AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಟ್ಟೆ ಬೊಜ್ಜು ಏನ್ ಮಾಡಿದ್ರೂ ಕಡಿಮೆ ಆಗಲ್ಲ ಅಂದ್ರೆ ಈ ಬೀಜಗಳಿಂದ ಚಹಾ ಮಾಡಿ ಕುಡಿಯಿರಿ

ಅಗಸೆ ಬೀಜಗಳನ್ನು ನೀವೂ ಕೂಡ ಸೇವನೆ ಮಾಡಿರಬಹುದು. ನೀವು ತಿಳಿದಂತೆಯೇ ಇದು ಆರೋಗ್ಯಕ್ಕೆ ಬಹಳ ಪ್ರಯೋಜನಕಾರಿ. ಹಾಗಾಗಿ ಇವುಗಳನ್ನು ಯಥೇಚ್ಛವಾಗಿ ಸೇವನೆ ಮಾಡಲಾಗುತ್ತದೆ. ಇದರ ಎಣ್ಣೆ ಕೂಡ ಆರೋಗ್ಯಕ್ಕೆ ಒಳ್ಳೆಯದು. ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗಳಿಂದ ಹಿಡಿದು ಚರ್ಮ ಮತ್ತು ಕೂದಲಿನ ಆರೋಗ್ಯದ ವರೆಗೆ ಹೀಗೆ ಎಲ್ಲಾ ಸಮಸ್ಯೆಗೂ ಈ ಬೀಜದಲ್ಲಿ ಪರಿಹಾರವಿದೆ. ಹಾಗಾದರೆ ಇದರಿಂದ ಸಿಗುವ ಪ್ರಯೋಜನಗಳೇನು? ಯಾವ ರೀತಿಯ ಸಮಸ್ಯೆಗೆ ಒಳ್ಳೆಯದು ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಹೊಟ್ಟೆ ಬೊಜ್ಜು ಏನ್ ಮಾಡಿದ್ರೂ ಕಡಿಮೆ ಆಗಲ್ಲ ಅಂದ್ರೆ ಈ ಬೀಜಗಳಿಂದ ಚಹಾ ಮಾಡಿ ಕುಡಿಯಿರಿ
Flax Seeds
ಪ್ರೀತಿ ಭಟ್​, ಗುಣವಂತೆ
|

Updated on: Aug 08, 2025 | 6:10 PM

Share

ಇತ್ತೀಚಿನ ದಿನಗಳಲ್ಲಿ ಅಗಸೆ ಬೀಜಗಳನ್ನು (Flax seeds) ಯಥೇಚ್ಛವಾಗಿ ಬಳಸಲಾಗುತ್ತಿದೆ. ಇವುಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಪೋಷಕಾಂಶಗಳಿವೆ. ಇದು ಒಮೆಗಾ-3 ಕೊಬ್ಬಿನಾಮ್ಲಗಳು, ಫೈಬರ್ ಮತ್ತು ಲಿಗ್ನಾನ್‌ಗಳ ಉತ್ತಮ ಮೂಲವಾಗಿದೆ. ಇದು ಹಲವಾರು ರೀತಿಯ ಔಷಧೀಯ ಗುಣಗಳನ್ನು ಹೊಂದಿರುವುದರಿಂದ ಆರೋಗ್ಯ ಕಾಪಾಡಿಕೊಳ್ಳಲು ಇದರ ಬಳಕೆ ಮಾಡಲಾಗುತ್ತದೆ. ಈ ಬೀಜಗಳು ನೋಡುವುದಕ್ಕೆ ಚಿಕ್ಕದಾಗಿ ಕಂಡರೂ ಕೂಡ ಇದು ನೀಡುವ ಆರೋಗ್ಯ ಪ್ರಯೋಜನಗಳು ಮಾತ್ರ ಅಪಾರ. ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗಳನ್ನು ತಡೆಯುವುದರ ಜೊತೆಗೆ ರಕ್ತದೊತ್ತಡವನ್ನು (blood pressure) ಕಡಿಮೆ ಮಾಡುತ್ತದೆ ಮತ್ತು ಚರ್ಮ ಮತ್ತು ಕೂದಲಿನ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಹಾಗಾದರೆ ಇದರಿಂದ ಸಿಗುವ ಪ್ರಯೋಜನಗಳೇನು? ಯಾವ ರೀತಿಯ ಸಮಸ್ಯೆಗೆ ಒಳ್ಳೆಯದು ಎಂಬುದನ್ನು ತಿಳಿದುಕೊಳ್ಳಿ.

