AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bay Leaves Health Benefits: ಪ್ರತಿ ಮಸಾಲೆಗೆ ಪಲಾವ್ ಎಲೆ ಹಾಕಿ, ಯಾಕೆ ಗೊತ್ತಾ? ಇಲ್ಲಿದೆ ನೋಡಿ ಆರೋಗ್ಯದ ಗುಟ್ಟು

ನಾವು ಆಗಾಗ್ಗೆ ವಿವಿಧ ಆಹಾರ ಪದಾರ್ಥಗಳಲ್ಲಿ ಹಾಕುವ ಪಲಾವ್ ಎಲೆಗಳು (Bay leaves) ವಿವಿಧ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ ಎನ್ನುವ ಬಗ್ಗೆ ನಿಮಗೆ ತಿಳಿದಿದೆಯೇ? ಹಾಗಾದರೆ ಪಲಾವ್ ಎಲೆಯಲ್ಲಿರುವ ಆರೋಗ್ಯ ಪ್ರಯೋಜಗಳ ಬಗ್ಗೆ ನೋಡೋಣಾ.

Bay Leaves Health Benefits: ಪ್ರತಿ ಮಸಾಲೆಗೆ ಪಲಾವ್ ಎಲೆ ಹಾಕಿ, ಯಾಕೆ ಗೊತ್ತಾ? ಇಲ್ಲಿದೆ ನೋಡಿ ಆರೋಗ್ಯದ ಗುಟ್ಟು
Bay Leaves
Follow us
ಅಕ್ಷಯ್​ ಪಲ್ಲಮಜಲು​​
|

Updated on:Feb 21, 2023 | 6:42 PM

ನಾವು ಆಗಾಗ್ಗೆ ವಿವಿಧ ಆಹಾರ ಪದಾರ್ಥಗಳಲ್ಲಿ ಹಾಕುವ ಪಲಾವ್ ಎಲೆಗಳು (Bay leaves) ವಿವಿಧ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ ಎನ್ನುವ ಬಗ್ಗೆ ನಿಮಗೆ ತಿಳಿದಿದೆಯೇ? ಹಾಗಾದರೆ ಪಲಾವ್ ಎಲೆಯಲ್ಲಿರುವ ಆರೋಗ್ಯ ಪ್ರಯೋಜಗಳ ಬಗ್ಗೆ ನೋಡೋಣಾ. ನಮ್ಮ ಭಾರತೀಯ ಪಾಕಪದ್ಧತಿಯು ಮಸಾಲೆಗಳಿಂದ ತುಂಬಿರುವುದಕ್ಕೆ ಒಂದು ಕಾರಣವಿದೆ. ಈ ರುಚಿಕರವಾದ ಮಸಾಲೆಗಳು ಆಹಾರದ ರುಚಿಯನ್ನು ಹೆಚ್ಚಿಸುವುದು ಮಾತ್ರವಲ್ಲದೆ ನಮ್ಮ ಆರೋಗ್ಯಕ್ಕೆ ವಿವಿಧ ಪ್ರಯೋಜನಗಳನ್ನು ನೀಡುತ್ತವೆ. ಪಲಾವ್ ಎಲೆಯಲ್ಲಿನ ಪೌಷ್ಟಿಕಾಂಶದ ಬಗ್ಗೆ ನಿಮಗೆ ತಿಳಿದಿದೆಯೇ? ತೇಜ್ ಪತ್ತಾ ಎಂದು ಕರೆಯಲ್ಪಡುವ ಈ ಎಲೆಗಳು ಭಾರತೀಯ ಪಾಕಪದ್ಧತಿ ಪ್ರಮುಖ ಭಾಗವಾಗಿದೆ. ಬಿರಿಯಾನಿಯಿಂದ ಹಿಡಿದು ಸೂಪ್‌ಗಳು, ಪಲಾವ್ ಹಾಗೂ ಅನೇಕ ಬಗೆಯ ಮಸಾಲೆಯುಕ್ತ ಭಕ್ಷ್ಯಗಳಲ್ಲಿ ಈ ಎಲೆಯನ್ನು ಸೇರಿಸಲಾಗುತ್ತದೆ. ಇವುಗಳು ಭಕ್ಷ್ಯಗಳಿಗೆ ಸುಗಂಧವನ್ನು ಸೇರಿಸುವುದರ ಜೊತೆಗೆ ಇವುಗಳು ಹಲವಾರು ಪೋಷಕಾಂಶಗಳನ್ನು ಹೊಂದಿದೆ. ಇದು ಔಷಧಿಗಳ ರೂಪದಲ್ಲಿಯೂ ಕಾರ್ಯನಿರ್ವಹಿಸುತ್ತದೆ. ಪಲಾವ್ ಎಲೆಗಳು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ, ಉಸಿರಾಟದ ಸಮಸ್ಯೆಗಳಿಗೆ ಚಿಕಿತ್ಸೆ ನೀಡುತ್ತದೆ, ವಿವಿಧ ಶಿಲೀಂಧ್ರಗಳ ಸೋಂಕಿನ ವಿರುದ್ಧ ಹೋರಾಡುತ್ತದೆ, ಮತ್ತು ಒತ್ತಡವನ್ನು ಕಡಿಮೆ ಮಾಡುತ್ತದೆ. ನ್ಯೂಟ್ರೀಷ್ಯನಿಸ್ಟ್ ಲೋವ್ನಿತ್ ಬಾತ್ರಾ ಅವರು ತಮ್ಮ ಇನ್ಟಾಗ್ರಾಮ್ ಪೇಜ್‌ನಲ್ಲಿ ಪಲಾವ್ ಎಲೆಯ ಕೆಲವು ಅದ್ಭುತ ಪ್ರಯೋಜನಗಳ ಬಗ್ಗೆ ಹಂಚಿಕೊಂಡಿದ್ದಾರೆ.

