
ಚಳಿಗಾಲದ (winter) ಆಗಮನದೊಂದಿಗೆ ಹೆಚ್ಚಿನವರು ಬಿಸಿಲಿನಲ್ಲಿ ಸಮಯ ಕಳೆಯಲು ಇಷ್ಟಪಡುತ್ತಾರೆ. ಹೌದು ಕೊರೆಯುವ ಚಳಿಯಿಂದ ದೇಹವನ್ನು ಬೆಚ್ಚಗಾಗಿಡಲು ಬಿಸಿಲಿಗೆ ಮೈಯೊಡ್ಡುತ್ತಾರೆ. ಬಿಸಿಲು ದೇಹವನ್ನು ಬೆಚ್ಚಗಾಗಿಸುವುದಲ್ಲದೆ ಹಲವಾರು ಆರೋಗ್ಯ ಪ್ರಯೋಜನಗಳನ್ನು ಸಹ ನೀಡುತ್ತದೆ. ಸೂರ್ಯನ ಬೆಳಕಿನಲ್ಲಿ ವಿಟಮಿನ್ ಡಿ ಇದ್ದು, ಇದು ಮೂಲೆಗಳನ್ನು ಬಲಪಡಿಸಲು, ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸೇರಿದಂತೆ, ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಬೇಕಾದ ಸಾಕಷ್ಟು ಪ್ರಯೋಜನಗಳನ್ನು ಹೊಂದಿದೆ. ಹಾಗಿದ್ರೆ ಚಳಿಗಾಲದಲ್ಲಿ ಸ್ವಲ್ಪ ಹೊತ್ತು ಬಿಸಿಲಿನಲ್ಲಿ ಸಮಯವನ್ನು ಕಳೆಯುವುದರಿಂದ ದೇಹಕ್ಕೆ ಏನೆಲ್ಲಾ ಪ್ರಯೋಜನಗಳು ಲಭಿಸುತ್ತವೆ ಎಂಬುದನ್ನು ನೋಡೋಣ ಬನ್ನಿ.
ದೇಹಕ್ಕೆ ವಿಟಮಿನ್ ಡಿ ಬಹಳ ಮುಖ್ಯ. ಸೂರ್ಯನ ಬೆಳಕು ವಿಟಮಿನ್ ಡಿ ಯ ಮುಖ್ಯ ಮೂಲವಾಗಿದೆ. ಇದು ಮೂಳೆಗಳನ್ನು ಬಲವಾಗಿ ಮತ್ತು ಆರೋಗ್ಯಕರವಾಗಿಡಲು ಸಹಾಯ ಮಾಡುತ್ತದೆ. ವಿಟಮಿನ್ ಡಿ ದೇಹದಲ್ಲಿನ ಕ್ಯಾಲ್ಸಿಯಂ ಮತ್ತು ರಂಜಕದ ಕೊರತೆಯನ್ನು ತುಂಬಲು ಸಹಾಯ ಮಾಡುತ್ತದೆ. ಹಾಗಾಗಿ ನೀವು ನೀವು ದಿನಕ್ಕೆ ಐದರಿಂದ ಹದಿನೈದು ನಿಮಿಷಗಳ ಕಾಲ ಬಿಸಿಲಿಗೆ ಮೈಯೊಡ್ಡಿಕೊಳ್ಳಬಹುದು.
ಸೂರ್ಯನ ಬೆಳಕು ನಿಮ್ಮ ಮೂಳೆಗಳನ್ನು ಬಲಪಡಿಸುತ್ತದೆ. ವಾಸ್ತವವಾಗಿ, ಸೂರ್ಯನ ಬೆಳಕು ನಿಮ್ಮ ದೇಹಕ್ಕೆ ವಿಟಮಿನ್ ಡಿ ಅನ್ನು ಒದಗಿಸುತ್ತದೆ, ಜೊತೆಗೆ ಹಲವಾರು ಪ್ರಯೋಜನಗಳನ್ನು ಒದಗಿಸುತ್ತದೆ.
