Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಪ್ಪಾಯಿ ಫೇಸ್​ಪ್ಯಾಕ್ ಬಳಸಿದರೆ ಮೊಡವೆ ಕಡಿಮೆಯಾಗುತ್ತಾ?

ಚೆನ್ನಾಗಿ ಹಣ್ಣಾದ ಪಪ್ಪಾಯಿಯನ್ನು ಪೇಸ್ಟ್ ಆಗಿ ಮಾಡಿ ಮತ್ತು ಅದನ್ನು ನಿಮ್ಮ ಮುಖದ ಮೇಲೆ ಹಚ್ಚಿ. ಅದನ್ನು ಒಣಗಲು ಬಿಡಿ. ಬಳಿಕ ಮುಖವನ್ನು ನೀರಿನಿಂದ ತೊಳೆಯುವಾಗ ನಿಮ್ಮ ಚರ್ಮದ ಮೇಲೆ ಮಸಾಜ್ ಮಾಡುತ್ತಾ, ನಂತರ ತೊಳೆಯಿರಿ.

ಪಪ್ಪಾಯಿ ಫೇಸ್​ಪ್ಯಾಕ್ ಬಳಸಿದರೆ ಮೊಡವೆ ಕಡಿಮೆಯಾಗುತ್ತಾ?
ಪಪ್ಪಾಯಿ ಫೇಸ್​ಪ್ಯಾಕ್
Follow us
ಸುಷ್ಮಾ ಚಕ್ರೆ
|

Updated on: Nov 13, 2023 | 5:45 PM

ಪಪ್ಪಾಯ ಹಣ್ಣಿನ ಫೇಸ್​ಪ್ಯಾಕ್ ಮಾಡಿಕೊಳ್ಳುವುದರಿಂದ ಮುಖದ ತ್ವಚೆ ಕಾಂತಿಯುಕ್ತವಾಗುತ್ತದೆ, ಇದು ಚರ್ಮವನ್ನು ಮೃದುಗೊಳಿಸುತ್ತದೆ, ತ್ವಚೆಯ ಸುಕ್ಕುಗಳನ್ನು ಕಡಿಮೆ ಮಾಡುತ್ತದೆ, ಕಪ್ಪು ಕಲೆಗಳನ್ನು ಹೋಗಲಾಡಿಸುತ್ತದೆ, ಮೊಡವೆಗಳನ್ನು ಕಡಿಮೆ ಮಾಡುತ್ತದೆ. ಪಪ್ಪಾಯ ಹಣ್ಣು ನೈಸರ್ಗಿಕ ಮಾಯಿಶ್ಚರೈಸರ್ ಆಗಿದ್ದು, ಪಿಗ್ಮೆಂಟೇಶನ್ ಮಸುಕಾಗಲು ಸಹಾಯ ಮಾಡುತ್ತದೆ.

ಪಪ್ಪಾಯಿಯು ನಿಮ್ಮ ಫೇಸ್ ಪ್ಯಾಕ್‌ನಲ್ಲಿ ಬಳಸಬಹುದಾದ ಉತ್ತಮ ಅಂಶವಾಗಿದೆ. ಇದು ತ್ವಚೆಯ ಸಮಸ್ಯೆಗಳನ್ನು ನಿಭಾಯಿಸಲು ಸಹಾಯ ಮಾಡುವ ಬಹಳಷ್ಟು ಗುಣಗಳನ್ನು ಹೊಂದಿದೆ. ಇದು ನಿಮ್ಮ ಚರ್ಮವನ್ನು ಆರೋಗ್ಯಕರವಾಗಿ ಮತ್ತು ಹೊಳೆಯುವಂತೆ ಮಾಡುತ್ತದೆ.

ಚೆನ್ನಾಗಿ ಹಣ್ಣಾದ ಪಪ್ಪಾಯಿಯನ್ನು ಪೇಸ್ಟ್ ಆಗಿ ಮಾಡಿ ಮತ್ತು ಅದನ್ನು ನಿಮ್ಮ ಮುಖದ ಮೇಲೆ ಹಚ್ಚಿ. ಅದನ್ನು ಒಣಗಲು ಬಿಡಿ. ಬಳಿಕ ಮುಖವನ್ನು ನೀರಿನಿಂದ ತೊಳೆಯುವಾಗ ನಿಮ್ಮ ಚರ್ಮದ ಮೇಲೆ ಮಸಾಜ್ ಮಾಡುತ್ತಾ, ನಂತರ ತೊಳೆಯಿರಿ.

