Belly Fat Tips: ಬೆಲ್ಲಿ ಫ್ಯಾಟ್​ನ್ನು ಕರಗಿಸಲು​ ಈ ಆಹಾರ ಪದಾರ್ಥಗಳನ್ನು ಸೇವಿಸಿ!

ಹೊಟ್ಟೆಯ ಕೊಬ್ಬನ್ನು ಕಳೆದುಕೊಳ್ಳಲು ಕಡಿಮೆ ಕ್ಯಾಲೋರಿ ಇರುವ ಆಹಾರವನ್ನು ಸೇವಿಸಬೇಕು ಎನ್ನುತ್ತಾರೆ ಆರೋಗ್ಯ ತಜ್ಞರು.

Belly Fat Tips: ಬೆಲ್ಲಿ ಫ್ಯಾಟ್​ನ್ನು ಕರಗಿಸಲು​ ಈ ಆಹಾರ ಪದಾರ್ಥಗಳನ್ನು ಸೇವಿಸಿ!
ಪ್ರಾತಿನಿಧಿಕ ಚಿತ್ರImage Credit source: healthshots.com
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Dec 31, 2022 | 8:26 PM

ಇತ್ತೀಚಿನ ದಿನಗಳಲ್ಲಿ ನಾವು ಅನುಸರಿಸುತ್ತಿರುವ ಜೀವನಶೈಲಿ ಮತ್ತು ಆಹಾರ ಪದ್ಧತಿಯಿಂದ ಅನೇಕ ಜನರು ವಿವಿಧ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದೇವೆ. ಅದರಲ್ಲೂ ಮಧುಮೇಹ, ಬೊಜ್ಜು, ಬಿಪಿಯಂತಹ ಆರೋಗ್ಯ ಸಮಸ್ಯೆಗಳು ಚಿಕ್ಕ ವಯಸ್ಸಿನಿಂದಲೇ ಶುರುವಾಗತ್ತವೆ. ಹೊಟ್ಟೆಯ ಕೊಬ್ಬು (Belly Fat) ಸಾಮಾನ್ಯ ಸಮಸ್ಯೆಯಾಗಿದೆ. ಹೊಟ್ಟೆಯ ಕೊಬ್ಬಿನಿಂದಾಗಿ ನಮ್ಮ ಆತ್ಮಸ್ಥೈರ್ಯ ಕುಂದಿದರೂ ಅದರಲ್ಲಿ ಶೇಖರಣೆಯಾಗುವ ಕೊಬ್ಬಿನಿಂದ ನಾನಾ ರೀತಿಯ ಆರೋಗ್ಯ ಸಮಸ್ಯೆಗಳು ಉದ್ಭವಿಸುತ್ತವೆ ಎನ್ನುತ್ತಾರೆ ಆರೋಗ್ಯ ತಜ್ಞರು. ಯಾವುದೇ ಹಣವನ್ನು ಖರ್ಚು ಮಾಡದೆ ಹೊಟ್ಟೆಯ ಕೊಬ್ಬನ್ನು ಕರಗಿಸಲು ಕೆಲವು ರೀತಿಯ ಆಹಾರ ಬದಲಾವಣೆಗಳು ಸಾಕು ಎಂದು ಅವರು ಹೇಳುತ್ತಾರೆ.

ತಜ್ಞರ ಪ್ರಕಾರ, ಅಧಿಕ ತೂಕ ಮತ್ತು ಹೊಟ್ಟೆಯ ಕೊಬ್ಬಿನಿಂದ ಬಳಲುತ್ತಿರುವವರು ಕಾರ್ಬೋಹೈಡ್ರೇಟ್ಗಳು, ಕೊಬ್ಬು ಮತ್ತು ಸಕ್ಕರೆ ಅಧಿಕವಾಗಿರುವ ಆಹಾರವನ್ನು ಸೇವಿಸಬಾರದು. ಅಲ್ಲದೆ ಕರಿದ ಆಹಾರಗಳನ್ನು ತಿನ್ನಬಾರದು. ಹೊಟ್ಟೆಯ ಕೊಬ್ಬನ್ನು ಕಳೆದುಕೊಳ್ಳಲು ಕಡಿಮೆ ಕ್ಯಾಲೋರಿ ಇರುವ ಆಹಾರವನ್ನು ಸೇವಿಸಬೇಕು ಎನ್ನುತ್ತಾರೆ ಆರೋಗ್ಯ ತಜ್ಞರು. ವಾಸ್ತವವಾಗಿ ಹೊಟ್ಟೆಯ ಕೊಬ್ಬನ್ನು ಕರಗಿಸುವುದು ಅಷ್ಟು ಸುಲಭವಲ್ಲ. ಆದರೆ ಕೆಲವು ರೀತಿಯ ತರಕಾರಿಗಳನ್ನು ತಿನ್ನುವ ಮೂಲಕ ನೀವು ಹೊಟ್ಟೆಯ ಕೊಬ್ಬನ್ನು ಕಡಿಮೆ ಮಾಡಬಹುದು ಎಂದು ತಜ್ಞರು ಸಲಹೆ ನೀಡುತ್ತಾರೆ.

