AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒತ್ತಡದಿಂದ ಮುಕ್ತಿ ಪಡೆಯಲು ಒಂದೇ ದಾರಿ ಧ್ಯಾನ, ಇದರ ಅದ್ಭುತ ಪ್ರಯೋಜನ ಇಲ್ಲಿದೆ

ಇಂದಿನ ಕಾಲದಲ್ಲಿ ಪ್ರತಿಯೊಬ್ಬರೂ ಒಂದಲ್ಲಾ ಒಂದು ರೀತಿಯ ಒತ್ತಡದಿಂದ ಹೋರಾಡುತ್ತಿದ್ದಾರೆ. ಹೆಚ್ಚಿನವರಿಗೆ ಕೆಲಸದ ಒತ್ತಡವಿದ್ದರೆ, ಇನ್ನೂ ಕೆಲವರು ವೈಯಕ್ತಿಕ ಸಮಸ್ಯೆಗಳ ಒತ್ತಡದಿಂದ ಬಳಲುತ್ತಿದ್ದಾರೆ. ಈ ಒತ್ತಡದಿಂದ ಮುಕ್ತಿ ಪಡೆಯಬೇಕೆಂದರೆ ಪ್ರತಿನಿತ್ಯ ಧ್ಯಾನ ಮಾಡಬೇಕು. ಇದು ಒತ್ತಡದಿಂದ ಮುಕ್ತಿ ನೀಡುವುದು ಮಾತ್ರವಲ್ಲದೆ ಇನ್ನೂ ಅನೇಕ ಆರೋಗ್ಯ ಪ್ರಯೋಜನಗಳನ್ನು ಒದಗಿಸುತ್ತದೆ. ಈ ಕುರಿತ ಮಾಹಿತಿ ಇನ್ನಷ್ಟು ಇಲ್ಲಿದೆ.

ಒತ್ತಡದಿಂದ ಮುಕ್ತಿ ಪಡೆಯಲು ಒಂದೇ ದಾರಿ ಧ್ಯಾನ, ಇದರ ಅದ್ಭುತ ಪ್ರಯೋಜನ ಇಲ್ಲಿದೆ
ಸಾಂದರ್ಭಿಕ ಚಿತ್ರ
ಮಾಲಾಶ್ರೀ ಅಂಚನ್​
| Edited By: |

Updated on: Aug 26, 2023 | 6:18 PM

Share

ಇಂದಿನ ಬಿಡುವಿಲ್ಲದ ಜೀವನದಲ್ಲಿ ಪ್ರತಿಯೊಬ್ಬರೂ ಒತ್ತಡ ಮುಕ್ತವಾಗಿರಲು ಬಯಸುತ್ತಾರೆ. ಆದರೆ ಕೆಲಸ, ವೈಯಕ್ತಿಕ ಕಾರಣಗಳಿಂದ ಈ ಒತ್ತಡಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತವೆ ಹೊರತು ಕಡಿಮೆಯಾಗುವುದಿಲ್ಲ. ಒತ್ತಡದ ಕಾರಣದಿಂದ ಮಾನಸಿಕ ನೆಮ್ಮದಿ ಹಾಳಾಗುವುದಲ್ಲದೆ ಅದು ನಮ್ಮ ಆರೋಗ್ಯವನ್ನು ಹದಗೆಡಿಸುತ್ತದೆ. ಹಾಗಿದ್ದರೆ ಒತ್ತಡವನ್ನು ನಿವಾರಿಸಬೇಕೆಂದರೆ ಪ್ರತಿನಿತ್ಯ ನಿಮಗಾಗಿ ಸ್ವಲ್ಪ ಸಮಯವನ್ನು ಮೀಸಲಿಟ್ಟು ಧ್ಯಾನ, ಯೋಗ, ವ್ಯಾಯಾಮಗಳನ್ನು ಮಾಡಬೇಕು. ಈ ಚಟುವಟಿಕೆಗಳು ಒತ್ತಡದಿಂದ ಮುಕ್ತಿ ನೀಡುವುದು ಮಾತ್ರವಲ್ಲದೆ ನಿಮ್ಮನ್ನು ದಿನವಿಡೀ ಕ್ರಿಯಾಶೀಲರನ್ನಾಗಿಸುತ್ತದೆ. ಹಾಗಿದ್ದರೆ ಪ್ರತಿನಿತ್ಯ ಧ್ಯಾನ ಮಾಡುವುದರಿಂದ ಏನೆಲ್ಲಾ ಆರೋಗ್ಯ ಪ್ರಯೋಜನಗಳು ಲಭಿಸುತ್ತವೆ ಎಂಬುದನ್ನು ನೋಡೋಣ.