ಇದನ್ನೂ ಓದಿ: ತ್ವಚೆಯ ಸೌಂದರ್ಯಕ್ಕೆ ಪಪ್ಪಾಯ ಹಣ್ಣು ಬಳಸಿ; ನಿಮ್ಮ ಚರ್ಮಕ್ಕೆ ಯಾವ ಫೇಸ್​ಪ್ಯಾಕ್ ಬೆಸ್ಟ್?

ಪಪ್ಪಾಯಿಯಲ್ಲಿ ಪಿಗ್ಮೆಂಟೇಶನ್ ಮತ್ತು ಕಪ್ಪು ಕಲೆಗಳನ್ನು ಕಡಿಮೆ ಮಾಡಲು ಸಹಾಯ ಮಾಡುವ ಕಿಣ್ವಗಳಿವೆ. ಹಾಗೇ, ಮೊಡವೆಗೆ ಕಾರಣವಾಗುವ ಬ್ಯಾಕ್ಟೀರಿಯಾಗಳಿಗೆ ಚಿಕಿತ್ಸೆ ನೀಡಲು ಪಪ್ಪಾಯಿ ಉಪಯುಕ್ತವಾಗಿದೆ. ಇದು ನಿಮ್ಮ ಚರ್ಮದ ತೈಲ ಮಟ್ಟವನ್ನು ಸಮತೋಲನಗೊಳಿಸಲು ಸಹಾಯ ಮಾಡುತ್ತದೆ ಮತ್ತು ಚರ್ಮದ ರಂಧ್ರಗಳನ್ನು ಸ್ವಚ್ಛಗೊಳಿಸುತ್ತದೆ.

ಆಕ್ಸಿಗ್ಲೋ ಪಪ್ಪಾಯಿ ಫೇಸ್ ಪ್ಯಾಕ್ ಪಪ್ಪಾಯಿಯ ಸಾರಗಳ ಉತ್ತಮತೆಯಿಂದ ಸಮೃದ್ಧವಾಗಿದೆ. ಇದು ಚರ್ಮವನ್ನು ಬಿಗಿಗೊಳಿಸುತ್ತದೆ. ಇದು ಡೆಡ್ ಸ್ಕಿನ್, ಕೊಳೆಯನ್ನು ತೆಗೆದುಹಾಕುವ ಮೂಲಕ ಚರ್ಮವನ್ನು ಪುನರ್​ ಯೌವನಗೊಳಿಸುತ್ತದೆ.

ಇದನ್ನೂ ಓದಿ: Beauty Tips: ಫೇಸ್​ಪ್ಯಾಕ್ ಮಾಡಿಕೊಳ್ಳುವಾಗ ಈ ವಿಷಯಗಳನ್ನೆಂದೂ ಮರೆಯಬೇಡಿ

ಪಪ್ಪಾಯ ಹಣ್ಣು ಮೊಡವೆಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ, ಮೊಡವೆಗಳ ಕಲೆಗಳನ್ನು ಮಸುಕಾಗಿಸುತ್ತದೆ. ಚರ್ಮದ ನಸುಕಂದು ಮಚ್ಚೆಗಳ ನೋಟವನ್ನು ಕಡಿಮೆ ಮಾಡುತ್ತದೆ. ಚರ್ಮದ ನೈಸರ್ಗಿಕ ತೇವಾಂಶ ಸಮತೋಲನವನ್ನು ತೊಂದರೆಯಾಗದಂತೆ ಕಲ್ಮಶಗಳನ್ನು ತೆಗೆದುಹಾಕುತ್ತದೆ.

