ಆತ್ಮಹತ್ಯೆ ಮಾಡಿಕೊಳ್ಳುವ ಪ್ರತಿ 100 ಜನರಲ್ಲಿ 70 ಜನ ಪುರುಷರೇ;ಎನ್‌ಸಿಆರ್‌ಬಿ ವರದಿ

ಪತ್ನಿಯ ಕಿರುಕುಳದಿಂದ ಬೆಂಗಳೂರಿನ ಇಂಜಿನಿಯರ್ ಅತುಲ್ ಸುಭಾಷ್ ಆತ್ಮಹತ್ಯೆ ಮಾಡಿಕೊಂಡಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ. ಮಾನಸಿಕ ಹಿಂಸೆಯಿಂದ ಆತ್ಮಹತ್ಯೆ ಮಾಡಿಕೊಂಡರುವುದು ಇದೇ ಮೊದಲೇನಲ್ಲಾ. ವಾಸ್ತವವಾಗಿ, ಇಂತಹ ಅನೇಕ ಪ್ರಕರಣಗಳು ಈಗಾಗಲೇ ಬೆಳಕಿಗೆ ಬಂದಿವೆ. ಇದೀಗ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ವರದಿಯೊಂದನ್ನು ಬಿಡುಗಡೆ ಮಾಡಿದ್ದು, ಇದರಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವ ಪ್ರತಿ 100 ಜನರಲ್ಲಿ 70ರಷ್ಟು ಜನರು ಪುರುಷರೇ ಎಂದು ಬಹಿರಂಗಪಡಿಸಿದೆ.

ಆತ್ಮಹತ್ಯೆ ಮಾಡಿಕೊಳ್ಳುವ ಪ್ರತಿ 100 ಜನರಲ್ಲಿ 70 ಜನ ಪುರುಷರೇ;ಎನ್‌ಸಿಆರ್‌ಬಿ ವರದಿ
Bengaluru Techie's Suicide
Follow us
ಅಕ್ಷತಾ ವರ್ಕಾಡಿ
|

Updated on: Dec 11, 2024 | 6:49 PM

ಪತ್ನಿಯ ಕಿರುಕುಳಕ್ಕೆ ಬೇಸತ್ತು ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡ ಬೆಂಗಳೂರಿನ ಟೆಕ್ಕಿ ಅತುಲ್ ಸುಭಾಷ್ ನ ಸಾವು ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ಚರ್ಚೆಯನ್ನು ಹುಟ್ಟುಹಾಕಿದೆ. ಅತುಲ್ 24 ಪುಟಗಳ ಸೂಸೈಡ್ ನೋಟ್ ಬರೆದಿಟ್ಟು ಅದರಲ್ಲಿ ಅಲ್ಲಿ ತನಗೆ ಆಗಿರುವ ದೌರ್ಜನ್ಯ, ಮಾನಸಿಕ ಹಿಂಸೆಯ ಎಲ್ಲ ವಿಷಯಗಳನ್ನೂ ಹೇಳಿದ್ದಾನೆ. ಸದ್ಯ ಬೆಂಗಳೂರು ಪೊಲೀಸರು ಅತುಲ್ ಪತ್ನಿ ನಿಕಿತಾ ಸಿಂಘಾನಿಯಾ ಮತ್ತು ಆಕೆಯ ಅತ್ತೆಯ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಾನಸಿಕ ಹಿಂಸೆಯಿಂದ ಆತ್ಮಹತ್ಯೆ ಮಾಡಿಕೊಂಡ ಮೊದಲ ವ್ಯಕ್ತಿ ಅತುಲ್ ಅಲ್ಲ. ವಾಸ್ತವವಾಗಿ, ಇಂತಹ ಅನೇಕ ಪ್ರಕರಣಗಳು ಈಗಾಗಲೇ ಬೆಳಕಿಗೆ ಬಂದಿವೆ. ಇದೀಗ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ವರದಿಯೊಂದನ್ನು ಬಿಡುಗಡೆ ಮಾಡಿದ್ದು, ಇದರಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವ ಪ್ರತಿ 100 ಜನರಲ್ಲಿ 70ರಷ್ಟು ಜನರು ಪುರುಷರೇ ಎಂದು ಬಹಿರಂಗಪಡಿಸಿದೆ.

