ಮಧ್ಯರಾತ್ರಿಯಾದ ಮೇಲೆ ನಿದ್ರೆ ಮಾಡುತ್ತೀರಾ? ತಜ್ಞರ ಸಲಹೆ ಇಲ್ಲಿದೆ

ಪ್ರತಿಯೊಬ್ಬ ವ್ಯಕ್ತಿಗೆ ದಿನಕ್ಕೆ 7-8 ಗಂಟೆಗಳ ಕಾಲ ನಿದ್ರೆ ಅತ್ಯಗತ್ಯ. ಇಲ್ಲದಿದ್ದರೆ ಇದು ನಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಮಧ್ಯರಾತ್ರಿಗೂ ಮೊದಲು ಮಲಗುವವರಿಗೆ ಹಲವಾರು ಆರೋಗ್ಯ ಪ್ರಯೋಜನಗಳಿವೆ ಎಂದು ಸಂಶೋಧನೆ ತಿಳಿಸಿದೆ.

ಮಧ್ಯರಾತ್ರಿಯಾದ ಮೇಲೆ ನಿದ್ರೆ ಮಾಡುತ್ತೀರಾ? ತಜ್ಞರ ಸಲಹೆ ಇಲ್ಲಿದೆ
ಸಾಂದರ್ಭಿಕ ಚಿತ್ರ
Follow us
ಸುಷ್ಮಾ ಚಕ್ರೆ
|

Updated on: Dec 20, 2023 | 6:54 PM

ಬಿಡುವಿಲ್ಲದ ಜೀವನದಲ್ಲಿ ಕೆಲವರಿಗೆ ನಿದ್ರೆ ಮಾಡಲೂ ಪುರುಸೊತ್ತು ಇರುವುದಿಲ್ಲ. ಅಥವಾ ಇನ್ನು ಕೆಲವರು ಮಧ್ಯರಾತ್ರಿಯಾದರೂ ಮೊಬೈಲ್, ಲ್ಯಾಪ್​ಟಾಪ್, ಟಿವಿ ನೋಡುತ್ತಾ ಮಲಗುವುದನ್ನು ಮುಂದೂಡುತ್ತಾರೆ. ಈ ರೀತಿ ಮಧ್ಯರಾತ್ರಿಯವರೆಗೂ ನಿದ್ರೆ ಮಾಡದಿರುವುದರಿಂದ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ನಡುರಾತ್ರಿಯ ಬಳಿಕ ನಿದ್ರೆ ಮಾಡುವುದರಿಂದ ಮೆದುಳಿನ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಪ್ರತಿಯೊಬ್ಬ ವ್ಯಕ್ತಿಗೆ ದಿನಕ್ಕೆ 7-8 ಗಂಟೆಗಳ ಕಾಲ ನಿದ್ರೆ ಅತ್ಯಗತ್ಯ. ಇಲ್ಲದಿದ್ದರೆ ಇದು ನಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಮಧ್ಯರಾತ್ರಿಗೂ ಮೊದಲು ಮಲಗುವವರಿಗೆ ಹಲವಾರು ಆರೋಗ್ಯ ಪ್ರಯೋಜನಗಳಿವೆ ಎಂದು ಸಂಶೋಧನೆ ತಿಳಿಸಿದೆ. ದಿನವೂ ಒಂದೇ ಸಮಯಕ್ಕೆ ಮಲಗುವುದು ಮತ್ತು ಏಳುವುದನ್ನು ಅಭ್ಯಾಸ ಮಾಡಿಕೊಳ್ಳುವುದರಿಂದ ನಮ್ಮ ನೈಸರ್ಗಿಕ ಸಿರ್ಕಾಡಿಯನ್ ಲಯಗಳೊಂದಿಗೆ ಹೊಂದಾಣಿಕೆಯಾಗುತ್ತದೆ. ಇದು ಹೆಚ್ಚಿದ ಶಕ್ತಿಯ ಮಟ್ಟಗಳು ಮತ್ತು ಸುಧಾರಿತ ಮಾನಸಿಕ ಆರೋಗ್ಯಕ್ಕೆ ಕಾರಣವಾಗುತ್ತದೆ.

ರಾತ್ರಿ ಬಹಳ ಹೊತ್ತು ಎದ್ದಿರುವ ವ್ಯಕ್ತಿಗಳಿಗೆ ಖಿನ್ನತೆ ಮುಂತಾದ ಆರೋಗ್ಯ ಸಮಸ್ಯೆಗಳು ಉಂಟಾಗುತ್ತವೆ. ಗ್ಯಾಸ್ಟ್ರೋಎಂಟರಾಲಜಿಸ್ಟ್ ಡಾ. ಸೌರಭ್ ಸೇಥಿ ಅವರು ಮಧ್ಯರಾತ್ರಿಯ ನಂತರ ಮಲಗುವುದರಿಂದ ಆಗುವ ಹಾನಿಕಾರಕ ಪರಿಣಾಮಗಳನ್ನು ಬಹಿರಂಗಪಡಿಸುವ ವೀಡಿಯೊವನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ನೀವು ತಡರಾತ್ರಿ ಮಲಗಲು ಹೋದಾಗ ನಿಮ್ಮ ದೇಹದಲ್ಲಿ ಏನಾಗುತ್ತದೆ ಎಂಬ ಮಾಹಿತಿ ಇಲ್ಲಿದೆ.

