AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ashada Masa 2024: ಆಷಾಢ ಮಾಸಕ್ಕೆ ಗಂಡ ಹೆಂಡತಿ ಒಟ್ಟಿಗೆ ಇರುವಂತಿಲ್ಲ ಯಾಕೆ?

ಆಷಾಢ ಮಾಸವನ್ನು ಅಶುಭವೆಂದೇ ಪರಿಗಣಿಸಲಾಗುತ್ತದೆ. ಹೀಗಾಗಿ ಈ ಮಾಸದಲ್ಲಿ ಶುಭ ಕಾರ್ಯಗಳು ನಡೆಯುವುದಿಲ್ಲ. ಅದಲ್ಲದೇ, ಹೊಸದಾಗಿ ಮದುವೆಯಾದ ದಂಪತಿಗಳಿಬ್ಬರೂ ಪರಸ್ಪರ ದೂರವಿರಬೇಕಾದ ಕಾರಣ ಹೆಣ್ಣು ಮಕ್ಕಳು ಗಂಡನ ಮನೆಯಿಂದ ತವರು ಮನೆಗೆ ತೆರಳುತ್ತಾರೆ. ಹಾಗಾದ್ರೆ ಈ ಆಚರಣೆಯ ಹಿಂದಿರುವ ಕಾರಣವೇನು ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ.

Ashada Masa 2024: ಆಷಾಢ ಮಾಸಕ್ಕೆ ಗಂಡ ಹೆಂಡತಿ ಒಟ್ಟಿಗೆ ಇರುವಂತಿಲ್ಲ ಯಾಕೆ?
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on: Jul 10, 2024 | 2:28 PM

Share

ಹಿಂದೂ ಧರ್ಮದ ಚಾಂದ್ರಮಾನ ಪಂಚಾಂಗದ ನಾಲ್ಕನೇ ಮಾಸ ಈ ‘ಆಷಾಢ’. ದಕ್ಷಿಣಾಯಣದ ಪರ್ವ ಕಾಲದಲ್ಲಿ ಜೇಷ್ಠ ಮಾಸದ ಅಮವಾಸ್ಯೆಯ ಮರುದಿನವಾದ ಪಾಡ್ಯ ತಿಥಿಯಿಂದ ಆಷಾಢ ಮಾಸ ಆರಂಭವಾಗುತ್ತದೆ. ಈ ವರ್ಷ ಆಷಾಢ ಮಾಸವು ಜುಲೈ 6 ರಂದು ಪ್ರಾರಂಭವಾಗಿ ಆಗಸ್ಟ್ 4 ರಂದು ಕೊನೆಗೊಳ್ಳುತ್ತದೆ. ಈ ಮಾಸದಲ್ಲಿ ಹೊಸದಾಗಿ ಮದುವೆಯಾದ ಹೆಣ್ಣು ಮಕ್ಕಳು ತವರಿಗೆ ಬರುವ ಸಂಪ್ರದಾಯವಿದೆ. ಆಂಧ್ರ ಪ್ರದೇಶದಲ್ಲಿ ಆಷಾಢ ಮಾಸದಲ್ಲಿ ಅತ್ತೆ-ಸೊಸೆ ಕೂಡ ಜೊತೆಯಾಗಿರಬಾರದು ಎನ್ನಲಾಗುತ್ತದೆ.

ಆಷಾಢದಲ್ಲಿ ಗಂಡ ಹೆಂಡತಿ ಒಟ್ಟಿಗೆ ಇರುವಂತಿಲ್ಲ ಏಕೆ?

ಆಷಾಢ ಮಾಸದಲ್ಲಿ ನವವಿವಾಹಿತರು ದೂರವಿರಬೇಕು ಎನ್ನುವ ಕಾರಣ ಹೆಣ್ಣು ಮಕ್ಕಳು ತವರಿಗೆ ಬರುವ ಸಂಪ್ರದಾಯವಿದೆ. ಈ ಸಮಯದಲ್ಲಿ ಗಂಡ ಹೆಂಡತಿ ಸೇರಿ ಹೆಣ್ಣು ಗರ್ಭವತಿಯಾದರೆ, ಚೈತ್ರ ಮಾಸದಲ್ಲಿ ಮಗುವಿಗೆ ಜನ್ಮ ನೀಡಬಹುದು. ಈ ಏಪ್ರಿಲ್ ತಿಂಗಳಿನಲ್ಲಿ ಉಷ್ಣಾಂಶ ಹೆಚ್ಚಾಗಿರುತ್ತದೆ. ಇದರಿಂದ ತಾಯಿ ಹಾಗೂ ಮಗುವಿಗೆ ಆರೋಗ್ಯ ಸಮಸ್ಯೆಗಳು ಕಾಡಬಹುದು ಎನ್ನುವ ವೈಜ್ಞಾನಿಕ ಕಾರಣವು ಇದೆ.

