Health Tips: ಅಪ್ಪಿ ತಪ್ಪಿಯೂ ಈ ಹಣ್ಣು ತಿಂದ ಕೂಡಲೇ ನೀರು ಕುಡಿಯಬೇಡಿ

ಹೆಚ್ಚಿನವರು ಆಹಾರ ಅಥವಾ ಊಟವನ್ನು ಸೇವಿಸಿದ ತಕ್ಷಣವೇ ನೀರನ್ನು ಕುಡಿಯುತ್ತಾರೆ. ಆಹಾರವನ್ನು ತಿಂದ ತಕ್ಷಣ ನೀರನ್ನು ಕುಡಿಯಬಾರದು ಎಂದು ಆರೋಗ್ಯ ತಜ್ಞರು ಸಲಹೆಯನ್ನು ನೀಡುತ್ತಾರೆ. ನಿಮಗೆ ಗೊತ್ತಾ ಕೇವಲ ಊಟ ಮಾಡಿದ ಬಳಿಕ ಮಾತ್ರವಲ್ಲ, ಈ ಕೆಲವೊಂದು ಹಣ್ಣುಗಳನ್ನು ತಿಂದ ತಕ್ಷಣವೇ ನೀರನ್ನು ಕುಡಿದರೆ ಹೊಟ್ಟೆಗೆ ಸಂಬಂಧಿ ಸಮಸ್ಯೆಗಳು ಭಾದಿಸಬಹುದು. ಹಾಗಾದರೆ ಯಾವ ಹಣ್ಣನ್ನು ತಿಂದ ಬಳಿಕ ನೀರು ಕುಡಿಯಬಾರದು ಎಂದು ಇಲ್ಲಿ ತಿಳಿಯೋಣ.

Health Tips: ಅಪ್ಪಿ ತಪ್ಪಿಯೂ ಈ ಹಣ್ಣು ತಿಂದ ಕೂಡಲೇ ನೀರು ಕುಡಿಯಬೇಡಿ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷತಾ ವರ್ಕಾಡಿ

Updated on: Aug 26, 2023 | 6:37 PM

ಹಣ್ಣುಗಳ ಸೇವನೆ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ನೈಸರ್ಗಿಕ ಜೀವಸತ್ವಗಳು, ಖನಿಜಗಳು, ಪೋಷಕಾಂಶಗಳು ಹಣ್ಣಿನಲ್ಲಿ ಕಂಡುಬರುತ್ತವೆ. ಅದ್ದಕ್ಕಾಗಿಯೇ ವೈದ್ಯರು ಮತ್ತು ಆಹಾರ ತಜ್ಞರು ಪ್ರತಿನಿತ್ಯ ಹಣ್ಣುಗಳನ್ನು ತಿನ್ನಲು ಶಿಫಾರಸು ಮಾಡುತ್ತಾರೆ. ಹಣ್ಣುಗಳನ್ನು ಸೇವಿಸುವ ಮೂಲಕ ನೀವು ಆರೋಗ್ಯವನ್ನು ಸರಿಯಾದ ರೀತಿಯಲ್ಲಿ ಕಾಪಾಡಿಕೊಳ್ಳಬಹುದು. ಆದರೆ ಹಣ್ಣುಗಳನ್ನು ಸೇವಿಸಿದ ತಕ್ಷಣ ನೀರನ್ನು ಕುಡಿಯಲು ಹೋಗಬೇಡಿ. ಏಕೆಂದರೆ ಈ ಒಂದು ತಪ್ಪಿನಿಂದ ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗಳು ಕಾಣಿಸಿಕೊಳ್ಳಬಹುದು. ಇದಲ್ಲದೆ ನೀವು ಶೀತ ಮತ್ತು ಕೆಮ್ಮಿನಿಂದ ಕೂಡಾ ತೊಂದರೆಗೊಳಗಾಬಹುದು. ಹಾಗಾದರೆ ಯಾವ ಹಣ್ಣ ತಿಂದ ನಂತರ ನೀರು ಕುಡಿಯಬಾರದು ಎಂಬುದನ್ನು ನೋಡೋಣ.

