Benefits of Carrot Juice: ಚಳಿಗಾಲದಲ್ಲಿ ಪ್ರತಿದಿನ ಒಂದು ಗ್ಲಾಸ್ ಕ್ಯಾರೆಟ್ ಜ್ಯೂಸ್ ಕುಡಿಯುವುದು ಒಳ್ಳೆಯದೇ?
ಚಳಿಗಾಲ ಆರಂಭವಾಗಿದೆ. ಬದಲಾಗುತ್ತಿರುವ ಹವಾಮಾನವು ನಮ್ಮ ರೋಗನಿರೋಧಕ ಶಕ್ತಿಯನ್ನು ದುರ್ಬಲಗೊಳಿಸುತ್ತದೆ, ಇದು ನಮ್ಮನ್ನು ಅನಾರೋಗ್ಯ ಮತ್ತು ಸೋಂಕುಗಳಿಗೆ ಹೆಚ್ಚು ಗುರಿಯಾಗುವಂತೆ ಮಾಡುತ್ತದೆ. ಆದ್ದರಿಂದ ಈ ಶೀತ ಋತುವಿನಲ್ಲಿ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ. ನೀವು ನಿಮ್ಮ ಆಹಾರದಲ್ಲಿ ಕ್ಯಾರೆಟ್ ಅನ್ನು ಸೇರಿಸಿಕೊಳ್ಳಬಹುದು. ನೀವು ನಿತ್ಯ ಕ್ಯಾರೆಟ್ ಜ್ಯೂಸ್ ಕುಡಿಯಬಹುದು. ಇದರ ಪ್ರಯೋಜನಗಳೇನು ಎಂಬುದನ್ನು ನೋಡೋಣ ಬನ್ನಿ.

ಚಳಿಗಾಲದ (winter) ಆಗಮನದೊಂದಿಗೆ, ಹವಾಮಾನವು ಬದಲಾಗಲು ಪ್ರಾರಂಭಿಸುತ್ತದೆ. ಚಳಿಗಾಲದಲ್ಲಿ ಬೆಳಿಗ್ಗೆ ಮತ್ತು ಸಂಜೆಯ ಸೌಮ್ಯವಾದ ಚಳಿಯು ಆಹ್ಲಾದಕರವೆನಿಸಬಹುದು, ಆದರೆ ಇದು ಸೋಂಕುಗಳು, ಕಾಲೋಚಿತ ಜ್ವರ, ಶೀತಗಳು ಮತ್ತು ಒಣ ಚರ್ಮ ಇತ್ಯಾದಿ ಆರೋಗ್ಯ ಸಮಸ್ಯೆಗಳನ್ನು ಹೆಚ್ಚಿಸುತ್ತದೆ. ತಾಪಮಾನ ಕಡಿಮೆಯಾದಂತೆ, ನಮ್ಮ ದೇಹದ ಚಯಾಪಚಯ ಕ್ರಿಯೆಯು ನಿಧಾನಗೊಳ್ಳುತ್ತದೆ, ಇದು ನಮ್ಮ ರೋಗನಿರೋಧಕ ಶಕ್ತಿಯ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ. ಹೀಗಿರುವಾಗ ಈ ಸಮಯದಲ್ಲಿ ಕ್ಯಾರೆಟ್ ಜ್ಯೂಸ್ ಕುಡಿಯುವ ಮೂಲಕ ಅರೋಗ್ಯವನ್ನು ಉತ್ತಮ ರೀತಿಯಲ್ಲಿ ಕಾಪಾಡಿಕೊಳ್ಳಬಹುದು. ಕ್ಯಾರೆಟ್‌ನಲ್ಲಿ ಬೀಟಾ-ಕ್ಯಾರೋಟಿನ್, ವಿಟಮಿನ್ ಎ, ವಿಟಮಿನ್ ಸಿ ಮತ್ತು ಹಲವಾರು ಇತರ ಉತ್ಕರ್ಷಣ ನಿರೋಧಕಗಳಿವೆ. ಈ ಉತ್ಕರ್ಷಣ ನಿರೋಧಕಗಳು ರೋಗನಿರೋಧಕ ಶಕ್ತಿಯನ್ನು ಬಲಪಡಿಸಲು ಮತ್ತು ಶೀತ ಮತ್ತು ಕೆಮ್ಮಿನಂತಹ ಚಳಿಗಾಲದ ಸೋಂಕುಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತವೆ.