ಚಳಿಗಾಲದಲ್ಲಿ ತಾಪಮಾನವು ಸಾಮಾನ್ಯಕ್ಕಿಂತ ತೀರಾ ಕಡಿಮೆ ಇರುತ್ತದೆ. ಇದು ರಕ್ತ ಹೆಪ್ಪುಗಟ್ಟುವಿಕೆಯಂತಹ ಸಮಸ್ಯೆಗಳಿಗೆ ಕಾರಣವಾಗಬಹುದು. ಬೆಳಗಿನ ಪ್ರಕಾಶಮಾನವಾದ ಸೂರ್ಯನ ಬೆಳಕು ರಕ್ತ ಹೆಪ್ಪುಗಟ್ಟುವಿಕೆಯನ್ನು ತಡೆಯುತ್ತದೆ ಮತ್ತು ರಕ್ತ ಪರಿಚಲನೆ ಸುಧಾರಿಸುತ್ತದೆ.
ಸೂರ್ಯನ ಬೆಳಕಿನಲ್ಲಿ ಸ್ವಲ್ಪ ಸಮಯ ಕಳೆಯುವುದರಿಂದ ಮಾನಸಿಕ ಒತ್ತಡ ಕಡಿಮೆಯಾಗುತ್ತದೆ. ಇದು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಸೂರ್ಯನ ಬೆಳಕಿನಲ್ಲಿ ಸಮಯ ಕಳೆಯುವುದರಿಂದ ದೇಹದಲ್ಲಿ ಸಿರೊಟೋನಿನ್ ಮತ್ತು ಮೆಲಟೋನಿನ್ ಹಾರ್ಮೋನ್ ಮಟ್ಟ ಸಮತೋಲನದಲ್ಲಿರುತ್ತದೆ.
ಚಳಿಗಾಲದಲ್ಲಿ ಶೀತ, ಜ್ವರದಂತಹ ಸಾಮಾನ್ಯ. ನಿಮಗೆ ಶೀತ ಅಥವಾ ಜ್ವರ ಇದ್ದರೆ, ಸೂರ್ಯನ ಬೆಳಕಿನಲ್ಲಿ ಸ್ವಲ್ಪ ಹೊತ್ತು ಸಮಯವನ್ನು ಕಳೆಯಿರಿ. ಇದು ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ. ಬಲವಾದ ರೋಗನಿರೋಧಕ ವ್ಯವಸ್ಥೆಯು ಯಾವುದೇ ಅನಾರೋಗ್ಯವನ್ನು ಎದುರಿಸಲು ನಿಮಗೆ ಸಹಾಯ ಮಾಡುತ್ತದೆ.
ಈ ಸೂರ್ಯನ ಬೆಳಕು ನಮ್ಮ ನಿದ್ರೆಯ ಮೇಲೆ ಆಳವಾದ ಪರಿಣಾಮ ಬೀರುತ್ತದೆ. ನೈಸರ್ಗಿಕ ಸೂರ್ಯನ ಬೆಳಕು ನಿದ್ರೆಯನ್ನು ಉತ್ತೇಜಿಸುವ ಹಾರ್ಮೋನ್ ಆಗಿರುವ ಮೆಲಟೋನಿನ್ ಬಿಡುಗಡೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಪ್ರತಿದಿನ ಕನಿಷ್ಠ 15 ನಿಮಿಷಗಳ ಕಾಲ ಸೂರ್ಯನ ಬೆಳಕಿನಲ್ಲಿ ಸಮಯ ಕಳೆಯುವುದರಿಂದ ದೇಹದಲ್ಲಿ ಅದರ ಮಟ್ಟ ಹೆಚ್ಚಾಗುತ್ತದೆ, ಇದು ಉತ್ತಮ ನಿದ್ರೆ ಪಡೆಯಲು ಸಹಾಯ ಮಾಡುತ್ತದೆ.
