ತಲೆ ಹೊಟ್ಟಿನಿಂದಾಗಿ ಕಿರಿಕಿರಿ ಅನುಭವಿಸುತ್ತಿದ್ದೀರಾ? ಇಲ್ಲಿದೆ ಸಿಂಪಲ್ ಟಿಪ್ಸ್

ಮಕ್ಕಳಿಂದ ಹಿಡಿದು ವಯಸ್ಸಾದವರೆಗೂ ಕಾಡುವ ಸಮಸ್ಯೆಯೆಂದರೆ ಅದುವೇ ತಲೆಹೊಟ್ಟು. ಚಳಿಗಾಲ ಬಂತೆಂದರೆ ಸಾಕು ತಲೆಹೊಟ್ಟು ಸಮಸ್ಯೆಯು ಹೆಚ್ಚಾಗುತ್ತದೆ. ಈ ಸಮಯದಲ್ಲಿ ಚರ್ಮವು ತೇವಾಂಶವನ್ನು ಕಳೆದುಕೊಳ್ಳುವುದರಿಂದ ತಲೆ ಹೊಟ್ಟಿನಿಂದ ಚರ್ಮದಲ್ಲಿ ತುರಿಕೆ ಕಂಡು ಬರುವುದು ಸಹಜ. ಹೀಗಾಗಿ ಚಳಿಗಾಲದಲ್ಲಿ ಹೆಚ್ಚಾಗಿ ಕಾಡುವ ತಲೆಹೊಟ್ಟಿನ ಸಮಸ್ಯೆಯನ್ನು ದೂರವಾಗಿಸಲು ಕೆಲವು ಅಭ್ಯಾಸಗಳನ್ನು ರೂಢಿಸಿಕೊಂಡರೆ ಸೂಕ್ತ.

ತಲೆ ಹೊಟ್ಟಿನಿಂದಾಗಿ ಕಿರಿಕಿರಿ ಅನುಭವಿಸುತ್ತಿದ್ದೀರಾ? ಇಲ್ಲಿದೆ ಸಿಂಪಲ್ ಟಿಪ್ಸ್
Follow us
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on: Jan 30, 2024 | 6:37 PM

ಪ್ರತಿಯೊಬ್ಬರು ತಮ್ಮ ಕೇಶರಾಶಿಯ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಾರೆ. ಹೀಗಾಗಿ ಮಾರುಕಟ್ಟೆಯಲ್ಲಿ ಸಿಗುವ ಉತ್ಪನ್ನಗಳಿಂದ ಕೂದಲ ಆರೈಕೆಯನ್ನು ಮಾಡುತ್ತಾರೆ. ಆದರೆ ಹೆಚ್ಚಿನವರಲ್ಲಿ ಕೂದಲು ಉದುರುವುದು, ತಲೆ ಹೊಟ್ಟು, ಚರ್ಮದ ತುರಿಕೆ ಹೀಗೆ ನಾನಾ ರೀತಿಯ ಸಮಸ್ಯೆಗಳು ಕಾಡುತ್ತವೆ. ಹೆಚ್ಚಿನವರು ತಲೆ ಹೊಟ್ಟಿನ ಸಮಸ್ಯೆಯಿಂದ ಬೇಸೆತ್ತು ಹೋಗಿದ್ದಾರೆ. ಧೂಳು, ಕಲುಷಿತ ವಾತಾವರಣ, ನೀರು ಈ ಎಲ್ಲಾ ಕಾರಣಗಳಿಂದ ತಲೆಹೊಟ್ಟು ಕಾಣಿಸಿಕೊಳ್ಳುತ್ತದೆ. ತಲೆಹೊಟ್ಟಿನ ಸಮಸ್ಯೆ ಕಂಡು ಬಂದಲ್ಲಿ ದಿನನಿತ್ಯದ ಅಭ್ಯಾಸದಲ್ಲಿ ಕೆಲವು ಬದಲಾವಣೆಯನ್ನು ಮಾಡಿಕೊಂಡರೆ ಈ ಸಮಸ್ಯೆಯನ್ನು ನಿವಾರಿಸಿಕೊಳ್ಳಬಹುದು.