ದಿನನಿತ್ಯ ಧ್ಯಾನವನ್ನು ಮಾಡುವುದರಿಂದ ಲಭಿಸುವ ಆರೋಗ್ಯ ಪ್ರಯೋಜನಗಳೆಂದರೆ:

ಒತ್ತಡ ನಿರ್ವಹಣೆಗೆ ಸಹಕಾರಿ:

ಧ್ಯಾನವು ವಿಶ್ರಾಂತಿಯನ್ನು ಉತ್ತೇಜಿಸುವ ಮೂಲಕ ಮತ್ತು ಕಾರ್ಟಿಸೋಲ್ ನಂತಹ ಒತ್ತಡದ ಹಾರ್ಮೋನುಗಳ ಉತ್ಪಾದನೆಯನ್ನು ಕಡಿಮೆ ಮಾಡುವ ಮೂಲಕ ಒತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ನಿಯಮಿತವಾಗಿ ಧ್ಯಾನ ಮಾಡುವ ಮೂಲಕ ನಿಮ್ಮ ದೈನಂದಿನ ಕೆಲಸದ ಒತ್ತಡವನ್ನು ನೀವು ಸುಲಭವಾಗಿ ನಿಭಾಯಿಸಬಹುದು.

ಸ್ಮರಣಾ ಶಕ್ತಿಯನ್ನು ಹೆಚ್ಚಿಸುತ್ತದೆ:

ಧ್ಯಾನವು ನಿಮ್ಮ ಆಲೋಚನೆಗಳನ್ನು ಉತ್ತಮವಾಗಿಡುವ ಮೂಲಕ ನಿಮ್ಮ ಮನಸ್ಸನ್ನು ಯೌವನವಾಗಿರಿಸಲು ಸಹಾಯ ಮಾಡುತ್ತದೆ. ಅಲ್ಲದೆ ಇದು ವೃದ್ದಾಪ್ಯದಲ್ಲಿ ಜ್ಞಾಪಕಶಕ್ತಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಲು ಸಹಕಾರಿ.

ಮಾನಸಿಕ ಆರೋಗ್ಯವನ್ನು ವೃದ್ಧಿಸುತ್ತದೆ:

ಧ್ಯಾನವು ನಿಮ್ಮ ಆತ್ಮವಿಶ್ವಾಸವನ್ನು ಹೆಚ್ಚಿಸಲು ಸಹಕಾರಿಯಾಗಿದೆ. ಅಲ್ಲದೆ ನಿಯಮಿತ ಧ್ಯಾನವು ಖಿನ್ನತೆಯ ಲಕ್ಷಣಗಳನ್ನು ಕಡಿಮೆ ಮಾಡುತ್ತದೆ ಮತ್ತು ನಕರಾತ್ಮಕ ಆಲೋಚನೆಗಳನ್ನು ಕಡಿಮೆ ಮಾಡಿ ನಿಮ್ಮಲ್ಲಿ ಧನಾತ್ಮಕ ಬದಲಾವಣೆಗಳನ್ನು ಉಂಟುಮಾಡುತ್ತದೆ.

ಏಕಾಗ್ರತೆ ಮತ್ತು ಗಮನವನ್ನು ಸುಧಾರಿಸುತ್ತದೆ:

ನಿಯಮಿತ ಧ್ಯಾನವನ್ನು ಮಾಡುವ ಮೂಲಕ ಏಕಾಗ್ರತೆಯನ್ನು ಸುಧಾರಿಸಬಹುದು. ಇದರ ಸಹಾಯದಿಂದ ನಿಮ್ಮ ಮನಸ್ಸು ವಿಚಲಿತವಾಗದೆ ನೀವು ನಿಮ್ಮ ಕೆಲಸದ ಮೇಲೆ ಗಮನವನ್ನು ಕೇಂದ್ರೀಕರಿಸಬಹುದು. ಅಲ್ಲದೆ ಧ್ಯಾನ ಮಾಡುವುದರಿಂದ ಮನಸ್ಸನ್ನು ಶಾಂತಗೊಳಿಸಬಹುದು ಮತ್ತು ಸ್ಮರಣಾ ಶಕ್ತಿಯನ್ನು ಸುಧಾರಿಸಬಹುದು.

