AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಹಂಕಾರದ ಮಾತುಗಳಿಂದ ಸ್ಥಾನವನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ

ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ವಸಂತ ಋತುವಿನ ವೈಶಾಖ ಮಾಸ ಶುಕ್ಲ ಪಕ್ಷದ ಷಷ್ಠೀ ತಿಥಿ, ಶನಿವಾರ ಪರೋಕ್ಷ ನಿಂದನೆ, ಸಂಗಾತಿಯ ಮಾತಿಗೆ ವಿರೋಧ, ಮಾತನಾಡಲು ಮುಜಿಗರ ಇವೆಲ್ಲ ಈ ದಿನದ ವಿಶೇಷ. ಇಂದಿನ ದಿನ ಭವಿಷ್ಯದಲ್ಲಿ ಯಾವ ರಾಶಿಗೆ ಯಾವ ಫಲ ಎನ್ನುವುದನ್ನು ತಿಳಿದುಕೊಳ್ಳಿ.

ಅಹಂಕಾರದ ಮಾತುಗಳಿಂದ ಸ್ಥಾನವನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ
ಜ್ಯೋತಿಷ್ಯ
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ವಿವೇಕ ಬಿರಾದಾರ|

Updated on: May 03, 2025 | 1:41 AM

Share

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು: ವಸಂತ, ಸೌರ ಮಾಸ: ಮೇಷ ಮಾಸ, ಮಹಾನಕ್ಷತ್ರ: ಭರಣೀ, ಮಾಸ: ವೈಶಾಖ, ಪಕ್ಷ: ಶುಕ್ಲ, ವಾರ: ಶನಿ, ತಿಥಿ : ಷಷ್ಠೀ ನಿತ್ಯನಕ್ಷತ್ರ : ಪುನರ್ವಸು, ಯೋಗ: ಧೃತಿ, ಕರಣ: ಬಾಲವ, ಸೂರ್ಯೋದಯ – 06 : 10 am, ಸೂರ್ಯಾಸ್ತ – 06 : 48 pm, ಇಂದಿನ ಶುಭಾಶುಭಕಾಲ: ರಾಹು ಕಾಲ 09:20 – 10:55, ಯಮಘಂಡ ಕಾಲ 14:04 – 15:39, ಗುಳಿಕ ಕಾಲ 06:10 – 07:45

ಮೇಷ ರಾಶಿ: ಮರದ ಕೆಲಸ ಮಾಡುವವರಿಗೆ ಲಾಭ. ಇಂದು ನೀವು ಮಾಡಿದ ಸಾಲವನ್ನು ಮರುಪಾವತಿಸಿ ಸಮಾಧಾನಗೊಳ್ಳುವಿರಿ. ದೀರ್ಘಕಾಲದಿಂದ ಮಾಡುತ್ತಿದ್ದ ಕೆಲಸಗಳು ಮುಕ್ತಾಯವಾಗುವುವು. ಸೌಂದರ್ಯ ವರ್ಧನೆಗೆ ಸಮಯವನ್ನು ಇಡುವಿರಿ‌. ಸಂಬಂಧಿಕರ ಸಹವಾಸ, ಸಹಾಯಗಳು ಸಿಗಲಿವೆ. ನಿಮ್ಮ ಅಂತಸ್ಸತ್ತ್ವ ಗಟ್ಟಿ ಇರುವುರಿಂದ ಯಾರ ಮಾತಿಗೂ ಕಿವಿಗೊಡದೆ ನೀವು ನಿರ್ಧರಿಸಿದ ಕೆಲಸದಲ್ಲಿ ಮುಂದುವರಿಯುತ್ತೀರಿ. ನೀವು ಮನೋರಂಜನೆಗೆ ಕ್ರೀಡೆಯಲ್ಲಿ ಪಾಲ್ಗೊಳ್ಳುವಿರಿ. ವಿದ್ಯಾರ್ಥಿಗೆಳಿಗೆ ಶೈಕ್ಷಣಿಕವಾಗಿ ಸರಿಯಾದ ಮಾರ್ಗದರ್ಶನ ಅಗತ್ಯವಿರುವುದು. ವಾಹನ ಚಾಲನೆಯನ್ನು ಎಚ್ಚರಿಕೆಯಿಂದ ಮಾಡಿ. ಯಾರಾದರೂ ಶ್ರೇಷ್ಠ ವ್ಯಕ್ತಿಗಳ ಭೇಟಿಯು ಆಗಸ್ಮಿಕವಾಗಿ ಆಗಲಿದೆ. ಅವರ ಒಡನಾಟವನ್ನು ಇಟ್ಟುಕೊಳ್ಳುವಿರಿ. ಪ್ರಭಾವೀ ವ್ಯಕ್ತಿಗಳ ಒತ್ತಡಕ್ಕೆ ಕೊನೆಗೂ ಶರಣಾಗಬೇಕಾಗುವುದು. ಆತ್ಮವಿಶ್ವಾಸವನ್ನು ಕಳೆದುಕೊಳ್ಳದೇ ಮುಂದಡಿ ಇಡುವಿರಿ. ಕಳೆದುಕೊಂಡ ವಸ್ತುವನ್ನು ಮರಳಿ ಪಡೆಯಬೇಕಾದ ಸ್ಥಿತಿ ಬರಬಹುದು.

