Black Cardamom: ಕಪ್ಪು ಏಲಕ್ಕಿಯಲ್ಲಿ ಅಡಗಿರುವ ಔಷಧೀಯ ಗುಣಗಳನ್ನು ಇಲ್ಲಿ ತಿಳಿದುಕೊಳ್ಳಿ

ಸಾಮಾನ್ಯವಾಗಿ ಎಲ್ಲರೂ ಹಸಿರು ಏಲಕ್ಕಿಯನ್ನು ಬಳಸುತ್ತಾರೆ. ಆದರೆ ಕಪ್ಪು ಏಲಕ್ಕಿಯೂ ಇದೆ ಎಂಬುದು ಸಾಕಷ್ಟು ಜನರಿಗೆ ತಿಳಿದಿಲ್ಲ. ಸದ್ಯ ಕಪ್ಪು ಏಲಕ್ಕಿ ಕೂಡ ಮಾರುಕಟ್ಟೆಯಲ್ಲಿ ಹೇರಳವಾಗಿದೆ. ಆದ್ದರಿಂದ ಕಪ್ಪು ಏಲಕ್ಕಿಯಲ್ಲಿ ಅಡಗಿರುವ ಔಷಧೀಯ ಗುಣಗಳನ್ನುಈ ಲೇಖನದಲ್ಲಿ ತಿಳಿದುಕೊಳ್ಳಿ.

Black Cardamom: ಕಪ್ಪು ಏಲಕ್ಕಿಯಲ್ಲಿ ಅಡಗಿರುವ ಔಷಧೀಯ ಗುಣಗಳನ್ನು ಇಲ್ಲಿ ತಿಳಿದುಕೊಳ್ಳಿ
Black CardamomImage Credit source: Pinterest
Follow us
ಅಕ್ಷತಾ ವರ್ಕಾಡಿ
|

Updated on: Dec 08, 2023 | 11:38 AM

ಕಪ್ಪು ಏಲಕ್ಕಿ(Black Cardamom) ಭಾರತೀಯರು ಹೆಚ್ಚು ಬಳಸುವ ಮಸಾಲೆಗಳಲ್ಲಿ ಒಂದಾಗಿದೆ. ಅವು ಚಿಕ್ಕದಾಗಿ ಕಂಡರೂ ಉತ್ತಮ ಪರಿಮಳವನ್ನು ಹೊಂದಿರುತ್ತವೆ.ಮುಖ್ಯವಾಗಿ ಆಹಾರಕ್ಕೆ ಪರಿಮಳವನ್ನು ಸೇರಿಸಲು ಈ ಕಪ್ಪು ಏಲಕ್ಕಿಯನ್ನು ಬಳಸಲಾಗುತ್ತದೆ. ಅವುಗಳನ್ನು ಹೆಚ್ಚಾಗಿ ಸಿಹಿತಿಂಡಿಗಳ ತಯಾರಿಕೆಯಲ್ಲಿ ಬಳಸಲಾಗುತ್ತದೆ. ಸಾಮಾನ್ಯವಾಗಿ ಎಲ್ಲರೂ ಹಸಿರು ಏಲಕ್ಕಿಯನ್ನು ಬಳಸುತ್ತಾರೆ. ಆದರೆ ಕಪ್ಪು ಏಲಕ್ಕಿಯೂ ಇದೆ ಎಂಬುದು ಸಾಕಷ್ಟು ಜನರಿಗೆ ತಿಳಿದಿಲ್ಲ. ಕಪ್ಪು ಏಲಕ್ಕಿ ಕೂಡ ಮಾರುಕಟ್ಟೆಯಲ್ಲಿ ವ್ಯಾಪಕವಾಗಿ ಲಭ್ಯವಿದೆ. ಇದರಲ್ಲಿ ಹಲವಾರು ಪೋಷಕಾಂಶಗಳ ಜೊತೆಗೆ ಔಷಧೀಯ ಗುಣಗಳೂ ಇವೆ. ಇವುಗಳನ್ನು ದಿನನಿತ್ಯ ಸೇವಿಸುವುದರಿಂದ ದೇಹಕ್ಕೆ ಹಲವಾರು ಲಾಭಗಳು ದೊರೆಯುತ್ತವೆ.