ಇದನ್ನೂ ಓದಿ: Benefits of Sitting on Floor: ನೆಲದ ಮೇಲೆ ಕುಳಿತುಕೊಳ್ಳುವುದರಿಂದ ಇಷ್ಟೆಲ್ಲಾ ಲಾಭಗಳು

  1.  ಬೀಟ್ರೂಟ್: ಬೀಟ್ರೂಟ್ ವಿಟಮಿನ್ಗಳು, ಫೈಬರ್ ಮತ್ತು ಆಂಟಿಆಕ್ಸಿಡೆಂಟ್ಗಳಂತಹ ಪೋಷಕಾಂಶಗಳಲ್ಲಿ ಸಮೃದ್ಧವಾಗಿದೆ.  ಕ್ಯಾಲೋರಿಗಳು ಮತ್ತು ಕೊಬ್ಬಿನಲ್ಲಿ ಬಹಳ ಕಡಿಮೆಯಾಗಿದೆ. ಹಾಗಾಗಿ ಹೊಟ್ಟೆಯ ಕೊಬ್ಬನ್ನು ಕಡಿಮೆ ಮಾಡಿಕೊಳ್ಳಲು ಬಯಸುವವರು ಬೀಟ್‌ರೂಟ್​ನ್ನು ಸೇವಿಸಿ.
  2. ಕ್ಯಾರೆಟ್: ಕ್ಯಾರೆಟ್ ಕೂಡ ಹೊಟ್ಟೆಯ ಕೊಬ್ಬನ್ನು ಸುಲಭವಾಗಿ ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಕ್ಯಾರೆಟ್‌ನಲ್ಲಿ ಕ್ಯಾಲೋರಿಗಳು ತುಂಬಾ ಕಡಿಮೆ ಮತ್ತು ಫೈಬರ್ ಅಂಶವು ಸಮೃದ್ಧವಾಗಿದೆ. ಅದಕ್ಕಾಗಿಯೇ ತೂಕವನ್ನು ನಿಯಂತ್ರಿಸಲು ಮತ್ತು ದೇಹದಲ್ಲಿ ಸಂಗ್ರಹವಾದ ಕೊಬ್ಬನ್ನು ತೆಗೆದುಹಾಕಲು ಕ್ಯಾರೆಟ್ ತಿನ್ನುವುದು ಒಳ್ಳೆಯದು.
  3. ಹೂಕೋಸು: ಹೂಕೋಸು ತಿನ್ನುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳಿವೆ. ಕಡಿಮೆ ಕ್ಯಾಲೋರಿ ಮತ್ತು ಕಾರ್ಬೋಹೈಡ್ರೇಟ್ ಹೊಂದಿರುವ ಹೂಕೋಸು ದೇಹದಲ್ಲಿ ಸಂಗ್ರಹವಾದ ಕೊಬ್ಬನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
  4. ಸೌತೆಕಾಯಿ: ಸೌತೆಕಾಯಿಯಲ್ಲಿ ಹೆಚ್ಚಿನ ನೀರಿನ ಅಂಶವಿರುವುದರಿಂದ ದೇಹವನ್ನು ತೇವಾಂಶದಿಂದ ಇಡುತ್ತದೆ. ತೂಕವನ್ನು ನಿಯಂತ್ರಣದಲ್ಲಿಡುತ್ತದೆ. ಅದಕ್ಕಾಗಿಯೇ ಹೊಟ್ಟೆಯ ಬೊಜ್ಜು ಕಡಿಮೆ ಮಾಡಿಕೊಳ್ಳಲು ಬಯಸುವವರು ಸೌತೆಕಾಯಿ ಜ್ಯೂಸ್ ಕುಡಿದರೆ ಉತ್ತಮ ಫಲಿತಾಂಶ ಸಿಗುತ್ತದೆ.
  5. ಬ್ರೊಕೊಲಿ: 100 ಗ್ರಾಂ ಬ್ರೊಕೊಲಿಯಲ್ಲಿ 34 ಕ್ಯಾಲೊರಿಗಳಿವೆ. ಬ್ರೊಕೊಲಿಯಲ್ಲಿ ಫೈಬರ್ ಅಂಶವೂ ಅಧಿಕವಾಗಿದೆ. ಆದ್ದರಿಂದ, ಬ್ರೊಕೊಲಿ ಹೊಟ್ಟೆಯ ಕೊಬ್ಬು ಮತ್ತು ಅಧಿಕ ತೂಕವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಮತ್ತಷ್ಟು ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