ಫೇಸ್​ಪ್ಯಾಕ್ ಮಾಡಿಕೊಳ್ಳುವುದಕ್ಕೂ ಮುನ್ನ ನಿಮ್ಮ ಮುಖವನ್ನು ತೊಳೆದುಕೊಳ್ಳಿ. ಸಣ್ಣ ಪಪ್ಪಾಯಿ ತುಂಡನ್ನು ಫೇಸ್ ಪ್ಯಾಕ್ ಆಗಿ ಹಚ್ಚಿಕೊಳ್ಳಿ. ಡೆಡ್ ಸ್ಕಿನ್​ಗಳನ್ನು ತೆಗೆದುಹಾಕಲು ನಿಧಾನವಾಗಿ ಮಸಾಜ್ ಮಾಡಿ. ಅದಾದ ನಂತರ ನೀರಿನಿಂದ ಮುಖವನ್ನು ತೊಳೆದುಕೊಳ್ಳಿ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ!
ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ!
ಕೊಲೆಯಾದ ನಿವೃತ್ತ ಐಪಿಎಸ್​​ ಓಂಪ್ರಕಾಶ್​ ಫಾರ್ಮ್ ಹೌಸ್ ಹೇಗಿದೆ ನೋಡಿ...!
ಕೊಲೆಯಾದ ನಿವೃತ್ತ ಐಪಿಎಸ್​​ ಓಂಪ್ರಕಾಶ್​ ಫಾರ್ಮ್ ಹೌಸ್ ಹೇಗಿದೆ ನೋಡಿ...!
ಯುಎಸ್ ಉಪಾಧ್ಯಕ್ಷ ಜೆಡಿ. ವ್ಯಾನ್ಸ್ ಕುಟುಂಬಕ್ಕೆ ಶಾಸ್ತ್ರೀಯ ನೃತ್ಯದ ಸ್ವಾಗತ
ಯುಎಸ್ ಉಪಾಧ್ಯಕ್ಷ ಜೆಡಿ. ವ್ಯಾನ್ಸ್ ಕುಟುಂಬಕ್ಕೆ ಶಾಸ್ತ್ರೀಯ ನೃತ್ಯದ ಸ್ವಾಗತ
VIDEO: ಮೊದಲು ಕಿತ್ತಾಟ... ಆಮೇಲೆ ಸ್ನೇಹಹಸ್ತ: ಇದು ವಿರಾಟ್ ಕೊಹ್ಲಿ
VIDEO: ಮೊದಲು ಕಿತ್ತಾಟ... ಆಮೇಲೆ ಸ್ನೇಹಹಸ್ತ: ಇದು ವಿರಾಟ್ ಕೊಹ್ಲಿ
ಹುಲಿಯನ್ನೇ ಅಟ್ಟಾಡಿಸಿದ ಒಂಟಿ ಸಲಗ: ಅಪರೂಪದ ವಿಡಿಯೋ ವೈರಲ್​
ಹುಲಿಯನ್ನೇ ಅಟ್ಟಾಡಿಸಿದ ಒಂಟಿ ಸಲಗ: ಅಪರೂಪದ ವಿಡಿಯೋ ವೈರಲ್​
VIDEO: ಅಣ್ಣನ ಬ್ಯಾಟಿಂಗ್ ಎಂಟ್ರಿಗೆ ಬಿಕ್ಕಳಿಸಿ ಅತ್ತ ತಮ್ಮ
VIDEO: ಅಣ್ಣನ ಬ್ಯಾಟಿಂಗ್ ಎಂಟ್ರಿಗೆ ಬಿಕ್ಕಳಿಸಿ ಅತ್ತ ತಮ್ಮ
‘ನಾನು ಶಿವನ ಭಕ್ತ, ಅದಕ್ಕಾಗಿ ಇಲ್ಲಿಗೆ ಬಂದೆ’; ಮಹಾಕಾಳೇಶ್ವರ ದೇವಾಲಯ ಭೇಟಿ
‘ನಾನು ಶಿವನ ಭಕ್ತ, ಅದಕ್ಕಾಗಿ ಇಲ್ಲಿಗೆ ಬಂದೆ’; ಮಹಾಕಾಳೇಶ್ವರ ದೇವಾಲಯ ಭೇಟಿ