NCRB ಡೇಟಾ ಪ್ರಕಾರ, 2021 ರಲ್ಲಿ ಭಾರತದಲ್ಲಿ 1,64,033 ಜನರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಅದರಲ್ಲಿ 4,50,26 ಮಹಿಳೆಯರು ಮತ್ತು 1,18,989 ಅಂದರೆ ಶೇಕಡಾ 73 ರಷ್ಟು ಪುರುಷರು ಎಂದು ತಿಳಿದುಬಂದಿದೆ. ಈ ಅಂಕಿಅಂಶಗಳ ಪ್ರಕಾರ, ಪ್ರತಿ 5 ನಿಮಿಷಕ್ಕೆ ಒಬ್ಬ ವ್ಯಕ್ತಿ ಆತ್ಮಹತ್ಯೆ ಮಾಡಿಕೊಳ್ಳುತ್ತಾನೆ ಎಂದು ಬಹಿರಂಗವಾಗಿದೆ.

ಮತ್ತೊಂದೆಡೆ, ಭಾರತದಲ್ಲಿ ಹೆಚ್ಚಿನ ಆತ್ಮಹತ್ಯೆ ಪ್ರಕರಣಗಳು 30 ರಿಂದ 45 ವರ್ಷ ವಯಸ್ಸಿನ ಜನರನ್ನು ಒಳಗೊಂಡಿವೆ. ಇದರ ನಂತರ, 18 ರಿಂದ 30 ವರ್ಷ ವಯಸ್ಸಿನ ಜನರನ್ನು ಸೇರಿಸಲಾಗುತ್ತದೆ. ಆದಾಗ್ಯೂ, 45 ರಿಂದ 60 ವರ್ಷ ವಯಸ್ಸಿನ ಜನರಲ್ಲಿ ಈ ಅಂಕಿ ಅಂಶವು ಕಡಿಮೆಯಾಗಿದೆ. 2021 ರ ಮಾಹಿತಿಯ ಪ್ರಕಾರ, 30 ರಿಂದ 45 ವರ್ಷ ವಯಸ್ಸಿನ 5,20,54 ಜನರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಅದರಲ್ಲಿ 78 ಪ್ರತಿಶತ ಪುರುಷರು ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಭಾರತದಲ್ಲಿ ವಿಚ್ಛೇದನ ಪ್ರಮಾಣ ಮೂರು ಪಟ್ಟು ಹೆಚ್ಚಳ, ಕರ್ನಾಟಕಕ್ಕೆ ಎಷ್ಟನೇ ಸ್ಥಾನ? ವಿಶ್ವಸಂಸ್ಥೆಯ ವರದಿಯಲ್ಲಿ ಏನಿದೆ?

