25, 2023 | 4:03 PM

ಹೆಚ್ಚಿನ ಜನರು ತಮ್ಮ ದಿನವನ್ನು ಒಂದು ಕಪ್ ಚಹಾ ಕುಡಿಯುವುದರೊಂದಿಗೆ ಪ್ರಾರಂಭಿಸುತ್ತಾರೆ. ಕೆಲವರು ಬೆಡ್ ಕಾಫಿ ಕುಡಿಯಲು ಇಷ್ಟಪಡುತ್ತಾರೆ. ಬೆಳಗ್ಗೆ ಸೇವಿಸುವಂತಹ ಆ ಒಂದು ಕಪ್ ಚಹಾ ನಿಮ್ಮನ್ನು ದಿನವಿಡೀ ಕ್ರಿಯಾಶೀಲರನ್ನಾಗಿಸುತ್ತದೆ ನಿಜ. ಆದರೆ ಈ ಅಭ್ಯಾಸವು ಆರೋಗ್ಯದ ಮೇಲೆ ಕೆಟ್ಟ ಪರಿಣಾಮವನ್ನು ಬೀರುತ್ತದೆ. ಎಷ್ಟೋ ಜನರಿಗೆ ಇದು ಕಂಫರ್ಟ್ ಡ್ರಿಂಕ್ಸ್ ಆಗಿದ್ದರೂ, ಎದ್ದ ತಕ್ಷಣ ಖಾಲಿ ಹೊಟ್ಟೆಯಲ್ಲಿ ಚಹಾ ಕುಡಿಯುವುದರಿಂದ ದೇಹಕ್ಕೆ ಹಾನಿಯಾಗುತ್ತದೆ. ತಜ್ಞರ ಪ್ರಕಾರ, ಚಹಾ ಮತ್ತು ಕಾಫಿಯ ಪಿ.ಹೆಚ್ ಮೌಲ್ಯವು ಆಮ್ಲೀಯತೆಯ ಅಪಾಯವನ್ನು ಹೆಚ್ಚಿಸುತ್ತದೆ.   ಹಾಗಿರುವಾಗ  ನೀವು ಖಾಲಿ ಹೊಟ್ಟೆಯಲ್ಲಿ ಚಹಾವನ್ನು ಸೇವಿಸಿದರೆ ಅದು ಅಸಿಡಿಟಿ ಮತ್ತು ಎದೆಯುರಿ ಸಮಸ್ಯೆಯನ್ನು ಉಂಟುಮಾಡಬಹುದು.  ಅಷ್ಟೇ ಅಲ್ಲ ಚಯಾಪಚಯ ಕ್ರಿಯೆಯು ಇದರಿಂದಾಗಿ ತೊಂದರೆಗೀಡಾಗುತ್ತದೆ. ಖಾಲಿ ಹೊಟ್ಟೆಯಲ್ಲಿ ಚಹಾ ಅಥವಾ ಕಾಫಿ ಕುಡಿಯುವ ಅಭ್ಯಾಸ ನಿಮಗೂ ಇದ್ದರೆ ಬೆಳಗ್ಗೆ ಎದ್ದ ತಕ್ಷಣ ಚಹಾ  ಏಕೆ ಕಾಫಿಯನ್ನು ಕುಡಿಯಬಾರದು ಮತ್ತು ಚಹಾವನ್ನು ಕುಡಿಯಲು ಸರಿಯಾದ ಸಮಯ ಯಾವುದು ಎಂಬುದನ್ನು ತಿಳಿಯಿರಿ.

ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಚಹಾ ಸೇವಿಸುವುದರಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳು:

ನಿರ್ಜಲೀಕರಣ; ಖಾಲಿ ಹೊಟ್ಟೆಯಲ್ಲಿ ಚಹಾ ಕುಡಿಯುವುದರಿಂದ ದೇಹದಲ್ಲಿ ನಿರ್ಜಲೀಕರಣ ಉಂಟಾಗುತ್ತದೆ.  ರಾತ್ರಿ ಸುಮಾರು 8 ರಿಂದ 9 ಗಂಟೆಗಳ ಕಾಲ ನಿದ್ರೆ ಮಾಡುತ್ತೇವೆ. ಇದರಿಂದ ಹೊಟ್ಟೆಯು ಸಂಪೂರ್ಣವಾಗಿ ಖಾಲಿಯಾಗಿರುತ್ತದೆ. ಹಾಗಿರುವಾಗ ಬೆಳಗ್ಗೆ ಎದ್ದ ತಕ್ಷಣ ಚಹಾ ಸೇವಿಸಿದರೆ ಅದು ದೇಹದಲ್ಲಿ ನಿರ್ಜಲೀಕರಣವನ್ನು ಉಂಟುಮಾಡುತ್ತದೆ. ಈ ನಿರ್ಜಲೀಕರಣವು ಸ್ನಾಯು ಸೆಳೆತ ಮತ್ತು ಮಲಬದ್ಧತೆಯ ಸಮಸ್ಯೆಯನ್ನು ಉಂಟುಮಾಡುತ್ತದೆ.

ಅಸಿಡಿಟಿ ಸಮಸ್ಯೆ ಉಂಟಾಗುತ್ತದೆ: ಖಾಲಿ ಹೊಟ್ಟೆಯಲ್ಲಿ ಚಹಾ ಸೇವಿಸುವುದರಿಂದ ಹಸಿವು ಕಡಿಮೆಯಾಗುತ್ತದೆ. ಮತ್ತು ಇದರಿಂದಾಗಿ  ಗಂಟೆಗಟ್ಟಲೆ ಆಹಾರವನ್ನು ಸೇವಿಸದೆ ಇರುತ್ತೇವೆ. ಈ ಕಾರಣದಿಂದಾಗಿ ಹೊಟ್ಟೆಯಲ್ಲಿ ಅಸಿಡಿಟಿ ಸಮಸ್ಯೆ ಕಾಣಿಸಿಕೊಳ್ಳುತ್ತದೆ.

ಚಯಾಪಚಯಕ್ರಿಯೆಯ ಮೇಲೆ ಪರಿಣಾಮ ಬೀರುತ್ತದೆ: ಖಾಲಿ ಹೊಟ್ಟೆಯಲ್ಲಿ ಚಹಾ ಕುಡಿಯುವ ಅಭ್ಯಾಸವು ಚಯಾಪಚಯ ಕ್ರಿಯೆಯ ಮೇಲೂ ಪರಿಣಾಮವನ್ನು ಬೀರಬಹುದು.  ಇದು ಜೀರ್ಣಕ್ರಿಯೆಯನ್ನು ಹದಗೆಡಿಸುತ್ತದೆ.  ಮತ್ತು ಅಸಿಡಿಟಿ, ಗ್ಯಾಸ್ ಇತ್ಯಾದಿ ಹೊಟ್ಟೆ ಸಂಬಂಧಿ ಸಮಸ್ಯೆಗಳಿಗೆ ಕಾರಣವಾಗುತ್ತದೆ.

ಪೋಷಕಾಂಶಗಳ ಮೇಲೆ ಪರಿಣಾಮ ಬೀರುತ್ತದೆ: ಖಾಲಿ ಹೊಟ್ಟೆಯಲ್ಲಿ ಚಹಾವನ್ನು ಕುಡಿಯುವುದರಿಂದ ದೇಹವು  ಪೋಷಕಾಂಶಗಳನ್ನು ಸರಿಯಾಗಿ ಹೀರಿಕೊಳ್ಳಲು ಸಾಧ್ಯವಾಗುವುದಿಲ್ಲ. ಈ ಕಾರಣದಿಂದಾಗಿ ದೇಹದಲ್ಲಿ ಅನೇಕ ರೀತಿಯ ಪೋಷಕಾಂಶಗಳ ಕೊರತೆ ಉಂಟಾಗಬಹುದು. ಮತ್ತು ವ್ಯಕ್ತಿಯು ವಿವಿಧ ರೀತಿಯ ಕಾಯಿಲೆಗಳಿಗೆ ಬಲಿಯಾಗಬಹುದು.

