ಭಾರತ ಕಂಡ ಮಹಾನ್ ವ್ಯಕ್ತಿ ಡಾ. ಬಿ.ಆರ್. ಅಂಬೇಡ್ಕರ್. ಯುವ ಸಮುದಾಯಕ್ಕೆ ತನ್ನ ಚಿಂತನೆಗಳಿಂದಲೇ ಸ್ಫೂರ್ತಿ ಹಾಗೂ ಆದರ್ಶ ವ್ಯಕ್ತಿಯೆನಿಸಿಕೊಂಡಿದ್ದಾರೆ. ಸಮಾಜ ಸುಧಾರಕರಾಗಿದ್ದು, ದಲಿತ ಬೌದ್ಧ ಚಳುವಳಿಯನ್ನು ಮುನ್ನಡೆಸುವ ಮೂಲಕ ಪ್ರೇರಣೆಯಾದ ವ್ಯಕ್ತಿಯಾಗಿದ್ದಾರೆ. ಅದಲ್ಲದೇ, ಭೀಮರಾವ್ ರಾಮ್‌ಜಿ ಅಂಬೇಡ್ಕರ್ ಅವರು ದಲಿತ ಕುಟುಂದಲ್ಲಿ ಜನಿಸಿದ್ದರಿಂದ ಅಸ್ಪೃಶ್ಯತೆ ನೋವು ಮಾತ್ರ ಇವರನ್ನು ಬಿಡಲಿಲ್ಲ. ಹೀಗಾಗಿ ಅಂಬೇಡ್ಕರ್ ಅವರು ಮಹಿಳೆಯರು ಹಕ್ಕುಗಳು, ಶೋಷಿತ ವರ್ಗಗಳ ಹಕ್ಕಿಗಾಗಿ ಹೋರಾಡಿದ ಮಹಾನ್ ವ್ಯಕ್ತಿ. ಡಿಸೆಂಬರ್ 6 ರಂದು ಅಂಬೇಡ್ಕರ್ ಅವರ ಪುಣ್ಯ ತಿಥಿಯಾಗಿದ್ದು, ಈ ದಿನವನ್ನು ಮಹಾಪರಿನಿರ್ವಾಣ ದಿನ’ವನ್ನಾಗಿ ಆಚರಿಸಲಾಗುತ್ತದೆ.
ಡಾ. ಬಿ ಆರ್ ಅಂಬೇಡ್ಕರ್ ಅವರು ಸರಿಸುಮಾರು ಒಂದು ವರ್ಷಗಳ ಕಾಲ ಬೌದ್ಧ ಧರ್ಮವನ್ನು ಅಧ್ಯಯನ ಮಾಡಿದ ನಂತರದಲ್ಲಿ 1956ರ ಅಕ್ಟೋಬರ್ 14ರಂದು 5,00,000 ಬೆಂಬಲಿಗರೊಂದಿಗೆ ಅಂಬೇಡ್ಕರ್ ಬೌದ್ಧಧರ್ಮಕ್ಕೆ ಮತಾಂತರಗೊಂಡರು. ಡಾ. ಬಿ ಆರ್ ಅಂಬೇಡ್ಕರ್ ಅವರು ತಮ್ಮ ́ಬುದ್ಧ ಮತ್ತು ಅವರ ಧಮ್ಮ’ ಗ್ರಂಥವನ್ನು ಪೂರ್ಣಗೊಳಿಸಿದ ಕೆಲವೇ ಕೆಲವು ದಿನಗಳಲ್ಲಿ ದೆಹಲಿಯಲ್ಲಿ ತಮ್ಮ ನಿವಾಸದಲ್ಲಿ ಡಿಸೆಂಬರ್ 6, 1956 ರಲ್ಲಿ ಮರಣ ಹೊಂದಿದರು. ಆದರೆ, ಅಂಬೇಡ್ಕರ್ ಅವರ ಪಾರ್ಥೀವ ಶರೀರವನ್ನು ಮುಂಬೈನ ದಾದರ್ ಚೌಪಾಟಿಯಲ್ಲಿ ಬೌದ್ಧ ವಿಧಿ ವಿಧಾನಗಳೊಂದಿಗೆ ಅಂತ್ಯಕ್ರಿಯೆ ಮಾಡಲಾಯಿತು.
ಆದರೆ ಅನುಯಾಯಿಗಳು, ಅಂಬೇಡ್ಕರ್ ಅವರನ್ನು ಭಗವಾನ್ ಬುದ್ಧನಂತೆಯೇ ಪ್ರಭಾವಶಾಲಿಯಾದ ವ್ಯಕ್ತಿ. ಶುದ್ಧ ಮನಸ್ಸಿನ ಹಾಗೂ ದೇವರಿಂದ ಆಶೀರ್ವಾದ ಹೊಂದಿದವರು. ಸಮಾಜದಲ್ಲಿನ ಅವರ ಮಹಾನ್ ಕಾರ್ಯಗಳಿಂದಾಗಿ ಅವರಿಗೆ ಯಾವುದೇ ಕರ್ಮದ ಋಣ ಉಳಿದಿಲ್ಲ ಎಂದು ನಂಬಿದ್ದ ಕಾರಣ ಅಂಬೇಡ್ಕರ್ ಅವರ ಪುಣ್ಯತಿಥಿಯನ್ನು ಮಹಾಪರಿನಿರ್ವಾಣ ದಿನ ಅಥವಾ ದಿವಸ್ ಎಂದು ಕರೆದರು. ಅಂದಿನಿಂದ ಡಾ. ಬಿ ಆರ್ ಅಂಬೇಡ್ಕರ್ ಅವರ ಪುಣ್ಯ ತಿಥಿಯನ್ನು ಮಹಾಪರಿನಿರ್ವಾಣ ದಿನವನ್ನಾಗಿ ಆಚರಿಸಲಾಗುತ್ತಿದೆ. ಈ ದಿನದಂದು ದೇಶದಾದಂತ್ಯ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಭಾರತೀಯ ಸಂವಿಧಾನ ಪಿತಾಮಹ ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸಲಾಗುತ್ತದೆ.
ಇದನ್ನೂ ಓದಿ: ಈ ವ್ಯಕ್ತಿಗಳ ಬಳಿ ವೈಯುಕ್ತಿಕ ಜೀವನದ ರಹಸ್ಯಗಳನ್ನು ಹೇಳ್ಬೇಡಿ
* ಮನಸ್ಸಿನ ಸಂಸ್ಕಾರವು ಮಾನವ ಅಸ್ತಿತ್ವದ ಅಂತಿಮ ಗುರಿಯಾಗಬೇಕು.
* ಸಂವಿಧಾನವು ಕೇವಲ ವಕೀಲರ ದಾಖಲೆಯಲ್ಲ. ಅದು ಜೀವನ ರಥ, ಅದರ ಆತ್ಮವು ಯಾವತ್ತಿಗೂ ಯುಗದ ಆತ್ಮವೇ ಆಗಿದೆ.
* ಚೆನ್ನಾಗಿ ಕಾಣಬೇಕು ಎಂದು ಬದುಕುವ ಬದಲು ಒಳ್ಳೆಯವರಾಗಿ ಬದುಕಲು ಪ್ರಯತ್ನಿಸಬೇಕು.
* ನಾನು ಒಂದು ಸಮುದಾಯದ ಬೆಳವಣಿಗೆಯನ್ನು ಅಳೆಯುವುದು ಅಲ್ಲಿರುವ ಮಹಿಳೆಯರು ಎಷ್ಟು ಪ್ರಮಾಣದ ಪ್ರಗತಿ ಸಾಧಿಸಿದ್ದಾರೆ ಎಂಬುದರ ಮೇಲೆ.
* ಮನುಷ್ಯರು ಸಾವಿಗೆ ಈಡಾಗುವವರು. ಚಿಂತನೆಗಳೂ ಹಾಗೆಯೇ. ಸಸಿಗಳಿಗೆ ನೀರು ಎರೆಯುವಂತೆ ಚಿಂತನೆಗಳಿಗೂ ಬೆಳೆಯಲು ಪೋಷಣೆ ಬೇಕು.
* ಇತಿಹಾಸವನ್ನು ಮರೆಯುವವರು ಇತಿಹಾಸವನ್ನು ಸೃಷ್ಟಿಸಲಾರರು.
* ವ್ಯಕ್ತಿಯ ಜೀವನ ಸುದೀರ್ಘವಾಗಿರಬೇಕಿಲ್ಲ. ಆದರೆ ಅತ್ಯುತ್ತಮವಾಗಿರಬೇಕು.
* ಅಸ್ಪೃಶ್ಯತೆಯು ಮನುಷ್ಯರನ್ನು ಬಾಧಿಸಬಹುದಾದ ಅತೀ ಕೆಟ್ಟ ಕಾಯಿಲೆ.
ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