ವೃಷಭ ರಾಶಿ: ಕಾರ್ಯವು ವಿಳಂಬವಾದರೂ ಆಗುವಂತೆ ಆದರೆ ಚೆನ್ನ. ಹಣವನ್ನು ಉಳಿಸಿಕೊಳ್ಳಬೇಕು ಎಂದು ಪ್ರಯತ್ನಿಸಿದರೂ ನಿಮ್ಮ ಕೈ ಮೀರಿ ಹೋಗುವ ಸಂದರ್ಭವೇ ಇರುವುದು. ಪ್ರಯಾಣವನ್ನು ಅತಿಯಾಗಿ ಮಾಡಬೇಡಿ.‌ ಹಣದ ವಿಚಾರವಾಗಿ ಮನೆಯಲ್ಲಿ ಜಗಳವಾಹಬಹುದು. ಪರರ ಆಕರ್ಷಣೆಯಿಂದ ಮನಸ್ಸು ಅರಳುವುದು. ಹೊಸ ಜವಾಬ್ದಾರಿಗಳನ್ನು ಒಪ್ಪಿಕೊಳ್ಳಲು ಹೋಗಬೇಡಿ.‌ ಸಮಯ ವ್ಯರ್ಥವಾಗುತ್ತಿದೆ ಎಂದು ತಿಳಿದಿದ್ದರೂ ಅನ್ಯ ಮಾರ್ಗವಿಲ್ಲದೇ ಇರಬೇಕಾದೀತು. ಅಧ್ಯಾತ್ಮದಿಂದ ನಿಮಗೆ ನೆಮ್ಮದಿ ಸಿಗಲಿದೆ. ನಿಮ್ಮ ಇಂದಿನ ಕಾರ್ಯದಲ್ಲಿ ಸಾವಧಾನತೆ ಇರಲಿದೆ. ನಿಜವಾದ ಯಶಸ್ಸಿಗೆ ಅಡ್ಡದಾರಿಯನ್ನು ಹುಡುಕಿ ಪ್ರಯೋಜನವಾಗದು. ಯಾರದೋ ಸುದ್ದಿಯನ್ನು ಮತ್ಯಾರಿಗೋ ಹೇಳುತ್ತ ಸಮಯವನ್ನು ಕಳೆಯುವಿರಿ. ಮಕ್ಕಳಲ್ಲಿ ಸ್ಪರ್ಧಾಮನೋಭಾವವನ್ನು ಹೆಚ್ಚಿಸುವಿರಿ. ಕುಮಾರ್ಗದಿಂದ ಆದಾಯವನ್ನು ಪಡೆಯುವಿರಿ. ಭೂಮಿಯ ಖರೀದಿಗೆ ಮನಸ್ಸಾಗುವುದು.