ಇದನ್ನೂ ಓದಿ: ನಿದ್ರೆ ಮಾಡಲು ಪರದಾಡುತ್ತೀರಾ?; ನಿದ್ರಾಹೀನತೆ ಕ್ಯಾನ್ಸರ್​ಗೂ ಕಾರಣವಾದೀತು ಎಚ್ಚರ!

ನೀವು ಪ್ರತಿ ರಾತ್ರಿ 7ರಿಂದ 8 ಗಂಟೆಗಳ ಕಾಲ ನಿದ್ರೆ ಮಾಡದಿದ್ದರೆ, ಮೊದಲು ನಿಮ್ಮ ತೂಕ ಹೆಚ್ಚಾಗಬಹುದು. ಎರಡನೆಯದಾಗಿ, ನಿಮ್ಮ ಮನಸ್ಥಿತಿಯ ಮೇಲೆ ಪರಿಣಾಮ ಬೀರಬಹುದು. ಮೂರನೆಯದಾಗಿ, ನಿಮ್ಮ ಒತ್ತಡ ಹೆಚ್ಚಾಗಬಹುದು. ನಾಲ್ಕನೆಯದಾಗಿ ನೀವು ಹಗಲಿನಲ್ಲಿ ಏಕಾಗ್ರತೆ ಹೊಂದಲು ಕಷ್ಟವಾಗಬಹುದು. ಇದಲ್ಲದೆ, ಜ್ಞಾಪಕಶಕ್ತಿ, ಗಮನ ಮತ್ತು ಏಕಾಗ್ರತೆಯಂತಹ ಅರಿವಿನ ಕಾರ್ಯಗಳನ್ನು ನಿರ್ವಹಿಸಲು ಸಾಕಷ್ಟು ನಿದ್ರೆ ನಿರ್ಣಾಯಕವಾಗಿದೆ.

ನಿದ್ರೆ ಚಯಾಪಚಯವನ್ನು ನಿಯಂತ್ರಿಸುವ ಮೂಲಕ ಮತ್ತು ಪ್ರತಿರಕ್ಷಣಾ ಕಾರ್ಯವನ್ನು ಬೆಂಬಲಿಸುವ ಮೂಲಕ ದೈಹಿಕ ಆರೋಗ್ಯದಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತದೆ. ಸ್ಥೂಲಕಾಯತೆ, ಮಧುಮೇಹ, ಹೃದಯರಕ್ತನಾಳದ ಕಾಯಿಲೆಗಳು ಮತ್ತು ಕೆಲವು ಕ್ಯಾನ್ಸರ್‌ಗಳು ಸೇರಿದಂತೆ ಅಸಂಖ್ಯಾತ ದೀರ್ಘಕಾಲದ ಸಮಸ್ಯೆಗಳಿಗೆ ಸಾಕಷ್ಟು ನಿದ್ರೆಯ ಕೊರತೆಯು ಕಾರಣವಾಗುತ್ತದೆ.

ಇದನ್ನೂ ಓದಿ: ನಿದ್ರೆ ಕೂಡ ನಿಮ್ಮ ಫರ್ಟಿಲಿಟಿ ಮೇಲೆ ಪರಿಣಾಮ ಬೀರಬಹುದು ಎಚ್ಚರ!

ನಿದ್ರೆಯ ಅಭಾವದ ಪರಿಣಾಮಗಳು ವೈಯಕ್ತಿಕ ಆರೋಗ್ಯವನ್ನು ಮೀರಿ ವಿಸ್ತರಿಸುತ್ತವೆ. ನಿದ್ರೆಯ ಕೊರತೆಯು ಅಪಘಾತಗಳು ಮತ್ತು ಗಾಯಗಳ ಅಪಾಯವನ್ನು ಹೆಚ್ಚಿಸುತ್ತದೆ.

“ನಿದ್ರೆಯ ಸಮಯದಲ್ಲಿ ನಮ್ಮ ದೇಹವು ಚಲಿಸುವುದಿಲ್ಲ, ವಿಶ್ರಾಂತಿಯಲ್ಲಿರುತ್ತದೆ ಎಂದು ನಾವು ಭಾವಿಸುತ್ತೇವೆ. ಆದರೆ ವಾಸ್ತವದಲ್ಲಿ ನಿದ್ರೆ ಮಾಡುವಾಗ ನಮ್ಮ ಮೆದುಳು ನಿಜವಾಗಿಯೂ ಕಷ್ಟಪಟ್ಟು ಕೆಲಸ ಮಾಡುತ್ತದೆ. ಇದು ಅಲ್ಪಾವಧಿಯ ಸ್ಮರಣೆಯನ್ನು ಅಭಿವೃದ್ಧಿಪಡಿಸುವ, ಕಲಿಯುವ ಮತ್ತು ದೀರ್ಘಾವಧಿಯ ಸ್ಮರಣೆಗೆ ಪರಿವರ್ತಿಸುವ ಮೂಲಕ ಶ್ರಮಿಸುತ್ತದೆ. ರಾತ್ರಿಯಲ್ಲಿ ಮಾತ್ರ ನಮ್ಮ ಮೆದುಳಿನ ವಿವಿಧ ಭಾಗಗಳಲ್ಲಿ ಇದೆಲ್ಲವನ್ನೂ ಮಾಡಲು ಸಾಧ್ಯವಾಗುತ್ತದೆ” ಎಂದು ವೈದ್ಯರು ಹೇಳಿದ್ದಾರೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