ಅಗಸೆ ಬೀಜಗಳು ಜೀರ್ಣಕಾರಿ ಸಮಸ್ಯೆಗೆ ಸಂಬಂಧಿಸಿದ ಸಮಸ್ಯೆಗಳನ್ನು ತಡೆಯಲು ಮತ್ತು ತೂಕ ಇಳಿಸಿಕೊಳ್ಳಲು ಸಹಾಯ ಮಾಡುತ್ತದೆ. ಅಗಸೆ ಬೀಜದ ಎಣ್ಣೆಯು ಆಲ್ಫಾ-ಲಿನೋಲೆನಿಕ್ ಆಮ್ಲದಿಂದ ಸಮೃದ್ಧವಾಗಿದೆ, ಇದು ತೂಕ ನಿರ್ವಹಣೆಗೆ ಸಹಾಯ ಮಾಡುತ್ತದೆ. ಮಾತ್ರವಲ್ಲ ಅವುಗಳಲ್ಲಿ ಕ್ಯಾಲೋರಿ ಕೂಡ ಕಡಿಮೆ ಇರುತ್ತದೆ. ಹಾಗಾಗಿ ಈ ಎಣ್ಣೆಯನ್ನು ಅಡುಗೆಗೆ ಮತ್ತು ಸಲಾಡ್‌ಗಳನ್ನು ಮಾಡುವಾಗ ಉಪಯೋಗ ಮಾಡಬಹುದು.

ಪ್ರಾಸ್ಟೇಟ್ ಕ್ಯಾನ್ಸರ್ ತಡೆಯಲು ಸಹಾಯ ಮಾಡುತ್ತದೆ

ಅಗಸೆ ಬೀಜಗಳಲ್ಲಿರುವ ಲಿಗ್ನಾನ್‌ಗಳು ಸ್ತನ ಮತ್ತು ಪ್ರಾಸ್ಟೇಟ್ ಕ್ಯಾನ್ಸರ್ ಸೇರಿದಂತೆ ಕೆಲವು ರೀತಿಯ ಕ್ಯಾನ್ಸರ್ ತಡೆಗಟ್ಟುವಲ್ಲಿ ಸಹಾಯಕವಾಗಿವೆ. ಜೊತೆಗೆ ಅಗಸೆ ಬೀಜಗಳು ಮಧುಮೇಹ ರೋಗಿಗಳಲ್ಲಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಮಾತ್ರವಲ್ಲ ಇದರಲ್ಲಿರುವ ಒಮೆಗಾ-3 ಕೊಬ್ಬಿನಾಮ್ಲಗಳು ಹೃದಯದ ಆರೋಗ್ಯವನ್ನು ಸುಧಾರಿಸಲು ಮತ್ತು ರಕ್ತದೊತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಇದನ್ನೂ ಓದಿ
Image
ಪ್ರತಿದಿನ ಕಾಫಿ ಕುಡಿಯುವುದರಿಂದ ಏನೆಲ್ಲಾ ಆಗುತ್ತೆ ಗೊತ್ತಾ?
Image
ಹೃದಯಾಘಾತಕ್ಕೂ ಮುನ್ನ ಚರ್ಮದಲ್ಲಿ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತಂತೆ
Image
ಈ ಆಯುರ್ವೇದ ಅಭ್ಯಾಸಗಳನ್ನು ಅನುಸರಿಸಿದರೆ ಲಿವರ್ ಆರೋಗ್ಯವಾಗಿರುತ್ತೆ!
Image
ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಈ ರೀತಿ ಅಂಜೂರ ಸೇವನೆ ಮಾಡಿ

ಅಗಸೆ ಬೀಜದ ಚಹಾ!