ಮಿಥುನ ರಾಶಿ: ಪರೋಕ್ಷವಾಗಿ ನಿಂದೆನೆಯಾಗುವುದು ಗೊತ್ತಾಗದೇ ಹೋಗಬಹುದು. ಇಂದು ಉದ್ಯೋಗದ ಚಿಂತೆಯಿಂದ ಯಾವ ಪ್ರಯೋಜನವಾಗದು. ಚಿಂತನೆಯಿಂದ ಮಾತ್ರ ಬಂದಿರುವ ಸಮಸ್ಯೆಗಳನ್ನು ನಿವಾರಿಸಿಕೊಳ್ಳುವ ಬಗೆ ಅರಿಯದಾದೀತು. ನಿಮ್ಮ ವಿವಾಹದ ಮಾತುಕತೆಗಳಿಂದ ಬಹಳ ನೆಮ್ಮದಿ ನೀಡುವುದು. ವಿವಾಹದ ಬಹು ನಿರೀಕ್ಷೆ ಹುಸಿಯಾಗಲಿದೆ. ಅಪರೂಪದ ಸ್ನೇಹಿತನ‌ ಜೊತೆ ಸುತ್ತಾಟ. ವ್ಯರ್ಥವೆನಿಸಿದರೂ ನಿಮಗೆ ಬೇಕಾದ ಅಂಶಗಳು ಅವನಿಂದ ಸಿಗಲಿದೆ. ನಿಮ್ಮ ಗೊಂದಲಗಳಿಗೆ ತೆರೆ ಬೀಳಲಿದೆ. ವೈದ್ಯರಿಗೆ ಇಂದು ಉತ್ತಮದಿನವಾಗಿಲ್ಲ. ನೀವೂ ದೈವಕ್ಕೆ ಶರಣಾಗಲೇ ಬೇಕು. ಆಪ್ತರು ನೀಡಿದ ವಸ್ತುವನ್ನು ಕಳೆದುಕೊಳ್ಳುವಿರಿ. ಮನೆಯಲ್ಲಿ ಹಿರಿಯರ ಮಾತಿಗೆ ಬೆಲೆ ಕೊಡುವುದನ್ನು ಮರೆಯುವುದು ಬೇಡ. ಧಾರ್ಮಿಕ ಕಾರ್ಯದಲ್ಲಿ ಹೆಚ್ಚು ಆಸಕ್ತಿ ಇರುವುದು. ಸದಾಕಾಲ ಸಂತೋಷದಿಂದ ಇರಲು ನೀವೇ ಏನಾದರೂ ಕ್ರಮವನ್ನು ಅನುಸರಿಸುವಿರಿ. ಸ್ವಯಂ ಕೃತ ಅಪರಾಧವೇ ನಿಮಗೆ ಮುಳುವಾಗಬಹುದು. ಆಕಸ್ಮಿಕ ಲಾಭದ ನಿರೀಕ್ಷೆಯಲ್ಲಿ ನೀವು ಇರುವಿರಿ. ಬೇಕಾದಷ್ಟು ಮಾತ್ರ ಮಾತುಗಳನ್ನಾಡಿ.

