AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Celebrity Fitness: ಫಿಟ್ ಆಗಿರಲು ಸೆಲೆಬ್ರಿಟಿಗಳು ಅನುಸರಿಸುವ ಈ ವರ್ಕೌಟ್‌ಗಳನ್ನು ಟ್ರೈ ಮಾಡಿ

ಫಿಟ್ ಆಗಿರಲು ಎಲ್ಲರೂ ವ್ಯಾಯಾಮ ಮಾಡುತ್ತಿರುತ್ತಾರೆ. ಒಂದು ಕಾಲದಲ್ಲಿ ಕೇವಲ ಸಿನಿಮಾ ಮತ್ತು ಕ್ರೀಡಾಪಟುಗಳಿಗೆ ಮಾತ್ರ ಸೀಮಿತವಾಗಿದ್ದ ಫಿಟ್ನೆಸ್ ಟಿಪ್ಸ್ ಈಗ ಸಾಮಾನ್ಯ ಜನರೂ ಫಾಲೋ ಮಾಡುತ್ತಿದ್ದಾರೆ. ಆದ್ದರಿಂದ ನೀವೂ ಕೂಡ ಫಿಟ್​​ ಆಗಿ ಕಾಣಲು ಸೆಲೆಬ್ರಿಟಿಗಳು ಅನುಸರಿಸುವ ಈ ವರ್ಕೌಟ್‌ಗಳನ್ನು ಮಾಡಿ.

Celebrity Fitness: ಫಿಟ್ ಆಗಿರಲು ಸೆಲೆಬ್ರಿಟಿಗಳು ಅನುಸರಿಸುವ ಈ ವರ್ಕೌಟ್‌ಗಳನ್ನು ಟ್ರೈ ಮಾಡಿ
Fitness Tips Image Credit source: Pinterest
ಅಕ್ಷತಾ ವರ್ಕಾಡಿ
|

Updated on: Dec 12, 2023 | 4:03 PM

Share

ಒಟ್ಟಾರೆ ಆರೋಗ್ಯವನ್ನು ಕಾಪಾಡಿಕೊಳ್ಳುವಲ್ಲಿ ವ್ಯಾಯಾಮದಂತಹ ದೈಹಿಕ ಚಟುವಟಿಕೆಗಳು ತುಂಬಾ ಅಗತ್ಯ. ಫಿಟ್ ಆಗಿರಲು ಎಲ್ಲರೂ ವ್ಯಾಯಾಮ ಮಾಡುತ್ತಿರುತ್ತಾರೆ. ಒಂದು ಕಾಲದಲ್ಲಿ ಕೇವಲ ಸಿನಿಮಾ ಮತ್ತು ಕ್ರೀಡಾಪಟುಗಳಿಗೆ ಮಾತ್ರ ಸೀಮಿತವಾಗಿದ್ದ ಫಿಟ್ನೆಸ್ ಟಿಪ್ಸ್ ಈಗ ಸಾಮಾನ್ಯ ಜನರೂ ಫಾಲೋ ಮಾಡುತ್ತಿದ್ದಾರೆ. ಫಿಟ್‌ನೆಸ್‌ಗೆ ಹೆಸರಾದ ಸೆಲೆಬ್ರಿಟಿಗಳು ತಮ್ಮ ಫಿಟ್‌ನೆಸ್ ಅನ್ನು ಕಾಪಾಡಿಕೊಳ್ಳಲು ಯಾವ ರೀತಿಯ ವರ್ಕೌಟ್ ಮಾಡುತ್ತಾರೆ ಎಂಬುದನ್ನು ತಿಳಿದುಕೊಳ್ಳಲು ಎಲ್ಲರಿಗೂ ಆಸಕ್ತಿ ಇರುತ್ತದೆ. ಸಿನಿಮಾ ನಟಿಯರು ಎಷ್ಟೇ ವಯಸ್ಸಾದರೂ ಚಿರಯುವತಿಯಂತೆ ಕಾಣುತ್ತಿರುತ್ತಾರೆ. ಆದ್ದರಿಂದ ನೀವೂ ಕೂಡ ಫಿಟ್​​ ಆಗಿ ಕಾಣಲು ಸೆಲೆಬ್ರಿಟಿಗಳು ಅನುಸರಿಸುವ ಈ ಕೆಲವು ವರ್ಕೌಟ್‌ಗಳನ್ನು ಟ್ರೈ ಮಾಡಿ.