ಸೂರ್ಯನ ಬೆಳಕು ನಮ್ಮ ದೇಹಕ್ಕೆ ವಿಟಮಿನ್ ಡಿ ಅನ್ನು ಒದಗಿಸುವುದು ಮಾತ್ರವಲ್ಲ, ಇದು ನಮ್ಮ ದೇಹದಲ್ಲಿ ಸಂತೋಷದ ಹಾರ್ಮೋನುಗಳನ್ನು ಬಿಡುಗಡೆ ಮಾಡುತ್ತದೆ. ಸೂರ್ಯನ ಬೆಳಕು ಸಿರೊಟೋನಿನ್, ಮೆಲಟೋನಿನ್ ಮತ್ತು ಡೋಪಮೈನ್ ಅನ್ನು ಉತ್ಪಾದಿಸಲು ಸಹಾಯ ಮಾಡುತ್ತದೆ. ಜೊತೆಗೆ ಆತಂಕ ಮತ್ತು ಖಿನ್ನತೆಯನ್ನು ಕಡಿಮೆ ಮಾಡುತ್ತದೆ.
ಇದನ್ನೂ ಓದಿ: ಈ ಮನೆಮದ್ದುಗಳ ಸಹಾಯದಿಂದ ಚಳಿಗಾಲದಲ್ಲಿ ಕಾಡುವ ಒಣ ಚರ್ಮದ ಸಮಸ್ಯೆಗೆ ಮುಕ್ತಿ ಪಡೆಯಬಹುದು
ಬೆಳಿಗ್ಗೆ 7 ರಿಂದ 9 ನಡುವಿನ ಈ ಸಮಯದಲ್ಲಿ ಸೂರ್ಯನ ಬೆಳಕು ಸೌಮ್ಯ ಮತ್ತು ಆಹ್ಲಾದಕರವಾಗಿರುತ್ತದೆ. ಇದು ಚಳಿಯಿಂದ ಪರಿಹಾರವನ್ನು ನೀಡಬಹುದು, ಆದರೆ ವಿಟಮಿನ್ ಡಿ ಉತ್ಪಾದನೆಗೆ ಅಗತ್ಯವಾದ UVB ಕಿರಣಗಳ ಕೊರತೆಯಿರಬಹುದು. ಸಾಮಾನ್ಯವಾಗಿ, ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ರವರೆಗೆ, UVB ಕಿರಣಗಳು ಹೆಚ್ಚು ಪರಿಣಾಮಕಾರಿಯಾಗಿರುತ್ತವೆ, ದೇಹವು ವಿಟಮಿನ್ ಡಿ ಉತ್ಪಾದಿಸಲು ಸಹಾಯ ಮಾಡುತ್ತದೆ. ಈ ಸಮಯದಲ್ಲಿ ಬಿಸಿಲಿಗೆ ಮೈಯೊಡ್ಡುವುದು ಸೂಕ್ತ. ಆದರೂ ಈ ಸಮಯದಲ್ಲಿ ನೇರಳಾತೀತ ಕಿರಣಗಳು ಹೆಚ್ಚು ಪರಿಣಾಮಕಾರಿಯಾಗಿರುತ್ತವೆ. ಆದ್ದರಿಂದ, ಚರ್ಮದ ರಕ್ಷಣೆಯ ಬಗ್ಗೆ ಕಾಳಜಿ ವಹಿಸುವುದು ಮುಖ್ಯ.
ಚಳಿಗಾಲದಲ್ಲಿ, ಅನೇಕ ಜನರಿಗೆ 10 ರಿಂದ 20 ನಿಮಿಷಗಳ ಕಾಲ ಸೂರ್ಯನ ಬೆಳಕಿಗೆ ಒಡ್ಡಿಕೊಳ್ಳುವುದು ಸಾಕಾಗಬಹುದು. ಗಂಟೆಗಟ್ಟಲೆ ಬಿಸಿಲಿನಲ್ಲಿ ಸಮಯ ಕಳೆಯುವ ಅಗತ್ಯವಿಲ್ಲ. ಬಿಸಿಲಿಗೆ ಹೋಗುವಾಗ ಸನ್‌ಸ್ಕ್ರೀನ್ ಹಾಕಲು ಮರೆಯದಿರಿ.
ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