Sign In

By signing in or creating an account, you agree with Associated Broadcasting Company's Terms & Conditions and Privacy Policy.

Black Grapes in Winter: ಚಳಿಗಾಲದಲ್ಲಿ ಕಪ್ಪು ದ್ರಾಕ್ಷಿ ಸೇವಿಸುವುದರಿಂದ ಆಗುವ ಲಾಭಗಳೇನು ಗೊತ್ತಾ?

ಕಪ್ಪು ದ್ರಾಕ್ಷಿ ಉತ್ಕರ್ಷಣ ನಿರೋಧಕ ಮತ್ತು ಖನಿಜಗಳ ಶಕ್ತಿ ಕೇಂದ್ರಗಳು ಎಂದು ಹೇಳಬಹುದು. ಚರ್ಮ ಮತ್ತು ಕೂದಲಿಗೆ ಅಗತ್ಯವಾದ ಪೋಷಣೆಯನ್ನು ನೀಡುತ್ತದೆ. ಆದ್ದರಿಂದ ವಿಶೇಷವಾಗಿ ಚಳಿಗಾಲದಲ್ಲಿ ಕಪ್ಪು ದ್ರಾಕ್ಷಿ ಸೇವಿಸುವುದರಿಂದ ಆಗುವ ಲಾಭಗಳನ್ನು ಇಲ್ಲಿ ತಿಳಿದುಕೊಳ್ಳಿ.

Black Grapes in Winter: ಚಳಿಗಾಲದಲ್ಲಿ ಕಪ್ಪು ದ್ರಾಕ್ಷಿ ಸೇವಿಸುವುದರಿಂದ ಆಗುವ ಲಾಭಗಳೇನು ಗೊತ್ತಾ?
Black Grapes in WinterImage Credit source: Pinterest
Follow us
ಅಕ್ಷತಾ ವರ್ಕಾಡಿ
|

Updated on: Dec 25, 2023 | 12:03 PM

ಕಪ್ಪು ಬಣ್ಣದ ದ್ರಾಕ್ಷಿಯ ಬಗ್ಗೆ ವಿಶೇಷ ಪರಿಚಯ ಅಗತ್ಯವಿಲ್ಲ. ಕಪ್ಪು ದ್ರಾಕ್ಷಿ ತುಂಬಾ ರುಚಿಕರವಾಗಿರುವುದರಿಂದ ಸಾಕಷ್ಟು ಜನರು ತಿನ್ನಲು ಇಷ್ಟಪಡುತ್ತಾರೆ.ರುಚಿಯ ಹೊರತಾಗಿ, ಕಪ್ಪು ದ್ರಾಕ್ಷಿಯಲ್ಲಿ ಅನೇಕ ಆರೋಗ್ಯಕರ ಪ್ರಯೋಜನಗಳಿವೆ. ಇದರಲ್ಲಿ ಚರ್ಮ ಮತ್ತು ಕೂದಲಿಗೆ ಅಗತ್ಯವಾದ ಅನೇಕ ಪೋಷಕಾಂಶಗಳಿವೆ. ಇದಲ್ಲದೇ ಈ ಕಪ್ಪು ದ್ರಾಕ್ಷಿಗಳು ಉತ್ಕರ್ಷಣ ನಿರೋಧಕಗಳು ಮತ್ತು ಖನಿಜಗಳ ಶಕ್ತಿ ಕೇಂದ್ರಗಳು ಎಂದು ಹೇಳಬಹುದು. ಚರ್ಮ ಮತ್ತು ಕೂದಲಿಗೆ ಅಗತ್ಯವಾದ ಶಕ್ತಿಯನ್ನು ನೀಡುತ್ತದೆ. ಆದ್ದರಿಂದ ವಿಶೇಷವಾಗಿ ಚಳಿಗಾಲದಲ್ಲಿ ಕಪ್ಪು ದ್ರಾಕ್ಷಿ ಸೇವಿಸುವುದರಿಂದ ಆಗುವ ಲಾಭಗಳನ್ನು ಇಲ್ಲಿ ತಿಳಿದುಕೊಳ್ಳಿ.

ಹೃದಯ ಆರೋಗ್ಯ:

ಕಪ್ಪು ದ್ರಾಕ್ಷಿಯಲ್ಲಿರುವ ಹೆಚ್ಚಿನ ಪ್ರಮಾಣದ ರೆಸ್ವೆರಾಟ್ರೊಲ್ ಹೃದಯಕ್ಕೆ ತುಂಬಾ ಒಳ್ಳೆಯದು. ರೆಸ್ವೆರಾಟ್ರೋಲ್ ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ. ಇದರಿಂದ ಹೃದಯ ಆರೋಗ್ಯಕರವಾಗಿರುತ್ತದೆ. ಕಪ್ಪು ದ್ರಾಕ್ಷಿಯ ನಿಯಮಿತ ಸೇವನೆಯು ರಕ್ತದೊತ್ತಡದ ಮಟ್ಟವನ್ನು ಸುಧಾರಿಸುತ್ತದೆ. ಕಪ್ಪು ದ್ರಾಕ್ಷಿಯನ್ನು ಈ ರೀತಿ ಸೇವಿಸುವುದರಿಂದ ಹೃದ್ರೋಗದ ಅಪಾಯವನ್ನು ಕಡಿಮೆ ಮಾಡಬಹುದು.