ಅಷ್ಟೇ ಅಲ್ಲದೇ ಈ ಆಷಾಢ ತಿಂಗಳಿನಲ್ಲಿ ರೈತಾಪಿ ವರ್ಗಕ್ಕೆ ಕೆಲಸಗಳು ಸ್ವಲ್ಪ ಹೆಚ್ಚಾಗಿರುತ್ತದೆ. ಈ ಸಮಯದಲ್ಲಿ ಹೊಸದಾಗಿ ಮದುವೆಯಾದ ಜೋಡಿಗಳು ಜೊತೆಗಿದ್ದರೆ, ಪತಿಯು ಪತ್ನಿಯ ಜೊತೆಗೆ ಸಮಯ ಕಳೆಯಬಹುದು. ಹೀಗಾದಾಗ ಕೃಷಿ ಕೆಲಸಗಳು ಪೂರ್ಣಗೊಳ್ಳದೇ ಇರಬಹುದು. ಆತನು ಸಂಪೂರ್ಣವಾಗಿ ಕೆಲಸದಲ್ಲಿ ತೊಡಗಿಕೊಳ್ಳಲಿ ಎನ್ನುವ ಕಾರಣಕ್ಕೆ ಆಷಾಢದಲ್ಲಿ ತವರಿಗೆ ಹೆಣ್ಣು ಮಕ್ಕಳನ್ನು ಕಳುಹಿಸಿಕೊಡುತ್ತಾರೆ.

ದೂರವಿರುವ ಅತ್ತೆ ಸೊಸೆ ನಡುವೆ ಪ್ರೀತಿ ಹೆಚ್ಚುತ್ತೆ

ಇನ್ನೊಂದು ನಂಬಿಕೆಯ ಪ್ರಕಾರ ಆಷಾಢ ಮಾಸದಲ್ಲಿ ಹೊಸದಾಗಿ ಮದುವೆಯಾದ ಹೆಣ್ಣು ತನ್ನ ಅತ್ತೆಯೊಂದಿಗಿದ್ದರೆ ಜಗಳಗಳು ಉಂಟಾಗುತ್ತದೆ. ಹೀಗಾಗಿ ಸೊಸೆಯನ್ನು ಒಂದು ತಿಂಗಳ ಕಾಲ ತವರು ಮನೆಗೆ ಕಳುಹಿಸಲಾಗುತ್ತದೆ. ಇಬ್ಬರೂ ದೂರವಿದ್ದರೆ ಅತ್ತೆ ಸೊಸೆಯ ನಡುವೆ ಪ್ರೀತಿ ಕಾಳಜಿಯು ಹೆಚ್ಚುತ್ತದೆ. ಅದಲ್ಲದೇ ತಾಯಿ ಮಗಳು ಸಂಬಂಧವು ಗಟ್ಟಿಯಾಗುತ್ತದೆ ಎನ್ನಲಾಗಿದೆ.

ಇದನ್ನೂ ಓದಿ: ಸಂಜೆ ಕಾಫಿ ಜೊತೆಗೆ ಬಾಳೆದಿಂಡಿನ ಚಾಟ್ಸ್, ಇಲ್ಲಿದೆ ರೆಸಿಪಿ

ತವರಿನಿಂದ ಹೊರಡುವ ಹೆಣ್ಣಿಗೆ ಕಾಲ್ಗೆಜ್ಜೆಯೇ ಉಡುಗೊರೆ

ಕೆಲವು ಕಡೆಗಳಲ್ಲಿ ಆಷಾಢದಲ್ಲಿ ತವರಿಗೆ ಬಂದ ಹೆಣ್ಣು ಮಕ್ಕಳು ಕಾಲ್ಗೆಜ್ಜೆ ಧರಿಸಬೇಕು ಎನ್ನುವ ಸಂಪ್ರದಾಯವಿದೆ. ತನ್ನ ತವರು ಮನೆಯಲ್ಲಿ ಮಗಳು ಓಡಾಡುವಾಗೆಲ್ಲ ಆಕೆಯ ಕಾಲ್ಗೆಜ್ಜೆ ಸದ್ದು ಕೇಳಿಸುತ್ತದೆ. ಆಷಾಢ ಮುಗಿದ ಬಳಿಕ ಗಂಡನ ಮನೆಗೆ ತೆರಳಿದಾಗ ತನ್ನ ಮಗಳ ಕಾಲ್ಗೆಜ್ಜೆ ಸದ್ದುವು ತಾಯಿಗೆ ಮಗಳ ನೆನಪಾಗುವಂತೆ ಮಾಡುತ್ತದೆಯಂತೆ. ಅದಲ್ಲದೇ, ಮಗಳು ಆಷಾಢ ಮುಗಿಸಿ ತನ್ನ ಗಂಡನ ಮನೆಗೆ ಹೊರಡುವ ಹೆಣ್ಣು ಮಗಳಿಗೆ ಗೆಜ್ಜೆಗಳಿಲ್ಲದ ಕಾಲ್ ಗೆಜ್ಜೆಯನ್ನು ಉಡುಗೊರೆಯಾಗಿ ನೀಡುವ ಸಂಪ್ರದಾಯವಿದೆ. ಮಗಳು ಗಂಡನ ಮನೆಯಲ್ಲಿ ಹೊಂದಾಣಿಕೆಯಿಂದ ಜೀವನ ನಡೆಸಲಿ ಎನ್ನುವುದಾಗಿದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