ಕರ್ಕಾಟಕ ರಾಶಿ: ಸಂಗಾತಿಯ ಮಾತುಗಳನ್ನು ಸರಿಯಾಗಿ ಅರ್ಥಮಾಡಿಕೊಳ್ಳಲಾಗದು. ಇಂದು ಪ್ರಭಾವೀ ವ್ಯಕ್ತಿಗಳ ಸಹವಾಸದಿಂದ ಯಾವುದಾದರೂ ಸ್ಥಾನವು ಪ್ರಾಪ್ತಿಯಾಗಲಿದೆ. ಪುಣ್ಯಸ್ಥಳದ ದರ್ಶ‌ನಕ್ಕೆಂದು ಪ್ರಯಾಣ ಮಾಡುವಿರಿ. ವಾಹನದಿಂದ‌ ಬಿದ್ದು ಪೆಟ್ಟು ಮಾಡಿಕೊಳ್ಳುವಿರಿ. ಮಾತನ್ನು ಸರಿಯಾಗಿ ಆಡಿ. ಇಲ್ಲವಾದರೆ ಅನೇಕ ಶುಭಕಾರ್ಯಗಳಿಂದ, ಉತ್ತಮ ಕಾರ್ಯಗಳಿಂದ ವಂಚಿತರಾಗುವಿರಿ. ಮಕ್ಕಳ ವಿಚಾರವಾಗಿ ದಂಪತಿಗಳ ಮಧ್ಯದಲ್ಲಿ ವೈಮನಸ್ಯವು ಉಂಟಾಗಬಹುದು. ಸಹೋದರರಿಗೆ ಆರ್ಥಿಕ ಸಹಾಯ ಮಾಡುವಿರಿ. ನಿಮ್ಮಿಬ್ಬರ ಮಾತಿನ‌ ಚಕಮಕಿಯಲ್ಲಿ ಕೂಸು ಬಡವಾದೀತು. ಮನೆಯಲ್ಲಿ ಆಸ್ತಿಯ ವಿಚಾರವಾಗಿ ಸಣ್ಣ ಬಿರುಸಿನ ಮಾತುಗಳು ಕೇಳಿಬರಬಹುದು. ಅಗತ್ಯದ ವಸ್ತುಗಳನ್ನು ಖರೀದಿಸಿದಾಗ ಅಗತ್ಯತೆ ಮುಗಿದುಹೋಗಿರಬಹುದು. ಕತ್ತಲೆಯನ್ನು ಶಪಿಸುವುದಕ್ಕಿಂತ ಬೆಳಕನ್ನು ಹುಡುಕುವುದು ಉತ್ತಮ. ಮನಸ್ಸಿನ ದುಗುಡವನ್ನು ಶಾಂತಮಾಡಿಕೊಳ್ಳುವಿರಿ. ಕೋಪವನ್ನು ಬಲವಂತವಾಗಿ ತಡೆಯುವಿರಿ. ನಿಮ್ಮ ವಿಚಾರವನ್ನು ನೀವು ಗುಪ್ತವಾಗಿ ತಿಳಿದುಕೊಳ್ಳುವಿರಿ. ಸಿಟ್ಟಿನ ಕೈಗೆ ನಿಮ್ಮನ್ನು ಕೊಡುವುದು ಬೇಡ.

ಸಿಂಹ ರಾಶಿ: ಉದ್ಯಮದ ಮೇಲಿಂದ ಹೂಡಿಕೆ ಸಾಧ್ಯವಾಗುವುದು. ಇಂದು ವಿವಾಹಕ್ಕೆ ಸಂಬಂಧಿಸಿದ ಮಾತುಕತೆಗಳಿಂದ ಸಂತೋಷವಾಗಲಿದೆ. ಇಂದು ದಿನವಿಡೀ ದೇಹದ ಆಲಸ್ಯ, ಮನಸ್ಸಿನಲ್ಲಿ ಇರುವ ಜಾಡ್ಯದಿಂದ ಯಾವ ಕಾರ್ಯಗಳೂ ಆಗದು. ನಿಮ್ಮ ವೇಗವನ್ನು ನಿಯಂತ್ರಿಸಲು ಅನ್ಯರ ಹಸ್ತಕ್ಷೇಪ ಹೆಚ್ಚಾಗುವುದು. ದಿವಸ ಚಟುವಟಿಕೆಗಳಿಗಿಂತ ಭಿನ್ನವಾದ ಯಾವುದಾದರೂ ಆಸಕ್ತಿಯಿರುವ ಕೆಲಸಗಳ ಬಗ್ಗೆ ಗಮನಹರಿಸಿ. ಪ್ರಯಾಣದಲ್ಲಿ ಯಾರಾದರೂ ನಿಮ್ಮನ್ನು ಕೆಣಕಿ, ನಿಮ್ಮ ಬಾಯಿ ತೆರೆಸಬಹುದು. ನಿಮಗೆ ಗೌರವಕ್ಕೆ ತೊಂದರೆ ಆಗಬಹುದು. ಆರೋಗ್ಯವು ಕೆಡಲಿದ್ದು ಹತ್ತಾರು ಆಲೋಚನೆಗಳು ಬರಬಹುದು. ಕೃಷಿಯಲ್ಲಿ ತೊಡಗಿಕೊಳ್ಳುವಿರಿ. ನಿಮ್ಮನ್ನು ಭಾವನಾತ್ಮಕವಾಗಿ ಕಟ್ಟಿಹಾಕಬಹುದು. ವಿರೋಧಿಗಳ ಮಾತಿನ ಭರದಲ್ಲಿ ನಿಮ್ಮ ಮಾತು ಗೌಣವಾಗಬಹುದು. ನಿಮ್ಮನ್ನು ನಿಂದಿಸುವವರನ್ನು ನೀವು ದೂರವಿರಿಸುವಿರಿ. ಪ್ರಯಾಣದಿಂದ ಆಯಾಸವಾಗಲಿದೆ. ಮಕ್ಕಳಿಲ್ಲದೇ ಬೇಸರವಾಗಲಿದೆ. ಏಕಾಂಗಿಯಾಗಿ ಇರುವುದು ಕಷ್ಟವಾಗುವುದು.