ಚರ್ಮಕ್ಕೆ ಕಾಂತಿ ನೀಡುತ್ತದೆ:

ಕಪ್ಪು ದ್ರಾಕ್ಷಿಯು ರೆಸ್ವೆರಾಟ್ರೋಲ್ ಮತ್ತು ಫ್ಲೇವನಾಯ್ಡ್ಗಳಂತಹ ಉತ್ಕರ್ಷಣ ನಿರೋಧಕಗಳನ್ನು ಹೊಂದಿರುತ್ತದೆ. ಆದ್ದರಿಂದ ಸ್ವತಂತ್ರ ರಾಡಿಕಲ್ಗಳಿಂದ ಉಂಟಾಗುವ ಚರ್ಮದ ಹಾನಿಯನ್ನು ಮತ್ತು ಚರ್ಮದ ಅಕಾಲಿಕ ವಯಸ್ಸನ್ನು ತಡೆಯುತ್ತದೆ. ಇದಲ್ಲದೆ, ಈ ಉತ್ಕರ್ಷಣ ನಿರೋಧಕಗಳು ಯುವಿ ಕಿರಣಗಳಿಂದ ಚರ್ಮವನ್ನು ರಕ್ಷಿಸುತ್ತವೆ. ಇದರಿಂದ ಚರ್ಮವು ಕಾಂತಿಯುತವಾಗುತ್ತದೆ.

ಕೂದಲಿಗೆ ಪೋಷಣೆ ನೀಡುತ್ತದೆ:

ಕಪ್ಪು ದ್ರಾಕ್ಷಿಯಲ್ಲಿ ವಿಟಮಿನ್ ಸಿ, ಕಬ್ಬಿಣ ಮತ್ತು ಇತರ ಅನೇಕ ಜೀವಸತ್ವಗಳು ಮತ್ತು ಖನಿಜಗಳು ಸಮೃದ್ಧವಾಗಿವೆ. ನೈಸರ್ಗಿಕವಾಗಿ ಕೂದಲಿನ ಬೆಳವಣಿಗೆಯನ್ನು ಸುಧಾರಿಸುತ್ತದೆ. ಇದು ಕೂದಲು ಉದುರುವುದನ್ನು ತಡೆಯುತ್ತದೆ. ಕಪ್ಪು ದ್ರಾಕ್ಷಿಯನ್ನು ಸೇವಿಸುವುದರಿಂದ ಕೂದಲು ಸದೃಡವಾಗುತ್ತದೆ.

ಇದನ್ನೂ ಓದಿ: ನೀವು ಚಿಕ್ಕ ಚಿಕ್ಕ ವಿಷಯಕ್ಕೂ ಕೋಪಗೊಳ್ಳುತ್ತೀರಾ? ನಿಮ್ಮಲ್ಲಿ ಈ ವಿಟಮಿನ್ ಕೊರತೆ ಇರಬಹುದು

ಚರ್ಮದ ವಯಸ್ಸಾಗುವಿಕೆಯನ್ನು ತಡೆಯುತ್ತದೆ:

ಕಪ್ಪು ದ್ರಾಕ್ಷಿಯಲ್ಲಿ ಹೆಚ್ಚಿನ ಪ್ರಮಾಣದ ಪಾಲಿಫಿನಾಲ್‌ಗಳು ಶಕ್ತಿಯುತವಾದ ವಯಸ್ಸಾಗುವಿಕೆ ವಿರೋಧಿ ಗುಣಲಕ್ಷಣಗಳನ್ನು ಹೊಂದಿದೆ . ಈ ಸಂಯುಕ್ತಗಳು ಚರ್ಮದ ಮೇಲಿನ ರೇಖೆಗಳು, ಸುಕ್ಕುಗಳು ಮತ್ತು ಕಲೆಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದು ಚರ್ಮವನ್ನು ಮೃದುವಾಗಿಯೂ ಇಡುತ್ತದೆ. ನಿಮ್ಮ ಆಹಾರದಲ್ಲಿ ಕಪ್ಪು ದ್ರಾಕ್ಷಿಯನ್ನು ಸೇರಿಸುವುದರಿಂದ ನೀವು ಹೆಚ್ಚು ಯೌವನದಿಂದ ಕಾಣಲು ಸಹಾಯ ಮಾಡುತ್ತದೆ.

ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ:

ಕಪ್ಪು ದ್ರಾಕ್ಷಿಯಲ್ಲಿ ವಿಟಮಿನ್ ಸಿ ಇರುವುದರಿಂದ ರೋಗ ನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ. ಇದು ಪ್ರತಿರಕ್ಷಣಾ ವ್ಯವಸ್ಥೆಯು ಸಾಂಕ್ರಾಮಿಕ ರೋಗಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಕಪ್ಪು ದ್ರಾಕ್ಷಿಯನ್ನು ನಿಯಮಿತವಾಗಿ ಸೇವಿಸುವುದರಿಂದ ಋತುಮಾನದ ಕಾಯಿಲೆಗಳನ್ನು ತಡೆಯುತ್ತದೆ. ಅಲ್ಲದೆ, ವಿವಿಧ ಸೋಂಕುಗಳಿಂದ ನಿಮ್ಮನ್ನು ರಕ್ಷಿಸುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಜನಿವಾರ ತೆಗೆಸಿದ ವಿವಾದ: ಸಚಿವರು, ಶಾಸಕರಿಗೆ ಮಂತ್ರಾಲಯ ಶ್ರೀ ಎಚ್ಚರಿಕೆ
ಜನಿವಾರ ತೆಗೆಸಿದ ವಿವಾದ: ಸಚಿವರು, ಶಾಸಕರಿಗೆ ಮಂತ್ರಾಲಯ ಶ್ರೀ ಎಚ್ಚರಿಕೆ
ಮಾರಿಗುಡಿ ದೇವಾಲಯದಲ್ಲಿ ಆದ ವಿಶಿಷ್ಟ ಅನುಭವದ ಬಗ್ಗೆ ಸುನಿಲ್ ಶೆಟ್ಟಿ ಮಾತು
ಮಾರಿಗುಡಿ ದೇವಾಲಯದಲ್ಲಿ ಆದ ವಿಶಿಷ್ಟ ಅನುಭವದ ಬಗ್ಗೆ ಸುನಿಲ್ ಶೆಟ್ಟಿ ಮಾತು
ಜನಿವಾರ ವಿವಾದ: ಬೀದರ್ ವಿದ್ಯಾರ್ಥಿಗೆ ಫ್ರೀ ಇಂಜಿನಿಯರಿಂಗ್ ಸೀಟ್ ಭಾಗ್ಯ
ಜನಿವಾರ ವಿವಾದ: ಬೀದರ್ ವಿದ್ಯಾರ್ಥಿಗೆ ಫ್ರೀ ಇಂಜಿನಿಯರಿಂಗ್ ಸೀಟ್ ಭಾಗ್ಯ
ಧರ್ಮಸ್ಥಳ ಮಂಜುನಾಥ, ವೀರೇಂದ್ರ ಹೆಗ್ಗಡೆಯವರ ಆಶಿರ್ವಾದ ಪಡೆದ ಡಿಕೆಶಿ
ಧರ್ಮಸ್ಥಳ ಮಂಜುನಾಥ, ವೀರೇಂದ್ರ ಹೆಗ್ಗಡೆಯವರ ಆಶಿರ್ವಾದ ಪಡೆದ ಡಿಕೆಶಿ
ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ ಬಗ್ಗೆ ಗೃಹ ಸಚಿವ ಹೇಳಿದ್ದಿಷ್ಟು
ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ ಬಗ್ಗೆ ಗೃಹ ಸಚಿವ ಹೇಳಿದ್ದಿಷ್ಟು
Babar Azam: 0, 1, 2... ಬಂದ ಬಾಬರ್, ಹೋದ ಬಾಬರ್
Babar Azam: 0, 1, 2... ಬಂದ ಬಾಬರ್, ಹೋದ ಬಾಬರ್
ಕುಟುಂಬದ ಜೊತೆ ಉಡುಪಿಗೆ ಬಂದ ಸುನೀಲ್ ಶೆಟ್ಟಿ; ಮಾರಿಗುಡಿಗೆ ಭೇಟಿ
ಕುಟುಂಬದ ಜೊತೆ ಉಡುಪಿಗೆ ಬಂದ ಸುನೀಲ್ ಶೆಟ್ಟಿ; ಮಾರಿಗುಡಿಗೆ ಭೇಟಿ
ಜೀಪ್​ ಅಡ್ಡಗಟ್ಟಿದ ಹುಲಿರಾಯ: ಆತಂಕದಿಂದ ಚಿರಾಡಿದ ಪ್ರವಾಸಿಗರು!
ಜೀಪ್​ ಅಡ್ಡಗಟ್ಟಿದ ಹುಲಿರಾಯ: ಆತಂಕದಿಂದ ಚಿರಾಡಿದ ಪ್ರವಾಸಿಗರು!
ಕಾರಿನ ಮೇಲೆ ಕಾಡಾನೆ ದಾಳಿ ಯತ್ನ, ಎದೆ ಝಲ್​ ಎನ್ನಿಸುವ ವಿಡಿಯೋ ವೈರಲ್
ಕಾರಿನ ಮೇಲೆ ಕಾಡಾನೆ ದಾಳಿ ಯತ್ನ, ಎದೆ ಝಲ್​ ಎನ್ನಿಸುವ ವಿಡಿಯೋ ವೈರಲ್
ಮದುವೆ ಯಾಕಾಗಬೇಕು? ರವಿಚಂದ್ರನ್ ಮಾತಿಗೆ ಚಪ್ಪಾಳೆಯ ಸುರಿಮಳೆ
ಮದುವೆ ಯಾಕಾಗಬೇಕು? ರವಿಚಂದ್ರನ್ ಮಾತಿಗೆ ಚಪ್ಪಾಳೆಯ ಸುರಿಮಳೆ