Health Benefits Of Baby Corn: ಬೇಬಿ ಕಾರ್ನ್ ತಿನ್ನಲು ರುಚಿಕರ ಮಾತ್ರವಲ್ಲ ಆರೋಗ್ಯಕ್ಕೂ ಪ್ರಯೋಜನಕಾರಿ

ಬೇಬಿ ಕಾರ್ನ್ ತಿನ್ನಲು ತುಂಬಾ ರುಚಿಕರವಾಗಿರುತ್ತದೆ. ಅಷ್ಟೇ ಅಲ್ಲದೆ  ಇದರಲ್ಲಿರುವ ಜೀವಸತ್ವಗಳು, ಖನಿಜಗಳು, ಫೈಬರ್ ಮತ್ತು ಆಂಟಿಆಕ್ಸಿಡೆಂಟ್ ಅಂಶಗಳು ನಮ್ಮ ದೇಹವು ಅನೇಕ ರೋಗಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಹಾಗಾದರೆ ಬೇಬಿ ಕಾರ್ನ್ ಸೇವನೆ ಮಾಡುವ ಮೂಲಕ ಯಾವೆಲ್ಲಾ ಆರೋಗ್ಯ ಪ್ರಯೋಜನಗಳನ್ನು ಪಡದುಕೊಳ್ಳಬಹುದು ಎಂಬುದನ್ನು ನೋಡೋಣ.

Health Benefits Of Baby Corn: ಬೇಬಿ ಕಾರ್ನ್ ತಿನ್ನಲು ರುಚಿಕರ ಮಾತ್ರವಲ್ಲ ಆರೋಗ್ಯಕ್ಕೂ ಪ್ರಯೋಜನಕಾರಿ
ಸಾಂದರ್ಭಿಕ ಚಿತ್ರ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Oct 09, 2023 | 5:48 PM

ಜೋಳ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಪ್ರತಿಯೊಬ್ಬರೂ ಜೋಳವನ್ನು ತಿನ್ನಲು ಇಷ್ಟಪಡುತ್ತಾರೆ. ಪಿಜ್ಜಾ, ಪಾಸ್ತಾ ಮುಂತಾದ ಭಕ್ಷ್ಯಗಳಲ್ಲೂಇದನ್ನು ಸೇರಿಲಾಗುತ್ತದೆ. ಏಕೆಂದರೆ ಇದು ಭಕ್ಷ್ಯಗಳ ರುಚಿಯನ್ನು ಹೆಚ್ಚಿಸುತ್ತದೆ. ಇದು ಮಾತ್ರವಲ್ಲದೇ ಬೇಬಿ ಕಾರ್ನ್ ಕೂಡಾ ನಮ್ಮ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು. ಹೌದು ಇದರಲ್ಲಿ  ಕಬ್ಬಿಣ, ತಾಮ್ರ, ಮೆಗ್ನೇಸಿಯಮ್, ರಂಜಕ, ಫೈಬರ್, ಪ್ರೋಟೀನ್, ಉತ್ಕರ್ಷಣ ನಿರೋಧಕಗಳು ಮತ್ತು ಆಂಟಿಆಕ್ಸಿಡೆಂಟ್ ಮುಂತಾದ ಜೀವಸತ್ವಗಳು ಹಾಗೂ ಖನಿಜಗಳು ಹೇರಳವಾಗಿದ್ದು, ಇದು  ಕ್ಯಾನ್ಸರ್, ಹೃದಯ ಸಂಬಂಧಿ ಕಾಯಿಲೆಗಳು, ಸ್ಥೂಲಕಾಯತೆ ಮತ್ತು ಮಧುಮೇಹದಂತಹ ಗಂಭೀರ ಕಾಯಿಲೆಗಳಿಂದ ನಮ್ಮನ್ನು ರಕ್ಷಿಸುತ್ತದೆ. ಹಾಗೂ ಇದು ನಮ್ಮ ರೋಗನಿರೋಧಕ ಶಕ್ತಿಯನ್ನು ಬಲಪಡಿಸುವುದರ ಜೊತೆಗೆ  ಚರ್ಮ, ಕೂದಲು ಮತ್ತು ಕಣ್ಣಿನ ಆರೋಗ್ಯಕ್ಕೂ ತುಂಬಾ ಪ್ರಯೋಜನಕಾರಿಯಾಗಿದೆ. ಇಷೆಲ್ಲಾ ಪ್ರಯೋಜನಗಳನ್ನು ಹೊಂದಿರುವ ಬೇಬಿ ಕಾರ್ನ್ನ್ನು ಸಲಾಡ್, ತರಕಾರಿ ಸೂಪ್ ,  ಮಂಚೂರಿಯನ್ ರೂಪದಲ್ಲಿ  ಊಟದ ಭಾಗವಾಗಿ ಸೇರಿಸಿಕೊಳ್ಳಬಹುದು.

ಬೇಬಿ ಕಾರ್ನ್ ಸೇವಿಸುವುದರಿಂದ ಲಭಿಸುವ ಆರೋಗ್ಯ ಪ್ರಯೋಜನಗಳು:

ಕ್ಯಾನ್ಸರ್ ಬಾರದಂತೆ ತಡೆಯುತ್ತದೆ: ಬೇಬಿ ಕಾರ್ನ್ ಆಂಟಿಆಕ್ಸಿಡೆಂಟ್ ಅಂಶವನ್ನು ಹೊಂದಿದ್ದು,  ಇದು ಕ್ಯಾನ್ಸರ್ ಕೋಶಗಳ ಬೆಳವಣಿಗೆಯನ್ನು ತಡೆಯುತ್ತದೆ. ಅಲ್ಲದೆ ಇದು ಕ್ಯಾನ್ಸರ್ ವಿರುದ್ಧ ಹೋರಾಡಲು ಸಹಾಯ ಮಾಡುವ ಫೆರುಲಿಕ್ ಆಮ್ಲವನ್ನು ಸಹ ಹೊಂದಿದೆ. ಇದು ಸ್ತನ ಕ್ಯಾನ್ಸರ್, ಯಕೃತ್ತಿನ ಕ್ಯಾನ್ಸರ್ ನಂತಹ ಗಂಭೀರ ರೂಪದ ಕ್ಯಾನ್ಸರ್ಗಳು ಬಾರದಂತೆ  ತಡೆಯುತ್ತದೆ.