ಕನ್ಯಾ ರಾಶಿ: ಅಹಂಕಾರದ ಮಾತುಗಳಿಂದ ಸ್ಥಾನವನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ. ನಿಮ್ಮ ಕಾರ್ಯಕ್ಷೇತ್ರವನ್ನು ಉತ್ತಮ ಮಾಡಿಕೊಳ್ಳುವುದು ನಿಮ್ಮದಾಗಿರಲಿದೆ. ಉನ್ನತಸ್ಥಾನದ ಪ್ರಸ್ತಾಪವೂ ಆಗಬಹುದು. ನಿಮ್ಮ ಯೋಜನೆಗೆ ನಿರೀಕ್ಷೆಗೆ ತಕ್ಕ ಪ್ರತಿಕ್ರಿಯೆ ಸಿಗದು. ಕೂಡಲೇ ವಿರುದ್ಧದ ಆಲೋಚನೆ ಬೇಡ, ಯಥಾಸ್ಥಿತಿ ಇರಲಿ. ನಿಮ್ಮ ಜೀವನದಲ್ಲಿ ಪ್ರಮುಖರು ಯಾರೆಂಬ ಸರಿಯಾದ ಚಿತ್ರಣವು ನಿಮಗೆ ಸಿಗಲಿದೆ. ಪಿತ್ತರೋಗದಿಂದ ಬಳಲುವ ಸಾಧ್ಯತಯಿದೆ. ಮನೆಯಲ್ಲಿಯೇ ಉಂಟಾದ ಜಗಳವನ್ನು ಅಲ್ಲಿಯೇ ಪರಿಹರಿಸಿಕೊಳ್ಳಿ. ಯಾರಿಗೂ ಹೇಳಿಕೊಳ್ಳದೇ ನೀವೊಬ್ಬರೇ ರೋಗವನ್ನು ಅನುಭವಿಸುವಿರಿ. ಆಸ್ತಿಯ ಸಂಪಾದನೆಯಿಂದ ಪೂರ್ಣ ತೃಪ್ತಿ ಇಲ್ಲ. ಕೆಲವರ ಸಹವಾಸದಿಂದ ನಿಮ್ಮ ದಿಕ್ಕು ತಪ್ಪಬಹುದು. ವಿದ್ಯಾರ್ಥಿಗಳಿಗೆ ಅಧ್ಯಯನಕ್ಕೆ ಉತ್ತಮಸ್ಥಾನವು ಸಿಗಲಿದೆ. ವಿದೇಶೀಯ ವ್ಯಾಪಾರವು ಹೆಸರಿಗಷ್ಟೇ ಇರುವುದು. ಹಣಕಾಸಿನ ವಿಚಾರಕ್ಕೆ ಅಪವಾದ ಬರಬಹುದು. ನಿಮ್ಮನ್ನು ಪರೋಕ್ಷವಾಗಿ ಯಾರದರೂ ನಿಂದಿಸಬಹುದು. ಮನಸ್ಸಿನಲ್ಲಿ ಸಾವಧಾನತೆ ಇರದು. ವಾಹನದಲ್ಲಿ ಸಂಚಾರಕ್ಕೆ ತಡೆಯಾಗಲಿದೆ.