*ತಲೆಹೊಟ್ಟಿನ ಸಮಸ್ಯೆ ನಿವಾರಣೆಗೆ ಇಲ್ಲಿದೆ ಸಿಂಪಲ್ ಟಿಪ್ಸ್ *

* ಬಿಸಿನೀರಿನ ಸ್ನಾನವನ್ನು ಆದಷ್ಟು ತಪ್ಪಿಸಿ: ಚಳಿಗಾಲದ ಸಮಯದಲ್ಲಿ ತಂಪಿನ ವಾತಾವರಣವಿರುವ ಕಾರಣ ಹೆಚ್ಚಿನವರು ಬಿಸಿ ನೀರಿನ ಸ್ನಾನವನ್ನು ಇಷ್ಟ ಪಡುತ್ತಾರೆ. ಆದರೆ ಬಿಸಿ ನೀರಿನಿಂದ ಸ್ನಾನ ಮಾಡುವುದು ಒಳ್ಳೆಯದಲ್ಲ. ಬಿಸಿ ನೀರಿನಿಂದ ತಲೆ ತೊಳೆದುಕೊಳ್ಳುವುದರಿಂದ ನೈಸರ್ಗಿಕ ತೈಲಗಳನ್ನು ಕಡಿಮೆ ಮಾಡಿ ತೇವಾಂಶವನ್ನು ಕಳೆದುಕೊಳ್ಳುವಂತೆ ಮಾಡುತ್ತದೆ. ಹೀಗಾಗಿ ಉಗುರು ಬೆಚ್ಚಗಿನ ನೀರನ್ನು ಬಳಸುವುದು ಸೂಕ್ತ.

* ಆಂಟಿ ಡ್ಯಾಂಡ್ರಫ್ ಶಾಂಪೂ ಬಳಸಿ : ಚಳಿಗಾಲದಲ್ಲಿ ತಲೆಹೊಟ್ಟು ಸಮಸ್ಯೆಯಿರುವವರು ಮಾರುಕಟ್ಟೆಯಲ್ಲಿ ಸಿಗುವ ವಿವಿಧ ಶಾಂಪೂಗಳನ್ನು ಪ್ರಯೋಗ ಮಾಡುತ್ತಾರೆ. ಈ ಸಮಸ್ಯೆಯಿಂದ ಬಳಲುತ್ತಿರುವವರು ಶಾಂಪೂಗಳ ಆಯ್ಕೆಯ ಬಗ್ಗೆ ಗಮನ ಕೊಡುವುದು ಮುಖ್ಯ. ಆಂಟಿ-ಡ್ಯಾಂಡ್ರಫ್ ಶಾಂಪೂವನ್ನು ಬಳಸುವುದು ಉತ್ತಮ. ಇದು ತಲೆಯನ್ನು ಸ್ವಚ್ಛಗೊಳಿಸುವುದರೊಂದಿಗೆ ತಲೆಹೊಟ್ಟು ಮರಳದಂತೆ ನೋಡಿಕೊಳ್ಳುತ್ತದೆ. ಈ ಸಮಯದಲ್ಲಿ ಸಲ್ಪೆಟ್ ಮತ್ತು ಪ್ಯಾರಾಬೆನ್‌ಗಳಿಲ್ಲದ ಶಾಂಪೂ ಆಯ್ಕೆ ಮಾಡಿಕೊಳ್ಳುವುದು ಉತ್ತಮ.

* ಹೈಡ್ರೈಟಿಂಗ್ ಹೇರ್ ಮಾಸ್ಕ್ ಬಳಸಿ : ಹೇರ್ ಮಾಸ್ಕ್ ಬಳಸುವುದರಿಂದ ನೆತ್ತಿಯ ತಲೆಹೊಟ್ಟು ತೊಡೆದುಹಾಕಲು ಸಹಾಯ ಮಾಡುತ್ತದೆ. ನಿಯಮಿತವಾಗಿ ಆಂಟಿ-ಡ್ಯಾಂಡ್ರಫ್ ಹೇರ್ ಮಾಸ್ಕ್ ಅನ್ನು ಬಳಸುವುದರ ಮೂಲಕ ತುರಿಕೆಯನ್ನು ಸಹ ಕಡಿಮೆಮಾಡಿಕೊಳ್ಳಬಹುದು.

ಇದನ್ನೂ ಓದಿ: ನಟಿ ಸಾಯಿ ಪಲ್ಲವಿಯ ಉದ್ದ ಕೂದಲಿನ ರಹಸ್ಯವೇನು?

* ಆರೋಗ್ಯಕರ ಆಹಾರಕ್ರಮವನ್ನು ಅಳವಡಿಸಿಕೊಳ್ಳಿ : ನಾವು ಸೇವಿಸುವ ಆಹಾರಗಳು ಕೂಡ ಕೂದಲಿನ ಆರೋಗ್ಯವನ್ನು ಕಾಪಾಡುತ್ತದೆ. ಹೀಗಾಗಿ ಕೂದಲಿನ ಆರೋಗ್ಯಕ್ಕಾಗಿ ಧಾನ್ಯಗಳು, ಬೀನ್ಸ್, ಮೀನು, ಅಣಬೆಗಳು ಮತ್ತು ಸೋಯಾಗಳಂತಹ ಪ್ರೋಟೀನ್ ಕೊಬ್ಬಿನಾಮ್ಲಗಳಲ್ಲಿ ಹೆಚ್ಚಿನ ಆಹಾರವನ್ನು ಸೇವಿಸುವುದರಿಂದ ಉತ್ತಮ ಪರಿಣಾಮವನ್ನು ಬೀರುತ್ತದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