ಅಗಸೆ ಬೀಜಗಳಿಂದ ತಯಾರಿಸಿದ ಚಹಾವನ್ನು ಕುಡಿಯುವುದರಿಂದ ಹೊಟ್ಟೆಯ ಕೊಬ್ಬನ್ನು ತ್ವರಿತವಾಗಿ ಕಡಿಮೆ ಮಾಡಬಹುದು. ಈ ಚಹಾವನ್ನು ಅಗಸೆ ಬೀಜಗಳು, ದಾಲ್ಚಿನ್ನಿ ಮತ್ತು ಜೇನುತುಪ್ಪದ ಸಹಾಯದಿಂದ ತಯಾರಿಸಬಹುದು. ಮಾತ್ರವಲ್ಲ ಇದು ಆರೋಗ್ಯಕ್ಕೂ ಕೂಡ ಒಳ್ಳೆಯದು. ಇಲ್ಲವಾದಲ್ಲಿ ಬೆಳಿಗ್ಗೆ ಎದ್ದ ತಕ್ಷಣ ಅಗಸೆ ಬೀಜಗಳನ್ನು ಕುದಿಸಿದ ನೀರನ್ನು ಕುಡಿಯಿರಿ. ವಾರಕ್ಕೆ ಎರಡರಿಂದ ಮೂರು ಬಾರಿ ಈ ನೀರನ್ನು ಸೇವಿಸುವುದರಿಂದ ಉತ್ತಮ ಫಲಿತಾಂಶ ಸಿಗುತ್ತದೆ. ಅಗಸೆ ಬೀಜಗಳನ್ನು ವಿವಿಧ ರೀತಿಯ ಸ್ಮೂಥಿಗಳಿಗೆ ಸೇರಿಸಬಹುದು. ಇದರಿಂದ ಬೇಗ ಹೊಟ್ಟೆ ತುಂಬಿದ ಭಾವನೆ ಸಿಗುತ್ತದೆ, ಇದು ತೂಕ ಇಳಿಕೆ ಮತ್ತು ಹೊಟ್ಟೆಯ ಕೊಬ್ಬನ್ನು ಕಡಿಮೆ ಮಾಡುವುದಕ್ಕೆ ಸಹಾಯ ಮಾಡುತ್ತದೆ.

ಇದನ್ನೂ ಓದಿ: ಚಹಾ ಮಾಡುವಾಗ ಎಂದಿಗೂ ಈ ತಪ್ಪುಗಳನ್ನು ಮಾಡಲೇಬೇಡಿ; ಯಾಕೆ ಗೊತ್ತಾ?

ತೂಕ ಇಳಿಸಿಕೊಳ್ಳಲು ಸಹಕಾರಿ

ಹುರಿದ ಅಗಸೆ ಬೀಜವನ್ನು ತಿನ್ನುವುದು ರುಚಿ ಮತ್ತು ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಜೊತೆಗೆ ತೂಕ ಇಳಿಸಿಕೊಳ್ಳಲು ಸಹಾಯವಾಗುತ್ತದೆ. ಈ ಎರಡನ್ನೂ ಸೇರಿಸುವುದರಿಂದ ಚಯಾಪಚಯ ಶಕ್ತಿ ಹೆಚ್ಚಾಗುತ್ತದೆ, ಇದು ಕ್ಯಾಲೊರಿಗಳನ್ನು ಸುಡುವುದಕ್ಕೆ ಮತ್ತು ಕೊಬ್ಬು ಕಡಿಮೆ ಮಾಡಿಕೊಳ್ಳುವುದಕ್ಕೆ ಸಹಾಯ ಮಾಡುತ್ತದೆ. ಹಾಗಾಗಿ ಪ್ರತಿನಿತ್ಯ ಸೇವನೆ ಮಾಡುವ ತರಕಾರಿ ಮತ್ತು ಹಣ್ಣಿನ ಸಲಾಡ್‌ಗಳಿಗೆ ಅಗಸೆ ಬೀಜಗಳನ್ನು ಸೇರಿಸಬಹುದು. ಇದು ಜೀರ್ಣಕಾರಿ ಸಮಸ್ಯೆಗಳನ್ನು ಕೂಡ ಉಂಟುಮಾಡುವುದಿಲ್ಲ ಜೊತೆಗೆ ತೂಕ ಇಳಿಸಿಕೊಳ್ಳಲು ಕೂಡ ಸಹಾಯ ಮಾಡುತ್ತದೆ. ಅಗಸೆ ಬೀಜಗಳಿಂದ ಮಾಡಿದ ಉಂಡೆಗಳನ್ನು ತಿನ್ನುವುದರಿಂದ ದೇಹಕ್ಕೆ ಅಗತ್ಯವಾದ ಶಕ್ತಿ ದೊರೆಯುತ್ತದೆ ಮತ್ತು ತೂಕ ಇಳಿಸಿಕೊಳ್ಳಲು ಸಹಾಯ ಮಾಡುತ್ತದೆ. ಜೊತೆಗೆ ಈ ಉಂಡೆಗಳು ಕೂಡ ಜೀರ್ಣಕಾರಿ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