ದೇಹದಲ್ಲಿ ಬೊಜ್ಜಿನ ಸಮಸ್ಯೆಯೇ? ತೂಕ ಇಳಿಸಿಕೊಳ್ಳಲು ಇಲ್ಲಿದೆ ಸಲಹೆಗಳು

ಅಧಿಕ ತೂಕ ಹೊಂದಿರುವವರು ಮತ್ತು ಮದ್ಯ ಸೇವಿಸುವ ಜನರು ಶೇ. 50 ರಷ್ಟು ಪಿತ್ತಜನಕಾಂಗದ ಅಪಾಯವನ್ನು ಎದುರಿಸಬೇಕಾಗುತ್ತದೆ. ಜತೆಗೆ ಹೆಚ್ಚಿನ ಅಪಾಯವನ್ನು ಹೊಂದಿರುತ್ತಾರೆ ಎಂದು ಸಂಶೋಧನೆ ತಿಳಿಸಿದೆ.

ದೇಹದಲ್ಲಿ ಬೊಜ್ಜಿನ ಸಮಸ್ಯೆಯೇ? ತೂಕ ಇಳಿಸಿಕೊಳ್ಳಲು ಇಲ್ಲಿದೆ ಸಲಹೆಗಳು
ಸಾಂದರ್ಭಿಕ ಚಿತ್ರ
Follow us
TV9 Web
| Updated By: shruti hegde

Updated on: Aug 08, 2021 | 1:28 PM

ಜೀವನ ಶೈಲಿಯ ಕೆಲವು ಬದಲಾವಣೆಯ ಮೂಲಕ ಸ್ಥೂಲಕಾಯತೆ ಮತ್ತು ಅಧಿಕ ತೂಕ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದಾಗಿದೆ. ಅದರಲ್ಲಿಯೂ ಮುಖ್ಯವಾಗಿ ಬೊಜ್ಜು ಮತ್ತು ಮದ್ಯಪಾನ ಒಂದಕ್ಕೊಂದು ಯಾವ ರೀತಿ ಪರಿಣಾಮ ಬೀರಬಲ್ಲದು ಎಂಬ ಸಂಶೋಧನೆ ಕೂಡಾ ನಡೆದಿದೆ. ಅಂದರೆ ಅಧಿಕ ತೂಕ ಹೊಂದಿರುವ ಜನರು ಮದ್ಯಪಾನ ಸೇವಿಸಿದರೆ ಆರೋಗ್ಯಕ್ಕೆ ಯಾವ ರೀತಿಯಲ್ಲಿ ಪರಿಣಾಮ ಬೀರಬಲ್ಲದು ಎಂಬುದನ್ನು ಸಂಶೋಧನೆ ತಿಳಿಸಿದೆ.

ಆಲ್ಕೋಹಾಲ್ ಮತ್ತು ಬೊಜ್ಜು ಅಧಿಕ ತೂಕ ಅಥವಾ ಸ್ಥೂಲಕಾಯದ ಸಮಸ್ಯೆ ಹೊಂದಿರುವವರು ಅದರಲ್ಲಿಯೂ ಮುಖವಾಗಿ ಮದ್ಯ ಸೇವಿಸುವವರು ಯಕೃತ್ತಿನ ಖಾಯಿಲೆಯನ್ನು ಅನುಭವಿಸುತ್ತಾರೆ ಎಂದು ಆರೋಗ್ಯ ವಿಭಾಗದ ಹಿರಿಯ ಲೇಖಕರು ಹಾಗೂ ಸಂಶೊಧನಾ ಅಧ್ಯಯನದ ನಿರ್ದೇಶಕರಾದ ಪ್ರೊಫೆಸರ್ ಎಮ್ಯಾನುಯೆಲ್ ಸ್ಟಾಮಟಕಿಸ್ ಹೇಳಿದ್ದಾರೆ.ಈ ಕುರಿತಂತೆ ಟೈಮ್ಸ್ ನೌ ಸುದ್ದಿ ಮಾಧ್ಯಮ ವರದಿ ಮಾಡಿದೆ.

ಅಧಿಕ ತೂಕ ಹೊಂದಿರುವವರು ಮತ್ತು ಮದ್ಯ ಸೇವಿಸುವ ಜನರು ಶೇ. 50 ರಷ್ಟು ಪಿತ್ತಜನಕಾಂಗದ ಅಪಾಯವನ್ನು ಎದುರಿಸಬೇಕಾಗುತ್ತದೆ. ಜತೆಗೆ ಹೆಚ್ಚಿನ ಅಪಾಯವನ್ನು ಹೊಂದಿರುತ್ತಾರೆ ಎಂದು ಸಂಶೋಧನೆ ತಿಳಿಸಿದೆ.

ಬೊಜ್ಜು ನಿವಾರಣೆಗೆ ಸಲಹೆಗಳು ಸಾಧ್ಯವಾದಷ್ಟು ಸಕ್ಕರೆ ಪದಾರ್ಥಗಳನ್ನು ಸೇವಿಸದಿರಿ. ಅತಿಯಾಗಿ ಸಿಹಿ ಪದಾರ್ಥ ಸೇವನೆಯು ಅನಾರೋಗ್ಯವನ್ನು ಉಂಟು ಮಾಡುತ್ತದೆ.

ದಿನನಿತ್ಯದ ದಿನಚರಿಯಲ್ಲಿ ವ್ಯಾಯಾಮ ಒಂದು ಭಾಗವಾಗಿರಲಿ. ಕನಿಷ್ಟ 30 ನಿಮಿಷಗಳ ಕಾಲ ನಿಯಮಿತವಾಗಿ ವ್ಯಾಯಾಮ ಅಭ್ಯಾಸವನ್ನು ರೂಢಿಯಲ್ಲಿಟ್ಟುಕೊಳ್ಳಿ.

ದೇಹಕ್ಕೆ ಅಗತ್ಯವಾದ ಪೋಷಕಾಂಶಗಳು ಮತ್ತು ನೀರನ್ನು ಕುಡಿಯಿರಿ. ನಿಮ್ಮ ದೇಹವನ್ನು ಹೈಡ್ರೇಟ್ ಆಗಿರಿಸಿಕೊಳ್ಳಲು ಇದು ಸಹಾಯ ಮಾಡುತ್ತದೆ.

ಕೇವಲ ತೂಕ ಕಳೆದುಕೊಳ್ಳುವ ಗುರಿ ಮಾತ್ರವಲ್ಲ. ನಿಮ್ಮ ಆರೋಗ್ಯದ ಕಡೆಗೆ ಹೆಚ್ಚು ಗಮನವಿರಲಿ. ತೂಕ ಇಳಿಸಿಕೊಳ್ಳುವ ಸಲುವಾಗಿ ಆಹಾರವನ್ನು ತ್ಯಜಿಸುವ ನಿರ್ಧಾರ ಎಂದಿಗೂ ಮಾಡಬೇಡಿ. ಇದು ದೇಹದಲ್ಲಿನ ರೋಗ ನಿರೋಧಕ ಶಕ್ತಿಯನ್ನು ಕುಂಠಿತಗೊಳಿಸುತ್ತದೆ.

ಇದನ್ನೂ ಓದಿ:

ಮದ್ಯಪಾನ ಏನು ಪರಿಣಾಮ ಬೀರುತ್ತದೆ? ಕುಡಿದ ಮೇಲೆ ದೇಹದೊಳಗೆ ಏನಾಗುತ್ತದೆ?

Women Health: ಮಹಿಳೆಯರೇ ಗಮನಿಸಿ! ಋತುಚಕ್ರದಲ್ಲಿ ಈ ಆಹಾರಗಳು ನಿಮ್ಮ ಹೊಟ್ಟೆ ನೋವನ್ನು ಹೆಚ್ಚಿಸುತ್ತದೆ

(Avoid the alcohol and lose weight health benefits check in kannada)

ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