ಪಲಾವ್ ಎಲೆಯ ಅದ್ಭುತ ಆರೋಗ್ಯ ಪ್ರಯೋಜನಗಳು

1. ಈ ಎಲೆಗಳು ಪಾರ್ಥೆನೊಲೈಡ್ ಎಂಬ ವಿಶಿಷ್ಟ ಫೈಟೊನ್ಯೂಟ್ರಿಯೆಂಟ್‌ನ್ನು ಹೊಂದಿರುತ್ತವೆ. ಇದು ಉರಿಯೂತವನ್ನು ತ್ವರಿತವಾಗಿ ಕಡಿಮೆ ಮಾಡುತ್ತದೆ.

2. ಪಲಾವ್ ಎಲೆಯಲ್ಲಿನ ಲಿನೂಲ್ ಅಂಶವು ನಮ್ಮ ದೇಹದಲ್ಲಿನ ಒತ್ತಡದ ಹಾರ್ಮೋನುಗಳ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

3. ಬೇ ಎಲೆಗಳು ವಿಟಮಿನ್ ಎ ಯ ಅತ್ಯುತ್ತಮ ಮೂಲವಾಗಿದೆ, ಇದು ಕಣ್ಣಿನ ಆರೋಗ್ಯಕ್ಕೆ ಮತ್ತು ಚರ್ಮದ ಆರೋಗ್ಯಕ್ಕೆ ಮುಖ್ಯವಾಗಿದೆ.

ಇದನ್ನೂ ಓದಿ: Bay Leaves Benefits: ಅಡುಗೆಗೆ ಬಳಸುವ ಬೇ ಎಲೆ ಆರೋಗ್ಯಕ್ಕೆ ಎಷ್ಟು ಒಳ್ಳೆಯದು ಗೊತ್ತಾ? ಇಲ್ಲಿದೆ ಮಾಹಿತಿ

4. ಕೆಫೀನ್ ಆಮ್ಲ ಮತ್ತು ರುಟಿನ್ ಎರಡೂ ಪ್ರಮುಖ ಸಾವಯವ ಸಂಯುಕ್ತಗಳಾಗಿವೆ, ಇದು ಪಲಾವ್ ಎಲೆಗಳಲ್ಲಿ ಕಂಡುಬರುತ್ತವೆ. ಇದು ನಿಮ್ಮ ಹೃದಯದ ಆರೋಗ್ಯವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

5. ಪಲಾವ್ ಎಲೆಗಳು ಗ್ಲೂಕೋಸ್ ಮಟ್ಟವನ್ನು ಕಡಿಮೆ ಮಾಡಲು ಮತ್ತು ಅದನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ.

6. ಪಲಾವ್ ಎಲೆಗಳು ಮಾತ್ರವಲ್ಲದೆ ಹಸಿ ಅರಶಿನ ಕೂಡಾ ನಮ್ಮ ಆರೋಗ್ಯಕ್ಕೆ ತುಂಬಾ ಒಳ್ಳೆಯದು, ವಿಶೇಷವಾಗಿ ಚಳಿಗಾಲದಲ್ಲಿ ಎಂದು ಲೋವ್ನಿತ್ ಬಾತ್ರಾ ಅವರು ಹೇಳುತ್ತಾರೆ.

Published On - 6:42 pm, Tue, 21 February 23

ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