ಬೆಳಗ್ಗೆ ಹಲ್ಲುಜ್ಜುವ ಮೊದಲು ನೀರು ಕುಡಿಯಿರಿ, ಇದರಿಂದ ಹಲವು ಪ್ರಯೋಜನ
Drinking Water Before Brushing: ಅನೇಕ ಜನರು ಬೆಳಗ್ಗೆ ಹಲ್ಲುಜ್ಜಿದ್ದ ನಂತರ ನೀರನ್ನು ಕುಡಿಯುವ ಅಭ್ಯಾಸವನ್ನು ರೂಢಿಸಿಕೊಂಡಿರುತ್ತಾರೆ. ಇನ್ನೂ ಕೆಲವರು ಎದ್ದ ತಕ್ಷಣ ನೀರು ಕುಡಿಯುತ್ತಾರೆ. ಹೀಗೆ ಹಲ್ಲುಜ್ಜದೆ ನೀರು ಕುಡಿಯುವುದರಿಂದ ಅನೇಕ ಆರೋಗ್ಯ ಲಾಭಗಳು ಲಭಿಸುತ್ತವೆ ಎನ್ನುತ್ತಾರೆ ವೈದ್ಯಕೀಯ ತಜ್ಞರು.
ಬಹುತೇಕ ಹೆಚ್ಚಿನವರು ಬೆಳಗ್ಗೆ ಖಾಲಿ ಹೊಟ್ಟೆಗೆ ಒಂದು ಲೋಟ ನೀರನ್ನು ಕುಡಿಯುವ ಅಭ್ಯಾಸವನ್ನು ರೂಢಿಸಿಕೊಂಡಿರುತ್ತಾರೆ. ಅದರಲ್ಲಿ ಕೆಲವರು ಹಲ್ಲುಜ್ಜಿದ ಬಳಿಕ ನೀರನ್ನು ಕುಡಿದರೆ, ಇನ್ನೂ ಕೆಲವರು ಬೆಳಗ್ಗೆ ಎದ್ದ ತಕ್ಷಣ ಹಲ್ಲುಜ್ಜದೆಯೇ ನೀರನ್ನು ಸೇವನೆ ಮಾಡುತ್ತಾರೆ. ಆದರೆ ಈ ಎರಡರಲ್ಲಿ ಯಾವುದು ಉತ್ತಮ ಎಂಬುದು ಅನೇಕ ಜನರಿಗೆ ಗೊತ್ತಿಲ್ಲ. ಹಾಗಾದರೆ ಈ ಎರಡರಲ್ಲಿ ಯಾವುದು ಉತ್ತಮ ಎಂಬುದನ್ನು ತಿಳಿಯೋಣ.
ಬೆಳಗ್ಗೆ ಹಲ್ಲುಜ್ಜುವ ಮೊದಲು ನೀರು ಸೇವನೆ ಮಾಡುವುದರಿಂದ ಲಭಿಸುವ ಆರೋಗ್ಯ ಪ್ರಯೋಜನಗಳು:
ಬೆಳಗ್ಗೆ ಹಲ್ಲುಜ್ಜಿದ ಬಳಿಕ ನೀರು ಕುಡಿಯುವುದಕ್ಕಿಂತ ಹಲ್ಲುಜ್ಜುವ ಮುನ್ನ ಬಾಯಿ ಮುಕ್ಕಳಿಸಿ ಒಂದು ಲೋಟ ನೀರು ಕುಡಿದರೆ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು ಎನ್ನುತ್ತಾರೆ ತಜ್ಞರು. ಹೌದು ಪ್ರತಿದಿನ ಬೆಳಗ್ಗೆ ಹಲ್ಲುಜ್ಜುವ ಮೊದಲು ನೀರು ಸೇವಿಸಿದರೆ ಗ್ಯಾಸ್, ಅಸಿಡಿಟಿ, ಮಲಬದ್ಧತೆ, ಆಲಸ್ಯ, ಬಿಪಿ, ಮಧುಮೇಹ, ಚರ್ಮರೋಗದಂತಹ ಅನೇಕ ಆರೋಗ್ಯ ಸಮಸ್ಯೆಗಳು ನಿವಾರಣೆಯಾಗುತ್ತವೆ ಎಂದು ಹೇಳಲಾಗುತ್ತದೆ.
- ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ಆರೋಗ್ಯವು ಉತ್ತಮವಾಗಿರುವುದರ ಜೊತೆಗೆ ಇದು ದೇಹದ ನಿರ್ಜಲೀಕರಣವನ್ನು ತಡೆಯುತ್ತದೆ. ಜೊತೆಗೆ ಹೊಟ್ಟೆ ಸಂಬಂಧಿ ಕಾಯಿಲೆಗಳು ಬಾರದಂತೆ ತಡೆಯುತ್ತದೆ.
- ಬೆಳಗ್ಗೆ ಹಲ್ಲುಜ್ಜುವ ಮೊದಲು ಒಂದು ಲೋಟ ನೀರು ಕುಡಿದರೆ ಅದು ನಿಮ್ಮ ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಜೊತೆಗೆ ಇದು ಚರ್ಮ ಮತ್ತು ಕೂದಲಿಗೂ ತುಂಬಾನೇ ಪ್ರಯೋಜನಕಾರಿ.
- ಬೆಳಗ್ಗೆ ಹಲ್ಲುಜ್ಜದೆ ನೀರು ಕುಡಿಯುದರಿಂದ ಕ್ರಮೇಣ ದೇಹದ ಬೊಜ್ಜು ಕಡಿಮೆಯಾಗುತ್ತದೆ ಎಂದು ತಜ್ಞರು ಹೇಳುತ್ತಾರೆ. ಅಷ್ಟೇ ಅಲ್ಲದೆ ಬೆಳಗ್ಗೆ ಎದ್ದ ತಕ್ಣ ಒಂದು ಲೋಟ ನೀರನ್ನು ಕುಡಿಯುವುದರಿಂದ ಬಾಯಿಯ ದುರ್ವಾಸನೆ ಸಮಸ್ಯೆಯೂ ಕಡಿಮೆಯಾಗುತ್ತದೆ.
ಮತ್ತಷ್ಟು ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