ಇದನ್ನೂ ಓದಿ:  ನೀವು 6 ಗಂಟೆಗಿಂತ ಕಡಿಮೆ ನಿದ್ರೆ ಮಾಡುತ್ತೀರಾ? ಈ ಆರೋಗ್ಯ ಸಮಸ್ಯೆಗಳ ಬಗ್ಗೆ ಕಾಳಜಿ ವಹಿಸಿ

ಆತಂಕವನ್ನು ಕಡಿಮೆ ಮಾಡುತ್ತದೆ:

ಧ್ಯಾನ ಮಾಡುವುದರಿಂದ ಆತಂಕದ ಸಮಸ್ಯೆಯನ್ನು ಗಣನೀಯವಾಗಿ ಕಡಿಮೆಯಾಗಬಹುದು. ನಿಮ್ಮ ಮನಸ್ಸನ್ನು ಶಾಂತಗೊಳಿಸಲು ವಿಶ್ರಾಂತಿ ತಂತ್ರವನ್ನು ಬಳಸಿಕೊಂಡು ಆತಂಕದ ಆಲೋಚನೆಗಳು, ಭಾವನೆಗಳನ್ನು ಉತ್ತಮವಾಗಿ ನಿಯಂತ್ರಿಸಲು ನೀವು ಕಲಿಯಬಹುದು.

ಉತ್ತಮ ನಿದ್ರೆಗೆ ಸಹಕಾರಿ:

ನಿಯಮಿತ ಧ್ಯಾನವು ನಿಮ್ಮ ನಿದ್ರೆಯ ಗುಣಮಟ್ಟವನ್ನು ಹೆಚ್ಚಿಸುತ್ತದೆ. ಧ್ಯಾನದ ವಿಶ್ರಾಂತಿ ತಂತ್ರಗಳು ನಿದ್ರಾಹೀನತೆಯನ್ನು ಕಡಿಮೆ ಮಾಡುತ್ತದೆ. ಮತ್ತು ಮನಸ್ಸನ್ನು ಶಾಂತವಾಗಿರಿಸುತ್ತದೆ.

ಉಸಿರಾಟದ ತೊಂದರೆಗಳನ್ನು ನಿವಾರಿಸುತ್ತದೆ:

ಉಸಿರಾಟದ ಸಂಬಂಧಿ ಸಮಸ್ಯೆಯನ್ನು ತಡೆಗಟ್ಟಲು ಧ್ಯಾನವು ಪರಿಣಾಕಾರಿ ಮಾರ್ಗವಾಗಿದೆ. ಹೌದು ಇದು ಶ್ವಾಸಕೋಶದ ಕಾರ್ಯವನ್ನು ವೇಗಗೊಳಿಸಲು ಸಹಾಯ ಮಾಡುತ್ತದೆ. ಅಲ್ಲದೆ ಬ್ರಾಂಕೈಟಿಸ್ ಮತ್ತು ನ್ಯುಮೋನೀಯಾದಂತಹ ಅರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು 20 ದಿನಗಳ ಕಾಲ ಧ್ಯಾನ ಮಾಡುವುದರಿಂದ ಶ್ವಾಸಕೋಶವನ್ನು ಬಲಪಡಿಸಬಹುದು.

ಮಾನಸಿಕ ಆರೋಗ್ಯದ ಜೊತೆಗೆ ಧ್ಯಾನವು ಅನೇಕ ಆರೋಗ್ಯ ಪ್ರಯೋಜನಗಳನ್ನು ಒದಗಿಸುತ್ತದೆ. ಅಧಿಕ ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ, ತಲೆನೋವನ್ನು ನಿವಾರಿಸುತ್ತದೆ, ಸ್ನಾಯು ಮತ್ತು ಕೀಲುನೋವನ್ನು ಕಡಿಮೆ ಮಾಡುತ್ತದೆ, ಹಾಗೂ ದೇಹದ ಪ್ರತಿರಕ್ಷಣಾ ವ್ಯವಸ್ಥೆಯನ್ನು ಸುಧಾರಿಸುತ್ತದೆ. ಹಾಗಾಗಿ ಪ್ರತಿನಿತ್ಯ 20 ನಿಮಿಷಗಳ ಕಾಲ ಧ್ಯಾನ ಮಾಡುವ ಮೂಲಕ ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಿ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ:

ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು