Basava Jayanti 2025: ʼಕಾಯಕವೇ ಕೈಲಾಸʼ ಎಂದು ಮನುಕುಲಕ್ಕೆ ಸಂದೇಶ ಸಾರಿದ ಮಹಾನ್‌ ಸಮಾಜ ಸುಧಾರಕ ಬಸವೇಶ್ವರರು

12 ನೇ ಶತಮಾನದಲ್ಲಿ ಸಾಮಾಜಿಕ ಅಸಮಾನತೆ, ಜಾತಿ ವ್ಯವಸ್ಥೆ ಸೇರಿದಂತೆ ಹಲವು ಅನಿಷ್ಠ ಪದ್ಧತಿಗಳು ಆಚರಣೆಯಲ್ಲಿದ್ದ ಕಾಲದಲ್ಲಿ ತಮ್ಮ ಸರಳ ವಚನಗಳ ಮೂಲಕ ಸಮಾಜದಲ್ಲಿ ಸುಧಾರಣೆಗಳನ್ನು ತಂದವರು ಬಸವಣ್ಣನವರು. ಕಾಯಕವೇ ಕೈಲಾಸ ಎಂದು ಕಲಿಸಿಕೊಟ್ಟ ವಿಶ್ವ ಗುರು ಬಸವಣ್ಣನವರ ತತ್ವ, ಆದರ್ಶಗಳು, ಚಿಂತನೆಗಳು ಇಂದಿಗೂ ನಮಗೆಲ್ಲರಿಗೂ ಪಾಠ, ಬದುಕಿಗೆ ದಾರಿ. ಈ ಮಹಾನ್‌ ಕವಿ, ಸಮಾಜ ಸುಧಾರಕ, ತತ್ವಜ್ಞಾನಿಯ ಜನ್ಮ ಜಯಂತಿಯನ್ನು ಪ್ರತಿವರ್ಷ ಅಕ್ಷಯ ತೃತೀಯದ ದಿನ ಬಸವ ಜಯಂತಿಯಾಗಿ ಆಚರಿಸಲಾಗುತ್ತದೆ.

Basava Jayanti 2025: ʼಕಾಯಕವೇ ಕೈಲಾಸʼ ಎಂದು ಮನುಕುಲಕ್ಕೆ ಸಂದೇಶ ಸಾರಿದ ಮಹಾನ್‌ ಸಮಾಜ ಸುಧಾರಕ ಬಸವೇಶ್ವರರು
ಬಸವ ಜಯಂತಿ
Image Credit source: pinterest
Edited By:

Updated on: Apr 30, 2025 | 9:41 AM

ದಯೆಯೇ ಧರ್ಮದ ಮೂಲವಯ್ಯ ದಯೆಯಿಲ್ಲದ ಧರ್ಮ ಯಾವುದಯ್ಯ ದಯೆ ಬೇಕು ಸಕಲ ಪ್ರಾಣಿಗಳೆಲ್ಲರಲಿ ದಯೆಯೇ ಧರ್ಮದ ಮೂಲವಯ್ಯ… ಹೀಗೆ ತಮ್ಮ ವಚನಗಳ ಮೂಲಕವೇ 12 ಶತಮಾನದಲ್ಲಿ ಸಮಾಜದಲ್ಲಿ (Society) ಆಚರಣೆಯಲ್ಲಿದ್ದ ಸಾಮಾಜಿಕ ಅಸಮಾನತೆ, ಜಾತಿ ವ್ಯವಸ್ಥೆ ಇತ್ಯಾದಿ ಅನಿಷ್ಠ ಪದ್ಧತಿಗಳನ್ನು ನಿರ್ಮೂಲನೆ ಮಾಡಿ, ಜ್ಞಾನದ ಬೆಳಕು ಚೆಲ್ಲಿ ಕ್ರಾಂತಿಯ ಬೀಜ ಬಿತ್ತಿದವರು ಬಸವಣ್ಣನವರು (Basavanna). ಪ್ರಸಿದ್ಧ ಸಂತರಾಗಿದ್ದ ಇವರು ರಾಜನೀತಿಜ್ಞರಾಗಿ, ಸಮಾಜ ಸುಧಾರಕರಾಗಿ (Social reformer) ತಮ್ಮ ಕಾವ್ಯ ಮತ್ತು ಬರವಣಿಗೆಯ ಮೂಲಕ ಸಮಾಜದಲ್ಲಿ ಹಲವಾರು ಸುಧಾರಣೆಗಳನ್ನು ತಂದರು. ಕಾಯಕವೇ ಕೈಲಾಸ ಎಂದು ಮನುಕುಲಕ್ಕೆ ಪಾಠ ಕಲಿಸಿಕೊಟ್ಟ ವಿಶ್ವ ಬಸವಣ್ಣನವರ ತತ್ವ, ಆದರ್ಶಗಳು, ಚಿಂತನೆಗಳು ಇಂದಿಗೂ ನಮಗೆಲ್ಲರಿಗೂ ಪಾಠ, ಬದುಕಿಗೆ ದಾರಿ. ಈ ಮಹಾನ್‌ ಚೇತನರ ಜನ್ಮ ಜಯಂತಿಯನ್ನು ಪ್ರತಿವರ್ಷ ವೈಶಾಖ ಮಾಸದ ತೃತೀಯ ದಿನ ಅಂದರೆ ಅಕ್ಷಯ ತೃತೀಯದ ದಿನ ಆಚರಿಸಲಾಗುತ್ತದೆ.

ಮೂಢ ನಂಬಿಕೆ, ಮಡಿ ಮೈಲಿಗೆ, ಮೇಲು ಕೀಲು, ಲಿಂಗ ಅಸಮಾನತೆ ಜಾತಿ ವ್ಯವಸ್ಥೆ ಸೇರಿದಂತೆ ಸಮಾಜದಲ್ಲಿದ್ದ ಅನಿಷ್ಠ ಪದ್ಧತಿಗಳನ್ನು ಹೋಗಲಾಡಿಸಿ ಹಲವಾರು ಸಾಮಾಜಿಕ ಸುಧಾರಣೆಗಳನ್ನು ತಂದವರು ಬಸವಣ್ಣನವರು ದಯವೇ ಧರ್ಮದ ಮೂಲವಯ್ಯ ಎನ್ನುತ್ತಾ ಮನುಕುಲಕ್ಕೆ ಮಾನವೀಯತೆಯ ಸಂದೇಶವನ್ನು ಸಾರಿದರು. ಉತ್ತಮ ಸಮಾಜ ನಿರ್ಮಾಣಕ್ಕಾಗಿ ಅನುಭವ ಮಂಟಪವನ್ನು ಹುಟ್ಟು ಹಾಕಿದರು. ಇವರ ಜನ್ಮ ಜಯಂತಿಯನ್ನು ಪ್ರತಿವರ್ಷ ಅಕ್ಷಯ ತೃತೀಯದ ದಿನ ಆಚರಿಸುತ್ತಾ ಬರಲಾಗುತ್ತಿದೆ.

ಜಸವ ಜಯಂತಿಯ ಮಹತ್ವ:

12 ನೇ ಶತಮಾನದಲ್ಲಿ ವಿಜಯಪುರ ಜಿಲ್ಲೆಯ ಬಾಗೇವಾಡಿಯಲ್ಲಿ ಜನಿಸಿದ ಬಸವಣ್ಣನವರು ತಮ್ಮ ಬಾಲ್ಯದ ದಿನಗಳನ್ನು ಕಳೆದರು. ಕ್ರಮೇಣ ಬಸವಣ್ಣನವರು ಮಹಾನ್‌ ಕವಿ, ಸಮಾಜ ಸುಧಾರಕ ಮತ್ತು ದಾರ್ಶನಿಕರಾಗಿ ಹೆಸರನ್ನು ಗಳಿಸಿದ ಇವರು ತಮ್ಮ ವಚನಗಳ ಮೂಲಕವೇ ಸಮಾಜದಲ್ಲಿ ತಲೆ ಎತ್ತಿ ನಿಂತಿದ್ದ ಪಿಡುಗುಗಳನ್ನು ತೊಡೆದು ಹಾಕಲು ಸಾಮಾಜಿಕ ಜಾಗೃತಿಯನ್ನು ಪಸರಿಸಲು ಆರಂಭಿಸಿದರು. ಜಾತಿ, ಬಣ್ಣ, ಅಂತಸ್ತಿನಲ್ಲಿ ವ್ಯತ್ಯಾಸವಿದ್ದರೂ ಸಮಾಜದಲ್ಲಿ ಎಲ್ಲರೂ ಸಮಾನರು ಎಂದು ಸಾರಿದ ಬಸವಣ್ಣನವರು ಸಮಾಜ ಸುಧಾರಣೆಗೆ ಮಹತ್ವದ ಕೊಡುಗೆಯನ್ನು ನೀಡಿದ್ದಾರೆ. ಸಮಾಜಕ್ಕೆ ಇಷ್ಟೆಲ್ಲಾ ಕೊಡುಗೆ ನೀಡಿದ ವಿಶ್ವ ಗುರು ಬಸವಣ್ಣನವರಿಗೆ ಗೌರವ ಸಲ್ಲಿಸಲು, ಅವರ ತತ್ವ, ಆದರ್ಶಗಳನ್ನು ಸ್ಮರಿಸಲು ಬಸವ ಜಯಂತಿಯನ್ನು ಆಚರಿಸಲಾಗುತ್ತದೆ.

ಇದನ್ನೂ ಓದಿ
ಪ್ರೇಮ ವಿವಾಹ ಅಥವಾ ಕೋರ್ಟ್‌ ಮ್ಯಾರೇಜ್‌ ಆಗಲು ಈ ದಾಖಲೆಗಳು ಬೇಕೇ ಬೇಕು
8 ಗಂಟೆ ಕೆಲಸವನ್ನು 4 ಗಂಟೆಯಲ್ಲಿ ಮುಗಿಸಬಹುದು, ಹೇಗೆ?
ಪರಶುರಾಮರ ಬಗೆಗಿನ ಆಸಕ್ತಿದಾಯಕ ಕಥೆಗಳು
ಅಂತಾರಾಷ್ಟ್ರೀಯ ನೃತ್ಯ ದಿನವನ್ನು ಆಚರಿಸುವ ಉದ್ದೇಶವೇನು?

ಈ ದಿನದಂದು ಬಸವಣ್ಣನವರ ವಚನಗಳ ಪಠಣ, ಪ್ರದರ್ಶನಗಳು ಮತ್ತು ವಿಶೇಷ ಪೂಜೆಗಳು ನಡೆಯುತ್ತವೆ. ಹಲವಾರು ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಕಾರ್ಯಕ್ರಮಗಳು ನಡೆಯುತ್ತವೆ.

ಇದನ್ನೂ ಓದಿ: ಇಂದು ಪರಶುರಾಮ ಜಯಂತಿ; ಪರಶುರಾಮರ ಬಗೆಗಿನ ಕೆಲವು ಆಸಕ್ತಿದಾಯಕ ಕಥೆಗಳನ್ನು ತಿಳಿಯಿರಿ

ಬಸವಣ್ಣನವರ ವಚನಗಳು:

ಕಳಬೇಡ, ಕೊಲಬೇಡ, ಹುಸಿಯ ನುಡಿಯಲೂ ಬೇಡ

ಮುನಿಯಬೇಡ ಅನ್ಯರಿಗೆ ಅಸಹ್ಯಪಡಬೇಡ

ತನ್ನ ಬಣ್ಣಿಸಬೇಡ ಇದಿರ ಹಳಿಯಲು ಬೇಡ…

ಇದೇ ಅಂತರಂಗ ಶುದ್ಧಿ ಇದೇ ಬಹಿರಂಗ ಶುದ್ಧಿ

 

ದಯವಿಲ್ಲದ ಧರ್ಮವದಾವುದಯ್ಯಾ,

ದಯವೇ ಬೇಕು ಸಕಲ ಪ್ರಾಣಿಗಳಲ್ಲಿಯೂ

ದಯವೇ ಧರ್ಮ ಮೂಲವಯ್ಯ

ಕೂಡಲ ಸಂಗಮಯ್ಯನಂತಲ್ಲದೊಲ್ಲನಯ್ಯೂ

 

ಉಳ್ಳವರು ಶಿವಾಲಯ ಮಾಡಿಹರು

ನಾನೇನ ಮಾಡುವೆ ಬಡವನಯ್ಯಾ

ಎನ್ನ ಕಾಲೇ ಕಂಬ

ದೇಹವೇ ದೇಗುವ ಶಿರ

ಹೊನ್ನಕಲಶವಯ್ಯಾ…

 

ಎನಗಿಂತ ಕಿರಿಯರಿಲ್ಲ

ಶಿವಭಕ್ತರಿಗಿಂತ ಹಿರಿಯರಿಲ್ಲ

ನಿಮ್ಮ ಪಾದಸಾಕ್ಷಿ ಎನ್ನ ಮನಸಾಕ್ಷಿ

ಕೂಡಲಸಂಗಮದೇವ ಎನಗಿದೆ ದಿವ್ಯ…

 

ಲೋಕದ ಡೊಂಕ ನೀವೇಕೆ ತಿದ್ದುವಿರಿ

ನಿಮ್ಮ ನಿಮ್ಮ ತನುವ ಸಂತೈಸಿಕೊಳ್ಳಿ

ನಿಮ್ಮ ನಿಮ್ಮ ಮನವ ಸಂತೈಸಿಕೊಳ್ಳಿ

ನೆರೆಮನೆಯ ದುಃಖಕ್ಕೆ ಅಳುವವರ

ಮೆಚ್ಚ ಕೂಡಲಸಂಗಮದೇವ…

 

ತಂದೆ ನೀನು ತಾಯಿ ನೀನು

ಬಂಧು ಬಳಗ ನೀನು

ನೀನಿಲ್ಲದೆ ಮತ್ತಾರೂ ಇಲ್ಲವಯ್ಯಾ

ಕೂಡಲಸಂಗಮದೇವ…

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