ಒತ್ತಡಲ್ಲಿರುವಾಗ ಈ ಆಹಾರಗಳ ಕಡೆಗೆ ತಿರುಗಿಯೂ ನೋಡಬೇಡಿ

ಇಂದಿನ ಬಿಡುವಿಲ್ಲದ ಜೀವನ ಶೈಲಿಯಿಂದಾಗಿ ಒತ್ತಡದಿಂದ ಒದ್ದಾಡುವವರೇ ಹೆಚ್ಚು. ಇದರಿಂದ ಮಾನಸಿಕ ಹಾಗೂ ದೈಹಿಕ ಆರೋಗ್ಯ ಸಮಸ್ಯೆಗಳು ಹೆಚ್ಚಾಗುತ್ತಿದೆ. ಒತ್ತಡವು ನಿಮ್ಮನ್ನು ಹೈರಾಣಾಗಿಸಿದ್ದರೆ ಮಾಡಲು ಆಹಾರ ಪದ್ದತಿಯ ಬಗ್ಗೆ ಸರಿಯಾದ ಗಮನಹರಿಸುವುದು ಬಹಳ ಮುಖ್ಯ. ಹಾಗಾದ್ರೆ ಯಾವೆಲ್ಲಾ ಆಹಾರಗಳನ್ನು ಸೇವಿಸಬಾರದು ಎನ್ನುವುದರ ಮಾಹಿತಿ ಇಲ್ಲಿದೆ.

ಒತ್ತಡಲ್ಲಿರುವಾಗ ಈ ಆಹಾರಗಳ ಕಡೆಗೆ ತಿರುಗಿಯೂ ನೋಡಬೇಡಿ
ಸಾಂದರ್ಭಿಕ ಚಿತ್ರ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Jun 24, 2024 | 12:22 PM

ಆಧುನಿಕ ಜೀವನ ಶೈಲಿಗೆ ಒಗ್ಗಿ ಕೊಳ್ಳುತ್ತಿದ್ದಂತೆ, ಒತ್ತಡದ ಜೀವನವನ್ನು ಬರ ಮಾಡಿಕೊಳ್ಳುತ್ತಿರುವವರು ಹೆಚ್ಚಾಗುತ್ತಿದ್ದಾರೆ. ಈ ಹಿಂದೆ ನಮ್ಮ ಹಿರಿಯರು ಮೈ ದಂಡಿಸಿ ಕೆಲಸ ಮಾಡಿ ದೈಹಿಕ ವಿಶ್ರಾಂತಿ ಪಡೆದುಕೊಳ್ಳುತ್ತಿದ್ದರು. ಆದರೆ ಇಂದಿನವರಿಗೆ ಮಾನಸಿಕ ಶ್ರಮ ಹೆಚ್ಚಾಗುತ್ತಿದ್ದು, ಕೆಲಸವು ಹೆಚ್ಚಾದರೆ ಸಾಕು ಒತ್ತಡಕ್ಕೆ ಒಳಗಾಗುತ್ತಿದ್ದಾರೆ. ವಿಪರೀತ ಒತ್ತಡದಿಂದ ಬಳಲುತ್ತಿದ್ದರೆ ಈ ಕೆಲವು ಆಹಾರಗಳಿಂದರೆ ದೂರವಿರುವುದು ಒಳ್ಳೆಯದು.