ಚಳಿಗಾಲದಲ್ಲಿ ಕ್ಯಾರೆಟ್ ಜ್ಯೂಸ್ ಕುಡಿಯುವುದರ ಪ್ರಯೋಜನಗಳೇನು?
ರೋಗನಿರೋಧಕ ಶಕ್ತಿಯನ್ನು ಬಲಪಡಿಸಲು ಸಹಕಾರಿ:
ಈ ಋತುವಿನಲ್ಲಿ ಶೀತ ಮತ್ತು ಜ್ವರ ಬರುವ ಅಪಾಯ ಹೆಚ್ಚು. ಆದ್ದರಿಂದ, ನಿಮ್ಮ ರೋಗನಿರೋಧಕ ಶಕ್ತಿಯನ್ನು ಬಲಪಡಿಸುವುದು ಬಹಳ ಮುಖ್ಯ. ಹೀಗಿರುವಾಗ ಚಳಿಗಾಲದಲ್ಲಿ ಕ್ಯಾರೆಟ್ ಜ್ಯೂಸ್ ಕುಡಿಯುವುದರಿಂದ ಅನಾರೋಗ್ಯವನ್ನು ದೂರವಿಡಬಹುದು. ಇದು ಉತ್ಕರ್ಷಣ ನಿರೋಧಕಗಳು ಮತ್ತು ಬೀಟಾ-ಕ್ಯಾರೋಟಿನ್ ನ ಸಮೃದ್ಧ ಮೂಲವಾಗಿದ್ದು, ಇದು ದೇಹಕ್ಕೆ ವಿಟಮಿನ್ ಎ ಅನ್ನು ಒದಗಿಸುತ್ತದೆ. ಇದರ ವಿಟಮಿನ್ ಸಿ, ವಿಟಮಿನ್ ಎ ಮತ್ತು ಉತ್ಕರ್ಷಣ ನಿರೋಧಕಗಳು ನಿಮ್ಮ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.
ಚರ್ಮದ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ:
ಚಳಿಗಾಲದಲ್ಲಿನ ಶೀತ ಗಾಳಿಯು ಚರ್ಮ ಒಣಗಳು ಕಾರಣವಾಗಬಹುದು. ಚಳಿಗಾಲದಲ್ಲಿ ನೀವು ಕೂಡ ಈ ಸಮಸ್ಯೆಯನ್ನು ಎದುರಿಸುತ್ತಿದ್ದರೆ, ನಿತ್ಯ ಕ್ಯಾರೆಟ್ ಜ್ಯೂಸ್ ಕುಡಿಯಿರಿ. ಕ್ಯಾರೆಟ್‌ನಲ್ಲಿರುವ ಬೀಟಾ-ಕ್ಯಾರೋಟಿನ್ ದೇಹದಲ್ಲಿ ವಿಟಮಿನ್ ಎ ಆಗಿ ಪರಿವರ್ತನೆಗೊಳ್ಳುತ್ತದೆ, ಇದು ಚರ್ಮದ ಕೋಶಗಳನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಅಲ್ಲದೆ ಇದು ಚರ್ಮವನ್ನು ತೇವಗೊಳಿಸುವಲ್ಲಿ ಮತ್ತು ಚರ್ಮಕ್ಕೆ ಆರೋಗ್ಯಕರ ಹೊಳಪನ್ನು ನೀಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಇದು ಮೊಡವೆಗಳಿಗೆ ನೈಸರ್ಗಿಕ ಪರಿಹಾರವಾಗಿದೆ. ಇದಲ್ಲದೆ, ಕ್ಯಾರೆಟ್‌ನಲ್ಲಿರುವ ವಿಟಮಿನ್ ಸಿ ನಿಮ್ಮ ಚರ್ಮವನ್ನು ಸ್ವತಂತ್ರ ರಾಡಿಕಲ್‌ಗಳಿಂದ ಉಂಟಾಗುವ ಹಾನಿಯಿಂದ ರಕ್ಷಿಸಲು ಉತ್ಕರ್ಷಣ ನಿರೋಧಕವಾಗಿ ಕಾರ್ಯನಿರ್ವಹಿಸುತ್ತದೆ.
ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಪ್ರಯೋಜನಕಾರಿ:
ಕ್ಯಾರೆಟ್‌ನಲ್ಲಿ ಮ್ಯಾಂಗನೀಸ್, ಮೆಗ್ನೀಸಿಯಮ್ ಮತ್ತು ಕ್ಯಾರೊಟಿನಾಯ್ಡ್‌ಗಳಿದ್ದು, ಇದು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಆದರೂ ಮಧುಮೇಹಿಗಳು ಅವುಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಸೇವಿಸುವುದನ್ನು ತಪ್ಪಿಸಬೇಕು.
ಕ್ಯಾರೆಟ್ ಜ್ಯೂಸ್ ತೂಕ ಇಳಿಸಿಕೊಳ್ಳಲು ಸಹಕಾರಿ:
ಕ್ಯಾರೆಟ್ ಜ್ಯೂಸ್ ತೂಕ ಇಳಿಸಿಕೊಳ್ಳಲು ಅತ್ಯಂತ ಪ್ರಯೋಜನಕಾರಿ. ಇದರಲ್ಲಿ ಕ್ಯಾಲೋರಿಗಳು ಕಡಿಮೆ ಮತ್ತು ಫೈಬರ್ ಅಧಿಕವಾಗಿದ್ದು, ತೂಕ ಇಳಿಸಿಕೊಳ್ಳಲು ಇದು ಸಹಾಯಕವಾಗಿದೆ. ಇದಲ್ಲದೆ, ಇದು ದೇಹಕ್ಕೆ ಶಕ್ತಿಯನ್ನು ಒದಗಿಸುತ್ತದೆ, ಚಯಾಪಚಯ ಕ್ರಿಯೆಯನ್ನು ಹೆಚ್ಚಿಸುತ್ತದೆ ಮತ್ತು ಕರುಳಿನ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ.
ಇದನ್ನೂ ಓದಿ: ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಈ ಹಣ್ಣುಗಳನ್ನು ತಿನ್ನಲೇಬಾರದು; ಯಾಕೆ ಗೊತ್ತೇ?
ಕ್ಯಾರೆಟ್ ಜ್ಯೂಸ್ ಕಣ್ಣುಗಳಿಗೆ ತುಂಬಾ ಪ್ರಯೋಜನಕಾರಿ:
ಕ್ಯಾರೆಟ್‌ನಲ್ಲಿ ಹೇರಳವಾಗಿ ಕಂಡುಬರುವ ವಿಟಮಿನ್ ಎ ಕಣ್ಣುಗಳಿಗೆ ಅತ್ಯಂತ ಪ್ರಯೋಜನಕಾರಿ. ಕ್ಯಾರೆಟ್‌ನಲ್ಲಿ ಕಂಡುಬರುವ ಉತ್ಕರ್ಷಣ ನಿರೋಧಕ ಮತ್ತು ಕ್ಯಾರೊಟಿನಾಯ್ಡ್ ಕಣ್ಣಿನ ಆರೋಗ್ಯವನ್ನು ವೃದ್ಧಿಸುತ್ತದೆ. ಹಾಗಾಗಿ ನಿತ್ಯ ಒಂದು ಗ್ಲಾಸ್ ಕ್ಯಾರೆಟ್ ಜ್ಯೂಸ್ ಕುಡಿಯಿರಿ.
ಕ್ಯಾರೆಟ್ ಜ್ಯೂಸ್ ಕೆಮ್ಮು ನಿವಾರಣೆಗೆ ಪ್ರಯೋಜನಕಾರಿ:
ಕ್ಯಾರೆಟ್ ಜ್ಯೂಸ್ ಗೆ ಕಲ್ಲು ಸಕ್ಕರೆ, ಶುಂಠಿ, ಜೇನುತುಪದಪ ಮತ್ತು ಕರಿಮೆಣಸು ಬೆರೆಸಿ ಕುಡಿಯುವುದರಿಂದ ಕೆಮ್ಮು ನಿವಾರಣೆಯಾಗುತ್ತದೆ ಮತ್ತು ಕಫದಿಂದ ಪರಿಹಾರ ಸಿಗುತ್ತದೆ.
ಕ್ಯಾರೆಟ್ ಜ್ಯೂಸ್ ಜೀರ್ಣಕ್ರಿಯೆಗೆ ಸಹಕಾರಿ:
ಕ್ಯಾರೆಟ್‌ನಲ್ಲಿರುವ ಪೋಷಕಾಂಶಗಳು ದೇಹಕ್ಕೆ ಅಗತ್ಯವಾದ ಪೋಷಕಾಂಶಗಳನ್ನು ಒದಗಿಸಲು ಸಹಾಯ ಮಾಡುತ್ತವೆ. ಕ್ಯಾರೆಟ್ ಜ್ಯೂಸ್ ಕುಡಿಯುವುದರಿಂದ ನಿಮ್ಮ ಪೋಷಕಾಂಶಗಳ ಸೇವನೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.
ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