ಹಾಗಾಗಿ 18 ರಿಂದ 30 ವರ್ಷದೊಳಗಿನ 5,65,43 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದರಲ್ಲಿ 67 ಪ್ರತಿಶತ ಪುರುಷರು. 45 ರಿಂದ 60 ವರ್ಷದೊಳಗಿನ 3,01,63 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದರಲ್ಲಿ 81 ಪ್ರತಿಶತ ಪುರುಷರು ಸೇರಿದ್ದಾರೆ ಎಂದು ವರದಿ ಬಹಿರಂಗ ಪಡಿಸಿದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಗಳು ಮತ್ತು ಮೊಮ್ಮಗನೊಂದಿಗೆ ಆಗಮಿಸಿ ತಿರಂಗ ಸ್ವೀಕರಿಸಿದ ಪ್ರೇಮ ಕೃಷ್ಣ
ಮಗಳು ಮತ್ತು ಮೊಮ್ಮಗನೊಂದಿಗೆ ಆಗಮಿಸಿ ತಿರಂಗ ಸ್ವೀಕರಿಸಿದ ಪ್ರೇಮ ಕೃಷ್ಣ
ವಿಡಿಯೋ: ರಾಜಕೀಯ ಗುರುವಿಗೆ ಹೆಗಲು ಕೊಟ್ಟು ವಿದಾಯ ಹೇಳಿದ ಡಿಕೆ ಬ್ರದರ್ಸ್
ವಿಡಿಯೋ: ರಾಜಕೀಯ ಗುರುವಿಗೆ ಹೆಗಲು ಕೊಟ್ಟು ವಿದಾಯ ಹೇಳಿದ ಡಿಕೆ ಬ್ರದರ್ಸ್
ರಾಜ್ಯ ಮತ್ತು ರಾಷ್ಟ್ರದ ಹಲವಾರು ನಾಯಕರು ಕೃಷ್ಣರ ಅಂತ್ಯಕ್ರಿಯೆಯಲ್ಲಿ ಭಾಗಿ
ರಾಜ್ಯ ಮತ್ತು ರಾಷ್ಟ್ರದ ಹಲವಾರು ನಾಯಕರು ಕೃಷ್ಣರ ಅಂತ್ಯಕ್ರಿಯೆಯಲ್ಲಿ ಭಾಗಿ
ರಜತ್ ವಿರುದ್ಧ ಮುಗಿಬಿದ್ದ ಮಂಜು, ತ್ರಿವಿಕ್ರಮ್
ರಜತ್ ವಿರುದ್ಧ ಮುಗಿಬಿದ್ದ ಮಂಜು, ತ್ರಿವಿಕ್ರಮ್
ಅಂತ್ಯಕ್ರಿಯೆ ಉಸ್ತುವಾರಿ ವಹಿಸಿಕೊಂಡ ಡಿಕೆ ಶಿವಕುಮಾರ್​ರಿಂದ ಚುರುಕು ಓಡಾಟ
ಅಂತ್ಯಕ್ರಿಯೆ ಉಸ್ತುವಾರಿ ವಹಿಸಿಕೊಂಡ ಡಿಕೆ ಶಿವಕುಮಾರ್​ರಿಂದ ಚುರುಕು ಓಡಾಟ
ಬಿಜೆಪಿ ಶಾಸಕ ಪ್ರಭು ಚವ್ಹಾಣ್​ಗೆ ಮಹಾರಾಷ್ಟ್ರ ಶಿವಸೇನೆ ಪುಂಡರಿಂದ ಕಿರಿಕ್
ಬಿಜೆಪಿ ಶಾಸಕ ಪ್ರಭು ಚವ್ಹಾಣ್​ಗೆ ಮಹಾರಾಷ್ಟ್ರ ಶಿವಸೇನೆ ಪುಂಡರಿಂದ ಕಿರಿಕ್
ಯತ್ನಾಳ್ ಹೆಸರೇಳದೆ ನಾಯಿ-ಕುರಿಗೆ ಉತ್ತರಿಸುವ ಅಗತ್ಯವಿಲ್ಲ ಎಂದ ಕಾಶಪ್ಪನವರ್
ಯತ್ನಾಳ್ ಹೆಸರೇಳದೆ ನಾಯಿ-ಕುರಿಗೆ ಉತ್ತರಿಸುವ ಅಗತ್ಯವಿಲ್ಲ ಎಂದ ಕಾಶಪ್ಪನವರ್
ಅವಿವಾಹಿತ ಜಯಣ್ಣ ನಾಳೆ ಗೃಹಪ್ರವೇಶ ಕಾರ್ಯಕ್ರಮ ಇಟ್ಟುಕೊಂಡಿದ್ದರು!
ಅವಿವಾಹಿತ ಜಯಣ್ಣ ನಾಳೆ ಗೃಹಪ್ರವೇಶ ಕಾರ್ಯಕ್ರಮ ಇಟ್ಟುಕೊಂಡಿದ್ದರು!
ರಾಜ್ ಕುಮಾರ್, ಅಂಬರೀಶ್ ಅಂತ್ಯಕ್ರಿಯೆಗೂ ಶ್ರೀಗಂಧದ ಕಟ್ಟಿಗೆ ಬಳಸಲಾಗಿತ್ತು
ರಾಜ್ ಕುಮಾರ್, ಅಂಬರೀಶ್ ಅಂತ್ಯಕ್ರಿಯೆಗೂ ಶ್ರೀಗಂಧದ ಕಟ್ಟಿಗೆ ಬಳಸಲಾಗಿತ್ತು
ಸಂಬಂಧ ಬೆಳೆಸುವಾಗಲೂ ಕೃಷ್ಣ ನಮ್ಮನ್ನು ಮನೆಗೆ ಕರೆಸಿ ಮಾತಾಡಿದ್ದರು: ಸುರೇಶ್
ಸಂಬಂಧ ಬೆಳೆಸುವಾಗಲೂ ಕೃಷ್ಣ ನಮ್ಮನ್ನು ಮನೆಗೆ ಕರೆಸಿ ಮಾತಾಡಿದ್ದರು: ಸುರೇಶ್