  • ಬೆಳಗಿನ ಚಹಾದಿಂದ ಸಂಜೆಯ ತಿಂಡಿಯವರೆಗೂ ನಾವು ಸೇವಿಸುವ ಆಹಾರದಲ್ಲಿ ಸಕ್ಕರೆಯ ಪ್ರಮಾಣವು ಹೆಚ್ಚಿರುತ್ತದೆ. ಸಿಹಿಕಾರಕವಾಗಿರುವ ಸಕ್ಕರೆಯೂ ಒತ್ತಡವನ್ನು ಹೆಚ್ಚಿಸುತ್ತದೆ ಎನ್ನುತ್ತಾರೆ ತಜ್ಞರು. ದೇಹದಲ್ಲಿ ಸಕ್ಕರೆಯ ಪ್ರಮಾಣ ಹೆಚ್ಚಾದಾಗ ಮಧುಮೇಹ, ಅಧಿಕ ರಕ್ತದೊತ್ತಡ ಮತ್ತು ಅಧಿಕ ತೂಕ ಹಾಗೂ ಮಾನಸಿಕ ಒತ್ತಡವೂ ಹೆಚ್ಚುತ್ತದೆ. ಹೀಗಾಗಿ ಸಕ್ಕರೆಯ ಸೇವನೆಯ ಇತಿಮಿತಿಯಲ್ಲಿರಲಿ.
  • ಹೆಚ್ಚಿನ ಕೆಫೀನ್ ಇರುವ ಪಾನೀಯಗಳನ್ನು ಕುಡಿಯುವುದರಿಂದ ಒತ್ತಡವು ಹೆಚ್ಚುತ್ತದೆಯಂತೆ. ಅಧಿಕ ಕೆಫೀನ್ ಸೇವನೆಯಿಂದ ಒತ್ತಡವನ್ನು ನಿಯಂತ್ರಿಸುವ ಕಾರ್ಟಿಸೋಲ್ ಹಾರ್ಮೋನ್ ಗಳು, ಮೂತ್ರಜನಕಾಂಗದ ಗ್ರಂಥಿಗಳು ಹಾಗೂ ನರಮಂಡಲದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಹೀಗಾಗಿ ಕೆಫೀನ್ ಸೇವನೆಯಿಂದ ದೂರವಿರುವುದು ಉತ್ತಮ.
  • ದೇಹಕ್ಕೆ ಡೈರಿ ಉತ್ಪನ್ನಗಳು ಅಗತ್ಯವಾಗಿ ಬೇಕಾಗಿದೆ. ಆದರೆ ಇವುಗಳ ಅತಿಯಾದ ಸೇವನೆಯು ಜೀರ್ಣಕಾರಿ ಸಮಸ್ಯೆಗಳು, ಹೊಟ್ಟೆ ಉಬ್ಬರದಂತಹ ಸಮಸ್ಯೆಗಳಿಗೆ ದಾರಿ ಮಾಡಿಕೊಡುತ್ತದೆ. ಅಷ್ಟೇ ಅಲ್ಲದೇ ಒತ್ತಡ ಮತ್ತು ಆತಂಕದ ಭಾವನೆಗಳಿಗೆ ಕಾರಣವಾಗುತ್ತದೆ. ಈ ಉತ್ಪನ್ನಗಳ ಸೇವನೆಯಿಂದ ದೂರವಿರುವುದು ಒಳ್ಳೆಯದು ಎನ್ನುತ್ತಾರೆ ತಜ್ಞರು.
  • ಎಣ್ಣೆಯಲ್ಲಿ ಕರಿದ ಆಹಾರಗಳನ್ನು ತ್ಯಜಿಸುವುದು ಒತ್ತಡವನ್ನು ಕಡಿಮೆ ಮಾಡಲು ಸಹಕಾರಿಯಾಗಿದೆ. ಈ ಎಣ್ಣೆಯಲ್ಲಿ ಕರಿದ ತಿಂಡಿ ತಿನಿಸುಗಳ ಸೇವಿಸಿದರೆ ಹೃದಯರಕ್ತನಾಳದ ವ್ಯವಸ್ಥೆಯನ್ನು ಹಾನಿಗೊಳಿಸಿ, ಉಸಿರಾಟವನ್ನು ಕಷ್ಟಕರವಾಗಿಸುತ್ತದೆ. ಅದರೊಂದಿಗೆ ಮಾನಸಿಕ ಆರೋಗ್ಯವನ್ನು ಹಾನಿಗೊಳಿಸಿ ಒತ್ತಡವನ್ನು ಹೆಚ್ಚಿಸುತ್ತದೆ.
  • ಪಾಲಿಶ್ ಮಾಡಿದ ಅಕ್ಕಿ, ಬಿಳಿ ಬ್ರೆಡ್ ಮತ್ತು ಕೂಲ್ ಡ್ರಿಂಕ್ಸ್‌ನಂತಹ ರಿಫೈನ್ಡ್ ಕಾರ್ಬೋಹೈಡ್ರೇಟ್‌ಗಳನ್ನು ಹೊಂದಿರುವ ಆಹಾರಗಳ ಸೇವನೆಯಿಂದಲೂ ಒತ್ತಡ ಹೆಚ್ಚಾಗಬಹುದು. ಇಂತಹ ಆಹಾರಗಳ ಸೇವನೆಯು ಮಿತವಾಗಿರಲಿ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