ರಕ್ತಹೀನತೆಯಿಂದ ಬಳಲುತ್ತಿರುವವರಿಗೆ ಇದು ಪ್ರಯೋಜನಕಾರಿ: ಬೇಬಿ ಕಾರ್ನ್ ರಕ್ತ ಹೀನತೆಯ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಇದರಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕಬ್ಬಿಣಾಂಶವಿದ್ದು, ಇದು ರಕ್ತದಲ್ಲಿ ಹಿಮೋಗ್ಲೋಬಿನ್ ಮಟ್ಟವನ್ನು ರೂಪಿಸಲು ಸಹಾಯ ಮಾಡುತ್ತದೆ. ಆದ್ದರಿಂದ ಬೇಬಿ ಕಾರ್ನ್ ಸೇವನೆಯು ರಕ್ತ ಹೀನತೆಯಿಂದ ಬಳಲುತ್ತಿರುವ ಜನರಿಗೆ ತುಂಬಾ ಪ್ರಯೋಜನಕಾರಿಯಾಗಿದೆ. ಇದು ಅವರ ರಕ್ತದಲ್ಲಿ ಹಿಮೋಗ್ಲೋಬಿನ್ ಹೆಚ್ಚಿಸುವ ಮೂಲಕ ರಕ್ತ ಹೀನತೆ ಸಮಸ್ಯೆಯನ್ನು ತೊಡೆದುಹಾಕಲು ಸಹಾಯ ಮಾಡುತ್ತದೆ.

ಮಧುಮೇಹ ರೋಗಿಗಳಿಗೆ ಪ್ರಯೋಜನಕಾರಿ: ಬೇಬಿ ಕಾರ್ನ್ ಕಡಿಮೆ ಗ್ಲೈಸೆಮಿಕ್ ಸೂಚಿಯನ್ನು ಹೊಂದಿದ್ದು, ಇದು ಮಧುಮೇಹ ರೋಗಿಗಳಿಗೆ ತುಂಬಾ ಪ್ರಯೋಜನಕಾರಿಯಾಗಿದೆ. ಇದು  ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ಸ್ಥಿರವಾಗಿಡಲು ಸಹಾಯ ಮಾಡುತ್ತದೆ.  ಆದ್ದರಿಂದ ಮಧುಮೇಹ ರೋಗಿಗಳು ತಮ್ಮ ಆಹಾರದಲ್ಲಿ ಬೇಬಿ ಕಾರ್ನ್ ಸೇರಿಸಬಹುದು.

ಇದನ್ನೂ ಓದಿ: ಓಟ್ಸ್ ಮತ್ತು ಅಗಸೆ ಬೀಜದ ರುಚಿಕರ ಲಡ್ಡು ರೆಸಿಪಿ ಇಲ್ಲಿದೆ

ಚರ್ಮದ ಆರೋಗ್ಯಕ್ಕೆ ಪ್ರಯೋಜನಕಾರಿ: ಬೇಬಿ ಕಾರ್ನ್  ಉತ್ಕರ್ಷಣ ನಿರೋಧಕಗಳು ಮತ್ತು ವಿಟಮಿನ್ ಇ  ಅಂಶಗಳಿಂದ ಸಮೃದ್ಧವಾಗಿದೆ. ಇದು ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಲು ಸಹಾಯ ಮಾಡುತ್ತದೆ. ಅಲ್ಲದೆ ಇದರಲ್ಲಿರುವ ಉತ್ಕರ್ಷಣ ನಿರೋಧಕಗಳು ಫ್ರೀ ರಾಡಿಕಲ್ಗಳಿಂದ ಚರ್ಮವು ಹಾನಿಯಾಗದಂತೆ ರಕ್ಷಿಸುತ್ತದೆ ಮತ್ತು ತ್ವಚೆಯ ಹೊಳಪನ್ನು ಸಹ ಹೆಚ್ಚಿಸುತ್ತದೆ.  ಅಲ್ಲದೆ ಬೇಬಿ ಕಾರ್ನ್ ಸೇವನೆ ಮಾಡುವುದರಿಂದ  ಮೊಡವೆಗಳು, ಸುಕ್ಕುಗಳು, ಊತದಂತಹ ಚರ್ಮದ ಸಮಸ್ಯೆಗಳಿಂದ ಪರಿಹಾರವನ್ನು ಪಡೆಯಬಹುದು.

ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ: ಬೇಬಿ ಕಾರ್ನ್ ಫೈಬರ್ ಅಂಶದಲ್ಲಿ ಸಮೃದ್ಧವಾಗಿದೆ. ಇದು ನಮ್ಮ ಜೀರ್ಣಕ್ರಿಯೆಗೆ ತುಂಬಾ ಪ್ರಯೋಜನಕಾರಿಯಾಗಿದೆ. ಇದು ಮಲಬದ್ಧತೆ, ಪೈಲ್ಸ್ ಇತ್ಯಾದಿ ಸಮಸ್ಯೆಗಳು ಬಾರದಂತೆ ತಡೆಯುತ್ತದೆ. ಮತ್ತು ಕರುಳಿನ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: 

ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