ಕಪ್ಪು ಏಲಕ್ಕಿಯಲ್ಲಿ ಅಡಗಿರುವ ಆರೋಗ್ಯ ಪ್ರಯೋಜನಗಳು:

ಹೃದಯದ ಆರೋಗ್ಯ ಕಾಪಾಡುತ್ತದೆ:

ಇತ್ತೀಚಿನ ದಿನಗಳಲ್ಲಿ ಅನೇಕ ಜನರು ಬದಲಾಗುತ್ತಿರುವ ಜೀವನಶೈಲಿಯಿಂದ ಹೃದಯ ಸಂಬಂಧಿ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಹಠಾತ್ ಹೃದಯಾಘಾತ ಮತ್ತು ಚಿಕ್ಕ ವಯಸ್ಸಿನಲ್ಲಿಯೇ ಹೃದಯದ ಕಾಯಿಲೆಯಿಂದ ಬಳಲುತ್ತಿದ್ದಾರೆ. ಇಂತಹ ಹೃದಯ ಸಮಸ್ಯೆಯಿಂದ ಬಳಲುತ್ತಿರುವವರು ಕಪ್ಪು ಏಲಕ್ಕಿಯಿಂದ ಮಾಡಿದ ಆಹಾರವನ್ನು ಸೇವಿಸುವುದರಿಂದ ಆ ಸಮಸ್ಯೆಗಳಿಂದ ಪರಿಹಾರ ಪಡೆಯಬಹುದು.

ಗಂಟಲು ನೋವನ್ನು ಕಡಿಮೆ ಮಾಡುತ್ತದೆ:

ಗಂಟಲು ನೋವಿನಿಂದ ಬಳಲುತ್ತಿರುವವರು ಕಪ್ಪು ಏಲಕ್ಕಿಯಿಂದ ತಯಾರಿಸಿದ ಚಹಾವನ್ನು ಕುಡಿಯುವ ಮೂಲಕವೂ ಆ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು. ಕೆಮ್ಮು ಇರುವವರು ಕಪ್ಪು ಏಲಕ್ಕಿ ಪುಡಿಯನ್ನು ಸೇವಿಸಿದರೆ ಕೆಮ್ಮು ಕೂಡ ಕಡಿಮೆಯಾಗುತ್ತದೆ.

ಸ್ವತಂತ್ರ ರಾಡಿಕಲ್ಗಳು ನಾಶವಾಗುತ್ತವೆ:

ಕಪ್ಪು ಏಲಕ್ಕಿಯು ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿದೆ. ಕಪ್ಪು ಏಲಕ್ಕಿ ಪುಡಿಯನ್ನು ಗ್ರೀನ್ ಟೀಗೆ ಬೆರೆಸಿ ಬೆಳಗ್ಗೆ ಸೇವಿಸಿದರೆ ದೇಹದಲ್ಲಿನ ಸ್ವತಂತ್ರ ರಾಡಿಕಲ್ಗಳ ಸಮಸ್ಯೆಯಿಂದ ಮುಕ್ತಿ ಸಿಗುತ್ತದೆ.

ಇದನ್ನೂ ಓದಿ: ಚರ್ಮದ ಮೇಲೆ ಲಿಚಿ ಹಣ್ಣಿನ ಚಮತ್ಕಾರ

ದೇಹದ ನೋವು ಕಡಿಮೆಯಾಗಿದೆ:

ಆಹಾರದೊಂದಿಗೆ ಕಪ್ಪು ಏಲಕ್ಕಿಯನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದ ನೋವು ಕಡಿಮೆಯಾಗುತ್ತದೆ. ಈಗಲೂ ಚಳಿಗಾಲದಲ್ಲಿ ಸಾಕಷ್ಟು ದೇಹನೋವುಗಳಿಂದ ಬಳಲುತ್ತಿದ್ದಾರೆ. ಅಂತಹವರು ಕಪ್ಪು ಏಲಕ್ಕಿಯಿಂದ ಮಾಡಿದ ಚಹಾವನ್ನು ಕುಡಿಯುವುದು ಮತ್ತು ಆಹಾರವನ್ನು ಸೇವಿಸುವುದು ತುಂಬಾ ಒಳ್ಳೆಯದು. ಇದಲ್ಲದೇ ದೇಹದ ಮೇಲಿನ ಊತವೂ ಕಡಿಮೆಯಾಗುತ್ತದೆ.

ರಕ್ತ ಪರಿಚಲನೆ ಸುಧಾರಿಸುತ್ತದೆ:

ಕಪ್ಪು ಏಲಕ್ಕಿಯನ್ನು ಆಹಾರದಲ್ಲಿ ಸೇರಿಸುವುದರಿಂದ ರಕ್ತ ಪರಿಚಲನೆ ಕೂಡ ಸುಧಾರಿಸುತ್ತದೆ. ಇದು ಅನೇಕ ರೀತಿಯ ಆರೋಗ್ಯ ಸಮಸ್ಯೆಗಳನ್ನು ತಡೆಯುತ್ತದೆ.