ಯೋಗ:

ಇತ್ತೀಚೆಗೆ ಯೋಗಾಭ್ಯಾಸ ಮಾಡುವವರ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿದೆ. ಅನೇಕರು ಯೋಗವನ್ನು ತಮ್ಮ ಜೀವನದ ಭಾಗವಾಗಿಸಿಕೊಳ್ಳುತ್ತಿದ್ದಾರೆ. ದಿನಕ್ಕೆ ಕನಿಷ್ಠ 10 ನಿಮಿಷಗಳ ಕಾಲ ಯೋಗಾಭ್ಯಾಸ ಮಾಡುವುದರಿಂದ ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಆರೋಗ್ಯವೂ ಸುಧಾರಿಸುತ್ತದೆ.

ಈಜು:

ಈಜು ಅತ್ಯುತ್ತಮ ವ್ಯಾಯಾಮ ಎಂದು ಅನೇಕರಿಗೆ ತಿಳಿದಿಲ್ಲ. ಆದರೆ ಈಜುವುದರಿಂದ ಹಲವು ಪ್ರಯೋಜನಗಳಿವೆ ಎನ್ನುತ್ತಾರೆ ತಜ್ಞರು. ದೇಹದಲ್ಲಿ ಎಲ್ಲಿಯೂ ಕೊಬ್ಬು ಸಂಗ್ರಹವಾಗದೆ ದೇಹವನ್ನು ಫಿಟ್​​ ಆಗಿ ಇಡುವಲ್ಲಿ ಈಜು ಬಹುಮುಖ್ಯ ಪಾತ್ರವನ್ನು ವಹಿಸುತ್ತದೆ. ದಿನನಿತ್ಯ ಈಜುವುದರಿಂದ ದೇಹ ತೂಕ ಕಡಿಮೆಯಾಗುವುದರ ಜೊತೆಗೆ ದೇಹವನ್ನು ಫಿಟ್ ಆಗಿ ಇಡುತ್ತದೆ. ಅದಕ್ಕಾಗಿಯೇ ಇತ್ತೀಚೆಗೆ ಮನೆ ನಿರ್ಮಾಣದ ಸಮಯದಲ್ಲಿ ಈಜುಕೊಳಗಳನ್ನು ನಿರ್ಮಿಸುವವರ ಸಂಖ್ಯೆ ಹೆಚ್ಚುತ್ತಿದೆ.

ಇದನ್ನೂ ಓದಿ: ಉಗುರಿನ ಸುತ್ತ ಕಪ್ಪಾಗಿದೆಯೇ? ಅದಕ್ಕೆ ಪರಿಹಾರ ಇಲ್ಲಿದೆ

ಬಾಕ್ಸಿಂಗ್:

ದೇಹವನ್ನು ಫಿಟ್ ಆಗಿಟ್ಟುಕೊಳ್ಳಲು ಬಾಕ್ಸಿಂಗ್ ಕೂಡ ತುಂಬಾ ಉಪಯುಕ್ತವಾಗಿದೆ. ಅದಕ್ಕಾಗಿಯೇ ಅನೇಕರು ಬಾಕ್ಸಿಂಗ್‌ಗೆ ಒಗ್ಗಿಕೊಳ್ಳುತ್ತಿದ್ದಾರೆ. ಅದರಲ್ಲೂ ಸಿನಿಮಾ ಸೆಲೆಬ್ರಿಟಿಗಳು ನಿಯಮಿತವಾಗಿ ಬಾಕ್ಸಿಂಗ್ ಅನ್ನು ತಮ್ಮ ವರ್ಕೌಟ್‌ನ ಭಾಗವಾಗಿಸಿಕೊಳ್ಳುತ್ತಿದ್ದಾರೆ. ಬಾಕ್ಸಿಂಗ್ ಕ್ಯಾಲೊರಿಗಳನ್ನು ತ್ವರಿತವಾಗಿ ಸುಡುತ್ತದೆ ಮತ್ತು ಸ್ನಾಯುಗಳನ್ನು ಬಲಪಡಿಸುತ್ತದೆ.

ವೇಟ್ ಲಿಫ್ಟಿಂಗ್:

ಸ್ಲಿಮ್ ಮತ್ತು ಫಿಟ್ ಆಗಿರಲು ತೂಕ ಎತ್ತುವಿಕೆಯು ತುಂಬಾ ಉಪಯುಕ್ತವಾಗಿದೆ. ಪ್ರತಿದಿನ ವೇಟ್ ಲಿಫ್ಟಿಂಗ್ ಮಾಡುವುದರಿಂದ ದೇಹದಲ್ಲಿ ಸಂಗ್ರಹವಾದ ಕೊಬ್ಬು ಕಡಿಮೆಯಾಗಿ ಸ್ನಾಯುಗಳು ಗಟ್ಟಿಯಾಗುತ್ತವೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್