ಈ  ಹಣ್ಣುಗಳನ್ನು ಸೇವಿಸಿದ ತಕ್ಷಣ ನೀರನ್ನು ಕುಡಿಯಬೇಡಿ:

ಸೇಬು:

ಸೇಬು ಆರೋಗ್ಯಕ್ಕೆ ವರದಾನ ಇದ್ದಂತೆ. ಇದು ಹೆಚ್ಚಿನ ಫೈಬರ್ ಅಂಶವನ್ನು ಹೊಂದಿದ್ದು, ಹಲವಾರು ಆರೋಗ್ಯ ಪ್ರಯೋಜನಗಳನ್ನು ಒದಗಿಸುತ್ತದೆ. ಅಲ್ಲದೆ ಇದು ಜೀರ್ಣಕ್ರಿಯೆಯನ್ನು ಆರೋಗ್ಯಕರವಾಗಿಡಲು ಸಹಾಯ ಮಾಡುತ್ತದೆ. ಆದರೆ ಸೇಬು ತಿಂದ ತಕ್ಷಣ ನೀವೇನಾದರೂ ನೀರು ಕುಡಿದರೆ ಅದು ಜೀರ್ಣಕ್ರಿಯೆಯ ಮೇಲೆ ಅಡ್ಡ ಪರಿಣಾಮ ಬೀರುತ್ತದೆ. ಗ್ಯಾಸ್ ಅಥವಾ ಅಜೀರ್ಣ ಸಮಸ್ಯೆ ಉಂಟಾಗುತ್ತದೆ.

ಬಾಳೆಹಣ್ಣು:

ಸಾಮಾನ್ಯವಾಗಿ ಹೆಚ್ಚಿನವರು ಪ್ರತಿನಿತ್ಯ ಬಾಳೆಹಣ್ಣು ತಿನ್ನಲು ಇಷ್ಟಪಡುತ್ತಾರೆ. ಆರೋಗ್ಯಕರ ಕೊಬ್ಬುಗಳು, ಕ್ಯಾಲ್ಸಿಯಂ ಇತ್ಯಾದಿ ಪೋಷಕಾಂಶಗಳು ಇದರಲ್ಲಿ ಕಂಡುಬರುವುದರಿಂದ ಇದರ ಸೇವನೆಯ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಆದರೆ ಬಾಳೆಹಣ್ಣು ತಿಂದ ತಕ್ಷಣ ನೀರು ಕುಡಿಯುವುದು ರಕ್ತದಲ್ಲಿನ ಸಕ್ಕರೆಯ ಮಟ್ಟದ ಮೇಲೆ ಪರಿಣಾಮ ಬೀರುತ್ತದೆ. ಈ ಕಾರಣದಿಂದಾಗಿ ದೇಹದಲ್ಲಿ ಇನ್ಸುಲಿನ್ ಪ್ರಮಾಣವು ಹೆಚ್ಚಾಗಬಹುದು. ಅದಕ್ಕಾಗಿಯೇ ಬಾಳೆಹಣ್ಣು ತಿಂದ ತಕ್ಷಣ ನೀರು ಕುಡಿಯಬೇಡಿ.

ದಾಳಿಂಬೆ:

ದಾಳಿಂಬೆ ಹಣ್ಣು ತಿನ್ನುವುದರಿಂದ ಅದ್ಭುತ ಆರೋಗ್ಯ ಪ್ರಯೋಜನಗಳು ನಮಗೆ ಲಭಿಸುತ್ತದೆ. ಹಾಗೂ ಈ ಹಣ್ಣು ದೇಹದ ಪ್ರತಿರಕ್ಷಣಾ ವ್ಯವಸ್ಥೆಯನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಆದರೆ ಇದನ್ನು ತಿಂದ ಕೂಡಲೇ ನೀರನ್ನು ಕುಡಿಯಬಾರದು. ಹೀಗೆ ಮಾಡುವುದರಿಂದ ವಾಕರಿಕೆ, ಅಸಿಡಿಟಿ ಮತ್ತು ವಾಂತಿ ಬರಬಹುದು.

