AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Black Pepper Milk: ರಾತ್ರಿ ಮಲಗುವ ಮುನ್ನ ಒಂದು ಲೋಟ ಹಾಲಿಗೆ ಕರಿಮೆಣಸು ಬೆರೆಸಿ ಕುಡಿಯೋದ್ರಿಂದ ಎಷ್ಟೆಲ್ಲಾ ಪ್ರಯೋಜನವಿದೆ ನೋಡಿ

ಹಾಲಿನಲ್ಲಿ ನಮ್ಮ ದೇಹಕ್ಕೆ ಬೇಕಾದ ಬಹುತೇಕ ಪೌಷ್ಟಿಕ ಸತ್ವಗಳು ಸಿಗುವುದರಿಂದ ಹೆಚ್ಚಿನವರು ಪ್ರತಿ ರಾತ್ರಿ ಮಲಗುವ ಮುಂಚೆ ಒಂದು ಲೋಟ ಹಾಲನ್ನು ಕುಡಿದು ಮಲಗುತ್ತಾರೆ. ಬರೀ ಹಾಲನ್ನು ಕುಡಿಯೋ ಬದಲು, ಕರಿಮೆಣಸು ಬೆರೆಸಿದಂತಹ ಹಾಲನ್ನು ಕುಡಿಯುವ ಮೂಲಕ ಉತ್ತಮ ನಿದ್ರೆಯ ಜೊತೆಗೆ ಇನ್ನಷ್ಟು ಹಲವಾರು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು. ಹಾಗಿದ್ದರೆ ಕರಿಮೆಣಸು ಬೆರೆಸಿದ ಹಾಲು ಕುಡಿಯುವುದರಿಂದ ಏನೆಲ್ಲಾ ಆರೋಗ್ಯ ಪ್ರಯೋಜನಗಳು ಲಭಿಸುತ್ತವೆ ಎಂಬುವುದನ್ನು ನೋಡೋಣ ಬನ್ನಿ.

Black Pepper Milk: ರಾತ್ರಿ ಮಲಗುವ ಮುನ್ನ ಒಂದು ಲೋಟ ಹಾಲಿಗೆ ಕರಿಮೆಣಸು ಬೆರೆಸಿ ಕುಡಿಯೋದ್ರಿಂದ ಎಷ್ಟೆಲ್ಲಾ ಪ್ರಯೋಜನವಿದೆ ನೋಡಿ
ಸಾಂದರ್ಭಿಕ ಚಿತ್ರ
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​|

Updated on: Feb 22, 2025 | 4:52 PM

Share

ರಾತ್ರಿ ಮಲಗುವ ಮುನ್ನ ಹಾಲು ಕುಡಿಯುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದರಲ್ಲಿ ನಮ್ಮ ದೇಹಕ್ಕೆ ಬೇಕಾದ ಬಹುತೇಕ ಪೌಷ್ಟಿಕ ಸತ್ವಗಳು ಸಿಗುವುದರಿಂದ ಹೆಚ್ಚಿನವರು ಪ್ರತಿ ರಾತ್ರಿ ಮಲಗುವ ಮುಂಚೆ ಒಂದು ಲೋಟ ಹಾಲನ್ನು ಕುಡಿದು ಮಲಗುತ್ತಾರೆ. ಅದರಲ್ಲೂ ಹಾಲಿಗೆ ಕರಿಮೆಣಸು ಮಿಶ್ರಣ ಮಾಡಿ ಸೇವಿಸುವುದು ಇನ್ನೂ ಒಳ್ಳೆಯದು. ಕರಿಮೆಣಸು ಉತ್ಕರ್ಷಣ ನಿರೋಧಕಗಳು ಮತ್ತು ಉರಿಯೂತ ನಿವಾರಕ ಗುಣಗಳನ್ನು ಹೊಂದಿದ್ದರೆ, ಹಾಲಿನಲ್ಲಿ ಕ್ಯಾಲ್ಸಿಯಂ, ಪ್ರೋಟೀನ್ ಮತ್ತು ಇತರ ಪೋಷಕಾಂಶಗಳಿವೆ. ಈ ಎರಡರ ಮಿಶ್ರಣವನ್ನು ಜೊತೆಗೆ ಸೇವಿಸಿದರೆ ಉತ್ತಮ ನಿದ್ರೆಯ ಜೊತೆಗೆ ಇನ್ನಷ್ಟು ಹಲವಾರು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು. ಹಾಗಿದ್ದರೆ ಕರಿಮೆಣಸು ಬೆರೆಸಿದ ಹಾಲು ಕುಡಿಯುವುದರಿಂದ ಏನೆಲ್ಲಾ ಆರೋಗ್ಯ ಪ್ರಯೋಜನಗಳು ಲಭಿಸುತ್ತವೆ ಎಂಬುವುದನ್ನು ನೋಡೋಣ ಬನ್ನಿ.

ಆಯುರ್ವೇದ ತಜ್ಞರು ಈ ಬಗ್ಗೆ ಏನು ಹೇಳುತ್ತಾರೆ?

ರಾತ್ರಿ ಮಲಗುವ ಮುನ್ನ ಹಾಲು ಕುಡಿಯುವುದು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಹಾಗಿರುವಾಗ ಅದಕ್ಕೆ ಕರಿಮೆಣಸನ್ನು ಸೇರಿಸಿದರೆ, ಅದರ ಪ್ರಯೋಜನಗಳು ಹಲವು ಪಟ್ಟು ಹೆಚ್ಚಾಗುತ್ತವೆ. ಕರಿಮೆಣಸಿನಲ್ಲಿ ಉತ್ಕರ್ಷಣ ನಿರೋಧಕಗಳು, ಜೀವಸತ್ವಗಳು ಮತ್ತು ಅನೇಕ ಪೋಷಕಾಂಶಗಳಿವೆ. ಇವು ನಮ್ಮ ರೋಗನಿರೋಧಕ ಶಕ್ತಿಯನ್ನು ಬಲಪಡಿಸುದರ ಜೊತೆಗೆ ನಮ್ಮನ್ನು ಅನೇಕ ರೋಗಗಳಿಂದ ರಕ್ಷಿಸುತ್ತವೆ.

ಈ ಬಗ್ಗೆ ಟಿವಿ 9 ತೆಲುಗು ಜೊತೆ ಮಾತನಾಡಿದ ಆಯುರ್ವೇದ ತಜ್ಞ ಡಾ. ಕಿರಣ್ ಗುಪ್ತಾ, ಕರಿಮೆಣಸು ಬೆರೆಸಿದ ಹಾಲು ಕುಡಿಯುವುದರಿಂದ ಶೀತ ಮತ್ತು ಕೆಮ್ಮಿನಿಂದ ಪರಿಹಾರ ದೊರೆಯುವುದಲ್ಲದೆ, ಮೂಳೆಗಳು ಬಲಗೊಳ್ಳುತ್ತವೆ. ಹಾಲಿನಲ್ಲಿ ಕ್ಯಾಲ್ಸಿಯಂ ಮತ್ತು ವಿಟಮಿನ್ ಡಿ ಇರುತ್ತದೆ. ಹೆಚ್ಚುವರಿಯಾಗಿ, ಕರಿಮೆಣಸು ಹಾಲಿನಲ್ಲಿರುವ ಪೋಷಕಾಂಶಗಳ ಹೀರಿಕೊಳ್ಳುವಿಕೆಯನ್ನು ಹೆಚ್ಚಿಸುತ್ತದೆ. ಇದು ಮೂಳೆಗಳನ್ನು ಬಲಪಡಿಸುತ್ತದೆ ಎಂಬುದನ್ನು ಹೇಳಿದ್ದಾರೆ.

ಕರಿಮೆಣಸು ಬ್ಯಾಕ್ಟೀರಿಯಾ ವಿರೋಧಿ ಮತ್ತು ಆಂಟಿವೈರಲ್ ಗುಣಗಳನ್ನು ಹೊಂದಿದ್ದು, ಇದು ದೇಹವನ್ನು ಸೋಂಕುಗಳಿಂದ ರಕ್ಷಿಸಲು ಸಹಾಯ ಮಾಡುತ್ತದೆ ಎಂದು ಡಾ. ಗುಪ್ತಾ ಹೇಳಿದ್ದಾರೆ. ವಿಶೇಷವಾಗಿ ಇದನ್ನು ಹಾಲಿನೊಂದಿಗೆ ಸೇವಿಸುವುದರಿಂದ ದೇಹದ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಇದರ ಜೊತೆಗೆ, ಇವು ಗಂಟಲು ನೋವು, ಕಫದ ಸಮಸ್ಯೆ ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಇದರ ಜೊತೆಗೆ, ಕರಿಮೆಣಸು ಜೀರ್ಣಕಾರಿ ಕಿಣ್ವಗಳನ್ನು ಸಕ್ರಿಯಗೊಳಿಸುತ್ತದೆ, ಇದು ಆಹಾರವನ್ನು ವೇಗವಾಗಿ ಮತ್ತು ಉತ್ತಮವಾಗಿ ಜೀರ್ಣಿಸಿಕೊಳ್ಳಲು ಸಹಾಯ ಮಾಡುತ್ತದೆ. ರಾತ್ರಿ ಹಾಲಿನೊಂದಿಗೆ ಇದನ್ನು ಸೇವಿಸುವುದರಿಂದ ಆಮ್ಲೀಯತೆ ಮತ್ತು ಮಲಬದ್ಧತೆ ನಿವಾರಣೆಯಾಗುತ್ತದೆ. ಇಷ್ಟೇ ಅಲ್ಲ, ತೂಕ ಇಳಿಸಿಕೊಳ್ಳಲು ಬಯಸಿದರೆ ಹಾಲಿಗೆ ಕರಿಮೆಣಸು ಸೇರಿಸಿ ಕುಡಿಯುವುದು ಒಳ್ಳೆಯದು. ಇದು ದೇಹದಲ್ಲಿ ಸಂಗ್ರಹವಾಗಿರುವ ಹೆಚ್ಚುವರಿ ಕೊಬ್ಬನ್ನು ಕಡಿಮೆ ಮಾಡಲು ಸಹ ಸಹಾಯ ಮಾಡುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬೆಕ್ಕು ಅಂದರೆ ತುಂಬಾ ಇಷ್ಟನಾ? ಯಾಮಾರಿದ್ರೆ ಪ್ರಾಣ ತೆಗೆಯುತ್ತೆ ಹುಷಾರ್

ಕರಿಮೆಣಸು ಹಾಲು ಮಾಡುವ ವಿಧಾನ:

ಕರಿಮೆಣಸಿನ ಹಾಲು ತಯಾರಿಸಲು, ಒಂದು ಲೋಟ ಹಾಲನ್ನು ಮಧ್ಯಮ ಉರಿಯಲ್ಲಿ ಬಿಸಿ ಮಾಡಿ ಮತ್ತು ಅದಕ್ಕೆ 1 ಚಿಟಿಕೆ ಕರಿಮೆಣಸಿನ ಪುಡಿಯನ್ನು ಸೇರಿಸಿ. ಚೆನ್ನಾಗಿ ಮಿಶ್ರಣ ಮಾಡಿ 2-3 ನಿಮಿಷ ಕುದಿಸಿ, ಇದರಿಂದ ಕರಿಮೆಣಸಿನಲ್ಲಿರುವ ಪೋಷಕಾಂಶಗಳು ಹಾಲಿನಲ್ಲಿ ಕರಗುತ್ತವೆ. ರುಚಿಯನ್ನು ಹೆಚ್ಚಿಸಲು ನೀವು ಇದಕ್ಕೆ 1 ಟೀ ಚಮಚ ಅರಿಶಿನವನ್ನು ಕೂಡ ಸೇರಿಸಬಹುದು.

ನಂತರ ಅದನ್ನು ಸೋಸಿ ಬಿಸಿಯಾಗಿರುವಾಗಲೇ ಕುಡಿಯಿರಿ. ಮಲಗುವ ಮುನ್ನ ಈ ಹಾಲು ಕುಡಿಯುವುದರಿಂದ ಜೀರ್ಣಕ್ರಿಯೆ ಆರೋಗ್ಯ ಸುಧಾರಿಸುತ್ತದೆ, ರೋಗ ನಿರೋಧಕ ಶಕ್ತಿ ಬಲಗೊಳ್ಳುತ್ತದೆ ಮತ್ತು ಒಳ್ಳೆಯ ನಿದ್ರೆ ಬರುತ್ತದೆ. ನಿಮಗೆ ಯಾವುದೇ ಅಲರ್ಜಿಗಳು ಅಥವಾ ಗ್ಯಾಸ್ಟ್ರಿಕ್ ಸಮಸ್ಯೆಗಳು ಇದ್ದಲ್ಲಿ, ಕರಿಮೆಣಸು ಹಾಲು ಸೇವಿಸುವ ಮೊದಲು ವೈದ್ಯರನ್ನು ಸಂಪರ್ಕಿಸಿ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