ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಆದಿವಾಸಿಗಳು ಅನೇಕ ರೀತಿಯಲ್ಲಿ ಕೊಡುಗೆ ನೀಡಿದ್ದು ಅಂತಹವರ ಸಾಲಿಗೆ ಬಿರ್ಸಾ ಮುಂಡಾ ಕೂಡ ಸೇರಿದ್ದಾರೆ. ಬಿರ್ಸಾ ಮುಂಡಾ ಅವರು 1875 ರ ನವೆಂಬರ್ 15 ರಂದು ಜಾರ್ಖಂಡ್‌ನ ಉಲಿಹಾತು ಎಂಬ ಗ್ರಾಮದಲ್ಲಿ ಜನಿಸಿದರು. ಇವರು ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಮುಖ ಬುಡಕಟ್ಟು ನಾಯಕರಾಗಿ ಗುರುತಿಸಿಕೊಂಡರು. ಬ್ರಿಟಿಷರ ಅನ್ಯಾಯ ಮತ್ತು ಬುಡಕಟ್ಟು ಜನರ ಶೋಷಣೆಯ ವಿರುದ್ಧ ಬಿರ್ಸಾ ಮುಂಡಾ ಧ್ವನಿ ಎತ್ತುವ ಮೂಲಕ ಬುಡಕಟ್ಟು ಸಮುದಾಯದ ಹಕ್ಕುಗಳಿಗಾಗಿ ಹೋರಾಡಿದರು. ಅವರು ಉಲ್ಗುಲಾನ್ ಎಂಬ ಹೆಸರಿನಲ್ಲಿ ಬ್ರಿಟಿಷ್ ಆಳ್ವಿಕೆಯ ವಿರುದ್ಧ ಚಳುವಳಿಯನ್ನು ಪ್ರಾರಂಭಿಸಿದರು. ಈ ಆಂದೋಲನದ ಉದ್ದೇಶವೇ ಆದಿವಾಸಿಗಳ ನೆಲ ಮತ್ತು ಸಂಸ್ಕೃತಿಯನ್ನು ರಕ್ಷಿಸುವುದಾಗಿತ್ತು. 1875ರಲ್ಲಿ ಹುಟ್ಟಿ 25 ವರ್ಷಗಳ ಕಾಲ ಬದುಕಿದ್ದ ಬಿರ್ಸಾ ಮುಂಡ ತಮ್ಮ ಕಿರಿ ವಯಸ್ಸಿನಲ್ಲೇ ದೊಡ್ಡ ಮಟ್ಟದಲ್ಲಿ ಹೋರಾಟ ನಡೆಸಿದ್ದರು. ಪ್ರಸ್ತುತ ಬುಡಕಟ್ಟು ಸಮುದಾಯದಲ್ಲಿ ಬಿರ್ಸಾ ಮುಂಡಾನನ್ನು ದೇವರಂತೆ ಪೂಜಿಸಲಾಗುತ್ತಿದ್ದು, ಅವರ ಕೊಡುಗೆಯನ್ನು ಗೌರವಿಸಲು, ಅವರ ಜನ್ಮದಿನವನ್ನು ನವೆಂಬರ್ 15 ರಂದು ರಾಷ್ಟ್ರೀಯ ಮಟ್ಟದಲ್ಲಿ ಬುಡಕಟ್ಟು ಹೆಮ್ಮೆಯ ದಿನವಾಗಿ ಆಚರಿಸಲಾಗುತ್ತದೆ.
Birsa Munda Jayanti 2024: ಬ್ರಿಟಿಷರ ವಿರುದ್ಧ ಧ್ವನಿ ಎತ್ತಿದ ಜನಪದ ನಾಯಕ ಬಿರ್ಸಾ ಮುಂಡಾ ಬುಡಕಟ್ಟು ಜನಾಂಗಕ್ಕೆ ಆರಾಧ್ಯ ದೈವವಾಗಿದ್ದು ಹೇಗೆ?
ಬಿರ್ಸಾ ಮುಂಡಾ ಅವರ ಜನ್ಮ ವಾರ್ಷಿಕೋತ್ಸವವನ್ನು ಪ್ರತಿ ವರ್ಷ ನವೆಂಬರ್ 15 ರಂದು ಆಚರಿಸಲಾಗುತ್ತದೆ. ಬಿರ್ಸಾ ಮುಂಡಾರನ್ನು ಭಾರತೀಯ ಇತಿಹಾಸದಲ್ಲಿ ಮಹಾನ್ ವೀರ ಎಂಬ ಹೆಸರಿನಿಂದ ಕರೆಯಲಾಗುತ್ತದೆ. ಬುಡಕಟ್ಟು ಸಮಾಜದ ಸ್ಥಿತಿ ಮತ್ತು ದಿಕ್ಕನ್ನು ಬದಲಿಸುವಲ್ಲಿ ಇವರ ಪಾತ್ರವು ಬಹು ದೊಡ್ಡದು. ಬ್ರಿಟಿಷರ ವಿರುದ್ಧ ಧ್ವನಿ ಎತ್ತಿದ ಬಿರ್ಸಾ ಮುಂಡಾರವರ ಅವರ ಕೊಡುಗೆ, ಹೋರಾಟ ಮತ್ತು ತ್ಯಾಗವನ್ನು ಗೌರವಿಸುವುದು ಈ ಜಯಂತಿಯ ಉದ್ದೇಶವಾಗಿದೆ. ಹಾಗಾದ್ರೆ ಈ ದಿನದ ಇತಿಹಾಸ, ಮಹತ್ವ ಸೇರಿದಂತೆ ಇನ್ನಿತ್ತರ ಸಂಪೂರ್ಣ ಮಾಹಿತಿ ಇಲ್ಲಿದೆ.

ಸಾಂದರ್ಭಿಕ ಚಿತ್ರ
Follow Us