ಇದನ್ನೂ ಓದಿ: ದಿನಕ್ಕೆ ಎಷ್ಟು ಬಾರಿ ಟೀ ಕುಡಿಯುತ್ತೀರಿ, ಹಾಗಾದ್ರೆ ದುಷ್ಪರಿಣಾಮಗಳೂ ತಿಳಿದಿರಬೇಕಲ್ಲವೇ ?

ಜೀರ್ಣಕ್ರಿಯೆಯ ಮೇಲೆ ಪರಿಣಾಮ ಬೀರುತ್ತದೆ: ಖಾಲಿ ಹೊಟ್ಟೆಯಲ್ಲಿ ಚಹಾ ಕುಡಿಯುವುದರಿಂದ ದೇಹದ ಚಯಾಪಚಯ ಕ್ರಿಯೆ ಕುಂಠಿತಗೊಳ್ಳುತ್ತದೆ. ಇದರಿಂದ ಜೀರ್ಣಕ್ರಿಯೆ ಹದಗೆಡುವ  ಸಾಧ್ಯತೆ ಇರುತ್ತದೆ.  ಇದು ಅಜೀರ್ಣ, ಗ್ಯಾಸ್ ಮತ್ತು ಹೊಟ್ಟೆಯಲ್ಲಿ ಭಾರವಾದಂತಹ ಭಾವನೆ ಇತ್ಯಾದಿ ಸಮಸ್ಯೆಗಳನ್ನು ಉಂಟುಮಾಡುತ್ತದೆ. ಜೀರ್ಣಕ್ರಿಯೆಗೆ  ಸಂಬಂಧಿಸಿದಂತಹ ಈ ಸಮಸ್ಯೆಗಳು ದೀರ್ಘಕಾಲದವರೆಗೆ ಮುಂದುವರೆದರೆ, ಇದು ಹೊಟ್ಟೆ ಹುಣ್ಣುಗಳಂತಹ ಗಂಭೀರ ಪರಿಸ್ಥಿತಿಗಳಿಗೆ ಕಾರಣವಾಗಬಹುದು.  ಇದೇ ಕಾರಣಕ್ಕಾಗಿ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಚಹಾ ಸೇವನೆ ಮಾಡುವುದು ಒಳ್ಳೆಯ ಅಭ್ಯಾಸವಲ್ಲ.

ಹಾಗಾದರೆ ಚಹಾ ಅಥವಾ ಕಾಫಿ ಕುಡಿಯಲು ಉತ್ತಮ ಸಮಯ ಯಾವುದು?

ತಜ್ಞರ ಪ್ರಕಾರ, ಬೆಳಗ್ಗೆ ಉಪಹಾರವನ್ನು ಸೇವಿಸಿದ 1 ರಿಂದ 2 ಗಂಟೆಗಳ ನಂತರ ಚಹಾ ಅಥವಾ ಕಾಫಿ ಕುಡಿಯಲು ಉತ್ತಮ ಸಮಯ. ಹೀಗಿದ್ದರೂ ನೀವು  ಬೆಳಗ್ಗೆ ಬೇಗ  ಚಹಾ ಕುಡಿಯಲು ಬಯಸಿದರೆ, ಖಾಲಿ ಹೊಟ್ಟೆಯಲ್ಲಿ ಕುಡಿಯಬಾರದು. ಬದಲಿಗೆ   ಚಹಾದೊಂದಿಗೆ ಬಿಸ್ಕತ್ತು ಮತ್ತು ಇತರೆ ಉಪಹಾರವನ್ನು ಸೇವನೆ ಮಾಡುತ್ತಾ ಚಹಾ ಕುಡಿಯಬಹುದು. ಇದರಿಂದ ನಿರ್ಜಲೀಕರಣ, ಹೊಟ್ಟೆಯಲ್ಲಿ ಕಿರಿಕಿರಿ ಮತ್ತು ಆಮ್ಲೀಯತೆಯ ಸಮಸ್ಯೆಯನ್ನು ಕಡಿಮೆ ಮಾಡಬಹುದು.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ:

ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್