ದುರ್ವಾಸನೆ ಕಡಿಮೆ ಮಾಡುತ್ತದೆ:

ಕಪ್ಪು ಏಲಕ್ಕಿಯಿಂದ ಮಾಡಿದ ಆಹಾರವನ್ನು ನಿಯಮಿತವಾಗಿ ತಿನ್ನುವುದರಿಂದ ಬಾಯಿಯ ದುರ್ವಾಸನೆ ಕಡಿಮೆಯಾಗುತ್ತದೆ. ಬಾಯಿಯ ಆರೋಗ್ಯವೂ ಸುಧಾರಿಸುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಅಮೆರಿಕ ಅಧ್ಯಕ್ಷರಾಗಿ ಪದಗ್ರಹಣ ಬಳಿಕ ಸಖತ್​ ಸ್ಟೆಪ್​​​ ಹಾಕಿದ ಟ್ರಂಪ್
ಅಮೆರಿಕ ಅಧ್ಯಕ್ಷರಾಗಿ ಪದಗ್ರಹಣ ಬಳಿಕ ಸಖತ್​ ಸ್ಟೆಪ್​​​ ಹಾಕಿದ ಟ್ರಂಪ್
ಬೆಳಗಾವಿ ಅಧಿವೇಶನ ನಿಸ್ಸಂದೇಹವಾಗಿ ಕಾಂಗ್ರೆಸ್ ಪಕ್ಷದ ಜಾತ್ರೆ: ಶಿವಕುಮಾರ್
ಬೆಳಗಾವಿ ಅಧಿವೇಶನ ನಿಸ್ಸಂದೇಹವಾಗಿ ಕಾಂಗ್ರೆಸ್ ಪಕ್ಷದ ಜಾತ್ರೆ: ಶಿವಕುಮಾರ್
ಕರ್ತವ್ಯನಿರತ ಪೊಲೀಸರ ಮೇಲೆ ಜೋರು ಮಾಡಲು ಮುಂದಾದ ಕಾಂಗ್ರೆಸ್ಸಿಗರು
ಕರ್ತವ್ಯನಿರತ ಪೊಲೀಸರ ಮೇಲೆ ಜೋರು ಮಾಡಲು ಮುಂದಾದ ಕಾಂಗ್ರೆಸ್ಸಿಗರು
ಕಾಂಗ್ರೆಸ್ ಅಧಿವೇಶನದಲ್ಲಿ ಭಾಗಿಯಾಗಲು ಸೋಮಶೇಖರ್ ಬಂದಿರುವರೇ?
ಕಾಂಗ್ರೆಸ್ ಅಧಿವೇಶನದಲ್ಲಿ ಭಾಗಿಯಾಗಲು ಸೋಮಶೇಖರ್ ಬಂದಿರುವರೇ?
Video: ಪ್ರಬಲ ಭೂಕಂಪಕ್ಕೆ ನಲುಗಿದ ತೈವಾನ್
Video: ಪ್ರಬಲ ಭೂಕಂಪಕ್ಕೆ ನಲುಗಿದ ತೈವಾನ್
‘2 ರೆಕ್ಕೆ ಕೊಡು, ದೊಡ್ಡ ಸ್ಟಾರ್ ಆಗಬೇಕು’; ಟ್ರೋಫಿ ನೋಡಿ ತ್ರಿವಿಕ್ರಂ ಮಾತು
‘2 ರೆಕ್ಕೆ ಕೊಡು, ದೊಡ್ಡ ಸ್ಟಾರ್ ಆಗಬೇಕು’; ಟ್ರೋಫಿ ನೋಡಿ ತ್ರಿವಿಕ್ರಂ ಮಾತು
ಕೊಪ್ಪಳ: ಸ್ವಂತ ಹಣದಲ್ಲಿ ಸರ್ಕಾರಿ ಶಾಲೆಗೆ‌ ಬೋರ್​ವೆಲ್ ಕೊರೆಸಿದ ರೈತ
ಕೊಪ್ಪಳ: ಸ್ವಂತ ಹಣದಲ್ಲಿ ಸರ್ಕಾರಿ ಶಾಲೆಗೆ‌ ಬೋರ್​ವೆಲ್ ಕೊರೆಸಿದ ರೈತ
ಸತ್ತವರ ಹೆಸರಲ್ಲಿ ಅರ್ಚನೆ! ಸಂಕಲ್ಪ ಮಾಡಿಸಬಹುದಾ? ವಿಡಿಯೋ ನೋಡಿ
ಸತ್ತವರ ಹೆಸರಲ್ಲಿ ಅರ್ಚನೆ! ಸಂಕಲ್ಪ ಮಾಡಿಸಬಹುದಾ? ವಿಡಿಯೋ ನೋಡಿ
ಈ ರಾಶಿಯವರು ಮದುವೆ ಮತ್ತು ಮನೆ ವಿಷಯಗಳಲ್ಲಿ ಇಂದು ಶುಭ ಸುದ್ದಿ ಕೇಳುವರು
ಈ ರಾಶಿಯವರು ಮದುವೆ ಮತ್ತು ಮನೆ ವಿಷಯಗಳಲ್ಲಿ ಇಂದು ಶುಭ ಸುದ್ದಿ ಕೇಳುವರು
ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು