AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sweating : ಬೇಸಿಗೆಯಲ್ಲಿ ಅತಿಯಾಗಿ ಬೆವರಿದ್ರೆ ಆರೋಗ್ಯ ಲಾಭ ಖಂಡಿತ

ಬೇಸಿಗೆಯ ಸಮಯದಲ್ಲಿ ಹೊರಗಡೆ ಹೋಗಿ ಬಂದರೆ ಸಾಕು, ಮೈ ತುಂಬಾ ನೀರು ಇಳಿಯುತ್ತದೆ. ಯಾಕಾದ್ರೂ ಇಷ್ಟು ಬೆವರುತ್ತೇನಾ ಎಂದು ಒಳಗೊಳಗೇ ಬೈದುಕೊಳ್ಳುತ್ತಾರೆ. ಕೆಲವರನ್ನು ನೋಡಿದರಂತೂ ಸ್ನಾನ ಮಾಡಿರುವಂತೆ ಕಾಣುತ್ತಾರೆ. ಬಿಸಿಲಿನ ಝಳಕ್ಕೆ ಬೆವರುವುದು ಸಹಜ. ಆದರೆ ಭಯ, ಆತಂಕ, ಉದ್ವೇಗ ಅಥವಾ ದೈಹಿಕ ಚಟುವಟಿಕೆಯ ತೊಡಗಿಕೊಂಡಾಗಲು ಮೈಯಿಂದ ನೀರು ಹೊರಬರುತ್ತದೆ. ಆದರೆ ಈ ಬೆವರು ಕೂಡ ಆರೋಗ್ಯಕ್ಕೆ ಒಳ್ಳೆಯದಂತೆ, ಹಾಗಾದ್ರೆ ಆರೋಗ್ಯ ಲಾಭಗಳ ಕುರಿತಾದ ಸಂಪೂರ್ಣ ಮಾಹಿತಿಯಿಲ್ಲಿದೆ.

Sweating : ಬೇಸಿಗೆಯಲ್ಲಿ ಅತಿಯಾಗಿ ಬೆವರಿದ್ರೆ ಆರೋಗ್ಯ ಲಾಭ ಖಂಡಿತ
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on: Apr 19, 2024 | 3:16 PM

Share

ಬೆವರುವುದು ಸಹಜ ಪ್ರಕ್ರಿಯೆಯಾಗಿದ್ದರೂಕೂಡ ಸ್ವಲ್ಪ ಬೆವರನ್ನು ತಡೆದುಕೊಳ್ಳಲು ಆಗುವುದಿಲ್ಲ. ಹೀಗಾಗಿ ಹೆಚ್ಚಿನವರು ಫ್ಯಾನಿನ ಮೊರೆ ಹೋಗುತ್ತಾರೆ. ಆದರೆ ಬೆವರುವುದು ಕೂಡ ಒಂದರ್ಥದಲ್ಲಿ ಆರೋಗ್ಯಕ್ಕೆ ಒಳ್ಳೆಯದು. ಎಲ್ಲರಿಗೂ ತಿಳಿದಿರುವಂತೆ ಬೆವರಿನ ಮೂಲಕ ದೇಹದಲ್ಲಿರುವ ಕಲ್ಮಶಗಳು ಮತ್ತು ವಿಷಕಾರಿ ವಸ್ತುಗಳು ಹೊರಹೋಗುವುದಲ್ಲದೆ, ಇನ್ನಿತ್ತರ ಆರೋಗ್ಯ ಪ್ರಯೋಜನಗಳು ಇವೆ.

ಬೆವರುವುದರಿಂದಾಗುವ ಆರೋಗ್ಯ ಪ್ರಯೋಜನಗಳು:

  • ಅತಿಯಾಗಿ ಬೆವರುವುದರಿಂದ ಚರ್ಮದ ರಂಧ್ರಗಳಲ್ಲಿರುವ ಕೊಳೆ, ಧೂಳು ಮತ್ತು ಬ್ಯಾಕ್ಟೀರಿಯಾಗಳು ಬೆವರಿನ ರೂಪದಲ್ಲಿ ಹೊರಬರುವ ಮೂಲಕ ಆರೋಗ್ಯವಾಗಿರುವಂತೆ ನೋಡಿಕೊಳ್ಳುತ್ತದೆ.
  • ಬೆವರುವುದು ಹೃದಯದ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದಂತೆ. ಈ ಹೃದಯವು ದೇಹದ ಎಲ್ಲಾ ಭಾಗಗಳಿಗೆ ನಿರಂತರವಾಗಿ ರಕ್ತವನ್ನು ಪೂರೈಸಸುವ ಕೆಲಸವನ್ನು ಮಾಡುತ್ತವೆ. ಆದರೆ ಬೆವರು ರಕ್ತದಿಂದ ವಿಷ ಮತ್ತು ಉಪ್ಪನ್ನು ಹೀರಿಕೊಂಡು ಹೊರಹಾಕುವ ಕೆಲಸವನ್ನು ಮಾಡುತ್ತದೆ.
  • ಅತಿಯಾಗಿ ಬೆವರುವುದರಿಂದ ದೇಹದಲ್ಲಿ ಎಂಡಾರ್ಫಿನ್‌ ಬಿಡುಗಡೆಯಾಗುತ್ತದೆ. ಇದು ದೇಹದಲ್ಲಿ ಕಾಣಿಸಿಕೊಳ್ಳುವ ನೋವನ್ನು ಕಡಿಮೆ ಮಾಡುತ್ತದೆ.
  • ಅತಿಯಾದ ಬೆವರಿ ದೇಹದಲ್ಲಿರುವ ನೀರು ಹೊರಗೆ ಹೋಗುವುದರಿಂದ ಬಾಯಾರಿಕೆಯಾಗುತ್ತದೆ. ಈ ವೇಳೆ ನೀರನ್ನು ಹೆಚ್ಚು ಕುಡಿಯುವುದರಿಂದ ಮೂತ್ರಪಿಂಡಗಳು ಆರೋಗ್ಯಕರವಾಗಿ ಕಾರ್ಯನಿರ್ವಹಿಸಲು ಸಹಾಯಕವಾಗಿದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಾಯಿನಂದಾ
ಸಾಯಿನಂದಾ

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್