ಇದನ್ನು ಓದಿ: ಬೂದುಗುಂಬಳಕಾಯಿಯ ರಸದ ಸೇವನೆಯಿಂದಾಗುವ ಆರೋಗ್ಯ ಪ್ರಯೋಜನಗಳು ಇಲ್ಲಿವೆ

ಸಿಟ್ರಸ್ ಹಣ್ಣುಗಳು:

ಸಿಟ್ರಸ್ ಹಣ್ಣುಗಳಾದ ಕಿತ್ತಳೆ, ನೆಲ್ಲಿಕಾಯಿ, ದ್ರಾಕ್ಷಿ ಇತ್ಯಾದಿ ಹಣ್ಣುಗಳನ್ನು ತಿಂದ ನಂತರ ನೀರು ಕುಡಿಯುವ ತಪ್ಪನ್ನು ಮಾಡಬೇಡಿ. ಹೀಗೆ ಮಾಡುವುದರಿಂದ ನಿಮ್ಮ ದೇಹದ ಪಿಹೆಚ್ ಮಟ್ಟವು ಹದಗೆಡುತ್ತದೆ ಮತ್ತು ಜೀರ್ಣಕ್ರಿಯೆ ಸಮಸ್ಯೆಯೂ ಉಂಟಾಗುತ್ತದೆ.

ನೇರಳೆ ಹಣ್ಣು:

ಮಧುಮೇಹ ರೋಗಿಗಳಿಗೆ ನೇರಳೆ ತುಂಬಾ ಪ್ರಯೋಜನಕಾರಿ ಹಣ್ಣು. ಅಲ್ಲದೆ ಇದರ ಬೀಜವೂ ಕೂಡ ಮಧುಮೇಹ ರೋಗಿಗಳಿಗೆ ಅತ್ಯುತ್ತಮ ಮನೆಮದ್ದಾಗಿದೆ. ನೀವೇನಾದರೂ ನೇರಳೆ ಹಣ್ಣನ್ನು ತಿಂದ ತಕ್ಷಣ ನೀರನ್ನು ಕುಡಿದರೆ ಕೆಮ್ಮು ಮತ್ತು ನೆಗಡಿ ಬರಬಹುದು. ಅದಕ್ಕಾಗಿ ಈ ಹಣ್ಣನ್ನು ತಿಂದ ತಕ್ಷಣ ನೀರು ಕುಡಿಯಬಾರದು.

ಕಲ್ಲಂಗಡಿ:

ಹೆಚ್ಚಾಗಿ ಜನರು ಬೇಸಿಗೆಯಲ್ಲಿ ಕಲ್ಲಂಗಡಿ ಹಣ್ಣನ್ನು ತಿನ್ನಲು ಇಷ್ಟಪಡುತ್ತಾರೆ. ಇದರಲ್ಲಿ ನೀರಿನಾಂಶ ಹೆಚ್ಚಿರುತ್ತದೆ. ನೀರಿನಾಂಶವಿರುವ ಈ ಹಣ್ಣುನ್ನು ತಿಂದ ಬಳಿಕ ನೀರು ಕುಡಿಯುವುದನ್ನು ತಪ್ಪಿಸಬೇಕು. ಇಲ್ಲದಿದ್ದರೆ ಜೀರ್ಣಕ್ರಿಯೆ ಸಮಸ್ಯೆ ಕಾಡಬಹುದು.

ಪೇರಳೆ:

ಪೇರಳೆ ಫೈಬರ್, ವಿಟಮಿನ್ ಎ ಮತ್ತು ಸಿ, ಪೋಲಿಕ್ ಆಮ್ಲ, ಪೊಟ್ಯಾಸಿಯಂನ ಉತ್ತಮ ಮೂಲವಾಗಿದೆ. ಇದನ್ನು ತಿನ್ನುವುದರಿಂದ ಜೀರ್ಣಕ್ರಿಯೆ ಸಮಸ್ಯೆ ದೂರವಾಗುತ್ತದೆ. ಇದನ್ನು ತಿನ್ನುವುದರಿಂದ ಜೀರ್ಣಕ್ರಿಯೆ ಸಂಬಂಧಿ ದೂರವಾಗುತ್ತದೆಯಾದರೂ ಇದನ್ನು ತಿಂದ ತಕ್ಷಣ ನೀರು ಕುಡಿದರೆ ಜೀರ್ಣಾಂಗ ವ್ಯವಸ್ಥೆ ಹದಗೆಡಬಹುದು.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ: 

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